Thursday, April 9, 2026
Thursday, April 9, 2026
Home Blog Page 654

Chamber Of Commerce Shivamogga ಅಡ್ವಾನ್ಸ್ ಸ್ಕಿಲ್ ಅಕಾಡೆಮಿ ಕೇಂದ್ರದ ಪ್ರಾರಂಭೋತ್ಸವ

0

Chamber Of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಸಂಘದ ವತಿಯಿಂದ ಬಹು ದಿನಗಳ ಕನಸು ಮತ್ತು ಸಂಘದ ಅಲ್ಲದೆ ವಿದ್ಯಾಭ್ಯಾಸವನ್ನು ಬಿಟ್ಟ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಿ ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡಲು ಸಾದ್ಯವಾಗುವುದಲ್ಲದೆ ಇದರಿಂದ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳು ಬರುವುದರೊಂದಿಗೆ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಈ ಅಕಾಡೆಮಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸುತ್ತಾ ಸಂಘದ ಸದಸ್ಯರುಗಳು, ನಗರದ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆಡಳಿತ ಮಂಡಳಿ ವತಿಯಿಂದ ಈ ಮೂಲಕ ಕೋರಲಾಗಿದೆ.

ಮಾಜಿ ಅಧ್ಯಕ್ಷರುಗಳ ಆಶಯದಂತೆ ವಜ್ರ ಮಹೋತ್ಸವ ಆಚರಿಸುತ್ತಿರುವ ಈ ವರ್ಷ ಉನ್ನತ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರವನ್ನು ಸಂಘದ ಕಟ್ಟಡದಲ್ಲಿ ಪ್ರಾರಂಭಿಸಲು ಒಂದು ವರ್ಷದ ಪ್ರಯತ್ನದ ಫಲವಾಗಿ ಶಿವಮೊಗ್ಗ ಜಿಲ್ಲೆಯ ವಿದ್ಯಾವಂತ ನಿದುದ್ಯೋಗಿಗಳಿಗೆ ಕೌಶಲ್ಯ ನೀಡುವ ಮತ್ತು ಶಿವಮೊಗ್ಗ ಜಿಲ್ಲೆಯ ಕೈಗಾರಿಕೋಧ್ಯಮಿಗಳಿಗೆ ಮತ್ತು ವಾಣಿಜ್ಯೋಧ್ಯಮಿಗಳಿಗೆ ಪೂರಕವಾದ ಕೌಶಲ್ಯಯುಕ್ತ ಉದ್ಯೋಗಿಗಳನ್ನು ಒದಗಿಸುವ ನೆಲೆಯಲ್ಲಿ ದಿನಾಂಕ: ೧೪.೦೭.೨೦೨೪ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಕೇಂದ್ರದ ಪ್ರಾರಂಭೋತ್ಸವವನ್ನು ನೆರವೇರಿಸಲಾಗುತ್ತಿದೆ.

ತರಬೇತಿ ಕೇಂದ್ರದ ಮುಖ್ಯ ಉದ್ದೇಶ ಪ್ರಚಲಿತ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯದ ಕೊರತೆ ಎದ್ದು ಕಾಣುತ್ತದೆ ಶಿವಮೊಗ್ಗ ನಗರದಲ್ಲಿ ಉನ್ನತ ಮಟ್ಟದ ಕೌಶಲ್ಯ ತರಬೇತಿ ಕೇಂದ್ರದ ಅವಶ್ಯಕತೆಯನ್ನು ಮನಗಂಡು, ಶಿವಮೊಗ್ಗ ಜಿಲ್ಲೆಯ ಯುವ ವಿದ್ಯಾವಂತ ವಿದ್ಯಾರ್ಥಿಗಳಿಗೆ ಕೌಶಲ್ಯಯುತ ತರಬೇತಿ ಕೊಟ್ಟು ೨-೩ ವರ್ಷಗಳಲ್ಲಿ ಉದ್ಯೋಗದ ಭರವಸೆ ನೀಡುವಂತದ್ದಾಗಿದೆ ಹಾಗೂ ಕೌಶಲ್ಯ ಯುಕ್ತ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ದೊರೆತಾಗ ಶಿವಮೊಗ್ಗ ನಗರಕ್ಕೆ ಹೊಸ ಹೊಸ ಸ್ಟಾರ್ಟ ಆಪ್ ಕಂಪೆನಿಗಳು ಬರಲು ಅವಕಾಶವಾಗುತ್ತದೆ. ಈ ಮೂಲಕ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರ ಬೆಳೆಯಲು ಸಾದ್ಯವಾಗುತ್ತದೆ ಹಾಗೂ ಬೇಕಾದ ಕೆಲಸಕ್ಕೆ ಬೇಕಾದಂತಹ ಕೆಲಸಗಾರರು ಸಿಗುವಂತಹ ಕೆಲಸಗಾರರ ಸಮೂಹವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಜೊತೆಗೆ ಜಿಲ್ಲೆಯಲ್ಲಿರುವ ಪ್ರತಿಭಾವಂತ ಕೆಲಸಗಾರರನ್ನು ಶಿವಮೊಗ್ಗದಲ್ಲಿ ಉಳಿಸಿಕೊಳ್ಳುವಂತಹ ಸನ್ನಿವೇಶ ಸೃಷ್ಟಿಯಾಗಬೇಕು ಕೌಶಲ್ಯ ತರಬೇತಿಗಾಗಿ ಹಲವು ಕಂಪೆನಿಗ ಮತ್ತು ನಗರದ ಅನೇಕ ವಿದ್ಯಾಸಂಸ್ಥೆಗಳೊAದಿಗೆ ಪರಸ್ಪರ ಒಪ್ಪಂದ ಮಾಡಿಕೊಳ್ಳಲಾಗಿದೆ.

Chamber Of Commerce Shivamogga ಅಲ್ಲದೆ ವಿದ್ಯಾಭ್ಯಾಸವನ್ನು ಬಿಟ್ಟ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಿ ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡಲು ಸಾದ್ಯವಾಗುವುದಲ್ಲದೆ ಇದರಿಂದ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳು ಬರುವುದರೊಂದಿಗೆ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಈ ಅಕಾಡೆಮಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸುತ್ತಾ ಸಂಘದ ಸದಸ್ಯರುಗಳು, ನಗರದ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆಡಳಿತ ಮಂಡಳಿ ವತಿಯಿಂದ ಈ ಮೂಲಕ ಕೋರಲಾಗಿದೆ.

