MESCOM ಶಿವಮೊಗ್ಗ ನಗರ ಉಪವಿಭಾಗ -2, ಸಹಾಯಕ ಕಾರ್ಯನಿರ್ವಾಯಕ ಇಂಜಿನಿಯರ್ ಕಚೇರಿ, ಎನ್.ಟಿ.ರಸ್ತೆ, ನ್ಯೂಮಂಡ್ಲಿ ಮೆಸ್ಕಾಂ ಕಚೇರಿಯಲ್ಲಿ ದಿನಾಂಕ 08.07.2024ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು MESCOM ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.;08182-228930 ನ್ನು ಸಂಪರ್ಕಿಸುವುದು.
MESCOM ನ್ಯೂ ಮಂಡ್ಲಿ ಮೆಸ್ಕಾಂ ಕಚೇರಿಯಲ್ಲಿ ಜನಸಂಪರ್ಕ ಸಭೆ
Department of Kannada and Culture ಆರ್ಥಿಕ ಸಂಕಷ್ಟದಲ್ಲಿರುವ ಪುರುಷ/ಮಹಿಳೆ/ಅಂಗವಿಕಲ ಕಲಾವಿದರಿಗೆ ಮಾಸಾಶನಕ್ಕೆ ಅರ್ಜಿ ಸಲ್ಲಿಕೆಗೆ ಮಾಹಿತಿ
Department of Kannada and Culture ಶಿವಮೊಗ್ಗ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ 58 ವರ್ಷ ತುಂಬಿರುವ ಪುರುಷ/ಮಹಿಳಾ/ಅಂಗವಿಕಲ ಕಲಾವಿದರುಗಳಿಂದ ಮಾಸಾಶನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಆಸಕ್ತ ಕಲಾವಿದರು ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸುವುದು.
ಕಲಾವಿದರು ಕನಿಷ್ಠ 25 ವರ್ಷಗಳಿಂದ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿರುವ ದಾಖಲಾತಿ ಹಾಗೂ ರೂ. 1.00 ಲಕ್ಷದೊಳಗಿನ Department of Kannada and Culture ಆದಾಯ ಪ್ರಮಾಣ ಪತ್ರ ಹೊಂದಿದ್ದು, ಇಂತಹ ಕಲಾವಿದರು ಸರ್ಕಾರದಿಂದ ಇತರೆ ಯಾವುದೇ ಪಿಂಚಣಿಯನ್ನು ಪಡೆಯುತ್ತಿರಬಾರದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-223354 ನ್ನು ಸಂಪರ್ಕಿಸುವುದು.
Department of Women and Child Development ಬಾಲ ಕಾರ್ಮಿಕರನ್ನ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ
Department of Women and Child Development 2024-25ನೇ ಸಾಲಿನಲ್ಲಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಉದ್ದಿಮೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರಾವಸ್ಠೆ ಮಕ್ಕಳನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದವಾಗಿದ್ದು, ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಯಂತ್ರಣ ಹಾಗೂ ನಿಷೇಧ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರಡಿ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ನೇಮಿಸಿಕೊಂಡ ಮಾಲೀಕರುಗಳಿಗೆ ರೂ. 50,000/-ಗಳ ದಂಡ ಅಥವಾ ಎರಡು ವರ್ಷವರೆಗಿನ ಸೆರೆಮನೆ ವಾಸದ ಶಿಕ್ಷೆ ಮತ್ತು ಪೊಲೀಸ್ ಇಲಾಖೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿರುತ್ತಾರೆ.
Department of Women and Child Development ಬಾಲಕಾರ್ಮಿಕ ಹಾಗೂ ಕಿಶೋರಾಕಾರ್ಮಿಕರು ಜಿಲ್ಲೆಯಲ್ಲಿ ಕಂಡು ಬಂದಲ್ಲಿ ಕಾರ್ಮಿಕ ಇಲಾಖೆ-ದೂ.ಸಂ.: 08182-248810, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ 1098 ನ್ನು ಸಂಪರ್ಕಿಸುವುದು.
