Wednesday, August 5, 2026
Wednesday, August 5, 2026
Home Blog Page 65

ಸಕ್ರೆಬೈಲು ಆನೆ ಬಿಡಾರದ ಆನೆ “ಭೀಷ್ಮ”ನ ಮಾವುತ ಸಿದ್ದಿಕ್ ಪಾಷಾ ನಿಧನ

0

ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ ಭೀಷ್ಮ ಆನೆಯ ಮಾವುತನಾಗಿ ಸೇವೆ ಸಲ್ಲಿಸುತ್ತಿದ್ದ ಸಿದ್ದಿಕ್ ಪಾಶ ಹೆಚ್ (39) ಅವರು ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಿಕ್ ಪಾಶ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.

ಆದರೆ ಮಾರ್ಗ ಮಧ್ಯೆ ಅವರ ರಕ್ತದೊತ್ತಡ (ಬಿಪಿ) ತೀವ್ರವಾಗಿ ಕುಸಿದಿದ್ದು, ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಸಿದ್ದಿಕ್ ಪಾಶ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಆಸ್ಪತ್ರೆಯಲ್ಲಿ ಮುಗಿಲು ಮುಟ್ಟಿದ್ದು, ದುಃಖದ ವಾತಾವರಣ ನಿರ್ಮಾಣವಾಗಿದೆ.

ಸಕ್ರೆಬೈಲು ಆನೆ ಬಿಡಾರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಸಿದ್ದಿಕ್ ಪಾಶ ಅವರು ಭೀಷ್ಮ ಆನೆಯೊಂದಿಗೆ ವಿಶೇಷ ಬಾಂಧವ್ಯ ಹೊಂದಿದ್ದರು. ಅವರ ಅಗಲಿಕೆ ಆನೆ ಬಿಡಾರದ ಸಿಬ್ಬಂದಿ, ಸ್ನೇಹಿತರು ಹಾಗೂ ಆನೆ ಪ್ರಿಯರಿಗೆ ತೀವ್ರ ಆಘಾತ ಉಂಟುಮಾಡಿದೆ.

Department of School Education ಹೆಚ್ಚಿನ ಶುಲ್ಕ ವಸೂಲಿಮಾಡುವ ಖಾಸಗಿ ಶಾಲೆ-ಸಂಸ್ಥೆಗಳ ವಿರುದ್ಧ ಕ್ರಮ : ಮಂಜುನಾಥ ಸ್ವಾಮಿ

0

Department of School Education ಸರ್ಕಾರ ನಿಗಧಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥಸ್ವಾಮಿ ಅವರು ಹೇಳಿದರು. ಅವರು ಶಿವಮೊಗ್ಗ ನಗರದ ಡಾ. ಬಿ.ಆರ್.ಅಂಬೇಡ್ಕರ್‌ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ ಮತ್ತು ಸಂಚಾರ ಪೊಲೀಸ್‌ ಇವರುಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ತಾಲೂಕಿನ ಎಲ್ಲಾ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ಮತ್ತು ಪ್ರಾಂಶುಪಾಲರಿಗಾಗಿ ಏರ್ಪಡಿಸಲಾಗಿದ್ದ ಶಾಲಾ ಶುಲ್ಕ ಪಾರದರ್ಶಕತೆ ಮತ್ತು ನಿಯಮ ಪಾಲನೆ, ರಸ್ತೆ ಸುರಕ್ಷತೆ, ಸಂಚಾರ ನಿಯಮಗಳ ಕುರಿತ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಾಲೆಗಳಲ್ಲಿ ಮಕ್ಕಳ ದಾಖಲಾತಿಗಾಗಿ ವಿಧಿಸಲಾಗುತ್ತಿರುವ ಶುಲ್ಕ ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಅತೀ ಹೆಚ್ಚಾಗಿದ್ದು, ಜನಸಾಮಾನ್ಯರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲಿಸುವುದು ಕಷ್ಟಸಾಧ್ಯವಾಗುತ್ತಿದೆ. ಇಂತಹ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಿಂದ, ಸಂಘ-ಸಂಸ್ಥೆಗಳಿಂದ ದೂರುಗಳು ಬರುತ್ತಿರುವುದನ್ನು ಶಿಕ್ಷಣ ಇಲಾಖೆಯು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೇ ಸಮವಸ್ತ್ರ, ವಾಹನ ಶುಲ್ಕಗಳೂ ಸಹ ಅತೀವವಾಗಿರುವ ಬಗ್ಗೆ ದೂರುಗಳು ಬಂದಿವೆ. ಆಡಳಿತ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಆಯಾ ಶಾಲೆಗಳ ಮುಖ್ಯೋಪಾಧ್ಯಾಯರು ಈ ಎಲ್ಲಾ ನ್ಯೂನತೆಗಳನ್ನು ಸರಿಪಡಿಸಿಕೊಂಡು ಸರ್ಕಾರ ನಿಗಧಿಪಡಿಸಿದ ಶುಲ್ಕ ಹಾಗೂ ತಮ್ಮ ಶಾಲೆಯ ಪ್ರವೇಶ ಶುಲ್ಕದ ವಿವರಗಳನ್ನು ತಮ್ಮ ಶಾಲೆಯ ಸೂಚನಾಫಲಕದಲ್ಲಿ ಕಡ್ಡಾಯವಾಗಿ ಪ್ರದರ್ಶಿಸುವಂತೆ ಅವರು ಸೂಚಿಸಿದರು.