ಕಾರ್ಯಕ್ರಮವನ್ನು ಸನ್ಮಾನ್ಯ ಶ್ರೀ ಮಧು ಬಂಗಾರಪ್ಪರವರು, ಮಾನ್ಯ ಶಾಲಾ ಶಿಕ್ಷಣ ಸಚಿವರು ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಲಿರುವರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಸನ್ಮಾನ್ಯ ಶ್ರೀ ಬಿ.ವೈ ರಾಘವೇಂದ್ರರವರು, ಮಾನ್ಯ ಸಂಸದರು, ಶಿವಮೊಗ್ಗ ಲೋಕಸಭಾಕ್ಷೇತ್ರ ಇವರು ಆಗಮಿಸಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಎಸ್. ರುದ್ರೇಗೌಡರು, ಸಂಘದ ಮಾಜಿ ಅಧ್ಯಕ್ಷರು ಹಾಗೂ ಮಾನ್ಯ ವಿಧಾನಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಖ್ಯಾತ ಮಕ್ಕಳ ವೈದ್ಯರು ಹಾಗೂ ವಿಧಾನಪರಿಷತ್ ಸದಸ್ಯರು ಆಗಮಿಸಲಿರುವರು ಹಾಗೂ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀಯುತ ಎನ್. ಗೋಪಿನಾಥ್‌ರವರು ವಹಿಸಲಿದ್ದಾರೆ.

Department of Energy ಮಳೆ, ಗಾಳಿಗೆ ವಿದ್ಯುತ್ ಲೈನ್ ಬಿದ್ದಲ್ಲಿ, ಲೈನ್ ನಿರ್ವಹಣೆ, ದುರಸ್ತಿ ಇತ್ಯಾದಿ ಸಮಸ್ಯೆಗಳ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು- ಸಚಿವ ಕೆ.ಜೆ.ಜಾರ್ಜ್