Skill Development Department ಸ್ವಂತ ಉದ್ಯಮ ಸ್ಥಾಪಿಸುವ ಆಕಾಂಕ್ಷಿಗಳಿಗೆ ಕಾರ್ಯಾಗಾರ- ಮಾಹಿತಿ
Skill Development Department ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ಅಭ್ಯರ್ಥಿಗಳಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರವನ್ನು ಜುಲೈ ತಿಂಗಳ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಬಯಸುವ ಆಸಕ್ತರಿಗೆ ಪ್ರೇರೇಪಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ದಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.
Skill Development Department ಕನಿಷ್ಟ 18 ವರ್ಷ ವಯಸ್ಸಿನವರು ಹಾಗೂ ಓದಲು/ಬರೆಯಲು ಬರುವ ಅಭ್ಯರ್ಥಿಗಳು ಭಾಗವಹಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, 3ನೇ ಮಹಡಿ, ಶಿವಪ್ಪನಾಯಕ ಕಾಂಪ್ಲೆಕ್ಸ್, ನೆಹರು ರಸ್ತೆ, ಶಿವಮೊಗ್ಗ, ಅವಿನಾಶ್ ಎ, ತರಬೇತುದಾರರು ಮೊ.ಸಂ: 9164811887 ಇವರನ್ನು ಸಂಪರ್ಕಿಸಹುದು.
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 2 ಪಾಸ್‍ಪೋರ್ಟ್ ಅಳತೆಯ ಫೋಟೊ ಹಾಗೂ ಆಧಾರ್ ಕಾರ್ಡ್‍ನ ಪ್ರತಿಯೊಂದಿಗೆ ಸಂಪರ್ಕಿಸಬಹುದೆಂದು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Indian Air Force ಅಗ್ನಿವೀರ್ ವಾಯುಸೇವೆಗೆ ಆಯ್ಕೆ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನ
Indian Air Force ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ವಿದ್ಯಾರ್ಹತೆ ಹೊಂದಿರುವ, 03, ಜುಲೈ-2024 ರಿಂದ 03, ಜನವರಿ 2008ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಆನ್‍ಲೈನ್ https://agnipathvayu.cdac.in ರಲ್ಲಿ ನೊಂದಾಯಿಸಿಕೊಂಡು, ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಖಲಂದರ್ ಖಾನ್ ತಿಳಿಸಿರುತ್ತಾರೆ.
Indian Air Force ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293/ 9108235132 ಗಳನ್ನು ಸಂಪರ್ಕಿಸುವುದು.
Shivaganga Yoga Centre ಯೋಗ, ಧ್ಯಾನಗಳಿಂದ ವ್ಯಕ್ತಿ ಪರಿಪೂರ್ಣ-ಆರತಿ ಆಮ ಪ್ರಕಾಶ್
Shivaganga Yoga Centre ಯೋಗ, ಧ್ಯಾನ ಹಾಗೂ ಪ್ರಾಣಾಯಾಮದಿಂದ ವ್ಯಕ್ತಿ ಪರಿಪೂರ್ಣನಾಗುತ್ತಾನೆ. ನಮ್ಮ ದೇಹದಲ್ಲಿ ನಮಗೆ ಗೊತ್ತಿಲ್ಲದೇ ಇರುವ ಕಾಯಿಲೆಗಳು ಯೋಗಾಸನದಿಂದ ದೂರವಾಗುತ್ತವೆ ಎಂದು ಮಹಾನಗರ ಪಾಲಿಕೆ ಸದಸ್ಯೆ ಆರತಿ ಆಮ ಪ್ರಕಾಶ್ ಹೇಳಿದರು.
ರವೀಂದ್ರ ನಗರ ಸರಸ್ವತಿ ಮಂದಿರದಲ್ಲಿ ಶಿವಗಂಗಾ ಯೋಗ ಕೇಂದ್ರ ರಾಘವ ಶಾಖೆ ವತಿಯಿಂದ ಆಯೋಜಿಸಿದ್ದ ಕೃತಜ್ಞತಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಯೋಗ ಅಭ್ಯಾಸದಿಂದ ದೇಹದಲ್ಲಿ ರಕ್ತ ಸಂಚಾರ ಚೆನ್ನಾಗಿ ಆಗುತ್ತದೆ. ಸದಾ ಉತ್ಸಾಹ ಹಾಗೂ ಲವಲವಿಕೆಯಿಂದ ಇರಲು ಸಹಕಾರಿಯಾಗಿದೆ ಎಂದು ತಿಳಿಸಿದರು.
