Thursday, May 14, 2026
Thursday, May 14, 2026
Home Blog Page 68

Madhu Bangarappa ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ಕನ್ನಡಿಗರಿಗೆ ಮಧು ಬಂಗಾರಪ್ಪನವರಿಂದ ಶುಭ ಹಾರೈಕೆ

0

Madhu Bangarappa ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದು ತೇರ್ಗಡೆಯಾದ ಕರ್ನಾಟಕದ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.

ನಿಮ್ಮ ನಿರಂತರ ಪರಿಶ್ರಮ ಮತ್ತು ಛಲ ಇಂದು ರಾಜ್ಯದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದಿದೆ. ನಿಮ್ಮ ಈ ಯಶಸ್ಸು ನಾಡಿನ ಲಕ್ಷಾಂತರ ಯುವಜನತೆಗೆ ಮಾದರಿಯಾಗಲಿ. ಸಮಾಜ ಸೇವೆಯ ನಿಮ್ಮ ಮುಂದಿನ ಪಯಣ ಅರ್ಥಪೂರ್ಣವಾಗಿರಲಿ ಎಂದು ಹಾರೈಸುತ್ತೇನೆ.

Madhu Bangarappa ಇನ್ನು, ಈ ಬಾರಿ ಯಶಸ್ಸು ಕಾಣದವರು ಎದೆಗುಂದಬೇಡಿ. ಸೋಲು ಗೆಲುವಿನ ಹಾದಿಯ ಒಂದು ಭಾಗವಷ್ಟೇ. ನಿಮ್ಮ ಪ್ರಯತ್ನ ಮತ್ತು ಆತ್ಮವಿಶ್ವಾಸದ ಮೇಲೆ ನಂಬಿಕೆಯಿಟ್ಟು ಮುಂದಿನ ಗುರಿಯತ್ತ ಸಾಗಿ. ಯಶಸ್ಸು ಖಂಡಿತ ನಿಮ್ಮದಾಗಲಿದೆ.

Rotary Club Shimoga Midtown ರೋಟರಿರಕ್ತ ನಿಧಿ ವತಿಯಿಂದ ರಕ್ತದಾನ ಶಿಬಿರ

0

Rotary Club Shimoga Midtown ಎಂಡಿಎಫ್ (ರಿ.) ಸಾಗರ, ಸುಮುಖ ಸಹಾಯ ಹಸ್ತ ಸಾಗರ, ರೋಟರಿ ರಕ್ತನಿಧಿ ಸಾಗರ, ಮಲೆನಾಡು ಔಷಧ ಮಾರಾಟಗಾರರ ಸಂಘ ಸಾಗರ, ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಜಿ ಎ ನಾರಿಬೊಲಿ ಶಿಕ್ಷಣ ಮಹಾವಿದ್ಯಾಲಯದ
ಬಿಎಡ್ ಪ್ರಶಿಕ್ಷಣಾರ್ಥಿಗಳ ಆರೋಗ್ಯ ಮತ್ತು ರಕ್ತತಪಾಸಣಾ ಶಿಬಿರ ಆಯೋಜನೆ ಮಾಡಲಾಗಿತ್ತು.

ಸಮಯದ ಮಿತಿಯಲ್ಲಿ 100 ಜನರು ಇದರ ಸದುಪಯೋಗ ಪಡೆದುಕೊಂಡರು. ಇನ್ನೊಂದು ದಿನ ಉಳಿದವರಿಗೆ ಮಾಡಲಾಗುವುದು.

ಈ ಕಾರ್ಯಕ್ರಮದ ಉದ್ಘಾಟನೆ ಮಾಡಿದ ಸಾಗರದ ಪ್ರಸಿದ್ಧ ಸುಮುಖ ಆಸ್ಪತ್ರೆಯ ಮಧುಮೇಹಿ ಕಾಯಿಲೆಯ ಚಿಕಿತ್ಸೆಯಲ್ಲಿ ತಜ್ಞರಾದ ಡಾ. ಸೌಮ್ಯ ಎ ಯು ರವರು ದೈಹಿಕ ಕ್ಷಮತೆಯನ್ನು ಕಾಪಾಡುವ ಬಗ್ಗೆ ಉದಾಹರಣೆ, ನಿದರ್ಶನಗಳ ಮೂಲಕ ಮಾಹಿತಿ ನೀಡಿದರು. ನಾವು ಸೇವಿಸುವ ಆಹಾರದಲ್ಲಿ ಪೋಷಕಾಂಶಗಳ ಪ್ರಮಾಣ, ಗೋಲ್ಡನ್ ಪ್ಲೇಟ್ ರೂಲ್ ಬಗ್ಗೆ ತಿಳಿಸಿದರು.
ನಂತರ ಮಾಸಿಕ ಋತುಸ್ರಾವ, ಆ ಸಮಯದಲ್ಲಿನ ಆರೋಗ್ಯ ಸಮಸ್ಯೆಗಳ ನಿಯಂತ್ರಣ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪ್ರಶಿಕ್ಷಣಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