0

Department of Energy ಗ್ರಾಮ ಹಾಗೂ ಕೃಷಿ ಪ್ರದೇಶಗಳಲ್ಲಿ ವಿದ್ಯುತ್‍ಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ, ದೂರು ಬಂದಲ್ಲಿ ಕೂಡಲೇ ಸ್ಪಂದಿಸಿ, ಅದನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಜೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್‍ನ ನಜೀರ್ ಸಭಾಂಗಣದಲ್ಲಿ ಜಿಲ್ಲೆಯ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೊಂದಿಗೆ ಗುರುವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಗಾಲ, ಗಾಳಿ ಇತ್ಯಾದಿ ಸಂದರ್ಭಗಳಲ್ಲಿ ವಿದ್ಯುತ್ ಲೈನ್ ಹರಿದು ಬಿದ್ದಲ್ಲಿ, ಲೈನ್‍ಗಳ ನಿರ್ವಹಣೆ, ದುರಸ್ತಿ ಕಾರ್ಯ ಮತ್ತು ಇನ್ನಿತರೆ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಉದಾಸೀನತೆ ಹಾಗೂ ನಿರ್ಲಕ್ಷ್ಯ ತೋರದೇ, ಜೀವಹಾನಿ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಸಾಮಾನ್ಯವಾಗಿ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ಲೈನ್ ತುಂಡಾದಲ್ಲಿ ರೈತರು ಜೆಸ್ಕಾಂ ಅಧಿಕಾರಿಗಳಿಗೆ ಸಂಪರ್ಕಿಸುತ್ತಾರೆ. ಆಗ ಅಧಿಕಾರಿಗಳು ಸ್ಪಂದಿಸಬೇಕು. ಅವುಗಳನ್ನು ತ್ವರಿತವಾಗಿ ಸರಿಪಡಿಸುವ ಕಾರ್ಯ ಕೈಗೊಳ್ಳಬೇಕು ಎಂದರು.
ವಿದ್ಯುತ್ ಸಮಸ್ಯೆ ಕುರಿತಾಗಿ ರೈತರು ಜೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಕರೆ ಸ್ವೀಕರಿಸುವುದಿಲ್ಲ ಎಂಬುದಾಗಿ ಶಾಸಕರುಗಳು ಗಮನಕ್ಕೆ ತಂದಿದ್ದು, ಇಂತಹ ವರದಿಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಎಚ್ಚರಿಸಿದರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಮಾತನಾಡಿ, ಕಂಪ್ಲಿ ಮತ್ತು ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ ಹಳೆಯ ವಿದ್ಯುತ್ ಲೈನ್‍ಗಳು ಹಾದುಹೋಗಿವೆ. ಈ ಕುರಿತು ಜೆಸ್ಕಾಂ ಅಧಿಕಾರಿಗಳ ಗಮನಕ್ಕೂ ತಂದಿದ್ದೇನೆ. ಕುರುಗೋಡು ಭಾಗದ ಬಹುವರ್ಷದ ಕೋಳೂರು ಏತ ನೀರಾವರಿ ಯೋಜನೆಯು, 20 ಸಾವಿರ ಎಕರೆ ಕೃಷಿ ಭೂಮಿಗೆ ನೀರುಣಿಸುವ ಯೋಜನೆಯಾಗಿದ್ದು, ಕೇವಲ ವಿದ್ಯುತ್ ಸರಬರಾಜಿಲ್ಲದೇ ಸ್ಥಗಿತಗೊಂಡಿದೆ. ಇದಕ್ಕೆ ಯಾರು ಹೊಣೆ? ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಜೆಸ್ಕಾಂ ಇಲಾಖೆಯ ಮುಖ್ಯ ಅಭಿಯಂತರರಾದ ಲಕ್ಷ್ಮಣ್ ಚೌವ್ಹಾಣ್ ಅವರು, ಈ ಕೂಡಲೇ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುತ್ತೇನೆ ಎಂದು ಸಚಿವರ ಗಮನಕ್ಕೆ ತಂದರು.
ಬಳಿಕ ಮಧ್ಯಪ್ರವೇಶಿಸಿದ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಅವರು, ಜೆಸ್ಕಾಂ ಇಲಾಖೆ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದರೆ, ಆಯಾ ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು. ಈ ಕುರಿತಾಗಿ ಸಭೆ ನಡೆಸಬೇಕು. ಅಧಿಕಾರಿಗಳು, ಶಾಸಕರೊಂದಿಗೆ ಸಹ ಸಂಪರ್ಕ ಸಾಧಿಸಬೇಕು ಎಂದು ತಿಳಿಸಿದರು.
‘ಬುಕ್ಕ ಸಾಗರದ ಬಹು ಕುಡಿಯುವ ನೀರಿನ ಯೋಜನೆಯು ಆ ವ್ಯಾಪ್ತಿಯ 10 ಗ್ರಾಮ ಪಂಚಾಯತ್‍ಗಳ ಸಾರ್ವಜನಿಕರಿಗೆ ಕುಡಿಯುವ ನೀರಿನ ಯೋಜನೆಯಾಗಿದೆ. ಇದು ಕೂಡ ವಿದ್ಯುತ್ ಸಂಪರ್ಕದ ಕೊರತೆಯಿಂದಾಗಿಯೇ ಕಾಮಗಾರಿ ಸ್ಥಗಿತಗೊಂಡಿದೆ’ ಎಂದು ಶಾಸಕ ಜೆ.ಎನ್.ಗಣೇಶ್ ಅವರು ಸಭೆಗೆ ತಿಳಿಸಿದರು.
Department of Energy ಇದಕ್ಕೆ ಸಚಿವರು ಮಾತನಾಡಿ, ವಿದ್ಯುತ್ ಸರಬರಾಜು ಸಂಬಂಧಿಸಿದಂತೆ ಕಾಮಗಾರಿಗಳ ಡಿಪಿಆರ್ ಸಿದ್ದಪಡಿಸಿ, ಕೂಡಲೇ ಅನುಮೋದನೆ ಪಡೆಯಬೇಕು. ಮಳೆಗಾಲ ಆರಂಭ ಸಮಯದ ಹಿನ್ನಲೆಯಲ್ಲಿ ಬಾಕಿ ಉಳಿದ ಮತ್ತು ಹೊಸ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕೆಲಸವಾಗಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಳೆದ 6-7 ತಿಂಗಳಲ್ಲಿ ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಸಂಬಂಧಿಸಿದಂತೆ ಸಾವು ಪ್ರಕರಣಗಳು ವರದಿಯಾಗಿವೆ. ಕುಟುಂಬಗಳಿಗೆ ಪರಿಹಾರ ಹಣವು ತಲುಪಿಲ್ಲ ಎಂದು ಮೃತರ ಕುಟುಂಬದವರು ಗಮನಕ್ಕೆ ತಂದಿದ್ದಾರೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.
ಇದಕ್ಕೆ ಸಚಿವರು, ಜಿಲ್ಲೆಯಲ್ಲಿ ವಿದ್ಯುತ್‍ಗೆ ಸಂಬಂಧಿಸಿದಂತೆ ಸಾವು ಪ್ರಕರಣಗಳ ಮೃತರ ಕುಟುಂಬಕ್ಕೆ ಕಾನೂನಾತ್ಮಕವಾಗಿ ಪರಿಹಾರ ನೀಡಲು ಮುತುವರ್ಜಿ ವಹಿಸಬೇಕು. ಅನಧಿಕೃತವಾಗಿ ವಿದ್ಯುತ್ ಲೈನ್ ಸಂಪರ್ಕ ಪಡೆಯುವಂತಿಲ್ಲ, ಈ ಕಾರಣಗಳಿಗಾಗಿಯೇ ವಿದ್ಯುತ್ ಸಾವು ಪ್ರಕರಣಗಳು ಸಂಭವಿಸುತ್ತವೆ, ಇವುಗಳನ್ನು ತಪ್ಪಿಸಬೇಕು. ಐಪಿ ಲೈನ್ ಗ್ರಾಹಕರ ಆಧಾರ್ ಜೋಡಣೆಗೆ ಆದೇಶವಿದ್ದು, ಇದರ ಬಗ್ಗೆ ಪ್ರಚಾರ ನೀಡಬೇಕು ಎಂದರು.
ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ ಅವರು, ತಮ್ಮ ಕ್ಷೇತ್ರ ವ್ಯಾಪ್ತಿಯ ವಿದ್ಯುತ್ ಸಂಬಂಧಿಸಿದಂತೆ ಸಮಸ್ಯೆಗಳನ್ನು ಸಚಿವರ ಮತ್ತು ಸಭೆಗೆ ತಿಳಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ, ಡಾ.ಬಾಬು ಜಗನ್‍ಜೀವನ್‍ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಸೇರಿದಂತೆ ಜೆಸ್ಕಾಂ, ಬಿಟಿಪಿಎಸ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

National Fish Farmers Day ಶಿವಮೊಗ್ಗದಲ್ಲಿ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ

0

National Fish Farmers Day ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆಯನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನವಿಲೆಯಲ್ಲಿ ಬುಧವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಾಸಕ ಎಸ್‍.ಎನ್. ಚನ್ನಬಸಪ್ಪ ಅವರು ಭಾಗವಹಿಸಿ ಕಾರ್ಯಕ್ರಮದ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ 6 ವಿವಿಧ ಹಸ್ತ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಕೆರೆಗೆ ಮೀನು ಮರಿ ಬಿತ್ತನೆ ಮಾಡಿದರು ಹಾಗೂ ವಿಶ್ವವಿದ್ಯಾಲಯದ ಅಲಂಕಾರಿಕ ಮೀನು ಕೃಷಿ ಘಟಕವನ್ನು ವೀಕ್ಷಿಸಿ ಮಾಹಿತಿ ಪಡೆದರು. ಕಾರ್ಯಕ್ರಮದಲ್ಲಿ ಉಡುಪಿ ಕಿನಾರಾ ಮೀನು ಉತ್ಪಾದಕರ ಸಂಸ್ಥೆಯವರು ವಿವಿಧ ಮೀನು ಉತ್ಪನ್ನಗಳನ್ನು ಪ್ರದರ್ಶಿಸಿದರು. ಮೀನು ಆಹಾರ ಮಾರಾಟಗಾರರು ವಿವಿಧ National Fish Farmers Day ಮೀನು ಆಹಾರಗಳ ಮಾದರಿಯನ್ನು ಪ್ರದರ್ಶಿಸಿದರು. ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರಾದ ಡಾ. ಹೇಮ್ಲನಾಯಕ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ನಿರ್ದೇಶಕರು ಕರ್ನಾಟಕ ರಾಜ್ಯ ಮೀನುಗಾರಿಕೆ ಮಹಾಮಂಡಳಿ ಮೈಸೂರು ಪಿ. ರಾಮಯ್ಯ, ಶಿವಮೊಗ್ಗ ಜಿಲ್ಲೆಯ ಮೀನುಗಾರಿಕೆ ಉಪ ನಿರ್ದೇಶಕರಾದ ಜಿ.ಎಂ ಶಿವಕುಮಾರ್, ಸತೀಶ್ ಎಸ್.ಕೆ. ರಾಘವೇಂದ್ರ ಮೀನುಗಾರಿಕೆ ಉಪ ನಿರ್ದೇಶಕರು (ಕಿರಿಯ ವೇತನ ಶ್ರೇಣಿ) ತರಬೇತಿ ಕೇಂದ್ರ ಬಿಆರ್ ಪ್ರಾಜೆಕ್ಟ್, ಸಹಾಯಕ ಪ್ರಾಧ್ಯಾಪಕ ಡಾ. ಎ.ಹೆಚ್. ಶಾಂತನಗೌಡ ಹಾಗೂ ಜಿಲ್ಲಾದ್ಯಂತ ಎಲ್ಲಾ ಮೀನುಗಾರಿಕೆ ಸಹಕಾರ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸದಸ್ಯರು, ಮೀನುಗಾರರು ವಿಶ್ವವಿದ್ಯಾಲಯದ ವಿಜ್ಞಾನಿಗಳು ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

