Thursday, April 9, 2026
Thursday, April 9, 2026
Home Blog Page 649

Anshuman Gaikwad ಮಾಜಿ ಕ್ರಿಕೆಟ್ ಸ್ಟಾರ್ ಅಂಶುಮನ್ ಗಾಯಕ್ವಾಡ್ ಚಿಕಿತ್ಸೆಗೆ ₹1 ಕೋಟಿ ನೆರವು

0

Anshuman Gaikwad ರಕ್ತದ ಕ್ಯಾನ್ಸರ್‌ನಿಂದ ಲಂಡನ್‌ ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್ ಅವರ ಚಿಕಿತ್ಸೆಗಾಗಿ 1 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಬಿಸಿಸಿಐ ನಿರ್ಧರಿಸಿದೆ.

ಗಾಯಕ್ವಾಡ್ ಅವರಿಗೆ ನೆರವಾಗುವಂತೆ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಹಾಗೂ ಸಂದೀಪ್ ಪಾಟೀಲ್ ಮನವಿ ಮಾಡಿದ ಬೆನ್ನಲ್ಲೇ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ.

“ಕ್ಯಾನ್ಸರ್‌ನಿಂದ ಬಳಲುತ್ತಿರುವ ಭಾರತದ ಹಿರಿಯ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರಿಗೆ ಆರ್ಥಿಕ ನೆರವು ನೀಡಲು ತಕ್ಷಣವೇ 1 ಕೋಟಿ ರೂ. ಬಿಡುಗಡೆ ಮಾಡುವಂತೆ ಜಯ್ ಶಾ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ” ಎಂದು ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಹೇಳಿಕೆಯಲ್ಲಿ ತಿಳಿಸಿದೆ.

Anshuman Gaikwad ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಸಂಕಷ್ಟಕ್ಕೆ ಸ್ಪಂದಿಸಲು BCCI ಗೆ ಕಪಿಲ್ ದೇವ್ ಮನವಿ; ಪಿಂಚಣಿ ದೇಣಿಗೆ ನೀಡುವುದಾಗಿ ಪತ್ರ!
ಭಾರತದ ಮಾಜಿ ನಾಯಕ ಡಿ ಕೆ ಗಾಯಕ್ವಾಡ್ ಅವರ ಪುತ್ರ ಗಾಯಕ್ವಾಡ್ ಅವರು ಲಂಡನ್‌ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ರಕ್ತದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ನೆರವು ನೀಡಲು ಗಾಯಕ್ವಾಡ್ ಅವರ ಕುಟುಂಬದೊಂದಿಗೆ ಜಯ್ ಶಾ ಮಾತನಾಡಿದ್ದಾರೆ. ಈ ಬಿಕ್ಕಟ್ಟಿನ ಸಮಯದಲ್ಲಿ ಮಂಡಳಿಯು ಗಾಯಕ್ವಾಡ್ ಅವರ ಕುಟುಂಬದ ಬೆಂಬಲಕ್ಕೆ ನಿಂತಿದೆ ಮತ್ತು ಗಾಯಕ್ವಾಡ್ ಅವರ ತ್ವರಿತ ಚೇತರಿಕೆಗೆ ಅಗತ್ಯವಾದ ಎಲ್ಲ ನೆರವನ್ನು ಮಾಡುತ್ತದೆ ಎಂದು ಬಿಸಿಸಿಐ ಹೇಳಿದೆ.

