Wednesday, April 8, 2026
Wednesday, April 8, 2026
Home Blog Page 631

Bannerghatta Fortis Hospital ಹೆತ್ತಮಗನೇ ತನ್ನ ಯಕೃತ್ ಭಾಗ ಧಾನಮಾಡಿ ತಾಯಿಯ ಜೀವವುಳಿಸಿದ!

0

Bannerghatta Fortis Hospital ಯಕೃತ್ ಕ್ಯಾನ್ಸರ್ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್ ಕಸಿ ನಡೆಸಲಾಗಿದೆ.

ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕರಾದ ಡಾ.ಕಿಶೋರ್ ಜಿ.ಎಸ್.ಬಿ. ಮತ್ತು ಡಾ ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಬಿ.ಎಸ್. ರವೀಂದ್ರ ಅವರ ತಂಡ ಯಶಸ್ವಿಯಾಗಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ಲಿವರ್ ಟ್ರಾನ್ಸ್ಪ್ಲಾಂಟ್ ಸರ್ಜನ್ ಡಾ. ಕಿಶೋರ್ ಜಿಎಸ್ಬಿ, ಮತ್ತು ಡಾ. ಪಿಯೂಷ್ ಸಿನ್ಹಾ, 2021 ರಲ್ಲಿ 52 ವರ್ಷದ ಲೀಲಾ ಎಂಬುವವರು ಕಾಮಾಲೆ ಕಾಯಿಲೆಗೆ ತುತ್ತಾದರು. ಇದರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಲಿವರ್ ಸಿರೋಸಿಸ್ ಇರುವುದು ಪತ್ತೆಯಾಯಿತು. ಬಳಿಕ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು.

Bannerghatta Fortis Hospital ದೀರ್ಘಕಾಲದಿಂದ ಯಕೃತ್ನ ಕಾಯಿಲೆ ಇರುವ ಕಾರಣ ಅವರ ಯಕೃತ್ನಲ್ಲಿ ದ್ರವದ ಶೇಖರಣೆಯಾಗಿ ಯಕೃತ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಇದರಿಂದ ಅವರ ಜೀವನ ಶೈಲಿಯ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿತ್ತು. ಅವರನ್ನು ಮತ್ತಷ್ಟು ತಪಾಸಣೆಗೆ ಒಳಪಡಿಸಿದ ಬಳಿಕ ಪಿತ್ತರಸ ನಾಳದಲ್ಲಿ ಕಲ್ಲು ಇರುವುದು ಪತ್ತೆಯಾಯಿತು. ಗ್ಯಾಸ್ಟ್ರೋ ತಂಡವು ಈ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆ ವೇಳೆ ಆಕೆಗೆ ಯಕೃತ್ನ ಕ್ಯಾನ್ಸರ್ ಪ್ರಾರಂಭಿಕ ಹಂತದಲ್ಲಿರುವುದು ಸಹ ತಿಳಿದುಬಂತು.

ಹೀಗಾಗಿ ಆಕೆಗೆ ಲಿವರ್ ಸಿರೋಸಿಸ್ ಮತ್ತು ಯಕೃತ್ತಿನ ಕ್ಯಾನ್ಸರ್ಗೆ ಕೂಡಲೇ ಯಕೃತ್ ಕಸಿ ಅಗತ್ಯತೆ ಬಿತ್ತು. ಸ್ವತಃ 31 ವರ್ಷದ ಮಗನೇ ತನ್ನ ಯಕೃತ್ನ ಭಾಗವನ್ನು ದಾನ ಮಾಡಲು ಮುಂದಾದರು. ಸಕಾಲದಲ್ಲಿ ಯಕೃತ್ ಸಿಕ್ಕ ಪರಿಣಾಮ ಅವರಿಗೆ ಯಶಸ್ವಿಯಾಗಿ ಕಸಿ ಮಾಡಲಾಯಿತು ಎಂದು ವಿವರಿಸಿದರು.

Veerashaiva Mahasabha ರಾಜ್ಯ ವೀರಶೈವ ಮಹಾಸಭಾ ಸಮಿತಿ ನಿರ್ದೇಶಕರಾಗಿ ಎನ್.ಎಸ್.ಕುಮಾರ್ ಅವಿರೋಧ ಆಯ್ಕೆ

0

Veerashaiva Mahasabha ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಸಮಿತಿ ನಿರ್ದೇಶಕರಾಗಿ ಶ್ರೀ
ಎನ್.ಎಸ್.ಕುಮಾರ್
ಆಯ್ಕೆಯಾಗಿದ್ದಾರೆ.
ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ನಿವೃತ್ತರಾಗಿರುವ ಶ್ರೀಯುತರು ಬರವಣಿಗೆ,ಭಾಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ರಾಜ್ಯ ವೀರಶೈವ ಮಹಾಸಭಾ ಸಮಿತಿಗೆ ಅವರನ್ನ ವೀರಶೈವ ಸಮಾಜದ ಮುಖಂಡರು ಅವಿರೋಧ ಆಯ್ಕೆ ಮಾಡಿದ್ದಾರೆ.
ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘದ ಕಾರ್ಯಕಾರಿಣಿಯಲ್ಲಿ
ಶ್ರೀಕುಮಾರ್ ಅವರನ್ನ ಗೌರವಿಸಲಾಯಿತು.