DVS College ಶ್ರೇಷ್ಠ ವ್ಯಕ್ತಿಗಳ ಜೀವನ ಚರಿತ್ರೆಯನ್ನ ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸ ಆಗಬೇಕು- ಬಿ.ಕೃಷ್ಣಪ್ಪ

0

DVS College ವಿದ್ಯಾರ್ಥಿಗಳು ಸನ್ಮಾರ್ಗದಲ್ಲಿ ಜೀವನ ಮುನ್ನಡೆಸಲು ಶಿಕ್ಷಕರು ಹಾಗೂ ಪೋಷಕರ ಪಾತ್ರ ಮುಖ್ಯ ಆಗಿರುತ್ತದೆ. ದೇಶದ ಇತಿಹಾಸದಲ್ಲಿನ ಶ್ರೇಷ್ಠ ವ್ಯಕ್ತಿಗಳ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸ ಆಗಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೃಷ್ಣಪ್ಪ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿಪೂರ್ವ ( ಸ್ವತಂತ್ರ ) ಕಾಲೇಜಿನ ವತಿಯಿಂದ ಆಯೋಜಿಸಿದ್ದ 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ, 2024-25ನೇ ಸಾಲಿನ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ, ಸಾಂಸ್ಕೃತಿಕ ವೇದಿಕೆ, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಪ್ರೋತ್ಸಾಹ ನೀಡುವುದು ಅತ್ಯಂತ ಅವಶ್ಯಕ. ಶ್ರೇಷ್ಠ ಸಾಧಕರ ಜೀವನ ಚರಿತ್ರೆಯು ಯುವ ಸಮೂಹಕ್ಕೆ ಪ್ರೇರಕಾ ಶಕ್ತಿಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಸಾಧಕರ ಜೀವನ ಚರಿತ್ರೆ ಅಧ್ಯಯನ ಮಾಡುವ ಸಂಕಲ್ಪ ಹೊಂದಬೇಕು ಎಂದು ತಿಳಿಸಿದರು.

ಡಿವಿಎಸ್ ಸಂಸ್ಥೆ ಉಪನ್ಯಾಸಕ ವರ್ಗ ಗುಣಮಟ್ಟದ ಶಿಕ್ಷಣ ನೀಡುವ ಜತೆಯಲ್ಲಿ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಇಂತಹ ಸಾರ್ಥಕ ಕಾರ್ಯ ನಿರಂತರವಾರಲಿ ಎಂದು ಶುಭಹಾರೈಸಿದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಕುಲಸಚಿವ ಡಾ. ಕೆ.ಸಿ.ಶಶಿಧರ್ ಮಾತನಾಡಿ, ಶಿಕ್ಷಣ ಜತೆಗೆ ಸದೃಢ ಭವಿಷ್ಯ ರೂಪಿಸಿಕೊಳ್ಳುವ ಕೌಶಲ್ಯ ಅಗತ್ಯ. ವಿದ್ಯಾರ್ಥಿಗಳು ಶಿಕ್ಷಣದ ನಂತರ ಆಯ್ಕೆ ಮಾಡುವ ವಿಷಯದಲ್ಲಿ ವಿಶೇಷ ಜಾಗೃತಿ ವಹಿಸಬೇಕು. ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಅಗತ್ಯ ಜೀವನಶೈಲಿ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

DVS College ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್. ರಾಜಶೇಖರ್, ಸ್ವತಂತ್ರ ಹೋರಾಟಗಾರರ ಆಶಯದಂತೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಡಿವಿಎಸ್ ಸಂಸ್ಥೆ ಶ್ರಮಿಸುತ್ತಿದೆ. ಈ ಬಾರಿ ಡಿವಿಎಸ್ ಸಂಸ್ಥೆಯ ಸ್ವತಂತ್ರ ಪಿಯು ಕಾಲೇಜು ಒಂಬತ್ತು ರ್ಯಾಂಕ್ ಗಳಿಸಿದೆ. ಶೈಕ್ಷಣಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಅಭಿನಂದಿಸುವ ಜತೆಯಲ್ಲಿ ಇತರರಿಗೂ ಪ್ರೇರಣೆ ನೀಡಲು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಡಿವಿಎಸ್ ಸಮಿತಿ ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿನ ಪ್ರಾಚಾರ್ಯ ಎ.ಇ.ರಾಜಶೇಖರ್, ಶಿಕ್ಷಕ ಪ್ರತಿನಿಧಿ ಎಚ್.ಸಿ.ಉಮೇಶ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

Non-resident Indian Committee ಅನಿವಾಸಿ ಕನ್ನಡಿಗರ ರಿಗೆ ಮೀಸಲಾಗಿ ಸಚಿವಾಲಯ ಪ್ರಾರಂಭಿಸಲು ಮನವಿ- ಡಾ.ಆರತಿ ಕೃಷ್ಣ

0

Non-resident Indian Committee ಅನಿವಾಸಿ ಕನ್ನಡಿಗರ ಅವಶ್ಯಕತೆಗಳು-ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕವಾದ ಒಂದು ಸಚಿವಾಲಯ ಪ್ರಾರಂಭಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಈ ಕುರಿತು ನೀತಿ-ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದರು.