Jog falls ಜೋಗ ಜಲವೈಭವ ವೀಕ್ಷಣೆಗೆ ಜನಸಾಗರವೇ ಹರಿದು ಬರುತ್ತಿದೆ

0

Jog falls ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಮಳೆ ಕಳೆದೆರೆಡು ದಿನಗಳಿಂದ ಮತ್ತೆ ಚುರುಕುಗೊಂಡಿದೆ. ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಆರ್ಭಟ ಜೋರಾಗಿದೆ. ಇದರಿಂದ ನದಿಗಳ (rivers) ನೀರಿನ ಹರಿವಿನಲ್ಲಿ ಹೆಚ್ಚಳವಾಗಿದೆ. ಪ್ರಮುಖ ಜಲಾಶಯಗಳ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.
ಮತ್ತೊಂದೆಡೆ, ಶರಾವತಿ ಕಣಿವೆ ಪ್ರದೇಶದಲ್ಲಿಯೂ ಧಾರಾಕಾರ ವರ್ಷಧಾರೆಯಾಗುತ್ತಿದೆ ಇದರಿಂದ ವಿಶ್ವವಿಖ್ಯಾತ ಜೋಗ ಜಲಪಾತದ ಭೋರ್ಗರೆತ ಮುಂದುವರಿದಿದೆ. ಜಲಧಾರೆಯ ವೈಭೋಗ ವೀಕ್ಷಣೆಗೆ ಜನಸಾಗರವೇ ಹರಿದು ಹರಿದುಬರುತ್ತಿದೆ. ಭಾನುವಾರ ಬೀಳುತ್ತಿದ್ದ Jog falls ಭಾರೀ ಮಳೆಯ ನಡುವೆಯೇ ಜಲ ವೈಭೋಗವನ್ನು ಪ್ರವಾಸಿಗರು ಕಣ್ತುಂಬಿಕೊಂಡರು.
‘ವಾರಾಂತ್ಯದ ದಿನಗಳಂದು ಜಲಪಾತಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಕಳೆದ ಭಾನುವಾರದಂತೆ, ಪ್ರಸ್ತುತ ಭಾನುವಾರು ಕೂಡ ಸಾವಿರಾರು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸಿದ್ದರು. ಯಾವುದೇ ಗೊಂದಲ – ಗಡಿಬಿಡಿಗೆ ಆಸ್ಪದವಾಗದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು’ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಧರ್ಮಪ್ಪ ಅವರು ಮಾಹಿತಿ ನೀಡಿದ್ದಾರೆ.

Department of Health and Family Welfare ಡೆಂಗ್ಯೂ ವಿರುದ್ಧ ಎಲ್ಲರೂ ಹೋರಾಡೋಣ- ಶಾಸಕ‌ ಚನ್ನಬಸಪ್ಪ

0

Department of Health and Family Welfare ಸರ್ಕಾರದ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿದರೆ ಡೆಂಗ್ಯೂ ಕಾಯಿಲೆಯನ್ನು ನಿಯಂತ್ರಿಸಬಹುದು ಎಂದು ಶಾಸಕ ಚನ್ನಬಸಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶಿವಮೊಗ್ಗ ನಗರದ ನೇತಾಜಿ ಸರ್ಕಲ್ ಹತ್ತಿರ ಜೆಪಿ ನಗರ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ಅಡಿಯಲ್ಲಿ ಪ್ರತಿ ಶುಕ್ರವಾರ ನಡೆಸುವ ಡ್ರೈ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಡೆಂಗ್ಯೂ ನಿಯಂತ್ರಣದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಮತ್ತು ಸಾರ್ವಜನಿಕರು ಸರ್ಕಾರಿ ಇಲಾಖೆ ಅಧಿಕಾರಿಗಳಿಗೆ ಸ್ಪಂದಿಸಬೇಕು. ಕಸವನ್ನು ಎಲ್ಲಿ ಬೇಕಾದಲ್ಲಿ ಹಾಕದೆ ಮಹಾನಗರಪಾಲಿಕೆ ಕಸದ ವಾಹನದಲ್ಲಿ ಹಾಕಬೇಕು ಹಾಗೂ ತಮ್ಮ ಬೀದಿಗಳಲ್ಲಿ ಮನೆಯ ಸುತ್ತಮುತ್ತ ಪ್ರದೇಶದಲ್ಲಿ ನೀರು ಸಂಗ್ರಹಣೆ ಆಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದ ಅವರು ಡೆಂಗ್ಯೂ ವಿರುದ್ಧ ಪ್ರತಿಯೊಬ್ಬರು ಹೋರಾಡೊಣ ಎಂದು ಕರೆ ನೀಡಿದರು.
ಈ ವೇಳೆ ಶಾಸಕರು ಅಧಿಕಾರಿಗಳೊಂದಿಗೆ ಹಲವಾರು ಮನೆಗಳಿಗೆ ಭೇಟಿ ನೀಡಿ ಲಾರ್ವ ಉತ್ಪತ್ತಿಯಾಗಿರುವ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕರಿಗೆ ಇದರ ಬಗ್ಗೆ ಮಾಹಿತಿ ನೀಡಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಹಾಗೂ ಲಾರ್ವ ಉತ್ಪತಿಯಾಗದಂತೆ ಗಮನ ನೀಡಿ ಎಂದು ತಿಳಿಸಿದರು.
Department of Health and Family Welfare ಈ ಸಂದರ್ಭದಲ್ಲಿ ಡಿ.ಹೆಚ್‍ಓ ಡಾ.ನಟರಾಜ್, ರೋಗವಾಕ ಆಶ್ರೀತಾ ಅಧಿಕಾರಿ ಡಾ. ಗುಡದಪ್ಪ ಕಸಬಿ, ತಾಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರ್, ಡಾ. ಮೋಹನ್, ಡಾ. ಭೀಮಪ್ಪ, ಮಹಾನಗರ ಪಾಲಿಕೆಯ ಹೆಲ್ತ್ ಇನ್ಸ್ಪೆಕ್ಟರ್ ವಿಕಾಸ್, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗು ಆಶಾ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