ಯೋಗದಿಂದ ನಮಗೆ ಸಕಾರಾತ್ಮಕ ಭಾವನೆ ಜತೆಗೆ ಒಳ್ಳೆಯ ನಿದ್ರೆ ಹಾಗೂ ಆಹಾರ ಸೇವನೆಗೆ ದಾರಿದೀಪವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಯೋಗವನ್ನು ಅಭ್ಯಾಸ ಮಾಡಬೇಕು. ಪ್ರಾತಃಕಾಲದಲ್ಲಿ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ಮಾಡುವುದು ಆತ್ಮವಿಶ್ವಾಸ ವೃದ್ಧಿಸುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಪ್ರೇರಣ ಮಹಿಳಾ ಸಂಸ್ಥೆ ಅಧ್ಯಕ್ಷೆ ಪುಷ್ಪಲತಾ ಮೂರ್ತಿ ಮಾತನಾಡಿ, ಮಹಿಳೆಯರಿಗೆ ಯೋಗಾಸನದಿಂದ ತುಂಬಾ ಲಾಭಗಳಿವೆ. ಖಿನ್ನತೆ ದೂರವಾಗುವುದರ ಜತೆಗೆ ಸದಾ ಆರೋಗ್ಯದಿಂದ ಇರಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಮಹಿಳೆಯರು ಸಹ ಯೋಗ ಮಾಡುವುದರಿಂದ ಸಾಕಷ್ಟು ದೇಹದಲ್ಲಿರುವ ಸಮಸ್ಯೆಗಳನ್ನು ಗುಣಪಡಿಸಿಕೊಳ್ಳಬಹುದು ಎಂದು ಹೇಳಿದರು.
ಮಂಜುಳಾ ರಾಯ್ಕರ್ ಮಾತನಾಡಿ, ನಾನು ಯೋಗದಿಂದ ಉತ್ತಮ ಆರೋಗ್ಯ ಸಂಪಾದನೆ ಮಾಡಿಕೊಂಡಿದ್ದೇನೆ. ಯೋಗದಿಂದ ಸಂಸ್ಕಾರದ ಜತೆಗೆ ಆಧ್ಯಾತ್ಮದ ಒಲವು ಸಹ ಸಿಗುತ್ತದೆ. ಮನಸ್ಸು ಸದಾ ಪ್ರಶಾಂತವಾಗಿ ಇರುತ್ತದೆ ಎಂದು ತಿಳಿಸಿದರು.
Shivaganga Yoga Centre ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯ ಜಿ.ಎಸ್.ಓಂಕಾರ್, ಹರೀಶ್, ವಿಜಯ ಕೃಷ್ಣ, ಜಿ.ವಿಜಯಕುಮಾರ್, ನರ್ಸೋಜಿ ರಾವ್, ಶ್ರೀನಿವಾಸ್, ಗಾಯತ್ರಿ ರಮೇಶ್, ಸುಜಾತಾ ಮಧುಕರ್, ಶೋಭಾ. ಶಂಕರ್, ಬಿಂದು ವಿಜಯಕುಮಾರ್, ಮಹೇಶ್, ಶೈಲಜಾ ಹಾಗೂ ಯೋಗ ಬಂಧುಗಳು ಉಪಸ್ಥಿತರಿದ್ದರು.
Actor Darshan ಡಿ’ ಗ್ಯಾಂಗ್ ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ
Actor Darshan ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ.
ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಅಂಡ್ ಗ್ಯಾಂಗ್ ನ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು.
Actor Darshan ಇದೀಗ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನ ಜುಲೈ 18ರವರೆಗೆ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
Chikkamagaluru Police ಬೈಕ್ ಬಿಡಿಭಾಗ ಕದ್ದು ಮಾರುತ್ತಿದ್ದ ಖದೀಮರ ಸೆರೆ
Chikkamagaluru Police ಚಿಕ್ಕಮಗಳೂರು ಜಿಲ್ಲೆಯ ಬಸವನಹಳ್ಳಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಅಂತರ್ ಜಿಲ್ಲಾ ಕಳ್ಳರನ್ನು ಹಿಡಿದಿದ್ದು ಅವರಿಂದ ಮೂರು ಜಿಲ್ಲೆಗಳಲ್ಲಿ ಕಳ್ಳತನವಾಗಿದ್ದ ಒಟ್ಟು 17 ಬೈಕ್’ಗಳನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾದ ಬೈಕ್ ಕಳ್ಳತನ ಪ್ರಕರಣ ಸಂಬಂಧ ವಿಶೇಷ ತಂಡ ರಚನೆ ಮಾಡಲಾಗಿತ್ತು.
ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಕಲೈಮಾರ್ ಮತ್ತು ಪಿಎಸ್ಐ ಬಾಬುದ್ದೀನ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಲಿಂಗಮೂರ್ತಿ, ಮಧಸೂಧನ್, ನಂಜಪ್ಪ, ಮಧುಕುಮಾರ್, ಪ್ರದೀಪ ಮತ್ತು ನವೀನ ಅವರ ತಂಡ ಇದೀಗ ಕಳ್ಳರ ಗ್ಯಾಂಗ್‌ನ್ನು ಹಿಡಿದಿದ್ದಾರೆ.
Chikkamagaluru Police ಈ ಸಂಬಂಧ ಮೂವರನ್ನ ಬಂಧಿಸಿರುವ ಪೊಲೀಸರು ರೂ. 8.5 ಲಕ್ಷ ಬೆಲೆಯ 17 ಬೈಕ್ ಗಳು, ರೂ. 2.15 ನಗದು ಮತ್ತು ರೂ. 50 ಸಾವಿರ ಮೌಲ್ಯದ ಬೈಕ್ ಬಿಡಿಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಶೇಷ ಅಂದರೆ ಆರೋಪಿಗಳು ಬೈಕ್‌ಗಳನ್ನು ಕದ್ದು ಅದನ್ನ ಗುಜರಿಗೆ ಹಾಕುತ್ತಿದ್ದರು. ವಾಹನಗಳ ಬಿಡಿಭಾಗಗಳನ್ನ ವಿಂಗಡಿಸಿ ಅವುಗಳನ್ನ ಮಾರಲಾಗುತ್ತಿತ್ತು.
ಆರೋಪಿಗಳು ಚಿಕ್ಕಮಗಳೂರು ನಗರದಲ್ಲಿ 22, ಕಡೂರು ಪಟ್ಟಣದಲ್ಲಿ 1, ತರೀಕೆರೆ ಪಟ್ಟಣದಲ್ಲಿ 1, ಶಿವಮೊಗ್ಗ ನಗರದಲ್ಲಿ 2, ಭದ್ರಾವತಿಯಲ್ಲಿ 2 ಹಾಗೂ ದಾವಣಗೆರೆಯಲ್ಲಿ 2 ಬೈಕ್’ಳನ್ನು ಕಳವು ಮಾಡಿದ್ದಾರೆ. ಅವುಗಳಲ್ಲಿ 17 ಬೈಕ್ ಸುಸ್ಥಿತಿಯಲ್ಲಿದೆ.
Hosanagara Police ಸಂಕ ದಾಟುವಾಗ ಜಾರಿ ಹಳ್ಳಕ್ಕೆ ಬಿದ್ದು ಕೊಚ್ಚಿಹೋದ ಮಹಿಳೆ ಸಾವು
Hosanagara Police ಹೊಸನಗರ ತಾಲೂಕಿನಲ್ಲಿ ಮಳೆಗೆ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.
ಬೈಸೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು. ಮೃತಳನ್ನು ಚಿಕಳಿ ನಿವಾಸಿ ಶಶಿಕಲಾ (43) ಎಂದು ಗುರುತಿಸಲಾಗಿದೆ ಬೆಳಗ್ಗೆ ತಮ್ಮ ಗದ್ದೆ ಹೋಗುತ್ತಿದ್ದ ಮಹಿಳೆ ಹಳ್ಳಕ್ಕೆ ಅಡ್ಡಲಾಗಿ ಹಾಕಿದ್ದ ಕಾಲು ಸಂಕ ದಾಟುವಾಗ ಜಾರಿ ಹಳ್ಳಕ್ಕೆ ಬಿದ್ದಿದ್ದಾರೆ.
ಆ ಬಳಿಕ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಮಹಿಳೆ ಹಳ್ಳದಲ್ಲಿ ಬಿದ್ದು ಕೊಚ್ಚಿ ಹೋದ ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಮಹಿಳೆಯ ಶವ ಪತ್ತೆಯಾಗಿದೆ.