Veerashaiva Mahasabha ಸಂಘದ ಗೌರವ ಅಧ್ಯಕ್ಷ ಎನ್.ರವಿಕುಮಾರ್, ಅಧ್ಯಕ್ಷ ಪಿ.ಓ.ಶಿವಕುಮಾರ್,
ಪ್ರಧಾನ ಕಾರ್ಯದರ್ಶಿ ಕೆ.ಟಿ.ಶ್ರೀನಿವಾಸರಾವ್, ನಿರ್ದೇಶಕರಾದ
ಡಾ.ಸುಧೀಂದ್ರ,ಚಂದ್ರಶೇಖರಪ್ಪ , ಮಂಜುನಾಥ ಶರ್ಮ
ಮಂಜಪ್ಪ ಇವರು ಹಾಜರಿದ್ದರು

Karnataka Working Journalists Association ಯಾವ ರೀತಿಯ ಸುದ್ದಿಗಳನ್ನ ನೀಡಬೇಕು ಎಂಬ ಆಲೋಚನೆ & ಜನ ಸಮಾಜಪರ ಕೆಲಸ ಮಾಡುವ ತುರ್ತು ಈಗಿದೆ- ಕೆ.ವಿ.ಪ್ರಭಾಕರ್

0

Karnataka Working Journalists Association ಜನರಿಗೆ ಏನು ಬೇಕೋ ಅಂತಹ ಸುದ್ದಿಗಳನ್ನು ನೀಡಬೇಕು. ಜನಪರವಾಗಿ ಹಾಗೂ ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಶಿವಮೊಗ್ಗ ಜಿಲ್ಲೆ ಕಾಗೋಡು, ಗೇಣಿ, ದಲಿತ, ಸ್ವಾತಂತ್ರö್ಯ ಮುಂತಾದ ಹೋರಾಟಗಳ ತವರು. ಜಿಲ್ಲೆಯ ಪತ್ರಕರ್ತರು ರಾಜ್ಯ ಮಟ್ಟದಲ್ಲಿ ಮಿಂಚುತ್ತಿದ್ದಾರೆ.
ಇತ್ತೀಚಿನ ದಿನಮಾನದಲ್ಲಿ ಬರವಣಿಗೆ ನಶಿಸುತ್ತಿದೆ. ಕ್ರಿಯಾತ್ಮಕತೆ ದಿನೇ ದಿನೇ ಕ್ಷೀಣಿಸುತ್ತಿದೆ. ಸುದ್ದಿಗಳಲ್ಲಿ ಸಮಾಜ ಪರತೆ ಕಡಿಮೆ ಆಗಿದೆ. ವೈಭವೀಕರಣ ಮತ್ತು ಪೀತ ಪತ್ರಿಕೋದ್ಯಮ ಹೆಚ್ಚುತ್ತಿದೆ. ಈ ಕುರಿತು ಪತ್ರಕರ್ತರು ಹಾಗೂ ವಿದ್ಯಾರ್ಥಿಗಳು ಚಿಂತನೆ ನಡೆಸಬೇಕು. ನಾವು ಯಾವ ರೀತಿಯ ಸುದ್ದಿಗಳನ್ನು ನೀಡಬೇಕೆಂದು ಆಲೋಚಿಸಿ, ಜನ ಮತ್ತು ಸಮಾಜಪರವಾಗಿ ಕೆಲಸ ಮಾಡುವ ತುರ್ತು ಇದೆ ಎಂದರು.
Karnataka Working Journalists Association ಗ್ರಾಮೀಣ ಭಾಗದ ಪತ್ರಕರ್ತರ ಬಹುದಿನದ ಬೇಡಿಕೆಯಾಗಿದ್ದ ಉಚಿತ ಬಸ್ ಪಾಸ್ ಯೋಜನೆ ಶೀಘ್ರದಲ್ಲೇ ಜಾರಿಯಾಗಲಿದೆ. ಪತ್ರಕರ್ತರ ವೈದ್ಯಕೀಯ ಸಂಕಷ್ಟ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರದಲ್ಲೇ ಆರೋಗ್ಯ ವಿಮೆ ಜಾರಿಗೆ ತರಲಿದ್ದು ಇದಕ್ಕೆ ಸುಮಾರು ರೂ.10 ಕೋಟಿ ಅವಶ್ಯಕತೆ ಇದೆ. ವಿಮೆ ಕುರಿತಾದ ಮಾರ್ಗಸೂಚಿಗಳನ್ನು ಸಿದ್ದಪಡಸಲಾಗುತ್ತಿದೆ ಎಂದ ಅವರು ಸದಾ ಸಮಾಜದ ಕುರಿತು ಚಿಂತನೆ ಮಾಡುವ ಪತ್ರಕರ್ತರು ತಮ್ಮ ಕುಟುಂಬದ ಬಗ್ಗೆಗೂ ಹೆಚ್ಚಿನ ಕಾಳಜಿ ವಹಿಸಬೇಕೆಂದು ಕಿವಿ ಮಾತು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಸಂಘ ಪತ್ರಕರ್ತರ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೆರವು ನೀಡುತ್ತಾ ಬಂದಿದೆ. ಪತ್ರಕರ್ತರ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದೆ. ನಿವೃತ್ತ ಪತ್ರಕರ್ತರಿಗೆ ಮಾಸಾಶನ ನೀಡಲಾಗುತ್ತಿದೆ. ಗ್ರಾಮೀಣ ಬಸ್ ಪಾಸ್ ಯೋಜನೆಗೆ ಅನುಮೋದನೆ ದೊರೆತಿದ್ದು, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾಧ್ಯಮ ಸಲಹೆಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಪ್ರಸ್ತುತ ಪತ್ರಿಕೋದ್ಯಮದಲ್ಲಿನ ಜೊಳ್ಳು ತೆಗೆಯುವ ಸಂಕ್ರಮಣದ ಕಾಲಘಟ್ಟದಲ್ಲಿ ನಾವಿದ್ದೇವೆ. ಸಾಮಾಜಿಕ ಮಾಧ್ಯಮಗಳ ಭರಾಟೆ ಹೆಚ್ಚಿದ್ದು, ಶೇ.30 ರಷ್ಟು ಮಾತ್ರ ವಿಶ್ವಾಸಾರ್ಹತೆ ಇದು ಹೊಂದಿದೆ. ವಿದ್ಯುನ್ಮಾನ ಮಾಧ್ಯಮ ಶೇ.50 ಮತ್ತು ಮುದ್ರಣ ಮಾಧ್ಯಮ ಶೇ.63 ವಿಶ್ವಾಸಾರ್ಹತೆ ಹೊಂದಿದ್ದು, ಮುದ್ರಣ ಮಾಧ್ಯಮ ಜನರ ವಿಶ್ವಾಸಕ್ಕೆ ಪಾತ್ರವಾಗಿದ್ದ, ವಿಶ್ವಾಸಾರ್ಹತೆಯನ್ನು ಪತ್ರಕರ್ತರೇ ಉತ್ತಮ ಸುದ್ದಿಗಳನ್ನು ನೀಡುವ ಮೂಲಕ ಸಂಪಾದನೆ ಮಾಡಬೇಕೆಂದರು.