ಸರ್ಕಾರದ ಮಾರ್ಗಸೂಚಿ ಹಾಗೂ ಇಲಾಖೆಯ ನಿಯಮಗಳನ್ನು ಅನುಸರಿಸದ ಶಾಲೆಗಳಿಗೆ ನೀಡಲಾಗಿದ್ದ ಮಾನ್ಯತೆಯನ್ನು ಹಿಂಪಡೆದುಕೊಳ್ಳಲಾಗುವುದು ಎಂದ ಅವರು, ತಮ್ಮ ಶಾಲಾ ಶುಲ್ಕ ಪಾವತಿಸಲಾಗದ ಮಕ್ಕಳ ವರ್ಗಾವಣೆ ಪತ್ರ ನೀಡದಿರುವುದು, ಮಕ್ಕಳನ್ನು ಶಾಲೆಯಿಂದ ಹೊರಗೆ ನಿಲ್ಲಿಸುವುದು, ಅಂಕಪಟ್ಟಿ ನೀಡದಿರುವುದು ಸರಿಯಲ್ಲ. ಅಂತಹ ವಿಷಯಗಳ ಕುರಿತು ದೂರು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ರಾಜ್ಯ ಮಕ್ಕಳ ರಕ್ಷಣಾ ಆಯೋಗದಲ್ಲಿ ದೂರು ದಾಖಲಿಸಲಾಗುವುದಲ್ಲದೇ ಕಾನೂನು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದವರು ನುಡಿದರು.

ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಬಡಮಕ್ಕಳ ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸಲು ಅವರ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ಅವರ ದಾಖಲಾತಿಯಲ್ಲಿ ಮಾನವೀಯತೆ ಮೆರೆಯಬೇಕು ಎಂದ ಅವರು ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳಲು ಅವರು ಸೂಚಿಸಿದರು.