ಜು.12ರಂದು ಜಿಲ್ಲೆಯ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರಿಂದ ಅಹವಾಲು, ದೂರುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ವದೆಲ್ಲೆಡೆ ನೆಲೆಸಿರುವ ಅನಿವಾಸಿ ಕನ್ನಡಿಗರ ಆಕಾಂಕ್ಷೆ, ಅವಶ್ಯಕತೆ ಮತ್ತು ನಿರೀಕ್ಷೆಗಳನ್ನು ಗಮನದಲ್ಲಿ ಇಟ್ಟುಕೊಂಡು 2016-17 ನೇ ಸಾಲಿನಲ್ಲಿ ಅನಿವಾಸಿ ಭಾರತೀಯ ನೀತಿಯನ್ನು ಹೊರತರಲಾಗಿದೆ. ಅನಿವಾಸಿ ಕನ್ನಡಿಗರು ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.

ವಿಶೇಷವಾಗಿ ದುಡಿಯುವ ವರ್ಗ ಹೆಚ್ಚಿನ ತೊಂದರೆ ಎದುರಿಸುತ್ತಾರೆ. ಗಲ್ಫ್ ದೇಶಗಳಿಗೆ ತೆರಳಿದ ಅನಿವಾಸಿ ಕನ್ನಡಿಗರಿಂದ ಪ್ರತಿನಿತ್ಯ ಒಂದಲ್ಲ ಒಂದು ಸಮಸ್ಯೆ ಹೊತ್ತ ಕರೆಗಳು ಬರುತ್ತಿರುತ್ತವೆ.

ನಕಲಿ ಏಜೆನ್ಸಿ ಮೂಲಕ ತೆರಳಿದ ದುಡಿಯುವ ವರ್ಗ ಅಲ್ಲಿ ತೊಂದರೆಗಳೊಳಗಾಗಿ, ಯಾವುದೋ ಕೆಲಸ ಮಾಡುವುದು ಅನಿವಾರ್ಯವಾಗಿ, ಅವರ ವೀಸಾ ಮತ್ತು ಪಾಸ್‌ಪೋರ್ಟಗಳನ್ನೂ ಉದ್ಯೋಗದಾತರು ಕಿತ್ತುಕೊಂಡು ಪರಿತಪಿಸುತ್ತಾರೆ.

ಹಾಗೂ ಶಿವಮೊಗ್ಗ, ಹೆಚ್‌ಡಿ ಕೋಟೆ ಮತ್ತು ಹುಣಸೂರಿನ ಹಕ್ಕಿಪಿಕ್ಕಿ ಜನಾಂಗದವರು ವಿಶ್ವದೆಲ್ಲೆಡೆ ಸಂಚರಿಸುತ್ತಾರೆ. ಅವರು ಕೆಲಸಕ್ಕೆ ತೆರಳಿದ ಬಗ್ಗೆ ದೇಶದಲ್ಲಿ ಹಲವು ಕಷ್ಟಗಳನ್ನು ಅನುಭವಿಸುತ್ತಾರೆ. ಇತ್ತೀಚೆಗೆ 40ಕ್ಕೂ ಹೆಚ್ಚು ಜನರು ಸೂಡಾನ್‌ನಲ್ಲಿ ಸಿಲುಕಿದ್ದರು.

Non-resident Indian Committee ಭದ್ರಾವತಿ, ತೀರ್ಥಹಳ್ಳಿಯಿಂದಲೂ ಹೆಚ್ಚಿನ ಜನರು ದುಡಿಯುವ ಉದ್ದೇಶಗಳಿಗೆ ಕಾಂಬೋಡಿಯಾ, ವಿಯೆಟ್ನಾಂ ಇತರೆ ಬೇರೆ ದೇಶಗಳಿಗೆ ತೆರಳಿ ಸವಾಲುಗಳನ್ನು ಎದುರಿಸುತ್ತಾರೆ. ವಿದೇಶದಲ್ಲಿ ಮರಣ ಹೊಂದಿದವರ ಶವವನ್ನು ಇಲ್ಲಿಗೆ ತರಲು ಕರೆ ಮಾಡುತ್ತಾರೆ. ಕೋವಿಡ್, ಇತರೆ ಸಂಕಷ್ಟದ ಸಮಯದಲ್ಲಿ ಅನಿವಾಸಿ ಕನ್ನಡಿಗರಿಗೆ ಸಹಾಯ ಮಾಡಲಾಗಿದೆ. ವಿದೇಶದಿಂದ ಹಿಂದುರಿಗದವರಿಗೆ ಇಲ್ಲಿ ಬಂದ ಮೇಲೆ ಅನೇಕ ರೀತಿಯ ಸಮಸ್ಯೆ ಕೂಡ ಎದುರಾಗಿದೆ ಎಂದರು.

Achiever Coaching Center Shivamogga ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಸಕ್ತರಿಗೆ ಅಚೀವರ್ಸ್ ಕೋಚಿಂಗ್ ಕೇಂದ್ರದಿಂದ ಉಚಿತ ಕಾರ್ಯಾಗಾರ

0

Achiever Coaching Center Shivamogga ಕೇಂದ್ರ ಸರ್ಕಾರಿ ಬ್ಯಾಂಕುಗಳಲ್ಲಿನ 2024ನೇ ಸಾಲಿನ 22,026ಹುದ್ದೆಗಳಿಗೆ ಹಾಗೂ ಸ್ಟಾಫ್ ಸೆಲೆಕ್ಷನ್ ಕಮಿಟಿ ಯ ಹುದ್ದೆಗಳಿಗೆ, ರೈಲ್ವೇಸ್ ಮತ್ತು ಇನ್ಸೂರೆನ್ಸ್ ಹಾಗೂ ಇನ್ನಿತರ ಕೇಂದ್ರ ಸಂಸ್ಥೆಗಳ ಸಾವಿರಾರು ಹುದ್ದೆಗಳಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ .

ಇದಕ್ಕೆ ಅಚೀವರ್ ಟ್ರಸ್ಟ್, ಅಚೀವರ್ ಕೋಚಿಂಗ್ ಸೆಂಟರ್ ಶಿವಮೊಗ್ಗ ಇವರ ಆಶ್ರಯದಲ್ಲಿ ಒಂದು ದಿನದ ಉಚಿತ ಕಾರ್ಯಾಗಾರವನ್ನು ಜುಲೈ 14ರಂದು ಹಮ್ಮಿಕೊಳ್ಳಲಾಗಿದೆ.

ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಂಸ್ಥೆಯ ಮುಖ್ಯಸ್ಥ ವರುಣ್ ಟಿ. ನಾಯ್ಕ್,
ಈ ಎಲ್ಲ ಪರೀಕ್ಷೆಗಳಿಗೆ ಆಫ್ ಲೈನ್ ಮತ್ತು ಆನ್ ಲೈನ್ ಕೋಚಿಂಗ್ ಕ್ಲಾಸ್ ಜುಲೈ 15 ರಿಂದ ಪ್ರಾರಂಭವಾಗುತ್ತದೆ. ತರಬೇತಿಯಲ್ಲಿ ವಿಷಯವಾರು ನುರಿತ ತಜ್ಞರಿಂದ ಬೋಧನೆ, ಸ್ಟಡಿ ಮಟೀರಿಯಲ್, ವಿಷಯವಾರು ಪ್ರಾಕ್ಟಿಸ್ ಬುಕ್, ನೀಡಲಾಗುತ್ತದೆ ಎಂದರು.
ವಿಷಯವಾರು ಟೆಸ್ಟಗಳು, ಪೂರ್ಣ ಪ್ರಮಾಣದ ಪರೀಕ್ಷೆ, ಮಾಕ್ ಟೆಸ್ಟ್, ಒಂದು ಲಕ್ಷಕ್ಕೂ ಹೆಚ್ಚು ಪ್ರಶ್ನೆಗಳಿರುವ ಆನ್ ಲೈನ್ ಐಡಿ ನೀಡಲಾಗುವುದು.

9 ವರ್ಗಗಳಿಂದ ಈ ರೀತಿ ಕೋಚಿಂಗ ನೀಡುತ್ತಿದ್ದು, ಅಪಾರ ವಿದ್ಯಾರ್ಥಿಗಳು ಕೆಲಸ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಜುಲೈ 14 ರಂದು ಬ್ಯಾಂಕಿಂಗ್ ಜಾಬ್‌ಗಳಿಗೆ ಉಚಿತ ತರಬೇತಿ ಕಾರ್ಯಾಗಾರವನ್ನು ಆಚಿವ ಕೋಚಿಂಗ್ ಸೆಂಟರ್ ತಿಲಕ್ ನಗರ 1ನೇ ಕ್ರಾಸ್, ವಿಜೇಶ್ವರ ಕಾಂಪ್ಲೆಕ್ಸ್ ಇಲ್ಲಿ ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.

Achiever Coaching Center Shivamogga ಈ ಕಾರ್ಯಕ್ರಮದಲ್ಲಿ ಬ್ಯಾಂಕಿಂಗ್ ತಜ್ಞರು ಮತ್ತು ವಿಷಯ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದು ಆಸಕ್ತ ಸ್ಪರ್ಧಾರ್ಥಿಗಳು ಭಾಗವಹಿಸಲು ಕೋರಿದರು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ರ್ಸಂಖಯೆ 7812926702 ಅಥವಾ7337683668 ಇಲ್ಲಿಗೆ ಸಂಪರ್ಕಿಸಬಹುದು. ಅಥವಾ ಕಚೇರಿಗೆ ಬಂದು ಮಾಹಿತಿ ಪಡೆಯಬಹುದು ಎಂದರು.

Senior Government Primary School ಹಿರಿಯ ವಿದ್ಯಾರ್ಥಿಗಳಿಂದ ತಾವೇ ಓದಿದ ಶಾಲೆಗೆ ಕಂಪ್ಯೂಟರ್ ಸಾಮಗ್ರಿಗಳ ಬಳುವಳಿ

0

Senior Government Primary School ತೀರ್ಥಹಳ್ಳಿ ತಾಲೂಕಿನ ಹೊದಲ ಅರಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊದಲ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಈ ಹಿಂದೆ ವಿದ್ಯಾಭ್ಯಾಸ ಮಾಡಿದ್ದ ಬಾಳಿಗೆಮನೆ ಬಿ. ಎಸ್. ಅನಂತಮೂರ್ತಿ ಮತ್ತು ವಿದ್ಯಾ ದಂಪತಿಗಳ ಪುತ್ರ ಸಾತ್ವಿಕ್ ಬಿ. ಎ ಮತ್ತು ಹೊದಲ ಶಾಲೆಯ ಹಿರಿಯ ವಿದ್ಯಾರ್ಥಿನಿ ಜಯಂತಿ ಮತ್ತು ಕೃಷ್ಣಯ್ಯ ದಂಪತಿಗಳ ಪುತ್ರ ರಾಕೇಶ್ ವಿ. ಕೆ. ಅವರು ಹೊದಲ ಸರ್ಕಾರಿ ಶಾಲೆಗೆ ಕಂಪ್ಯೂಟರ್, ಪ್ರಿಂಟರ್ ಹಾಗೂ ಯುಪಿಎಸ್ ಗಳನ್ನು ಕೊಡುಗೆಯಾಗಿ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ಬಹುತೇಕ ಬಡ ಹಾಗೂ ಮದ್ಯಮ ವರ್ಗದ ಕುಟುಂಬದ ಮಕ್ಕಳು ವ್ಯಾಸಾಂಗ ಮಾಡುತ್ತಿದ್ದು ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಿದ ಹಿರಿಯ ವಿದ್ಯಾರ್ಥಿಗಳಾದ ಸಾತ್ವಿಕ್ ಬಿ. ಎ. ಹಾಗೂ ರಾಕೇಶ್ ವಿ.ಕೆ. ಅವರುಗಳ ಪೋಷಕರಾದ ಬಾಳಿಗೆಮನೆ ಅನಂತಮೂರ್ತಿ ರವರನ್ನು ಶಾಲಾ ವತಿಯಿಂದ ಶಾಲು ಹೊದಿಸಿ ಗೌರವಿಸಿ ಅಭಿನಂದಿಸಿದರು.