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಎನ್ ಮಂಜುನಾಥ್ ಮಾತನಾಡಿ, ಆಂಧ್ರ ಪ್ರದೇಶ ಮಾದರಿಯಲ್ಲಿ ಎಲ್ಲ ಪತ್ರಕರ್ತರಿಗೆ ಆರೋಗ್ಯ ಸವಲತ್ತುಗಳು ದೊರಕುವಂತಾಗಬೇಕು. ಪತ್ರಕರ್ತರ ಕ್ಷೇಮ ನಿಧಿ ಒಂದು ಸಮಿತಿ ರಚನೆಯಾಗಬೇಕು. ನಿವೃತ್ತಿ ನಂತರ ಆರೋಗ್ಯ ವಿಮೆಯಂತಹ ಸೌಲಭ್ಯ ನೀಡಬೇಕು. ಪತ್ರಿಕೋದ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು ಪತ್ರಕರ್ತರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕು. ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಉಳಿಯಬೇಕು ಎಂದರು.
ಹಿರಿಯ ಪತ್ರಕರ್ತರಾದ ಗೋಪಾಲ್ ಎಸ್ ಯಡಗೆರೆ ಮಾತನಾಡಿ, ಇತ್ತೀಚೆಗೆ ಪತ್ರಿಕೋದ್ಯಮಿಗಳು ಹಣಕಾಸು ನಿರ್ವಹಣೆ ತಿಳಿಯದೆ ಸಂಕಷ್ಟಗಳನ್ನು ಎದುರುಸುತ್ತಿರುವುದನ್ನು ಕಾಣುತ್ತಿದ್ದೇವೆ. ನೈತಿಕ ಮೌಲ್ಯವನ್ನು ಅಳವಡಿಸಿಕೊಳ್ಳಬೇಕು. ಹಣಕಾಸು ನಿರ್ವಹಣೆ ಮತ್ತು ನೈತಿಕ ಮೌಲ್ಯಗಳ ಅಳವಡಿಕೆ ಬಗ್ಗೆ ತರಬೇತಿ ನೀಡುವಂತಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ವಿ.ಶಿವಕುಮಾರ್ ಮಾತನಾಡಿ, ಮಾಧ್ಯಮ ಸ್ವಾತಂತ್ರö್ಯ ಪೂರ್ವದಿಂದಲೂ ಕಾಲಕ್ಕೆ ತಕ್ಕಂತೆ ಬೆಳೆಯುತ್ತಾ ಬಂದಿದ್ದು, ಪತ್ರಿಕೋದ್ಯಮ ಅತ್ಯಂತ ಶಕ್ತಿಶಾಲಿ ಮಾಧ್ಯಮವಾಗಿದೆ. ಪ್ರಸ್ತುತ ಜನರ ವಿಶ್ವಾಸ ಕೆಳೆದುಕೊಳ್ಳುವಂತಹ ಕೆಲ ಬೆಳವಣಿಗೆ ಆಗುತ್ತಿದ್ದು, ಇದು ಬದಲಾಗಬೇಕು ಎಂದರು. ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಸೌಲಭ್ಯವನ್ನು ರಾಜ್ಯ ಮಟ್ಟಕ್ಕೆ ವಿಸ್ತರಿಸಬೇಕೆಂದು ಕೋರಿದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಸ್‌ಎಲ್ ಮತ್ತು ಪಿಯುಸಿಯಲ್ಲಿ ಶೇ.95 ಕ್ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳನ್ನು ಅಭಿನಂದಿಸಲಾಯಿತು.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ಏಷ್ಯನ್ ಮೀಡಿಯಾ ಕಲ್ಚರಲ್ ಅಸೋಸಿಯೇಷನ್‌ನ ಭಾರತದ ಸಂಚಾಲಕ ಹೆಚ್.ಬಿ.ಮದನಗೌಡ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕ ಗಿರೀಶ್ ಕೋಟೆ ಮಾತನಾಡಿದರು.
ವೇದಿಕೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎನ್.ರವಿಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಮಾರುತಿ ಆರ್, ರಾಷ್ಟಿçÃಯ ಮಂಡಳಿ ಸದಸ್ಯರಾದ ಬಂಡಿಗಡಿ ನಂಜುAಡಪ್ಪ, ಪತ್ರಿಕರ್ತರ ಸಂಘದ ಪದಾಧಿಕಾರಿಗಳು, ಪತ್ರಕರ್ತರು, ವಿದ್ಯಾರ್ಥಿಗಳು ಹಾಜರಿದ್ದರು.