Department of School Education ಜಿಲ್ಲೆಯ ಕೆಲವು ಆಯ್ದ ಖಾಸಗಿ ಶಾಲೆಗಳಲ್ಲಿ ಬಡಮಕ್ಕಳನ್ನು ಶುಲ್ಕವಿಲ್ಲದೆ ದಾಖಲಿಸಿಕೊಂಡು ಉದಾರವಾಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಆಡಳಿತ ಮಂಡಳಿಯವರು ಅಭಿನಂದನಾರ್ಹರು. -ರಮೇಶ್‌ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿವಮೊಗ್ಗ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪ್ರಾದೇಶಿಕ ಸಾರಿಗೆ ಅಧಿಕಾರಿ ಮರುಗೇಂದ್ರಯ್ಯ ಶಿರೋಳ್ಕರ್‌ಅವರು ಮಾತನಾಢಿ, ಜಿಲ್ಲೆಯಲ್ಲಿನ ಖಾಸಗಿ ಶಾಲೆಗಳಲ್ಲಿ 710ಕ್ಕೂ ಹೆಚ್ಚಿನ ಬಸ್ಸುಗಳಿದ್ದು, ಅವುಗಳಲ್ಲಿ ಸುಮಾರು 80ಕ್ಕೂ ಹೆಚ್ಚಿನ ಬಸ್ಸುಗಳ ಪರವಾನಿಗಿ ನವೀಕರಿಸಿಕೊಳ್ಳದಿರುವುದು, ಕ್ಷಮತಾ ಪ್ರಮಾಣಪತ್ರ ಪಡೆಯದಿರುವುದು ಕಂಡುಬಂದಿದೆ. ಅಂತಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಬಸ್ಸುಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದಲ್ಲದೇ ಮುಂದಿನ ದಿನಗಳಲ್ಲಿ ಆಕಸ್ಮಿಕ ಅಪಘಾತಗಳುಂಟಾಗಿ ಆಗಬಹುದಾದ ಅನಾಹುತಗಳಿಂದ ಮಕ್ಕಳ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದರು. ಶಾಲಾ ಬಸ್ಸುಗಳಿಗೆ ನುರಿತ ಮತ್ತು ಅನುಭವಿ ವಾಹನ ಚಾಲಕರನ್ನು ನೇಮಿಸಿಕೊಳ್ಳಬೇಕು. ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿದ್ದಲ್ಲಿ ಮಹಿಳಾ ನಿರ್ವಾಹಕರನ್ನು ನೇಮಿಸಿಕೊಳ್ಳಬೇಕು. ವಾಹನಕ್ಕೆ ಜಿ.ಪಿ.ಎಸ್.ಮತ್ತು ಸಿ.ಸಿ.ಟಿವಿ ಕಣ್ಗಾವಲು ಇರುವಂತೆ ನೋಡಿಕೊಳ್ಳಬೇಕು.ವಾಹನಗಳ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿಟ್ಟುಕೊಳ್ಳುವಲ್ಲಿ ಶಾಲಾ ಆಡಳಿತ ಮಂಡಳಿಯವರು ವಿಶೇಷ ಗಮನಹರಿಸುವಂತೆ ಅವರು ಸೂಚಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಟ್ರಾಫಿಕ್‌ಇನ್ಸ್‌ಫೆಕ್ಟರ್‌ಕೆ.ವಿ.ದೇವರಾಜ್‌ಅವರು ಮಾತನಾಡಿ, ಪ್ರತಿಯೊಂದು ಜೀವವೂ ಅಮೂಲ್ಯ. ವಿಶೇಷವಾಗಿ ಶಾಲಾ ಮಕ್ಕಳನ್ನು ಹೊತ್ತು ಸಾಗಿಸುವ ವಾಹನಗಳ ಚಾಲಕರು ತಮ್ಮ ಜವಾಬ್ದಾರಿಯರಿತು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ಆಡಳಿತ ಮಂಡಳಿಯವರು ಸಮರ್ಥ ವಾಹನ ಚಾಲಕರನ್ನು ಸೇವೆಗೆ ನೇಮಿಸಿಕೊಳ್ಳುವಂತೆ ಸೂಚಿಸಿದ ಅವರು, ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ 4ವಾಹನಗಳ ಚಾಲಕರನ್ನು ಗುರುತಿಸಿ, ಅವರ ಪರವಾನಿಗೆ ರದ್ದುಪಡಿಸಲು ಶಿಫಾರಸ್ಸು ಮಾಡಿರುವುದಲ್ಲದೇ ಕಾನೂನು ಕ್ರಮಕೈಗೊಳ್ಳಲಾಗುತ್ತಿದೆ ಎಂದರು. ಶಾಲಾ ವಾಹನಗಳಿಗೆ ಸರ್ಕಾರದ ಮಾರ್ಗಸೂಚಿಯಂತೆ ಹಳದಿ ಬಣ್ಣವನ್ನು ಲೇಪಿಸಿ. ವಾಹನಕ್ಕೆ ವೇಗಮಿತಿ ಅಳವಡಿಸಿ, ಶಾಲಾ ವಾಹನ ಎಂದು ಬರೆಯಿಸಿ, ವಾಹನದ ಬಾಗಿಲುಗಳು ಭದ್ರವಾಗಿರುವ ಬಗ್ಗೆ ಗಮನಹರಿಸಿ. ವಾಹನದ ಇನ್ಶೂರೆನ್ಸ್‌ಮಾಡಿಸಿ. ವಾಹನದಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರುವಂತೆ ನೋಡಿಕೊಳ್ಳಬೇಕು ಎಂದವರು ಸಲಹೆ ನೀಡಿದರು. ಸಭೆಯಲ್ಲಿ ಅನುದಾನಿತ ಶಾಲೆಗಳ ಒಕ್ಕೂಟದ ಅ‍ಧ್ಯಕ್ಷ ಗಿರೀಶ್‌, ಕ್ಷೇತ್ರ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣನವರ್‌ಸಂಚಾರಿ ನಿರೀಕ್ಷಕ ಮಲ್ಲೇಶಪ್ಪ, ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಮುಖ್ಯೋಪಾಧ್ಯಾಯರು, ಶಿಕ್ಷಣ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

