Wednesday, April 8, 2026
Wednesday, April 8, 2026
Home Blog Page 633

Kudali Sringeri Mahasamsthana mutt ನವೆಂಬರ್ 15 ವರೆಗೆ ಕೂಡಲಿ ಮಠದಲ್ಲಿ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿ ಚಾತುರ್ಮಾಸ ವ್ರತ

0

Kudali Sringeri Mahasamsthana mutt ಕೂಡಲಿ ಶೃಂಗೇರಿ ಮಹಾಸಂಸ್ಥಾನ ಪೀಠದ ೭೨ನೇ ಪೀಠಾಧಿಪತಿ ಜಗದ್ಗುರು ಅಭಿನವ ಶಂಕರ ಭಾರತಿ ಸ್ವಾಮೀಜಿ ಅವರ ದ್ವೀತಿಯ ಚಾತುರ್ಮಾಸ್ಯ ವ್ರತ ಆಷಾಢ ಹುಣ್ಣಿಮೆಯಿಂದ ಕಾರ್ತೀಕ ಹುಣ್ಣಿಮೆಯವರೆಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಈಗಾಗಲೇ ಜು.೨೧ ರಿಂದ ವ್ರತ ಆರಂಭಗೊಂಡಿದ್ದು, ನವೆಂಬರ್ ೧೫ ರವರೆಗೆ ಕೂಡಲಿಯ ಶ್ರೀಕ್ಷೇತ್ರ ಮೂಲ ಮಠದಲ್ಲಿ ವ್ರತ ನಡೆಯಲಿದೆ. ಪ್ರತಿ ದಿನ ಬೆಳಿಗ್ಗೆ ೭ ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಶಾರದಾಂಬೆಗೆ ವಿಶೇಷ ಆಭೀಷೇಕ ಹಾಗೂ ಕುಂಕುಮಾರ್ಚನೆ, ಮಠದಲ್ಲಿರುವ ಎಲ್ಲಾ ಅಧಿಷ್ಠಾನ ವೇದಿಕೆಗೆ ವಿಶೇಷ ಪೂಜೆ, ಸಾರ್ವಜನಿಕರಿಗೆ ಜಗದ್ಗುರುಗಳ ದರ್ಶನ ಹಾಗೂ ವಿದ್ವಾಂಸರಿಂದ ಘನಪಾರಾಯಣ, ಚಂದ್ರಮೌಳೇಶ್ವರ ಹಾಗೂ ವಿದ್ಯಾಶಂಕರಾದಿ ಸಂಸ್ಥಾನದ ಮೂಲದೇವರುಗಳ ಪೂಜೆ, ಮಧ್ಯಾಹ್ನ ೧.೩೦ಕ್ಕೆ
Kudali Sringeri Mahasamsthana mutt ಘನಪಾರಾಯಣ ವಿರಾಮ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ ೪ ಗಂಟೆಯಿಂದ ಸಾರ್ವಜನಿಕರಿಗೆ ಜಗದ್ಗುರುಗಳಿಂದ ಪ್ರವಚನ ಹಾಗೂ ದರ್ಶನ, ವಿದ್ವಾಂಸರಿಂದ ಘನಪಾರಾಯಣ ಹಾಗೂ ಶಾರದಾಂಬೆಯ ಸನ್ನಿದಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ರಾತ್ರಿ ೮ ಗಂಟೆಗೆ ಘನಪಾರಾಯಣ ವಿರಾಮ ಹಾಗೂ ಮಹಾಮಂಗಳಾರತಿ ಜರುಗಲಿದೆ.