Senior Government Primary School ಈ ಸಂದರ್ಭದಲ್ಲಿ ಶಾಲೆಗೆ ಕೊಡುಗೆ ನೀಡಿದ ಅವರನ್ನು ಹೊದಲ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಅದ್ಯಕ್ಷರು ಮತ್ತು ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಕೃತಜ್ಞತೆ ಸಲ್ಲಿಸಿದರು.

Ripponpet ವಿದ್ಯುತ್ ತಂತಿ ಅವಘಡ ಯುವಕನ ಸಾವು

0

ವಿದ್ಯುತ್ ತಗುಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಗವಟೂರಿನ ಹಳೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಕಾರ್ತಿಕ್ ಎಸ್ (19) ಮೃತಪಟವನು.

ಇಂದು ಬೆಳಗಿನಜಾವ ಮನೆ ಮುಂಭಾಗದಲ್ಲಿರುವ ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಘಟನೆ ಸಂಭವಿಸಿದೆ.

Ripponpet ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗದೆ ಯುವಕ ಪ್ರಾಣ ಬಿಟ್ಟಿದ್ದಾನೆ.
ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕಾರ್ತಿಕ್ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಂಗ ಮಾಡುತ್ತಿದ್ದನು.

ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ.

Aparna Vastarey ಕನ್ನಡ ನಿರೂಪಣೆಗೆ ಆಭರಣದ ಮೌಲ್ಯಸ್ಪರ್ಶ ನೀಡಿದ ಮುತ್ತಿನ ಮಾತಿನ “ಅರ್ಪಣಾ” ಇನ್ನಿಲ್ಲ.

0

Aparna Vastarey ಹಲವು ತಿಂಗಳುಗಳ ಕಾಲ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಚ್ಚ ಕನ್ನಡದ ನಿರೂಪಕಿ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದರು.

ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಕನ್ನಡ ಪದಗಳನ್ನು ಮುತ್ತಿನಂತೆ ಹೆಣೆದು ಇಂಪಾಗಿ ಮಾತನಾಡುತ್ತಿದ್ದ, ಕನ್ನಡಕ್ಕೆ ಕಳೆ ಕೊಟ್ಟ ಅಪರ್ಣ, ಇನ್ನು ನೆನಪು ಮಾತ್ರವೇ ಆಗಿದ್ದಾರೆ. ಕನ್ನಡ ಭಾಷೆಗೆ ಸ್ವರವಾಗಿದ್ದಂತ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು.

Aparna Vastarey ನಿನ್ನೆ ಬೆಳಗ್ಗೆ 7:30 ಗಂಟೆ ಆಸ್ಪತ್ರೆಯಿಂದ ಅಪರ್ಣಾ ಅವರ ಪಾರ್ಥೀವ ಶರೀರ ತಲುಪಿತ್ತು. ಬನಶಂಕರಿಯ 2ನೇ ಹಂತದಲ್ಲಿರುವ ಅವರ ಮನೆ ಬಳಿ 11:30 ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆ ಬಳಿಕ 1 ಗಂಟೆಗೆ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ಅಪರ್ಣಾ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಯಿತು.
ಅಲ್ಲಿ ಸ್ಮಾರ್ತ ಬ್ಯಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಿದ ಬಳಿಕ, ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.

ಈಗ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

Family Planning Association of India ಜನಸಂಖ್ಯೆಯ ಬಗ್ಗೆ ಚಿಂತೆ ಮಾಡಬೇಕಾ? ಇಲ್ಲಾ ಚಿಂತನೆ ಮಾಡಬೇಕಾ? : ವಿಶ್ವ ಜನಸಂಖ್ಯಾ ದಿನದ ಕಾರ್ಯಕ್ರಮದಲ್ಲಿ FPAI ಬಳ್ಳಾರಿಯ ಅಧ್ಯಕ್ಷ ಟಿ.ಜಿ.ವಿಠ್ಠಲ್

0

Family Planning Association of India ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ, ಬಳ್ಳಾರಿ ಶಾಖೆ ಹಾಗೂ ಶ್ರೀಮತಿ ರಾಜರಾಜೇಶ್ವರಿ ಸಮೂಹ ಶಿಕ್ಷಣ ಸಂಸ್ಥೆಗಳು, ಸಂಜಯ ಗಾಂಧಿ ಪಾಲಿಟೆಕ್ನಿಕ್ ಕಾಲೇಜು ಬಳ್ಳಾರಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಇವರ ಸಂಯುಕ್ತಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನದ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟಕರು ಹಾಗೂ ಮುಖ್ಯ ಅತಿಥಿಗಳಾದ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾದ ಬಳ್ಳಾರಿ ಶಾಖೆಯ ಅಧ್ಯಕ್ಷರಾದ ಶ್ರೀ ಯುತ ಟಿ.ಜಿ.ವಿಠ್ಠಲ್ ರವರು “ಜನಸಂಖ್ಯೆಯ ಬಗ್ಗೆ ಚಿಂತೆ ಮಾಡಬೇಕಾ? ಇಲ್ಲಾ ಚಿಂತನೆ ಮಾಡಬೇಕಾ?” ಎಂದು ವಿದ್ಯಾರ್ಥಿಗಳಿಗೆ ಪ್ರಶ್ನೆ ಮಾಡುತ್ತಾ ಮಾತನಾಡಿದರು. “ಜನಸಂಖ್ಯೆಯ ಬಗ್ಗೆ ಬಹಳ ಹಿಂದೆಯೇ ಚಿಂತನೆ ನಡೆಸಿ ಭಾರತದಾದ್ಯಂತ ಜನಸಂಖ್ಯೆಯ ನಿಯಂತ್ರಣಕ್ಕಾಗಿ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯನಿರ್ವಹಿಸುತ್ತಿದೆ. ಜನಸಂಖ್ಯೆಯ ಹೆಚ್ಚಳದಿಂದ ನಗರೀಕರಣ ಹೆಚ್ಚಾಗಿದೆ. ಬೆಂಗಳೂರು ಈ ಹಿಂದೆ ಇದ್ದ ಹಾಗೆ ಈಗ ಇಲ್ಲ, ಹಾಗೆಯೇ ಬಳ್ಳಾರಿ ಸಹ ಈ ಹಿಂದೆ ಇದ್ದ ಹಾಗೆ ಈಗ ಇಲ್ಲ, ಗಾತ್ರದಲ್ಲಿ ಬೆಳೆಯುತ್ತಿದೆ. ಜನಸಂಖ್ಯೆಯು ಪರಿಸರದ ಮೇಲೆಯೂ ಪರಿಣಾಮ ಬೀರುತ್ತಿದೆ. ಹಾಗೆಯೇ ಭಾರತದಲ್ಲಿ 77% ನಷ್ಟು ಜನರಿಗೆ ಪೌಷ್ಟಿಕ ಆಹಾರವೇ ಸಿಗುತ್ತಿಲ್ಲ ಎಂದು ಅಂದಾಜು ಮಾಡಲಾಗಿದೆ. ಇವೆಲ್ಲಕ್ಕೂ ಮಿತಿಮೀರಿದ ಜನಸಂಖ್ಯೆಯೂ ಒಂದು ಕಾರಣವಾಗಿದೆ” ಎಂದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ನ M & E ಆಫೀಸರ್ ಆದಂತಹ ಶ್ರೀಮತಿ ಸುಜಾತರವರು ಮಾತನಾಡಿ “ನಮ್ಮ ದೇಶದಲ್ಲಿ ಅತ್ಯಂತ ಬೇಗ ಮದುವೆ ಮಾಡುವುದರಿಂದ ಗರ್ಭಕಂಠದ ಕ್ಯಾನ್ಸರ್ ಬರುವ ಸಾಧ್ಯತೆ ಇರುತ್ತದೆ” ಎಂದು ಹೇಳುತ್ತಾ ಗರ್ಭಕಂಠದ ಕ್ಯಾನ್ಸರ್ ಹಾಗೂ ಅದರ ಲಸಿಕೆಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವಂತೆ ಮಾತನಾಡಿದರು.