Dengue Disease ಡೆಂಗ್ಯು ರೋಗ ಪ್ರಸರಣ & ಬಾಲ್ಯ ವಿವಾಹ ತಡೆಗೆ ಸಹಕರಿಸಿ- ತಹಶೀಲ್ದಾರ್ ಗಿರೀಶ್

0

Dengue Disease ಡೆಂಗ್ಯು ನಿಯಂತ್ರಣದಲ್ಲಿ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಹಾಗೂ ಬಾಲ್ಯ ವಿವಾಹ, ಕೌಟುಂಬಿಕ ದೌರ್ಜನ್ಯದಂತಹ ಪ್ರಕರಣಗಳನ್ನು ತಗ್ಗಿಸಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಜೊತೆಗೆ ಸಾರ್ವಜನಿಕರು ಸಹಕರಿಸಬೇಕೆಂದು ತಹಶೀಲ್ದಾರ್ ಗಿರೀಶ್ ಮನವಿ ಮಾಡಿದರು.
ತಹಶೀಲ್ದಾರ್ ಕಚೇರಿಯಲ್ಲಿ ಜೂ.15 ರಂದು ಏರ್ಪಡಿಸಲಾಗಿದ್ದ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಹಾಗೂ ತಾಲ್ಲೂಕು ಟಮ್ಟದ ಟಾಸ್ಕ್‍ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳೆಯರು ಮತ್ತು ಮಕ್ಕಳ ವಿರುದ್ದದ ಅಪರಾಧ ತಡೆಗೆ ಸರ್ಕಾರ ಅನೇಕ ಕಾಯ್ದೆ, ಕಾನೂನುಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು. ಬಾಲ್ಯವಿವಾಹ ಸೇರಿದಂತೆ ಮಕ್ಕಳು ಮತ್ತು ಮಹಿಳೆಯರ ಸಂರಕ್ಷಣೆ ವಿಷಯದಲ್ಲಿ ಸಾರ್ವಜನಿಕರು ಸಹ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಶಿವಮೊಗ್ಗ ಸಿಡಿಪಿಓ ಗಂಗಾಬಾಯಿ ಸಿ ಮಾತನಾಡಿ, 2024-25 ನೇ ಸಾಲಿನ ಜೂನ್ ವರೆಗೆ ತಾಲ್ಲೂಕಿನಲ್ಲಿ ಒಟ್ಟು 22 ಬಾಲ್ಯ ವಿವಾಹ ಪ್ರಕರಣ ವರದಿಯಾಗಿದ್ದು 6 ವಿವಾಹಗಳನ್ನು ತಡೆಯಲಾಗಿದೆ. ಮಹಿಳೆಯರ ಮತ್ತು ಮಕ್ಕಳ ಸಾಗಾಟ ನಿರ್ಮೂಲನೆ ಮತ್ತು ಮಕ್ಕಳ ರಕ್ಷಣೆಗಾಗಿ ಎಲ್ಲ ಗ್ರಾ.ಪಂ ಗಳಲ್ಲಿ ಮಕ್ಕಳ ಸರ್ವೇ ಮಾಡಲಾಗಿದ್ದು ಕಾವಲು ಸಮಿತಿ ಸಭೆಗಳನ್ನು ನಡೆಸಲಾಗಿದೆ. ಜೂನ್ ಮಾಹೆವರೆಗೆ 194 ಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್ ನೀಡಲಾಗಿದೆ. ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮದಡಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಅಧಿನಿಯಮದಡಿ ಜೂನ್‍ವರೆಗೆ 35 ಪ್ರಕರಣ ದಾಖಲಾಗಿದ್ದು 20 ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ. ಆಪ್ತ ಸಮಾಲೋಚನೆ ಹಂತದಲ್ಲಿ ಉಳಿದ ಪ್ರಕರಣಗಳು ಇವೆ. ತಾಲ್ಲೂಕಿನಲ್ಲಿ ಒಟ್ಟು 825 ಸ್ತ್ರೀಶಕ್ತಿ ಗುಂಪುಗಳಿದ್ದು ಎಲ್ಲ ಗುಂಪುಗಳು ಸುತ್ತುನಿಧಿ ಸೌಲಭ್ಯ ಪಡೆದಿವೆ ಎಂದು ಮಾಹಿತಿ ನೀಡಿದರು.
ತಹಶೀಲ್ದಾರರು ಪ್ರತಿಕ್ರಿಯಿಸಿ, ಸರ್ಕಾರದ ವಿವಿಧ ವಸತಿಶಾಲೆಗಳು, ಸರ್ಕಾರಿ ಶಾಲೆಗಳ ಮುಖ್ಯಶಿಕ್ಷಕರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ವಿಶೇಷ ಸಭೆ ಕರೆದು ಬಾಲ್ಯ ವಿವಾಹ ತಡೆ, ಡೆಂಗ್ಯು ನಿಯಂತ್ರಣ ಸೇರಿದಂತೆ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಟಾನದ ಕುರಿತು ಮಾಹಿತಿ ನೀಡಬೇಕು.
ಬಾಲ್ಯ ವಿವಾಹ ತಡೆಯುವುದು ಎಲ್ಲ ಅಧಿಕಾರಿ/ಸಿಬ್ಬಂದಿಗಳ ಕರ್ತವ್ಯವಾಗಿದೆ. ಜೊತೆಗೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಾರ್ವಜನಿಕರು ಬಾಲ್ಯ ವಿವಾಹ ಕಂಡುಬಂದರೆ ತಡೆಯುವಲ್ಲಿ ಸಹಕರಿಸಬೇಕು. ಎಲ್ಲರೂ ಜಾಗೃತರಾಗಿ ಸಹಕರಿಸಿದಲ್ಲಿ ಮಾತ್ರ ಬಾಲ್ಯ ವಿಹಾಹ ತಡೆ ಸಾಧ್ಯವಾಗುತ್ತದೆ ಎಂದರು.