JDS Karnataka ಅನಿರ್ದಿಷ್ಟ ಅವಧಿವರೆಗೆ ವಿಧಾನಭೆಯ ಎರಡೂ ಸದನಗಳ ಕಲಾಪವನ್ನ ಮುಂದೂಡಲಾಗಿದೆ

0

JDS Karnataka ಮುಡಾ ಅಕ್ರಮ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಚರ್ಚೆಗೆ ಪಟ್ಟುಹಿಡಿದು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ.
JDS Karnataka ಇಂದು ಸಹ ಸದನದಲ್ಲಿ ವಿಪಕ್ಷಗಳು ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ನೀಡುವಂತೆ ಗದ್ದಲ ಎಬ್ಬಿಸಿದರು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

Pradhan Mantri Fasal Bima Yojana ಬೆಳೆ ವಿಮಾ ಯೋಜನೆ ಸೇರಲು ಮೊಬೈಲ್ ಆ್ಯಪ್ ನಲ್ಲಿ ಬೆಳೆ ಮಾಹಿತಿಯನ್ನ ಚಿತ್ರ ಸಹಿತ ಅಪ್ ಲೋಡ್ ಮಾಡಲು ಅವಕಾಶ

0

Pradhan Mantri Fasal Bima Yojana ರೈತರೇ ತಮ್ಮ ಜಮೀನುಗಳಲ್ಲಿ ಮೊಬೈಲ್ ಆಪ್ ಮೂಲಕ ರೈತರ ಸರ್ವೇ ನಂಬರ್ ವಾರು, ಹಿಸ್ಸಾವಾರು ಬೆಳೆ ವಿವರ ದಾಖಲಿಸುವ, ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರಸಹಿತ ‘ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ 2024-25 ರಲ್ಲಿ ಅಪ್‌ಲೋಡ್ ಮಾಡಲು ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಜು.23 ರಂದು ಜಿಲ್ಲಾದಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ 2024 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಬೆಳೆ ಸಮೀಕ್ಷೆ ಕಾರ್ಯಕ್ರಮದಲ್ಲಿ ಬೆಳೆ ವಿಮೆ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ(ಮಳೆ ಆಶ್ರಿತ) ಹಾಗೂ ಜೋಳ (ಮಳೆಆಶ್ರಿತ) ಮತ್ತು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭತ್ತ(ನೀರಾವರಿ/ಮಳೆ ಆಶ್ರಿತ), ಮುಸುಕಿನ ಜೋಳ(ನೀರಾವರಿ/ಮಳೆ ಆಶ್ರಿತ) ಬೆಳೆಗಳು ಆಯ್ಕೆಯಾಗಿರುತ್ತವೆ. ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಮದ ಆಯ್ಕೆಯಾದ ಓರಿಯಂಟಲ್ ಜನರಲ್ ಇನ್ಶೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ ಅನುಷ್ಟಾನಗೊಳಿಸಲಾಗುವುದು.
ಬೆಳೆ ವಿಮೆಗಾಗಿ ನೋಂದಾಯಿಸಲು ಅಂತಿಮ ದಿನಾಂಕದ ಒಳಗೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವAತೆ ರೈತರಲ್ಲಿ ಮನವಿ ಮಾಡಿದರು.
Pradhan Mantri Fasal Bima Yojana ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರನ್ನು ಬೆಳೆ ವಿಮೆ ಯೊಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು. ತದನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೇ ಇದ್ದಲ್ಲಿ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕೆ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ ಮತ್ತು ಆಧಾರ್ ಸಂಖ್ಯೆ ಸಹಿತ ತಮಗೆ ಹತ್ತಿರವಿರುವ ಬ್ಯಾಂಕ್/ಆರ್ಥಿಕ ಸಂಸ್ಥೆಗಳು, ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ, ಸಮೀಪವಿರುವ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಅಲ್ಲದೇ ಸಂರಕ್ಷಣೆ ವೆಬ್‌ಸೈಟ್ http://samrkshane.karnataka.gov.in ನಲ್ಲಿಯೂ ಸಹ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.