Arasalu Railway ನಿನ್ನೆ ತಡರಾತ್ರಿ ರೈಲ್ವೆ ಹಳಿಯ ಮೇಲೆ ಮರಬಿದ್ದು ರೈಲು ಸಂಚಾರ ಸ್ಥಗಿತ

0

Arasalu Railway ರೈಲು ಹಳಿಗೆ ಅಡ್ಡಲಾಗಿ ಮರ ಬಿದ್ದ ಕಾರಣ ರೈಲು ಸಂಚಾರ ಸ್ಥಗಿತಗೊಂಡ ಘಟನೆ ಅರಸಾಳು ನಿಲ್ದಾಣದ ಸಮೀಪ ರಾತ್ರಿ ನಡೆದಿದೆ.
ಮಧ್ಯಾಹ್ನ ಬೆಂಗಳೂರಿನಿಂದ ಸಾಗರ ಹೊರಟಿದ್ದ ಇಂಟರ್ ಸಿಟಿ ರೈಲು ಶಿವಮೊಗ್ಗದಲ್ಲಿ ಸ್ಟಾಪ್ ಕೊಟ್ಟ ಬಳಿಕ ಸೂಡೂರು ಬಳಿ‌ ನಿಂತಿದೆ.

Hadigallu Gram Panchayat ಮೀನ್ಮನೆಕೊಪ್ಪದಲ್ಲಿ ಬೈಕ್ ಮೇಲೆ ಮರವುರುಳಿ ಸವಾರನ ಸಾವು

0

Hadigallu Gram Panchayat ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ (26)ಎಂಬ ಯುವಕ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ.
ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ,
ಕೋಣಂದೂರಿಗೆ ಕೆಲಸದ ನಿಮಿತ್ತ ರಾಮಪ್ಪ ತೆರಳಿದ್ದರು. ವಾಪಾಸ್ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ.

Hadigallu Gram Panchayat ಚಲಿಸುತ್ತಿರುವಾಗಲೇ ಬೈಕ್ ಮೇಲೆ ಆಕೇಶಿಯ ಮರವೊಂದು ಅಪ್ಪಳಿಸಿದೆ. ಇದರಿಂದ ಸ್ಥಳದಲ್ಲೇ ಅಸುನೀಗಿದ್ದಾರೆ. ರಾಮಪ್ಪ ಸಕಾಲಕ್ಕೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Railway Police ಶಿವಮೊಗ್ಗ ಸನಿಹ ರೈಲ್ವೆ ಹಳಿಪಕ್ಕ ಮಹಿಳೆಯ ಶವ ಪತ್ತೆ

0

Railway Police ಶಿವಮೊಗ್ಗ ನಗರದಲ್ಲಿ ರೈಲ್ವೆ ಹಳಿಯ ಪಕ್ಕದಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಸಿಟಿಯ ಸವಳಂಗ ರೋಡ್‌ನಲ್ಲಿ ಈ ಘಟನೆ ನಡೆದಿದೆ.
ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಇಲ್ಲಿ ಸೇತುವೆ ಬಳಿ ಕೃಷಿನಗರಕ್ಕೆ ಹೋಗುವ ದಾರಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ

Railway Police ಪೊಲೀಸರು ಆಗಮಿಸಿ ಪರಿಶೀಲನೆ ನಡೆಸ್ತಿದ್ದಾರೆ. ಮಹಿಳೆ ಸಾವು ಕಂಡಿರುವ ಬಗ್ಗೆ ರೈಲ್ವೆ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಮೃತದೇಹದ ಬಗ್ಗೆ ಯಾವುದೇ ಗುತು ಪತ್ತೆಯಾಗಿಲ್ಲ. 42-45 ವಯಸ್ಸಿನ ಮಹಿಳೆ ಎಂದು ಹೇಳಲಾಗುತ್ತಿದೆ. ಬೆಳಗ್ಗಿನ ಜಾವ 4-5 ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ತಾಳಿ ಗುಂಡು, ಮತ್ತು ಚೂಡಿದಾರ ಧರಿಸಿತುವುದಾಗಿ ರೈಲ್ವೆ ಪೊಲೀಸರು ಸ್ಪಷ್ಟಪಡಿದ್ದಾರೆ.