ನಗರದ ಆಲ್ಕೋಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಕಚೇರಿ ಆವರಣದಲ್ಲಿ ದತ್ತು ಸ್ವೀಕಾರ ಕೇಂದ್ರದಲ್ಲಿ ಒಟ್ಟು 10 ಮಕ್ಕಳು ನೊಂದಣಿಯಾಗಿದ್ದಾರೆ. ಇಲ್ಲಿವರೆಗೆ 06 ಮಕ್ಕಳನ್ನು ದತ್ತು ನಿಡಲಾಗಿದೆ. ದತ್ತು ಪಡೆಯಲು ಇಚ್ಚೆಯುಳ್ಳವರು ಈ ಕೇಂದ್ರವನ್ನು ಸಂಪರ್ಕಿಸಬಹುದು ಎಂದರು.
Dengue Disease ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಮಾತನಾಡಿ, ತಾಲ್ಲೂಕಿನಲ್ಲಿ ಜನವರಿಯಿಂದ ಜೂನ್ ಮಾಹೆವರೆಗೆ ಒಟ್ಟು 94 ಡೆಂಗ್ಯು ಮತ್ತು 24 ಚಿಕುನ್‍ಗುನ್ಯ ಪ್ರಕರಣ ದಾಖಲಾಗಿವೆ. ಡೆಂಗ್ಯು ನಿಯಂತ್ರಣಕ್ಕೆ ಎಲ್ಲ ರೀತಿಯ ಕ್ರಮಗಳನ್ನು ಜರುಗಿಸಲಾಗುತ್ತಿದ್ದು ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಾರ್ವಾ ಉತ್ಪತ್ತಿ ತಾಣಗಳ ಸರ್ವೇ ಮಾಡಿ, ಅರಿವು ಮೂಡಿಸುತ್ತಿದ್ದಾರೆ. ನಿಂತ ನೀರಿಗೆ ರಾಸಾಯನಿಕ ಹಾಗೂ ಫಾಗಿಂಗ್ ಮಾಡಲಾಗುತ್ತಿದೆ. ಎಲ್ಲ ಸಾರ್ವಜನಿಕರು ಮನೆ ಸುತ್ತಮುತ್ತ ಯಾವುದೇ ವಸ್ತುಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಿ ಡೆಂಗ್ಯು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ತಹಶೀಲ್ದಾರರು ಮಾತನಾಡಿ, ಆರ್‍ಬಿಎಸ್‍ಕೆ ಕಾರ್ಯಕ್ರಮದಡಿ 225 ಅಂಗನವಾಡಿ ಕೇಂದ್ರದ ಮಕ್ಕಳ ಆರೋಗ್ಯ ತಪಾಸಣೆ ನಡೆದಿದೆ. ಶಾಲೆಗಳಲ್ಲಿ ಅಥವಾ ಅಂಗನವಾಡಿ ಮಕ್ಕಳಲ್ಲಿ ಯಾವುದಾದರೂ ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ ಆರ್‍ಬಿಎಸ್‍ಕೆ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯಬಹುದು ಎಂದರು ತಿಳಿಸಿದರು.
ಮಾದಕ ವ್ಯಸನ ನಿಯಂತ್ರಣಕ್ಕಾಗಿ ನಗರದ ಸೋಮಿನಕೊಪ್ಪದಲ್ಲಿ ಮಾದಕವ್ಯಸನ ಮುಕ್ತ ಕೇಂದ್ರವನ್ನು ಸ್ಥಾಪಿಸಲಾಗಿದೆ. ಮಾದಕವ್ಯಸನ ಮುಕ್ತ ಕೇಂದ್ರದಲ್ಲಿ ಒಟ್ಟು 46 ಜನರಿಗೆ ಅವಕಾಶವಿದ್ದು, ಪ್ರಸ್ತುತ ಉಚಿತವಾಗಿ 22 ಜನರ ಮದ್ಯ ವ್ಯಸನ ಬಿಡಿಸುವ ಕೆಲಸ ಮಾಡಲಾಗುತ್ತಿದೆ. ಮಾದಕ ವ್ಯಸನಕ್ಕೆ ಒಳಗಾಗಿರುವ ಮಕ್ಕಳು, ವಯಸ್ಕರನ್ನು ಅದರಿಂದ ಹೊರಗೆ ತರುವ ಪ್ರಯತ್ನವನ್ನು ಮಾಡಲಾಗುತಿದ್ದು ಜನರು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಮಾಹಿತಿ ನೀಡಿದರು.
ತಾಲ್ಲೂಕಿನಲ್ಲಿ ಈವರೆಗೆ ಒಟ್ಟು 23 ತಂಬಾಕು ದಾಳಿಗಳು ಆಗಿದ್ದು 458 ಪ್ರಕರಣ ದಾಖಲಿಸಿ 34350 ದಂಡ ಸಂಗ್ರಹಿಸಲಾಗಿದೆ. ಟಿಸಿಸಿ ಕೇಂದ್ರಕ್ಕೆ 2039 ಜನರು ಭೇಟಿ ನೀಡಿದ್ದು ಶೇ.18 ರಷ್ಟು ಜನರು ತಂಬಾಕು ತ್ಯಜಿಸಿದ್ದಾರೆ ಎಂದ ಅವರು ಎಲ್ಲ ಶಾಲೆಗಳ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷೇಧ ಫಲಕವನ್ನು ಹಾಕಬೇಕು ಎಂದು ಸೂಚನೆ ನೀಡಿದರು.
ಡೆಂಗ್ಯು ನಿಯಂತ್ರಣಕ್ಕೆ ಸಹಕರಿಸಿ :
ತಹಶೀಲ್ದಾರರು, ಪ್ರತಿ ಶುಕ್ರವಾರ ಎಲ್ಲರೂ ತಮ್ಮ ಮನೆಗಳು, ಕಚೇರಿಗಳು, ಶಾಲೆಯಲ್ಲಿನ ನೀರು ಸಂಗ್ರಹಿಸುವ ಬಕೆಟ್, ಬ್ಯಾರೆಲ್, ಪಾತ್ರೆಗಳನ್ನು ಖಾಲಿ ಮಾಡಿ, ಸ್ವಚ್ಚಗೊಳಿಸಿ, ಒಣಗಿಸಿ ಪುನಃ ನೀರು ತುಂಬಿಡಬೇಕು. ಡೆಂಗ್ಯೂ ಬರುವ ಮುನ್ನವೇ ಮುಂಜಾಗೃತಿ ಮತ್ತು ಎಚ್ಚರಿಕೆ ವಹಿಸಬೇಕು. ಮನೆ ಸುತ್ತಮುತ್ತ ನೀರು ನಿಲ್ಲದಂತೆ ಹಾಗೂ ಸ್ವಚ್ಚತೆ ಕಾಪಾಡುವ ಮೂಲಕ ಸಾರ್ವಜನಿಕರು ಡೆಂಗ್ಯು ನಿಯಂತ್ರಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.