Election Commission of India ಬೆಂಗಳೂರಿನಲ್ಲಿ “ತಂತ್ರಜ್ಞಾನ ಚಾಲಿತ ಮತದಾರರ ನೋಂದಣಿ ” ಒಂದು ದಿನದ ಕಾರ್ಯಾಗಾರ

0

Election Commission of India ಭಾರತದ ಚುನಾವಣಾ ಆಯೋಗವು, ಭಾರತೀಯ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ನಿರ್ವಹಣಾ ಸಂಸ್ಥೆ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ಸಹಾಯ ಸಂಸ್ಥೆ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ, ಬೆಂಗಳೂರಿನ ದಿ ಕ್ಯಾಪಿಟಲ್ ಹೋಟೆಲ್‌ನಲ್ಲಿ “ತಂತ್ರಜ್ಞಾನ ಚಾಲಿತ ಮತದಾರರ ನೋಂದಣಿ” ಕುರಿತ ಒಂದು ದಿನದ ಅಂತರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಿತ್ತು.
​ ಮುಖ್ಯ ಚುನಾವಣಾಧಿಕಾರಿ ವಿ. ಅನ್ಭು ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಾಗಾರವು, ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ತಂತ್ರಜ್ಞಾನದ ಅಳವಡಿಕೆ ಮತ್ತು ನಾವೀನ್ಯತೆಗಳ ಕುರಿತು ಜಾಗತಿಕ ಮಟ್ಟದ ಚರ್ಚೆಗೆ ವೇದಿಕೆಯಾಯಿತು.
ಕಾರ್ಯಾಗಾರದ ಅಂಗವಾಗಿ, “ತಂತ್ರಜ್ಞಾನ-ಚಾಲಿತ ಮತದಾರರ ನೋಂದಣಿಯ ಅಂತರರಾಷ್ಟ್ರೀಯ ಕಾರ್ಯಾಗಾರ” ಕುರಿತು ವಿಶೇಷ ಸಭೆಯನ್ನು ನಡೆಸಲಾಯಿತು.ಇದರಲ್ಲಿ ಚುನಾವಣಾ ನಿರ್ವಹಣಾ ಅಧಿಕಾರಿಗಳು, ತಂತ್ರಜ್ಞಾನ ತಜ್ಞರು ಮತ್ತು ವಿವಿಧ ಅಂತರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಮತದಾರರ ನೋಂದಣಿ ವ್ಯವಸ್ಥೆಗಳಲ್ಲಿನ ಜಾಗತಿಕ ಅತ್ಯುತ್ತಮ ಅಭ್ಯಾಸಗಳು ಮತ್ತು ನವೀನ ವಿಧಾನಗಳ ಕುರಿತಾದ ಸಮಗ್ರ ವಿಷಯಾಧಾರಿತ ವರದಿಯನ್ನು ಈ ಸಭೆಯಲ್ಲಿ ಮೌಲ್ಯೀಕರಿಸಲಾಯಿತು.
ಈ ​ಕಾರ್ಯಾಗಾರದಲ್ಲಿ ತಜ್ಞರು ವಿವಿಧ ಮಾದರಿಗಳ ಕುರಿತು ಪ್ರಸ್ತುತಿ ನೀಡಿದರು.
​ಜನಸಂಖ್ಯಾ ನೋಂದಣಿ ಆಧಾರಿತ ಸ್ವಯಂಚಾಲಿತ ವ್ಯವಸ್ಥೆಗಳ ಮಾದರಿ ವಿಷಯದ ಕುರಿತು ಹಿರಿಯ ಐ.ಎ.ಎಸ್ ಅಧಿಕಾರಿಗಳಾದ ಪಿ.ಎಸ್. ವಸ್ತ್ರದ್, ಶುಭ ಕಲ್ಯಾಣ್, ಭೂಬಲನ್ ಟಿ. ಮತ್ತು ರಾಹುಲ್ ಶಿಂಧೆ ಅವರು ಮಾಹಿತಿ ನೀಡಿದರು.