Central Budget  ನೀತಿ ಆಯೋಗ ಸಭೆಗೆ ಕರ್ನಾಟಕ ಸೇರಿ 7 ರಾಜ್ಯಗಳ ಬಹಿಷ್ಕಾರ

0

Central Budget  ಕೇಂದ್ರ ಬಜೆಟ್‌ನಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿ ಇಂದು (ಜು.27) ನಡೆಯಲಿರುವ ನೀತಿ ಆಯೋಗದ ಸಭೆಗೆ ಕರ್ನಾಟಕ ಸಹಿತ ಏಳು ರಾಜ್ಯಗಳು ಬಹಿಷ್ಕಾರ ಹಾಕಿವೆ.
ಕರ್ನಾಟಕದ ಮಖ್ಯಮಂತ್ರಿ ಸಿದ್ದರಾಮಯ್ಯ, ಹಿಮಾಚಲ ಪ್ರದೇಶದ ಸುಖವಿಂದರ್ ಸಿಂಗ್ ಸುಖು, ತೆಲಂಗಾಣದ ಎ. ರೇವಂತ್ ರೆಡ್ಡಿ, ತಮಿಳುನಾಡಿನ ಎಂ.ಕೆ ಸ್ಟಾಲಿನ್, ಕೇರಳದ ಪಿಣರಾಯಿ ವಿಜಯನ್ ಮತ್ತು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ್ ಮಾನ್ ಸಭೆಗೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿರುವ ಕಾರಣ ಅವರು ಸಭೆಗೆ ಹಾಜರಾಗುವುದು ಅಸಾಧ್ಯವಾಗಿದೆ. ಆದರೆ, ದೆಹಲಿ ಸರ್ಕಾರ ಕೂಡ ಸಭೆಯನ್ನು ಬಹಿಷ್ಕರಿಸಿದೆ.
‘ವಿಕಸಿತ ಭಾರತ @ 2047’ ಎಂಬುವುದು ಈ ವರ್ಷದ ನೀತಿ ಆಯೋಗದ ಥೀಮ್ ಆಗಿದೆ. ಕೇಂದ್ರ ಸರ್ಕಾರ ‘ಮೇಕಿಂಗ್ ಇಂಡಿಯಾ’ಕ್ಕೆ ಹೆಚ್ಚು ಒತ್ತು ಕೊಡುವ ಗುರಿ ಹೊಂದಿದೆ.

ಮಮತಾ, ಸೊರೇನ್ ಭಾಗಿ?:

Central Budget  ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡು ಬಜೆಟ್‌ನಲ್ಲಿ ತಾರತಮ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮುಂದೆ ಪ್ರತಿಭಟನೆ ವ್ಯಕ್ತಪಡಿಸಲಿದ್ದಾರೆ ಎಂದು ಹೇಳಲಾಗಿದೆ. ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಮತಾ ಬ್ಯಾನರ್ಜಿ ಗುರುವಾರವೇ ದೆಹಲಿಗೆ ತೆರಳಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರು ಪ್ರಯಾಣ ರದ್ದುಗೊಳಿಸಿದ್ದಾರೆ. ಹಾಗಾಗಿ, ಸಭೆಯಲ್ಲಿ ಭಾಗಿಯಾಗುತ್ತಾರೋ, ಇಲ್ಲವೋ ಎಂಬುವುದು ಖಚಿತವಾಗಿಲ್ಲ.

ನೀತಿ ಆಯೋಗ ರದ್ದತಿಗೆ ಮಮತಾ ಬ್ಯಾನರ್ಜಿ ಆಗ್ರಹ:

ನೀತಿ ಆಯೋಗ ರದ್ದುಪಡಿಸಿ ಈ ಹಿಂದಿನ ಯೋಜನಾ ಆಯೋಗವನ್ನು ಮರುಸ್ಥಾಪಿಸಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ನೀತಿ ಆಯೋಗ ಆಧಾರರಹಿತವಾಗಿದೆ. ಅದು ಕೇವಲ ಸಭೆಗಳನ್ನು ನಡೆಸುವುದಕ್ಕಷ್ಟೇ ಸೀಮಿತವಾಗಿದೆ ಎಂದು ದೂರಿದ್ದಾರೆ

Kargil Vijay Divas ಆಂತರಿಕ ಸುರಕ್ಷೆ ಇದ್ದರೆ ದೇಶಕ್ಕೆ ಬಂಡವಾಳ ಹೂಡಿಕೆ ಯಥೇಚ್ಚ ಬರುತ್ತದೆ- ನಿ.ಸೇನಾಧಿಕಾರಿ ಶ್ರೀ ರಾಜೇಶ್

0

Kargil Vijay Divas ಸಮರ್ಥ ಸೇನೆ ಹೊಂದಿರುವ ದೇಶ ಆರ್ಥಿಕವಾಗಿ ಸುಭದ್ರವಾಗಿರುತ್ತದೆ. ಆಂತರಿಕ ಸುರಕ್ಷೆ ವಿಶ್ವಾಸನೀಯವಾಗಿದ್ದಾಗ ಆ ದೇಶಕ್ಕೆ ಬಂಡವಾಳ ಹೂಡಿಕೆ ಯಥೇಚ್ಛವಾಗಿ ಹರಿದುಬರುತ್ತದೆ. ಆ ಮೂಲಕ ಉದ್ಯೋಗಾವಕಾಶಗಳು ಹೆಚ್ಚಾಗಿ ಜನರು ಆರ್ಥಿಕವಾಗಿ ಸಬಲರಾಗುತ್ತಾರೆ. ದೇಶದ ಒಟ್ಟಾರೆ ಆದಾಯ ಹೆಚ್ಚಾಗಿ ಸೇನೆಗೆ ಉತ್ತಮ ಅನುದಾನ ಲಭಿಸಿ ಸೇನೆ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ಇಪ್ಪತ್ತು ವರ್ಷಗಳ ಕಾಲ ಭಾರತೀಯ ವಾಯುಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ನಿವೃತ್ತ ಸೇನಾಧಿಕಾರಿ ಶ್ರೀ ರಾಜೇಶ್ ಅಭಿಪ್ರಾಯಪಟ್ಟರು.

ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಕಾರ್ಗಿಲ್ ಯುದ್ಧ ನಡೆಯಲು ಕಾರಣವಾದ ಅಂಶಗಳ ಬಗ್ಗೆ ಉಲ್ಲೇಖಿಸಿ ಸೇನೆಯಲ್ಲಿ ಕೈಗೊಳ್ಳಬೇಕಾದ ಸುಧಾರಣೆಗಳನ್ನು ಅರಿಯಲು ಆ ಯುದ್ಧ ಹೇಗೆ ಸಹಾಯಕವಾಯಿತೆಂದು ತಿಳಿಸಿದರು. ಅಂತಹ ಸುಧಾರಣೆಗಳ ಪೈಕಿ ಕೇಂದ್ರ ಸರ್ಕಾರದ ಮಹತ್ತರ ಯೋಜನೆ ?ಅಗ್ನಿವೀರ್? ಸಹ ಒಂದು ಎಂದು ಹೇಳಿದರು. ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ರೋಟರಿಯಂತಹ ಸಂಸ್ಥೆಗಳು ನಿವೃತ್ತ ಸೇನಾಧಿಕಾರಿಗಳನ್ನು ಗುರುತಿಸಿ ಗೌರವಿಸುತ್ತಿರುವ ನಡೆಯನ್ನು ಶ್ಲಾಘಿಸಿದರು. ಇಪ್ಪತ್ತು ವರ್ಷಗಳ ಸೇವೆಯ ನಂತರ ಸ್ವಯಂ ನಿವೃತ್ತಿ ಪಡೆದ ಶ್ರೀ ರಾಜೇಶ್ ರವರು ಪ್ರಸ್ತುತ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ಲಬ್ ವತಿಯಿಂದ ಶ್ರೀ ರಾಜೇಶ್ ರವರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸುವುದರ ಜೊತೆಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರೆಲ್ಲರೂ ಮೇಣದ ಬತ್ತಿ ಬೆಳಗುವುದರ ಮೂಲಕ ಕಾರ್ಗಿಲ್ ಹುತಾತ್ಮರಿಗೆ ಗೌರವ ಸೂಚಿಸಿದರು.

Kargil Vijay Divas ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ರೋಟರಿ ಮಾಜಿ ಗವರ್ನರ್ ಶ್ರೀ ಎಂ.ಜಿ.ರಾಮಚAದ್ರ ಮೂರ್ತಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮತ್ತೋರ್ವ ಮಾಜಿ ಗವರ್ನರ್ ಹಾಗೂ ಕ್ಲಬ್ ನ ಕಲಿಕಾ ಮಾರ್ಗದರ್ಶಿ ಶ್ರೀ ಹೆಚ್.ಎಲ್.ರವಿರವರು ಶ್ರೀ ಎಂ.ಜಿ.ರಾಮಚAದ್ರ ಮೂರ್ತಿಯವರಿಗೆ ನುಡಿ ನಮನ ಸಲ್ಲಿಸಿದರು. ರೋಟರಿ ಜೋನಲ್ ಲೆಫ್ಟಿನೆಂಟ್ ಮಂಜುಳಾ ರಾಜು, ಕ್ಲಮ್ ನ ಅಧ್ಯಕ್ಷರಾದ ರೊ.ಮುಸ್ತಾಕ್ ಅಲಿಶಾ, ಕಾರ್ಯದರ್ಶಿ ರೊ.ಶ್ರೀಕಾಂತ್ ಎ.ವಿ ಹಾಗೂ ಕ್ಲಬ್ ನ ಎಲ್ಲಾ ಸದಸ್ಯರು ಹಾಗೂ ಕುಟುಂಬದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ANV Vidhyalaya Matriculation School ಹೃದಯಾಘಾತ ಅನುಭಕ್ಕೆ ಬಂದಾಕ್ಷಣ ಬಸ್ ನಿಲ್ಲಿಸಿ ಶಾಲಾಮಕ್ಕಳನ್ನ ಕಾಪಾಡಿ ಜೀವ ತೊರೆದ ಚಾಲಕ