Dr. Babu Jagjivan Ram Leather Industries Development  ಕೌಶಲ್ಯ ಅಭಿವೃದ್ದಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

0

Dr. Babu Jagjivan Ram Leather Industries Development  ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ರಾಜ್ಯದ ಪಾರಂಪರಿಕ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ (ಪರಿಶಿಷ್ಟ ಜಾತಿಯಲಿ ಬರುವ ಮಾದಿಗ, ಸಮಗಾರ, ಡೋರ, ಆದಿಜಾಂಬವ, ಮಚಗಾರ, ಮೋಚಿ ಹಾಗೂ ಇತರೆ ಚರ್ಮೋಗಾರಿಕೆಗೆ ಒಳಪಡುವ ಸಮುದಾಯಗಳಿಗೆ) ಪ್ರಸ್ತುತ ಚರ್ಮ ಉದ್ಯಮದಲ್ಲಿ ಚಾಲ್ತಿಯಲ್ಲಿರುವ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳನ್ನು ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮುಂಚೂಣಿಯಲ್ಲಿರುವ ಆಗ್ರಾ, ಉತ್ತರ ಪ್ರದೇಶ ಹಾಗೂ ಕೊಲ್ಕತ್ತಾ, ಪಶ್ಚಿಮ ಬಂಗಾಳದ ರಾಜ್ಯಗಳಲ್ಲಿರುವ ಮೆ|| ಸೆಂಟ್ರಲ್ ಫುಟ್‌ವೇರ್ ಟ್ರೆöÊನಿಂಗ್ ಇನ್‌ಸ್ಟಿಟ್ಯೂಟ್/ಸೆಂಟರ್ ಇಲ್ಲಿಗೆ 60 ದಿನಗಳ ವಸತಿ ಸಹಿತ ಕೌಶಲ್ಯ ಅಭಿವೃದ್ಧಿ ತರಬೇತಿ ‘ಫುಟ್‌ವೇರ್ ಡಿಸೈನಿಂಗ್ ಆಂಡ್ ಪ್ರೊಡಕ್ಷನ್” ಪಡೆಯಲು ಕಳುಹಿಸಿಕೊಡಲಾಗುತ್ತಿದ್ದು, 10ನೇ ತರಗತಿ ಪಾಸಾಗಿರುವ 18 ರಿಂದ 40 ವರ್ಷ ವಯೋಮಿತಿಯುಳ್ಳ ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ಪ್ರಯಾಣ ವೆಚ್ಚ, ಉಟೋಪಚಾರ, ವಸತಿ ವ್ಯವಸ್ಥೆಯನ್ನು ನಿಗಮದಿಂದ ಕಲ್ಪಿಸಲಾಗುವುದು, ತರಬೇತಿ ಅವಧಿಯಲ್ಲಿ ದಿನಕ್ಕೆ 200/- ರೂ.ನಂತೆ ರೂ. 12,000/-ಪಾವತಿಸಲಾಗುವುದು. ಮೊದಲನೆ ಹಂತದಲ್ಲಿ ಆಗ್ರಾ, ಉತ್ತರ ಪ್ರದೇಶದ ಮೆ|| ಸೆಂಟ್ರಲ್ ಫುಟ್‌ವೇರ್ ಟ್ರೆöÊನಿಂಗ್ ಇನ್‌ಸ್ಟಿಟ್ಯೂಟ್/ಸೆಂಟರ್‌ನಲ್ಲಿ ಆಗಸ್ಟ್ 19 ರಿಂದ ಅಕ್ಟೋಬರ್ 18ರವರೆಗೆ ನಡೆಯುವ ತರಬೇತಿಗೆ ನಿಯೋಜಿಸಲಾಗುವುದು.
Dr. Babu Jagjivan Ram Leather Industries Development  ಆಸಕ್ತರು ತಮ್ಮ ವೈಯಕ್ತಿಕ ವಿವರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್‌ಪಾಸ್ ಪುಸ್ತಕದ ಜೇರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ 5 ಪೋಟೋಗಳನ್ನು ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ನಂ. 32, ಲಿಡ್ಕರ್ ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಏರಿಯಾ, ವಸಂತನಗರ, ಬೆಂಗಳೂರು-560052 ಇಲ್ಲಿಗೆ ಜುಲೈ 31ರೊಳಗಾಗಿ ಸಲ್ಲಿಸುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್ಕರ್, ನೆಹರು ರಸ್ತೆ, ಶಿವಮೊಗ್ಗ ದೂ.ಸಂ.: 9449181136 ಇವರನ್ನು ಸಂಪರ್ಕಿಸುವುದು.