​ಹೈಬ್ರಿಡ್ ಡಿಜಿಟಲ್ ಅಸಿಸ್ಟೆಡ್ ನೋಂದಣಿ ವ್ಯವಸ್ಥೆಗಳ ಮಾದರಿ ವಿಷಯದ ಕುರಿತು ಬಿ.ಎಸ್. ಹಿರೇಮಠ್, ಜುಬೀನ್ ಮೊಹಾಪಟ್ರ, ಡಾ. ಆರ್.ಎಚ್. ಗೌಡರ್ ಮತ್ತು ಡಾ. ಸ್ನೇಹ ಸಿ.ವಿ. ಅವರು ವಿಷಯ ಮಂಡಿಸಿದರು.

​ಬಯೋಮೆಟ್ರಿಕ್ ಮತದಾರರ ನೋಂದಣಿ ವ್ಯವಸ್ಥೆಗಳ ವಿಷಯದ ಕುರಿತು ಪಿ.ಎಸ್.ವಸ್ತ್ರದ್, ಶುಭ ಕಲ್ಯಾಣ್, ಕೀರ್ತನಾ ಎಚ್.ಎಸ್. ಮತ್ತು ಜಾಸ್ಮಿನ್ ಜೋಸೆಫ್ ಅವರು ಮಾಹಿತಿ ಹಂಚಿಕೊಂಡರು.

​Election Commission of India ಡಿಜಿಟಲ್ ಗುರುತು ಸಕ್ರಿಯಗೊಳಿಸುವ ನೋಂದಣಿ ವ್ಯವಸ್ಥೆಗಳ ಎಂಬ ವಿಷಯದ ಕುರಿತು ಬಿ.ಎಸ್. ಹಿರೇಮಠ್, ರಮೇಶ್ ಕೆ.ಎನ್., ಡಾ. ಜಿತಾಮಿತ್ರ, ಡಾ. ಎನ್. ಮಹಂತೇಶ್ ಎನ್. ಬಿರ್ಜೆ ಮತ್ತು ಶರತ್ ಚಂದ್ರ ದೊಡ್ವಾಡ್ ಅವರು ವಿವರಣೆ ನೀಡಿದರು.

​ಶಾಶ್ವತ ಗಣಕೀಕೃತ ಮತದಾರರ ನೋಂದಣಿ ವ್ಯವಸ್ಥೆಗಳ ಮಾದರಿಯ ವಿಷಯದ ಕುರಿತು ಪಿ.ಎಸ್. ವಸ್ತ್ರದ್, ಯಶವಂತ್ ವಿ. ಗುರುಕರ್, ಡಾ. ಮಹೇಶ್ ಬಾಬು ಎನ್. ಮತ್ತು ಮಹಮ್ಮದ್ ರೋಷನ್ ಅವರು ವಿಷಯ ಮಂಡಿಸಿದರು.

​ಈ ಕಾರ್ಯಾಗಾರವು ಭವಿಷ್ಯದ ಚುನಾವಣಾ ಪ್ರಕ್ರಿಯೆಗಳನ್ನು ಹೆಚ್ಚು ಪಾರದರ್ಶಕ, ಸುಲಭ ಮತ್ತು ತಂತ್ರಜ್ಞಾನ ಆಧಾರಿತವಾಗಿ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

National Vaccination Day ಜೂನ್ 28, ಭಾನುವಾರ “ರಾಷ್ಟ್ರೀಯ ಲಸಿಕಾ ದಿನ”-ರಿತ್ವಿಕ್ ಪಾಂಡೆ

0

National Vaccination Day ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಿತ್ವಿಕ್ ಪಾಂಡೆ ಅವರು ತಿಳಿಸಿದ್ದಾರೆ.

ಭಾರತವು ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ (Wild Polio Virus) ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞ ಸಲಹಾ ಗುಂಪಿನ ಶಿಫಾರಸ್ಸಿನ ಅನ್ವಯ ಈ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮೊದಲನೇ ದಿನ ಜೂನ್ 28 ರಂದು ಪೋಲಿಯೋ ಬೂತ್‍ಗಳಲ್ಲಿ ಲಸಿಕೆ ನೀಡಲಾಗುವುದು. ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.

National Vaccination Day ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿರುವ ಆರೋಗ್ಯ ಇಲಾಖೆಯು, ಹೆಚ್ಚಿನ ಪ್ರಚಾರ ನೀಡಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಎಲ್ಲಾ ಮಾಧ್ಯಮಗಳು, ಆಕಾಶವಾಣಿ ಹಾಗೂ ಎಫ್.ಎಮ್ ವಾಹಿನಿಗಳಲ್ಲಿ ಜಿಂಗಲ್ಸ್ ಮೂಲಕ ಈ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿಗಳನ್ನು ಹಾಕಿಸಿ ಸಹಕರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ.