ವಿಶ್ವ ಜನಸಂಖ್ಯಾ ದಿನಕ್ಕೆ ಸಂಬಂಧಿಸಿದಂತೆ ಸಂಜಯ ಗಾಂಧಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಭಾಷಣ ಸ್ಪರ್ಧೆಯಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ ವಿದ್ಯಾರ್ಥಿನಿಯರಾದ ಕಾಂಚನ ಪ್ರಥಮ, ಸಂಜನಾ ದ್ವಿತೀಯ ಹಾಗೂ ಗೋದಾವರಿ ತೃತೀಯ ಬಹುಮಾನವನ್ನು ಪಡೆದರು. ಹಾಗೂ ಇಂಗ್ಲಿಷ್ ನಲ್ಲಿ ಭಾಷಣ ಮಾಡಿದ ವಿದ್ಯಾರ್ಥಿನಿಯರಾದ ಹಸೀನಾ ಪ್ರಥಮ, ಶಕೀರಾ ದ್ವಿತೀಯ ಹಾಗೂ ಅಮೃತವರ್ಷಿಣಿ ತೃತೀಯ ಬಹುಮಾನವನ್ನು ಪಡೆದರು. ವಿಜೇತರನ್ನು FPAI ಬಳ್ಳಾರಿ ಶಾಖೆಯ ಪ್ರೋಗ್ರಾಮ್ ಆಫೀಸರ್ ಆದಂತಹ ಬಸವರಾಜ್ ರವರು ಘೋಷಿಸಿ, ವೇಧಿಕೆಯ ಮೇಲಿರುವ ಗಣ್ಯರಿಂದ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷಿಯ ನುಡಿಗಳನ್ನಾಡಿದ ಸಂಜಯ ಗಾಂಧಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಗೌರಿಶಂಕರ್ ಹಿರೇಮಠ್ ರವರು ಜನಸಂಖ್ಯಾ ಸ್ಪೋಟದಿಂದ ಉಂಟಾಗುವ ನಿರುದ್ಯೋಗ ಸಮಸ್ಯೆಯ ಬಗ್ಗೆ ಮಾತನಾಡುತ್ತಾ “ವಿದ್ಯಾರ್ಥಿಗಳು ಈಗಿನಿಂದಲೇ ತಮಗೆ ಎಷ್ಟು ಸಂಬಳ ಬೇಕೆಂದು ನಿರ್ಧಾರ ಮಾಡಿ ಬಿಟ್ಟಿರುತ್ತಾರೆ. ಅದು ಅವರ ತಪ್ಪು ಕಲ್ಪನೆ, ಮೊದಲು ಚಿಕ್ಕ ಕೆಲಸಕ್ಕೆ ಯಾವ ರೀತಿಯ ಸಂಬಳವಿದೆ ಎಂದು ನೋಡದೆ ಇದ್ದ ಕೆಲಸವನ್ನೇ ಶ್ರದ್ದೆ ವಹಿಸಿ “ಕಾಯಕವೇ ಕೈಲಾಸ” ಎಂದು ಮಾಡುತ್ತಾ ಹೋದರೆ ಅನುಭವ ಮತ್ತು ಸಂಬಳವೂ ಹಿಂಬಾಲಿಸಿ ಬರುತ್ತದೆ” ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

Family Planning Association of India ಕಾರ್ಯಕ್ರಮದ ಆಯೋಜನೆಗೆ ಸಕಲ ಸಿದ್ಧತೆಗಳನ್ನು ಮಾಡಿಸಿಕೊಟ್ಟಂತಹ ಮೆಕಾನಿಕಲ್ ವಿಭಾಗದ ಬೋಧಕರು ಹಾಗೂ ಸಂಜಯಗಾಂಧಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಮುಖ್ಯಸ್ಥರಾದ ಶ್ರೀ ಬಸವರಾಜ್ ರವರಿಗೆ FPAI ಸಂಸ್ಥೆಯು ತುಂಬುಹೃದಯದ ಧನ್ಯವಾದಗಳನ್ನು ತಿಳಿಸಿತು.

ಕಾರ್ಯಕ್ರಮದಲ್ಲಿ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ನ ಸಿಬ್ಬಂದಿ ವರ್ಗ, ಸಂಜಯ ಗಾಂಧಿ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ವರ್ಗ ಹಾಗೂ 300 ಕ್ಕೂ ಹೆಚ್ಚಿನ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳಾದ ಗೋದಾವರಿ ಮತ್ತು ತಂಡದವರು ಪ್ರಾರ್ಥಿಸಿ, ಹಸೀನಾ ನಿರೂಪಿಸಿ, ರಕ್ಷಿತ್ ಸ್ವಾಗತಿಸಿ, ನದಾ ಆಲಂ ವಂದಿಸಿದರು.