0

ANV Vidhyalaya Matriculation School ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ 49 ವರ್ಷದ ಸ್ಕೂಲ್ ವ್ಯಾನ್ ಚಾಲಕನೊಬ್ಬ ವಾಹನವನ್ನು ರಸ್ತೆ ಬದಿಯಲ್ಲಿ ಸುರಕ್ಷಿತವಾಗಿ ನಿಲ್ಲಿಸುವ ಮೂಲಕ, ಸುಮಾರು 20 ವಿದ್ಯಾರ್ಥಿಗಳ ಪ್ರಾಣ ಉಳಿಸಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಚಾಲಕ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿಗೆ ಅವರು ಬರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಚಾಲಕ ಸೆಮಲಯ್ಯಪ್ಪನ್ ಶಾಲಾ ಮಕ್ಕಳೊಂದಿಗೆ ಚಾಲಕನ ಸೀಟಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಳಿತಿರುವ ಚಿತ್ರವು
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಳಕೆದಾರರು ಚಾಲಕನ ಕೆಚ್ಚೆದೆಯ ಕೃತ್ಯಕ್ಕೆ ಸೆಲ್ಯೂಟ್ ಮಾಡಿದ್ದಾರೆ.
ಜುಲೈ 24ರ ಬುಧವಾರದಂದು ಈ ಘಟನೆ ನಡೆದಿದ್ದು, ವೆಲ್ಲಕೋಯಿಲ್‌ನ ಎಎನ್‌ವಿ ಮೆಟ್ರಿಕ್ ಶಾಲೆಯಿಂದ ವಿದ್ಯಾರ್ಥಿಗಳನ್ನು ಅವರ ಮನೆಗೆ ಬಿಡಲು ಸೆಮಲಯ್ಯಪ್ಪನ್ ಕರೆದುಕೊಂಡು ಹೋಗಿದ್ದರು. ಎದೆನೋವು ಕಾಣಿಸಿಕೊಂಡಿದ್ದು, ಕಷ್ಟಪಟ್ಟು ಸುರಕ್ಷಿತವಾಗಿ ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದ್ದಾರೆ.
ANV Vidhyalaya Matriculation School ವಿಶೇಷವೆಂದರೆ, ಅವರ ಪತ್ನಿ ಕೂಡ ಅದೇ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದು, ಅವರು ಕುಸಿದು ಬಿದ್ದಾಗ ವ್ಯಾನ್‌ನಲ್ಲಿದ್ದರು. ಸಾವಿನ ಅಂಚಿನಲ್ಲಿರುವ ಮಕ್ಕಳ ಪ್ರಾಣ ಉಳಿಸಿದ ಚಾಲಕನ ಸಾಹಸಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
“ಅವರ ಜೀವಕ್ಕೆ ಅಪಾಯವಿದ್ದರೂ ಶಾಲೆಯ ವಿದ್ಯಾರ್ಥಿಗಳ ಅಮೂಲ್ಯ ಜೀವವನ್ನು ಉಳಿಸಿದರು. ಅವರ ಕರ್ತವ್ಯ ಪ್ರಜ್ಞೆ ಮತ್ತು ಸ್ವಯಂ ತ್ಯಾಗಕ್ಕಾಗಿ ನಾವು ಅವರನ್ನು ಅಭಿನಂದಿಸುತ್ತೇವೆ. ಅವರು ತಮ್ಮ ಮಾನವೀಯ ಕಾರ್ಯದ ಮೂಲಕ ಬದುಕುವುದನ್ನು ಮುಂದುವರಿಸುತ್ತಾರೆ” ಎಂದು ಸ್ಟಾಲಿನ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸೇಮಲಯ್ಯಪ್ಪನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಸ್ಟಾಲಿನ್ ಘೋಷಿಸಿದ್ದಾರೆ. ಡಿಎಂಕೆ ಸಚಿವ ಎಂಪಿ ಸಾಮಿನಾಥನ್ ಮೃತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. ಶುಕ್ರವಾರ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವ್ಯಾನ್ ಚಾಲಕನಿಗೆ ಗೌರವ ಸಲ್ಲಿಸಿದರು. ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಕುಟುಂಬಸ್ಥರನ್ನು ಭೇಟಿ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