ನಗರ ಪೊಲೀಸ್ ಠಾಣೆ ಪೊಲೀಸರು ಮಹಜರ್ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯ ವಿವರ :
ಬೈಸೆ ಗ್ರಾಮದ ಬಳಿಯಲ್ಲಿ ಜಾಮಿಜೆಡ್ಡು ಗುಡ್ಡದ ಕಡೆಯಿಂದ ರಭಸವಾಗಿ ಮಳೆ ನೀರು ಹಳ್ಳದ ರೀತಿಯಲ್ಲಿ ಹರಿಯುತ್ತದೆ. ಅಕ್ಕಪಕ್ಕದ ರೈತರು ಈ ಹಳ್ಳಕ್ಕೆ ಅಡ್ಡಲಾಗಿ ಅಡಿಕೆ ದಬ್ಬೆ ಬಳಸಿ ಸಾರ ಅಥವಾ ಸಂಕ ಕಟ್ಟಿ ತಮ್ಮ ತಮ್ಮ ಹೊಲಕ್ಕೆ, ತೋಟಕ್ಕೆ ಹೋಗುತ್ತಾರೆ. ಅದೇ ರೀತಿ ಶಶಿಕಲಾ ಸಹ ಬೆಳಗ್ಗೆ ಒಂಭತ್ತು ಗಂಟೆಗೆ ಜಮೀನಿನ ಹತ್ತಿರ ಹೋಗಿ ಅಗೆ ಹಾಕಲು ಸಿದ್ಧತೆ ನೋಡಿಕೊಂಡು ಬರಲು ಹೊರಟಿದ್ದರು. ಆ ಬಳಿಕ ಮನೆಗೆ ಅವರು ವಾಪಾಸ್ ಮನೆಗೆ ಬಂದಿರಲಿಲ್ಲ.
Hosanagara Police ಹೀಗಾಗಿ ಮನೆಯವರು ಶಶಿಕಲಾರಿಗಾಗಿ ಹುಡುಕಾಟ ನಡೆಸಿದ್ದಾರೆ. ಕಾಲು ಸಂಕದಿಂದ ಹಳ್ಳದಲ್ಲಿ ಮುಂದೆ ಹುಡುಕುತ್ತಾ ಹೋದ ಮನೆಯವರಿಗೆ ಒಂದು ಕಿಲೋಮೀಟರ್ ದೂರದಲ್ಲಿ ಮೃತದೇಹ ಸಿಕ್ಕಿದೆ. ಗದ್ದೆಯ ಕಾಲು ಸೇತುವೆ ಹತ್ತಿರ ಹಳ್ಳದಲ್ಲಿ ಶಶಿಕಲಾ ರವರ ಮೃತದೇಹ ಮರಕ್ಕೆ ಸಿಕ್ಕಿ ಹಾಕಿಕೊಂಡಿತ್ತು.
ಇದನ್ನು ನೋಡಿದ ಮನೆಯವರು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
Govt First Grade College ಮೌಢ್ಯತೆ ನಿವಾರಣೆಗೆ ವೈಚಾರಿಕತೆ ಬೇಕಿದೆ- ಡಾ.ಎಚ್.ಟಿ.ಕೃಷ್ಣ ಮೂರ್ತಿ
Govt First Grade College ನಮ್ಮ ವಿದ್ಯಾವಂತರಲ್ಲಿ ಮೌಢ್ಯ ಜಾಸ್ತಿಯಾಗಿದೆ. ನಾವು ಆರೋಗ್ಯವಾಗಿದ್ದರೆ ದೇಶವೂ ಆರೋಗ್ಯ ವಾಗಿರುತ್ತದೆ. ಅಂತಹ ಆರೋಗ್ಯಕ್ಕೆ ಕುವೆಂಪು ಹೇಳಿದ ನಿತ್ಯವೂ ಅವತರಿಪ ಸತ್ಯಾವತಾರವನ್ನು ಕಾಣಬೇಕು. ನಾವು ಮೌಢ್ಯದ ಅದೀನದಲ್ಲಿದ್ದೇವೆ. ಸತ್ಯವನ್ನು ನಮಗೆ ಯಾರೂ ಹೇಳುತ್ತಿಲ್ಲ. ವೈಚಾರಿಕತೆ ಮೌಢ್ಯದ ನಿವಾರಣೆಗೆ ರೂಢಿಸಿಕೊಳ್ಳುವ ಅಗತ್ಯವನ್ನು ಸಾಹಿತಿಗಳು, ವಿಶ್ರಾಂತ ಪ್ರಿನ್ಸಿಪಾಲರಾದ ಡಾ. ಎಚ್. ಟಿ. ಕೃಷ್ಣಮೂರ್ತಿ ವಿವರಿಸಿದರು.
ಹೊಳೆಹೊನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎನ್. ಎಸ್.ಎಸ್. ವಾರ್ಷಿಕ ಶಿಬಿರವು ಅಗಸನಹಳ್ಳಿಯಲ್ಲಿ ನಡೆಯುತಿದ್ದು, ಈ ಶಿಬಿರದಲ್ಲಿ ಏರ್ಪಡಿಸಿದ್ದ ದತ್ತಿ ನಿಧಿ ಕಾರ್ಯಕ್ರಮದಲ್ಲಿ ಕುವೆಂಪು ಸಾಹಿತ್ಯದಲ್ಲಿನ ವೈಚಾರಿಕ ಪ್ರಜ್ಞೆ ವಿಚಾರವಾಗಿ ಮಾತನಾಡಿದರು..
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಮಾತನಾಡಿ, ವಿದ್ಯಾರ್ಥಿಗಳು ಆತ್ಮ ವಿಶ್ವಾಸದಿಂದ ಬದುಕನ್ನು ನಿರ್ವಹಿಸುವುದು ಕಲಿಯಬೇಕು. ಈ ಶಿಬಿರದ ಸದುಪಯೋಗ ವಾಗಲಿ ಎಂದು ಹಾರೈಸಿದರು.
ಹೊಳೆಹೊನ್ನೂರು ಕಸಾಪ ಹೋಬಳಿ ಅಧ್ಯಕ್ಷರಾದ ಹ. ಬ. ಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ಗಾಂಜಾ, ಡ್ರಗ್ಸ್, ನಶೆಗೆ ಮಾರುಹೋಗದೆ ಉತ್ತಮ ವಿಚಾರ, ಜೀವನ ಪದ್ದತಿ ಅಳವಡಿಸಿಕೊಳ್ಳಲು ಕುವೆಂಪು ಅವರ ಸಾಹಿತ್ಯ ಓದಿ ಎಂದರು.
Govt First Grade College ತಾಲ್ಲೂಕು ಕಸಾಪ ಅಧ್ಯಕ್ಷರಾದ ಕೋಡ್ಲು ಯಜ್ಞಯ್ಯ, ರೈತ ಮುಖಂಡರಾದ ಕೃಷ್ಣಮೂರ್ತಿ, ಕಸಾಪ ಉಪಾಧ್ಯಕ್ಷರಾದ ಶ್ರೀನಿವಾಸ್, ಕಾಲೇಜು ಉಪನ್ಯಾಸಕರಾದ ಚಂದ್ರಪ್ಪ, ಸುರೇಶ್, ಸೌಮ್ಯ, ಗಾಯತ್ರಿ, ಅಂಬಿಕಾ, ತಾ. ಕಾರ್ಯದರ್ಶಿ ಎಚ್. ತಿಮ್ಮಪ್ಪ, ಹೋಬಳಿ ಕಾರ್ಯದರ್ಶಿ ಚಂದ್ರಪ್ಪ ಉಪಸ್ಥಿತರಿದ್ದರು.
ಕು. ಚಂದನ ಮತ್ತು ಸಂಗಡಿಗರು ಪ್ರಾರ್ಥನೆ ಹಾಡಿದರು. ಕು. ಮಾನಸ ಸ್ವಾಗತಿಸಿದರು, ಕು. ಚಂದನ ನಿರೂಪಿಸಿದರು. ಪ್ರಿಯಾ ವಂದಿಸಿದರು. ರಾ. ಸೇ. ಯೋ. ಕಾರ್ಯಕ್ರಮಾಧಿಕಾರಿಗಳಾದ ಎಚ್. ರುದ್ರಮುನಿ, ಡಾ. ರಾಜುನಾಯ್ಕ ಎಸ್. ನಿರ್ವಹಿಸಿದರು.