Canara Bank Rural Self Employment Training Institute ಯಶಸ್ವಿಯಾಗಿ ನಡೆದ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿ ಕಾರ್ಯಕ್ರಮ

0

Canara Bank Rural Self Employment Training Institute ಯಶಸ್ವಿಯಾಗಿ ನಡೆದ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿ ಕಾರ್ಯಕ್ರಮ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಜುಲೈ 15 ರಂದು ಬ್ಯೂಟಿಪಾರ್ಲರ್ ಮ್ಯಾನೇಜಮೆಂಟ್ ತರಬೇತಿ ಕಾರ್ಯಕ್ರಮದ ಉದ್ಘಾಟನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಯುತ ಅದರ್ಶ್, ಯುವ ಉದ್ಯಮಿ, ಹಾಗೂ ಅದ್ಯಕ್ಷರು ಜೆಸಿಐ ಮಲ್ನಾಡ್ ಶಿವಮೊಗ್ಗ, ಇವರು ಕಾರ್ಯಕ್ರಮದಲ್ಲಿ ಉದ್ಯೋಗದ ಅಯ್ಕೆ, ಅದನ್ನು ಹೇಗೆ ಕಾರ್ಯರೂಪಕ್ಕೆ ತರಬೇಕು ಮತ್ತು ಅದನ್ನು ಅಭಿವೃದ್ಧಿಯನ್ನು ಹೇಗೆ ಮಾಡಬೇಕೆಂದು ಕೆಲವು ಉದಾಹರಣೆಗಳ ಮೂಲಕ ತಿಳಿಸಿದರು.