Actor Darshan ಮನೆಯೂಟಕ್ಕೆ ಮನವಿ ಮಾಡಿದ್ದ ದರ್ಶನ್ ಪರ ಅರ್ಜಿಗೆ ಕೋರ್ಟ್ ನಕಾರ

0

Actor Darshan ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಈಗ ದರ್ಶನ್​ ಅವರಿಗೆ ಜೈಲಿನ ಊಟವೇ ಗತಿ ಆಗಿದೆ.

ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ ಕಡಿಮೆಯಾಗುತ್ತಿದೆ ಎಂಬ ಕಾರಣ ನೀಡಿ ಮನೆಯ ಊಟ ತರಿಸಲು ಅನುಮತಿ ಕೋರಿ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.

Actor Darshan ಜೈಲೂಟದಿಂದ ದರ್ಶನ್​ಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ವೇಳೆ ಆದ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲ ಎಂದು ಪೊಲೀಸರ ಪರ ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು.

D.K. Shivakumar ಇಂಜಿನಿಯರ್ ಗಳನ್ನ ನಿಂದಿಸಿದ ಆರ್.ಅಶೋಕ್ ಕ್ಷಮೆ ಕೇಳಲಿ-ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹ

0

D.K. Shivakumar ರಾಜ್ಯದ ಎಂಜಿನಿಯರ್‌ಗಳನ್ನು ಮನೆಹಾಳರು ಎಂದು ವಿಧಾನಸಭೆಯಲ್ಲಿ ನಿಂದಿಸಿರುವ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಅವರು ತಕ್ಷಣ ಎಂಜಿನಿಯರ್‌ಗಳ ಕ್ಷಮೆ ಕೇಳಬೇಕು.

ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಕರ್ನಾಟಕ ಎಂಜಿನಿಯರ್‌ಗಳ ಸಂಘದ ಗೌರವ ಅಧ್ಯಕ್ಷ ದೇವರಾಜ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಡಿ.ಕೆ. ಶಿವಕುಮಾರ್‌ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ, ತಮ್ಮ ಹೇಳಿಕೆಯನ್ನು ಅಶೋಕ ಅವರು ಹಿಂತೆಗೆದುಕೊಳ್ಳುವಂತೆ ಒತ್ತಡ ತರಬೇಕೆಂದು ಮನವಿ ಮಾಡಿದರು.

D.K. Shivakumar ಅಣೆಕಟ್ಟೆಗಳು, ವಿದ್ಯುತ್ ಯೋಜನೆಗಳು, ಬೃಹತ್ ಕಟ್ಟಡಗಳು, ಐಟಿಬಿಟಿ ಕ್ಷೇತ್ರ ಸೇರಿದಂತೆ ನಾಡಿನ ಅಭಿವೃದ್ಧಿಗೆ ಅನೇಕ ಕ್ಷೇತ್ರಗಳಲ್ಲಿ ಎಂಜಿನಿಯರ್‌ಗಳು ಸಾಕಷ್ಟು ಕೊಡುಗೆ ನೀಡಿದ್ದಾರೆ. ರಾಜ್ಯ ಮತ್ತು ದೇಶದ ಪ್ರಗತಿಯ ರೂವಾರಿಗಳನ್ನು ಮನೆಹಾಳರು ಎಂದು ಕರೆದಿರುವುದು ಸರಿಯಲ್ಲ ಎಂದರು.