ಜೂನ್ 12. ಶಿವಮೊಗ್ಗದ ಸಂತೇಕಡೂರು , ಶ್ರೀರಾಮನಗರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗದ ಸಂತೇಕಡೂರು ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜೂ. 12 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಸಿದ್ದಮಾಜಿ ಹೊಸೂರು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

B.Y. Raghavendra ಸಂಸದ ರಾಘವೇಂದ್ರರಿಂದ ಮಾಚೇನಹಳ್ಳಿ ಕೈಗಾರಿಕಾ ಘಟಕಗಳಿಗೆ ಭೇಟಿ

0

B.Y. Raghavendra ಶಿವಮೊಗ್ಗದ ಕೈಗಾರಿಕಾ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಮಚೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಂಸದ ಬಿ. ವೈ. ರಾಘವೇಂದ್ರ ಭೇಟಿ ನೀಡಿ ವಿವಿಧ ಕೈಗಾರಿಕಾ ಘಟಕಗಳ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ V-Tech Engineers, Malnad Alloy Castings Pvt. Ltd., Amisol Global Ecoware, Shanthala Automation Pvt. Ltd. ಹಾಗೂ Shanthala Spherocast Pvt. Ltd. ಸಂಸ್ಥೆಗಳಿಗೆ ಭೇಟಿ ನೀಡಿದ ಅವರು, ಉತ್ಪಾದನಾ ಚಟುವಟಿಕೆಗಳು, ಉದ್ಯೋಗ ಸೃಷ್ಟಿ, ತಾಂತ್ರಿಕ ನವೀಕರಣಗಳು ಹಾಗೂ ಕೈಗಾರಿಕೆಗಳು ಎದುರಿಸುತ್ತಿರುವ ಸವಾಲುಗಳ ಕುರಿತು ಮಾಹಿತಿ ಪಡೆದರು.

ಬಳಿಕ Shivamogga Bhadravathi Industries Association (SBIA) ವತಿಯಿಂದ ಆಯೋಜಿಸಲಾದ ಸಂವಾದದಲ್ಲಿ ಕೈಗಾರಿಕೋದ್ಯಮಿಗಳು, ಉದ್ಯಮಿಗಳು ಹಾಗೂ ಸಿಬ್ಬಂದಿಯವರೊಂದಿಗೆ ರಚನಾತ್ಮಕ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಕೈಗಾರಿಕಾ ಅಭಿವೃದ್ಧಿ, ಕೌಶಲ್ಯ ವಿಕಾಸ, ಮೂಲಸೌಕರ್ಯ ಸುಧಾರಣೆ ಹಾಗೂ ಉದ್ಯೋಗಾವಕಾಶಗಳ ವಿಸ್ತರಣೆಗೆ ಸಂಬಂಧಿಸಿದಂತೆ ಹಲವು ಮಹತ್ವದ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಆಲಿಸಲಾಯಿತು.

B.Y. Raghavendra ಶಿವಮೊಗ್ಗ ಮತ್ತು ಮಲೆನಾಡು ಭಾಗದ ಕೈಗಾರಿಕಾ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸಲು ಅಗತ್ಯವಿರುವ ಎಲ್ಲ ರೀತಿಯ ಸಹಕಾರ ಮತ್ತು ಬೆಂಬಲವನ್ನು ನೀಡಲು ಬದ್ಧನಾಗಿದ್ದೇನೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.

S.N. Channabasappa ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ, ಸಂಚಾರ ಸುಗಮ ಅವಕಾಶಕ್ಕೆ ಆದ್ಯತೆ- ಶಾಸಕ ಚೆನ್ನಿ

0

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ ಕಲ್ಪಿಸುವ ಮೂಲಕ ಜನರ ದೈನಂದಿನ ಸಂಚಾರಕ್ಕೆ ಎದುರಾಗಿರುವ ತೊಂದರೆಗಳನ್ನು ನಿವಾರಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ಕ್ಷೇತ್ರ ವ್ಯಾಪ್ತಿಯ ಭಾಗಗಳ ಮೂಲಸೌಕರ್ಯ ಸುಧಾರಣೆಯ ಅಂಗವಾಗಿ ಇಂದು ಬೆಳಿಗ್ಗೆ ಶಾಸಕರು ಕ್ಷೇತ್ರ ವ್ಯಾಪ್ತಿಯ ಊರಗಡೂರು ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿನ ನೂತನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅಧಿಕೃತವಾಗಿ ಚಾಲನೆ ನೀಡಿದರು.