Canara Bank Rural Self Employment Training Institute ಯಶಸ್ವಿಯಾಗಿ ನಡೆದ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿ ಕಾರ್ಯಕ್ರಮ ಡೋಮೈನ್ ಸ್ಕಿಲ್ ಟ್ರೇನರ್ ಅದಂತಹ ಶ್ರೀಮತಿ ಅರ್ಪಣಾ ವಾಲಿ ಮತ್ತು ನಾಗರಾಜ, ಸುಮನ್, ಹಾಜರಿದ್ದರು, ಮತ್ತು ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಕಾಂತೇಶ ಅಂಬಿಗರ್ ಇವರು ಮಾತನಾಡಿ ಸಂಸ್ಥೆಯ ಕಿರು ಪರಿಚಯವನ್ನು ಮಾಡಿಕೊಟ್ಟರು ಮತ್ತು ಶಿಬಿರಾರ್ಥಿಗಳಿಗೆ ಶುಭಹಾರೈಸಿದರು, ಉಪನ್ಯಾಸಕರಾದ ಸುರೇಶ್ ವೈ ಹಳ್ಳಿರವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Government Tool Room & Training Centre ಮಾಚೇನಹಳ್ಳಿ ಸರ್ಕಾರಿ ಉಪಕರಣಾಗಾರ ‌& ತರಬೇತಿ ಕೇಂದ್ರದಲ್ಲಿ ಉಳಿದಿರುವ ಸೀಟಿಗೆ ಪ್ರವೇಶಾತಿ

0

Government Tool Room & Training Centre ಮಾಚೇನಹಳ್ಳಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನ 4 ವರ್ಷಗಳ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ , ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್, ಡಿಪ್ಲೊಮಾ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸುಗಳ ಬಾಕಿ ಉಳಿದಿರುವ ಸೀಟುಗಳನ್ನು ಭರ್ತಿ ಮಾಡಲು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Government Tool Room & Training Centre ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. ಸಿಎ38, ನಿಧಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 31 ರೊಳಗಾಗಿ ಸಲ್ಲಿಸುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ತರಬೇತಿ ಕೇಂದ್ರವನ್ನು ಖುದ್ದಾಗಿ ಅಥವಾ ದೂ.ಸಂ.: 08182-246051/ 9902232839/ 9448307027/ 9880141054/ 9449286543 ಗಳನ್ನು ಸಂಪರ್ಕಿಸುವುದು.

MESCOM ಜುಲೈ 16 ರಂದು ಹಳೆ ಬೊಮ್ಮನಕಟ್ಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ

0

MESCOM ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ಪ್ರಿಯಾಂಕ ಬಡಾವಣೆ ಮುಖ್ಯರಸ್ತೆಯಲ್ಲಿರುವ ಹಳೆಯ ಕಂಬ ಬದಲಿಸುವ ಕಾಮಗಾರಿ ಇರುವುದರಿಂದ ಪ್ರಿಯಾಂಕ ಬಡಾವಣೆ ಮತ್ತು ಪಂಡಿತ್ ಬಡಾವಣೆಯಲ್ಲಿ ಹಾಗೂ ಘಟಕ-3ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವುದರಿಂದ ಹಳೆ ಬೊಮ್ಮನಕಟ್ಟೆ, ಮಮತಾನಗರ, ದೇವಂಗಿ 2ನೇ MESCOM ಹಂತದ ಬಡಾವಣೆ, ಪಾರ್ವತಮ್ಮ ಬಡಾವಣೆ ಹಾಗೂ ಮಹಾರಾಣಿ ಶಾಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜು.16 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Department of Education ಎಲ್ ಕೆಜಿ , ಯುಕೆಜಿ ಮತ್ತು ಒಂದನೇ ತರಗತಿಗೆ ಮಕ್ಕಳ ಪ್ರವೇಶಾತಿಗೆ ಸರ್ಕಾರದಿಂದ ವಯೋಮಿತಿ ಫಿಕ್ಸ್

0

Department of Education ಎಲ್ ಕೆಜಿ, ಯುಕೆಜಿ ಮತ್ತು 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ಅಧಿಕೃತ ತೆರೆ ಎಳೆದಿದೆ.
ಎಲ್ ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಮಕ್ಕಳ ಪ್ರವೇಶಕ್ಕೆ ವಯೋಮಿತಿ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಎಲ್ ಕೆಜಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 4-6 ವರ್ಷ, ಯುಕೆಜಿ ಪ್ರವೇಶಕ್ಕೆ 5 ರಿಂದ 7 ವರ್ಷ ನಿಗದಿ ಮಾಡಲಾಗಿದೆ.
ಸರ್ಕಾರದ ಆದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ-2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿದೆ.