ಅಶೋಕ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಡಿ.ಕೆ. ಶಿವಕುಮಾರ್‌, ಎಂಜಿನಿಯರ್‌ಗಳನ್ನು ಅವಹೇಳನ ಮಾಡಿರುವ ಹೇಳಿಕೆಯನ್ನು ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರು.

Engineer jumps off Mumbai’s Atal Setu ಮುಂಬೈ ಅಟಲ್ ಸೇತುವಿನಿಂದ ಜಿಗಿದು ಇಂಜಿನಿಯರ್ ಆತ್ಮಹತ್ಯೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆ

0

Engineer jumps off Mumbai’s Atal Setu 38 ವರ್ಷದ ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.
ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ.

ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

Engineer jumps off Mumbai’s Atal Setu ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ.

ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

Shivamogga Police ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಸಾವು. ಮೃತರ ಬಗ್ಗೆ ಪೊಲೀಸ್ ಪ್ರಕಟಣೆ

0

Shivamogga Police ಶಿವಮೊಗ್ಗ ಸರ್ಕಾರಿ ಬಸ್ ನಿಲ್ದಾಣದ ಪುರುಷರ ವಿಶ್ರಾಂತಿ ಕೊಠಡಿಯಲ್ಲಿ ಸುಮಾರು 45-50 ವರ್ಷ ವ್ಯಕ್ತಿ ಮಲಗ್ಗಿದಲ್ಲೇ ಮೃತಪಟ್ಟಿದ್ದು, ಮೃತ ದೇಹವು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಮೃತ ವ್ಯಕ್ತಿಯು 05.06 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲ ಕಿಬ್ಬೊಟ್ಟೆಯ ಮೇಲೆ ರಾಗಿಕಾಳು ಗಾತ್ರದ ಕಪ್ಪು ಮಚ್ಚೆ ಇರುತ್ತದೆ. ಮೈಮೇಲೆ ಕಪ್ಪುಬಿಳಿ ಬಣ್ಣದ ತುಂಬು ತೋಳಿನ ಶರ್ಟ್, ಕಂದು ಬಣ್ಣದ ಅರ್ಧ ತೋಳಿನ ಟೀಶರ್ಟ್, ಕಂದು ಬಣ್ಣದ ಚುಕ್ಕಿಗಳಿರುವ ಲುಂಗಿ ಧರಿಸಿರುತ್ತಾರೆ.

Shivamogga Police ಈ ಮೃತ ವ್ಯಕ್ತಿಯ ವಾರಸ್ಸುದಾರರು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.:08182-261414/ 9916882544 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

Draupadi Murmu ರಾಷ್ಟ್ರಪತಿ ಭವನದ ಎರಡು ಸಭಾಂಗಣಗಳಿಗೆ ಗಣತಂತ್ರ ಮಂಟಪ & ಅಶೋಕ ಮಂಟಪ ಮರುನಾಮಕರಣ

0

Draupadi Murmu ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದೊಳಗಿನ ಎರಡು ಮಹತ್ವದ ಸಭಾಂಗಣಗಳಾದ ದರ್ಬಾರ್ ಹಾಲ್ ಮತ್ತು ಅಶೋಕ್ ಹಾಲ್ ನ ಹೆಸರು ಬದಲಾವಣೆ ಮಾಡಿದ್ದು, ಕ್ರಮವಾಗಿ ಗಣತಂತ್ರ ಮಂಟಪ್‌ ಹಾಗೂ ಆಶೋಕ ಮಂಟಪ್‌ ಎಂದು ಮರುನಾಮಕರಣ ಮಾಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಭಾರತೀಯ ಸಂಸ್ಕೃತಿಯ ಸಾಂಸ್ಕೃತಿಕ ಮೌಲ್ಯಗಳು ಹಾಗೂ ನೈತಿಕತೆಯನ್ನು ಪಸರಿಸುವ ನಿರಂತರ ವಾತಾವರಣವನ್ನು ನಿರ್ಮಿಸುವ ಪ್ರಯತ್ನ ಇದಾಗಿದೆ ಎಂದು ರಾಷ್ಟ್ರಪತಿ ಭವನದ ಸೆಕ್ರೆಟ್ರಿಯೇಟ್ ತಿಳಿಸಿದೆ.