Scouts and Guides ಉತ್ತಮ ನಾಗರೀಕರಾಗಲು ಸ್ಕೌಟ್ ಸಹಕಾರಿ- ಡಾ.ಎಚ್.ಬಿ.ಮಂಜುನಾಥ್

0

Scouts and Guides ವಿಶ್ವದ ದೊಡ್ಡ ಆರ್ಥಿಕ ಶಕ್ತಿಯಾಗಲಿರುವ ಭಾರತವು ದೊಡ್ಡ ಮೊತ್ತದ ಯುವಶಕ್ತಿಯನ್ನೂ ಹೊಂದಿದ್ದು ಭವಿಷ್ಯದ ಯುವಶಕ್ತಿಯಾಗಲಿರುವ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ನಾಗರೀಕರಾಗಬಹುದೆಂದು ದಾವಣಗೆರೆ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನ ಉಪಾಧ್ಯಕ್ಷ, ಹಿರಿಯ ಪತ್ರಕರ್ತ ಡಾ ಎಚ್ ಬಿ ಮಂಜುನಾಥ ಅಭಿಪ್ರಾಯ ಪಟ್ಟರು. ಅವರಿಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇದರ ದಾವಣಗೆರೆ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ಏರ್ಪಾಡಾಗಿದ್ದ ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಶಾಲಾ ಪರೀಕ್ಷೆಯನ್ನು ಎದುರಿಸಲು ಪಠ್ಯ ಶಿಕ್ಷಣವು ಅನುಕೂಲವಾದರೆ ಜೀವನ ಪರೀಕ್ಷೆಯನ್ನು ಎದುರಿಸಲು ಪಠ್ಯೇತರ ಚಟುವಟಿಕೆಗಳು ಅವಶ್ಯವಾಗಿದ್ದು ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರಗಳು ಇದಕ್ಕೆ ಪೂರಕವಾಗಿವೆ, 1907ರಲ್ಲಿ ಬ್ರಿಟಿಷ್ ಸೈನ್ಯದಲ್ಲಿ ಅಧಿಕಾರಿಯಾಗಿದ್ದ ರಾಬರ್ಟ್ ಸ್ಟೀವನ್ ಸನ್ ಬೇಡೆನ್ ಪೊವೆಲ್ ರವರು ಹುಟ್ಟು ಹಾಕಿದ ಸ್ಕೌಟ್ಸ್ ಕೇವಲ 20 ವಿದ್ಯಾರ್ಥಿಗಳಿಂದ ಆರಂಭವಾಗಿದ್ದು ಈಗ ಪ್ರಪಂಚದ 216 ದೇಶಗಳಲ್ಲಿ ಸುಮಾರು ಆರು ಕೋಟಿ ಯಷ್ಟು ಸ್ಕೌಟ್ಸ್ ಮತ್ತು ಗೈಡ್ಸ್ ಗಳನ್ನು ಹೊಂದಿದೆ. ಭಾರತ ದೇಶದಲ್ಲೂ 1909 ನೇ ಇಸ್ವಿಯಲ್ಲಿ ಮೊಟ್ಟಮೊದಲ ಸ್ಕೌಟ್ ಘಟಕ ಕರ್ನಾಟಕದ ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯಲ್ಲಿ ಟಿ ಹೆಚ್ ಬೇಕರ್ ರಿಂದ ಆರಂಭವಾಗಿದ್ದು ಪ್ರಸ್ತುತ ನಮ್ಮ ದೇಶದಲ್ಲಿ 40 ಲಕ್ಷ ಸ್ಕೌಟ್ ಗಳು,16 ಲಕ್ಷ ಗೈಡ್ ಗಳು ಇದ್ದಾರೆ. ದಾವಣಗೆರೆಯಲ್ಲಿ 1928 ನೇ ಇಸವಿಯಲ್ಲಿ ಆರಂಭವಾದ ಸ್ಥಳೀಯ ಸ್ಕೌಟ್ ಸಂಸ್ಥೆ ಧರ್ಮ ರತ್ನಾಕರ ರಾಜನಹಳ್ಳಿ ಮದ್ದೂರಾಯಪ್ಪ, Scouts and Guides ಕೊಂಡಜ್ಜಿ ಬಸಪ್ಪ, ಚಿಗಟೇರಿ ಜಯಣ್ಣ,ಶಿವಶಂಕರ್, ಶಿಕ್ಷಕರಾಗಿದ್ದ ಅ ರಾ ಶಂಕರಯ್ಯ ಮುಂತಾದ ಅನೇಕ ಮಹನೀಯರ ಪ್ರೋತ್ಸಾಹದಿಂದಾಗಿ ಬೆಳೆದು ಬಂದ ಇತಿಹಾಸವನ್ನು ಡಾ.ಎಚ್ ಬಿ ಮಂಜುನಾಥ ಸ್ವಾರಸ್ಯಕರವಾಗಿ ಹೇಳಿದರು. ಪ್ರಶಸ್ತಿ ಪುರಸ್ಕಾರ ಪ್ರದಾನ ಮಾಡಿದ ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್ ರವರು ಮಾತನಾಡಿ ಶಾಲಾ ಜೀವನದಲ್ಲಿನ ಪಠ್ಯೇತರ ಚಟುವಟಿಕೆಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತವೆ, ಮಕ್ಕಳು ಒಳ್ಳೆಯ ಕನಸುಗಳನ್ನು ಕಾಣಬೇಕು, ಅದರ ನನಸಿಗಾಗಿ ಕ್ರಿಯಾಶೀಲರಾಗಬೇಕು ಎಂದರು. ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಉಪಾಧ್ಯಕ್ಷ ಆರ್ ಡಿ ಬದರಿನಾಥ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮುಖ್ಯ ಆಯುಕ್ತ ಮುರುಘರಾಜೇಂದ್ರ ಚಿಗಟೇರಿ ಸ್ವಾಗತ ಕೋರಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ ಕೊಟ್ರೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್ ಜಿ ಕರಿಸಿದ್ದಪ್ಪ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಜಿಲ್ಲಾಸ್ಕೌಟ್ ಆಯುಕ್ತ ಎ ಪಿ ಷಡಾಕ್ಷರಪ್ಪ, ಜಿಲ್ಲಾ ಗೈಡ್ ಆಯುಕ್ತೆ ಶಾರದಾ ಮಾಗನಹಳ್ಳಿ, ಜಿಲ್ಲಾ ಸ್ಕೌಟ್ ತರಬೇತಿ ಆಯುಕ್ತ ಡಿ ಹಾಲಪ್ಪ, ಜಿಲ್ಲಾ ಕಾರ್ಯದರ್ಶಿ ಎಂ ರತ್ನ, ಜಿಲ್ಲಾ ತರಬೇತಿ ಆಯುಕ್ತೆ ಆರ್ ತುಳಸಾಮಣಿ, ಸಹಕಾರ್ಯದರ್ಶಿ ಆರ್ ಸುಖವಾಣಿ, ಸ್ಕೌಟ್ ಗೈಡ್ ಸ್ವಯಂಸೇವಕಿ ಅಶ್ವಿನಿ ಜೆ, ಮಹಮ್ಮದ್ ಹುಸೈನ್,ಹೆಚ್ಚುವರಿ ಜಿಲ್ಲಾ ಅಯುಕ್ತರುಗಳಾದ ಎಂ ಅಶೋಕ್ ಕುಮಾರ್, ಎಸ್ ಶಂಕರ್ ನಾಯಕ್, ನೂರುಲ್ಲಾ, ಎನ್ ಕೆ ಕೊಟ್ರೇಶ್, ಡಾ. ಶಶಿಧರ ಎಂ ಜಿ, ಹೆಚ್ ಎಸ್ ಸಿದ್ಧೇಶ್, ಯುವ ಸಮಿತಿಯ ಮುಸ್ತಫಾರಾಜ, ರೇಂಜರ್ ರಾಧಿಕಾ ಆರ್ ಎಚ್ ಮುಂತಾದವರು ಭಾಗವಹಿಸಿದ್ದರು. ಎ ಪಿ ಷಡಾಕ್ಷರಪ್ಪ ವಂದನೆ ಸಲ್ಲಿಸಿದರು.