Department of Education 26.07.2022ರ ಆದೇಶದಲ್ಲಿ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುವುದನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿ ಮಾಡಿ ಆದೇಶಿಸಲಾಗಿದೆ.

ಹಾಗೆಯೇ 1ನೇ ತರಗತಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 6-8 ವರ್ಷ ನಿಗದಿ ಪಡಿಸಲಾಗಿದೆ. ಹೀಗಾಗಿ ಇನ್ಮುಂದೆ 8 ವರ್ಷ ಮೀರಿದ್ರೆ 1ನೇ ತರಗತಿ ಪ್ರವೇಶವಿರುವುದಿಲ್ಲ . 8 ವರ್ಷ ಮೀರಿದರೂ ಶಾಲೆಗೆ ಸೇರದ ಮಕ್ಕಳನ್ನು ಶಾಲೆ ಬಿಟ್ಟ ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಅಲ್ಲದೇ ಅಂತಹ ಮಕ್ಕಳನ್ನು ಅವರ ವಯಸ್ಸಿಗೆ ತಕ್ಕಂತೆ ತರಗತಿಗಳ ಪ್ರವೇಶ ನೀಡಲಾಗುತ್ತದೆ. ಈ ಮೂಲಕ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಇದ್ದ ವಯೋಮಿತಿ ಗೊಂದಲ ನಿವಾರಣೆಯದಂತಾಗಿದೆ.

Donald Trump ಕೂದಲೆಳೆಯಲ್ಲಿ ಮೃತ್ಯುವಿನಿಂದ ಪಾರಾದ ಟ್ರಂಪ್ ಅಮೆರಿಕಾ ಸೀಕ್ರೆಟ್ ಸರ್ವೀಸ್ ಗೆ ಧನ್ಯತೆ ತಿಳಿಸಿದ್ದಾರೆ

0

Donald Trump ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿರುವುದನ್ನು ನಂಬಲಾಗುತ್ತಿಲ್ಲ. ಘಟನೆ ಬಳಿಕ ಅಮೆರಿಕಾ ಸೀಕ್ರೆಟ್ ಸರ್ವಿಸ್ ಹಾಗೂ ಕಾನೂನು ವ್ಯವಸ್ಥೆ ಕೈಗೊಂಡ ತ್ವರಿತ ಕ್ರಮಕ್ಕೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆಂದು ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ಘಟನೆ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್ ಅವರು, ಗುಂಡಿನ ದಾಳಿಯಿಂದ ನನ್ನ ಮೇಲ್ಬಾಗದ ಕಿವಿ ಗಾಯಗೊಂಡಿದೆ.

Donald Trump ಘಟನೆ ವೇಳೆ ಕೇಳಿ ಬಂದ ಗುಂಡಿನ ಸದ್ದು ಏನೇ ನಡೆಯುತ್ತಿದೆ ಎಂಬ ಸಂದೇಶವನ್ನ ನೀಡಿತ್ತು. ಕೂಡಲೇ ಕಿವಿಯಿಂದ ರಕ್ತಸ್ರಾವವಾಗುತ್ತಿರುವುದು ತಿಳಿಯಿತು. ಘಟನೆಯಲ್ಲಿ ಗಾಯಗೊಂಡವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ. ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಶೂಟರ್ ಹತ್ಯೆಯಾಗಿರುವ ಬಗ್ಗೆ ಏನೂ ತಿಳಿದಿಲ್ಲ. ಘಟನೆ ವೇಳೆ ಯುನೈಟೆಡ್ ಸ್ಟೇಟ್ಸ್ ಸೀಕ್ರೆಟ್ ಸರ್ವೀಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಕೈಗೊಂಡ ತ್ವರಿತ ಕ್ರಮಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆಂದು ತಿಳಿಸಿದ್ದಾರೆ.

Bharath Scouts and Guides ಸ್ಕೌಟ್ & ಗೈಡ್ಸ್ ನಲ್ಲಿ ಬದುಕುವ ಕಲೆ ಜೊತೆ ಆತ್ಮಸ್ಥೈರ್ಯ ಹೆಚ್ಚಿಸುವ ಶಕ್ತಿಯಿದೆ – ಶಕುಂತಲಾ ಚಂದ್ರಶೇಖರ್

0

Bharath Scouts and Guides ಆಡುತ್ತಾ ನಲಿಯುತ್ತಾ ಕಲಿಯುವುದು ಜೀವನ ಶಿಕ್ಷಣ. ಅದನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಅಳವಡಿಸಿಕೊಂಡು, ವಿದ್ಯಾಭ್ಯಾಸದ ಜೊತೆಗೆ ಇಂತಹ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಗೈಡ್ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಕಿವಿ ಮಾತು ಹೇಳಿದರು.

ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಜಿಲ್ಲಾ ಮಟ್ಟದ ನಿಪುಣ್ ಪರೀಕ್ಷಾ ಶಿಬಿರದ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಬದುಕುವ ಕಲೆಯ ಜೊತೆಗೆ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಶಕ್ತಿ ಇರುವುದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಇಂತಹ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮುಖ್ಯ ಆಯುಕ್ತೆ ಕೆ.ಪಿ.ಬಿಂದುಕುಮಾರ್, ಸ್ಕೌಟ್ ಮತ್ತು ಗೈಡ್ಸ್ ಎಂದರೆ ಶಿಸ್ತಿನ ಸಿಪಾಯಿಗಳ ತಂಡ ಕೊವಿಡ್ ನಂತಹ ವಿಷಮಕಾಲದಲ್ಲಿ ಜಿಲ್ಲಾಸಂಸ್ಥೆಯ ರೋವರ್ ತಂಡಗಳು ಆಹಾರ, ಔಷಧಿಯಂತಹ ಅಗತ್ಯ ವಸ್ತುಗಳನ್ನು ಶಿವಮೊಗ್ಗ ಭದ್ರಾವತಿ ವ್ಯಾಪ್ತಿಯಲ್ಲಿ ತಲುಪಿಸಿದನ್ನು ನಾವು ಇಂದು ಸ್ಮರಿಸಿಸಬೇಕು ಎಂದರು.

ಸ್ಥಾನಿಕಾ ಆಯುಕ್ತ ಕೆ.ರವಿ ಮಾತನಾಡಿ, ರೋವರ್ ರೇಂಜರ್ ಗಳು ತಮ್ಮ ಶಾಲೆಯಲ್ಲಿ ಹಾಗೂ ಗ್ರಾಮದಲ್ಲಿ ಮೊದಲು ಗಿಡ ನೆಡುವಂತ ಚಟುವಟಿಕೆಗಳಿಂದ ಪ್ರಾರಂಭಿಸಲು ತಿಳಿಸಿದರು. ಹಾಗೂ ಯುವಕರು ನಾಯಕತ್ವಗುಣ ಬೆಳೆಸಿಕೊಳ್ಳಬೇಕೆಂದು ಕರೆ ಕೊಟ್ಟರು.

Bharath Scouts and Guides ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಹೆಚ್.ಪರಮೇಶ್ವರ್, ಖಜಾಂಚಿ ಚೂಡಾಮಣಿ ಪವಾರ್, ಜಂಟಿಕಾರ್ಯದರ್ಶಿ ಲಕ್ಷ್ಮಿ ಕೆ ರವಿ, ಕೇಂದ್ರ ಸ್ತಾನಿಕಾಯುಕ್ತ ಜಿ ವಿಜಯ ಕುಮಾರ್, ಕೆ.ರವಿ. ತರಬೇತಿ ತಂಡದ ನಾಯಕ ರಾಜೇಶ್ ವಿ ಅವಲಕ್ಕಿ, ಸಹನಾಯಕ ಎಂ.ಗಣಪತಿ, ಸಿ.ಎಂ.ಪರಮೇಶ್ವರಯ್ಯ, ಚಂದ್ರಶೇಖರ್, ಮಲ್ಲಿಕಾರ್ಜುನಕಾನೂರ್, ತರಬೇತಿ ತಂಡದ ನಾಯಕಿ ಕಾತ್ಯಾಯಿನಿ, ಭಾರತಿ ಸಿಂಗಾಡೆ, ಶಾಂತಮ್ಮ.ಎಂ.ಎಲ್, ವಿವಿಧ ಕಾಲೇಜುಗಳ ಉಪನ್ಯಸಕರು ಹಾಗೂ 300 ಕ್ಕೂ ಅಧಿಕ ವಿದ್ಯಾರ್ಥಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಕಾತ್ಯಾಯಿನಿ ಶಿಬಿರದ ಮಾಹಿತಿಯನ್ನು ತಿಳಿಸಿದರು. ರಾಜೇಶ್ ಅವಲಕ್ಕಿ ನಿರೂಪಿಸಿ, ಹೆಚ್.ಶಿವಶಂಕರ್ ಸ್ವಾಗತಿಸಿ, ಲಕ್ಷ್ಮಿ ಕೆ ರವಿ ವಂದಿಸಿದರು.