S.N. Channabasappa ಬಳಿಕ ಮಾಹಿತಿ ಹಂಚಿಕೊಂಡ ಶಾಸಕರು, “ಊರಗಡೂರು ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಈ ರಸ್ತೆ ಅಭಿವೃದ್ಧಿ ಅತ್ಯಂತ ಅಗತ್ಯವಾಗಿತ್ತು. ಕಾಮಗಾರಿಯನ್ನು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಗುಣಮಟ್ಟದಿಂದ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Karnataka State Legal Services Authority ಸರ್ವೋಚ್ಚ ನ್ಯಾಯಾಲಯದ “ಸಮಾಧಾನ್ ಸಮಾರೋಹ್” ಬೃಹತ್ ಕಾರ್ಯಕ್ರಮವನ್ನ ಯಶಸ್ವಿಗೊಳಿಸಿ- ಶಾಲಿನಿ ರಜನೀಶ್

0

Karnataka State Legal Services Authority ಮಾನ್ಯ ಸರ್ವೋಚ್ಛ ನ್ಯಾಯಾಲಯವು ಮುಂಬರುವ 2026ರ ಆಗಸ್ಟ್ 21 ರಿಂದ ಆಗಸ್ಟ್ 23 ರವರೆಗೆ ಹಮ್ಮಿಕೊಂಡಿರುವ ‘ಸಮಾಧಾನ್ ಸಮಾರೋಹ್’ (ಲೋಕ್ ಅದಾಲತ್) ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ರಾಜ್ಯದ ಎಲ್ಲಾ ಇಲಾಖೆಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‍ಎಲ್‍ಎಸ್‍ಎ) ಸದಸ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ, ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಇಲಾಖೆಗಳಿಗೆ ಸೂಚಿಸಿರುತ್ತಾರೆ.

ಎಲ್ಲಾ ಇಲಾಖೆಯ ಮುಖ್ಯಸ್ಥರು, ತಮ್ಮ ಇಲಾಖೆಗಳಲ್ಲಿ ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಇರುವ ಸರ್ಕಾರಿ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ವಿವಾದಗಳನ್ನು ಉಚಿತ ಲೋಕ್ ಅದಾಲತ್ ಮೂಲಕ ಸೌಹಾಧರ್Àಯುತವಾಗಿ ಬಗೆಹರಿಸಿಕೊಳ್ಳುವಂತೆ ತಿಳಿಸಿದ್ದಾರೆ. ಅಲ್ಲದೇ, ಈ ಕುರಿತು ಕೈಗೊಂಡ ಕ್ರಮಗಳ ವರದಿಯನ್ನು 3 ದಿನಗಳ ಒಳಗಾಗಿ ನೇರವಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಲ್ಲಿಸಿ, ಅದರ ಪ್ರತಿಯನ್ನು ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಕಳುಹಿಸಿಕೊಡಬೇಕೆಂದು ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.

ಕಂದಾಯ ಇಲಾಖೆ, ಕೆ.ಜಿ.ಐ.ಡಿ, ವಿಮಾ ಕಂಪನಿಗಳು, ಪೊಲೀಸ್ ಇಲಾಖೆ, ಖಾಸಗಿ ಕಾರ್ಪೊರೇಷನ್‍ಗಳು ಹಾಗೂ ವಿವಿಧ ಸರ್ಕಾರಿ ಕಚೇರಿಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

Karnataka State Legal Services Authority ಈ ಎಲ್ಲಾ ಇಲಾಖೆಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಗಳೊಂದಿಗೆ ಸಮನ್ವಯ ಸಾಧಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು.