Draupadi Murmu ಐತಿಹಾಸಿಕವಾಗಿ ಪ್ರಸಿದ್ಧವಾಗಿರುವ ‘ದರ್ಬಾರ್ ಹಾಲ್’ ಮತ್ತು ‘ಅಶೋಕ್ ಹಾಲ್’ ಅನ್ನು ಈಗ ಕ್ರಮವಾಗಿ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಕರೆಯಲಾಗುತ್ತದೆ. ಭಾರತದ ಗಣರಾಜ್ಯ ಮತ್ತು ಅದರ ಇತಿಹಾಸವನ್ನು ಪ್ರತಿಬಿಂಬಿಸಲು ಈ ಬದಲಾವಣೆಯನ್ನು ಮಾಡಲಾಗಿದೆ.

ಹೆಸರು ಬದಲಾವಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

Kumsi Police Station ಕುಂಸಿ ಠಾಣೆ ಕೇಸ್: ಅಪ್ರಾಪ್ತ ಬಾಲಕಿಮೇಲೆ ಅತ್ಯಾಚಾರ. ಆರೋಪಿಗಳಿಗೆ ಶಿಕ್ಷೆ ಘೋಷಿಸಿದ ಕೋರ್ಟ್

0

Kumsi Police Station ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.

ಶಿವಮೊಗ್ಗ ತಾಲ್ಲೂಕಿನ 37 ವರ್ಷ ಮತ್ತು 39 ವರ್ಷದ ಯುವಕರಿಬ್ಬರಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ, 1ನೇ ಆರೋಪಿಗೆ ೧,೧೫,೦೦೦/- ರೂ ದಂಡ ಮತ್ತು ೨ನೇ ಆರೋಪಿಗೆ 1,05,000 ರೂ ದಂಡ, ದಂಡ ಕಟ್ಟಲು ವಿಫಲರಾದಲ್ಲಿ 01 ವರ್ಷ ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ, ದಂಡದ ಮೊತ್ತದಲ್ಲಿ 2 ಲಕ್ಷ ಮತ್ತು ಸರ್ಕಾರದಿಂದ 10 ಲಕ್ಷರೂಗಳನ್ನು ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ ನೀಡಲು ಆದೇಶಿಸಿದೆ.

2023ನೇ ಸಾಲಿನಲ್ಲಿ ಶಿವಮೊಗ್ಗ ತಾಲ್ಲೂಕಿನ 37 ವರ್ಷ ಮತ್ತು 39 ವರ್ಷದ ಯುವಕರಿಬ್ಬರು ಲೈಂಗಿಕ ದೌಜ್ಯನ್ಯ ನಡೆಸಿದ್ದರು. ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಕುಂಸಿ ಪೊಲೀಸ್ ಠಾಣೆಯಲ್ಲಿ ಕಲಂ 376 (2),376 (3) ಐಪಿಸಿ ಮತ್ತು ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು.

Kumsi Police Station ಪ್ರಕರಣದ ತನಿಖಾಧಿಕಾರಿ ಕುಂಸಿ ಠಾಣೆಯ ಇನ್ಸ್‌ಪೆಕ್ಟರ್ ಹರೀಶ್ ಕೆ ಪಾಟೀಲ್, ಪ್ರಕರಣದ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ಹೆಚ್. ಆರ್ ವಾದ ಮಂಡಿಸಿದ್ದರು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತರ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶ ಮೋಹನ್ ಜೆ. ಎಸ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.