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಇಲಾಖಾ ಮುಖ್ಯಸ್ಥರು ಈ ವಿಷಯದಲ್ಲಿ ವೈಯಕ್ತಿಕ ಗಮನ ಹರಿಸಬೇಕೆಂದು ಮುಖ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 12. “ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ” ದಿನಾಚರಣೆಗೆ ಸಕಲ ಸಿದ್ಧತೆ

0

ಶಿವಮೊಗ್ಗ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ವಕೀಲರ ಸಂಘ, ಹಾಲು ಒಕ್ಕೂಟ ಹಾಗೂ ದೇಶೀಯ ವಿದ್ಯಾಶಾಲಾ ಸಮಿತಿ ಶಿವಮೊಗ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜೂನ್ 12 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2026″ ಅನ್ನು ಹಮ್ಮಿಕೊಳ್ಳಲಾಗಿದೆ.
“ಬಾಲಕಾರ್ಮಿಕ ಪದ್ಧತಿಗೆ ರೆಡ್ ಕಾರ್ಡ್: ಮಕ್ಕಳಿಗೆ ನ್ಯಾಯಯುತ ಆಟದ ಅವಕಾಶ, ವಯಸ್ಕರಿಗೆ ಯೋಗ್ಯ ಕೆಲಸ” ಎಂಬ ಘೋಷಣೆಯೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ.
ಜೂನ್ 12 ರಂದು ಬೆಳಿಗ್ಗೆ 09.30 ಕ್ಕೆ ಶಿವಮೊಗ್ಗದ ಶಿವಪ್ಪ ನಾಯಕ ಸರ್ಕಲ್‌ನಲ್ಲಿ ಸ್ತಬ್ಧಚಿತ್ರ ವಾಹನ ಚಾಲನೆ ಹಾಗೂ ಕರಪತ್ರಗಳ ಮೂಲಕ ಬಾಲಕಾರ್ಮಿಕ ಪದ್ಧತಿ ವಿರೋಧಿ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
ಅದೇ ದಿನ ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಶಿವಮೊಗ್ಗದ ಮಹಾತ್ಮ ಗಾಂಧಿ ಪಾರ್ಕ್ ಎದುರಿಗಿರುವ ದೇಶೀಯ ವಿದ್ಯಾ ಸಂಸ್ಥೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ಬಿ.ಎಚ್. ನೆರವೇರಿಸುವರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರಾದ
ಪ್ರಭುಲಿಂಗ ಕವಳಿಕಟ್ಟಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ
ಹೇಮಂತ್ ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್ ಬಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ
ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್.,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ
ಮಂಜುನಾಥ್ ಎಸ್.ಆರ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಬಣಕಾರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ
ತಾಜುದ್ದೀನ್ ಖಾನ್,ದೇಶೀಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷರಾದ ಕೆ. ಬಸಪ್ಪಗೌಡ, ಕಾರ್ಯದರ್ಶಿಗಳಾದ ಎಸ್.ಪಿ. ದಿನೇಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜಿ.ಆರ್. ರಾಘವೇಂದ್ರ ಸ್ವಾಮಿ ಪಾಲ್ಗೊಳ್ಳುವರು.
ವಿರಾಜಪೇಟೆ ತಾಲ್ಲೂಕಿನ ಮಾಯಮುಡಿಯ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ದಿವಾಕರ್ ಆರ್. ಅವರು “ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016” ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಗಳಾಗಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಮಾಜಿ ಪ್ರಧಾನಿ ನೆಹರು ಆಡಳಿತ ಅವಧಿ ಮೀರಿ ಪ್ರಧಾನಿಯಾಗಿ ದಾಖಲೆ ಸೃಷ್ಟಿಸಿರುವ ಮೋದೀಜಿ‌ ಅವರಿಗೆ ಸಾಂಕೇತಿಕ ಅಭಿನಂದನೆ

0

ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ದಾಖಲೆಯನ್ನು ಮುರಿದು ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಒಂದು ಸಂದರ್ಭದಲ್ಲಿ ವಾರ್ಡಿನ ಪ್ರಮುಖರಾದ ಶಾಮಣ್ಣ. ಸತೀಶ್. ಗಣೇಶ್ ಅಣ್ಣ. ಪ್ರಫುಲಚಂದ್ರ. ವಿನು ಕುಮಾರ್ ಹಾಗೂ ಇನ್ನಿತರ ಪ್ರಮುಖರು ಅಶೋಕನಗರದ ಶ್ರೀ ಗಣಪತಿ ದೇವಸ್ಥಾನದ ಆವರಣದಲ್ಲಿ ಶ್ರೀಗಂಧದ ಗಿಡ ನೆಡುವ ಮೂಲಕ ಶ್ರೀ ನರೇಂದ್ರ ಮೋದಿಯವರ ಹೆಸರಿನಲ್ಲಿ ಪೂಜೆ ಸಲ್ಲಿಸಲಾಯಿತು.