Rotary Club Shimoga Midtown ರೋಟರಿ ರಕ್ತನಿಧಿಯ ವೈದ್ಯರಾದ ಡಾ. ಸಚಿನ್ ರವರು ಹೃದಯಾಘಾತ, ಹೃದಯಸ್ತಂಭನದ ಕಾರಣಗಳ ಬಗ್ಗೆ ವಿಶೇಷ ಮಾಹಿತಿ ನೀಡಿದರು. ಹಾಗೂ ಪ್ರಥಮ ಚಿಕಿತ್ಸೆಯನ್ನು ನೀಡುವ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಎಂಡಿಎಫ್ (ರಿ.) ನ ಪ್ರಧಾನ ಕಾರ್ಯದರ್ಶಿಗಳಾದ ಡಾ ಹೆಚ್ ಎಂ ಶಿವಕುಮಾರ್ ರವರು ಸಂಪನ್ಮೂಲ ವ್ಯಕ್ತಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಂಸ್ಥೆ ಹಾಗೂ ಕಾಲೇಜು ಪ್ರಶಿಕ್ಷಣಾರ್ಥಿಗಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದೆ, ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂಡಿಎಫ್ (ರಿ.) ನ ಅದ್ಯಕ್ಷರಾದ ಶ್ರೀ ಬಿ ಆರ್ ಜಯಂತ್ ರವರು ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ತುಂಬಾ ಕಾಳಜಿ ವಹಿಸಬೇಕೆಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಮೆಡ್ಲಿ ಫಾರ್ಮಾಸಿಕಲ್ಸ್ ನ ಮುಖ್ಯಸ್ಥರು, ಕಾಲೇಜಿನ ಪ್ರಾಚಾರ್ಯರು ಉಪಸ್ಥಿತರಿದ್ದರು.
ಸಿಂಚನಾ ವಿನುತಾರವರು ನಿರೂಪಿಸಿದರು.

D. K. Shivakumar ಜಲ ಕ್ರಾಂತಿಯತ್ತ ಕರುನಾಡು – ನೀರಾವರಿ ಯೋಜನೆಗಳಿಗೆ ಬಜೆಟ್’ನಲ್ಲಿ ಭರ್ಜರಿ ಅನುದಾನ

0

D. K. Shivakumar ಕರ್ನಾಟಕದ ಜಲಸಂಪನ್ಮೂಲವನ್ನು ಸಂರಕ್ಷಿಸಿ, ಪ್ರತಿಯೊಬ್ಬ ರೈತನ ಜಮೀನಿಗೂ ನೀರು ತಲುಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. 2026-27ರ ಬಜೆಟ್’ನಲ್ಲಿ ನೀರಾವರಿ ಯೋಜನೆಗಳಿಗೆ ವಿಶೇಷ ಒತ್ತು ನೀಡಲಾಗಿದ್ದು, ಮೇಕೆದಾಟು, ಭದ್ರಾ ಮೇಲ್ದಂಡೆ ಮತ್ತು ಕೃಷ್ಣಾ ಮೇಲ್ದಂಡೆಯಂತಹ ಬೃಹತ್ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಅನುದಾನ ಮೀಸಲಿಡಲಾಗಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

International Women’s Day ಮಹಿಳಾ ದಿನಾಚರಣೆಗೆ ಮುಖ್ಯಮಂತ್ರಿಗಳಿಂದ ಶುಭ ಹಾರೈಕೆ

0

International Women’s Day ನನ್ನ ಎಲ್ಲಾ ಪ್ರೀತಿಯ ಅಕ್ಕ ತಂಗಿಯರಿಗೆ, ತಾಯಂದಿರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ಮಹಿಳೆಯರ ಸಬಲೀಕರಣ, ಸಮಾನತೆ ಮತ್ತು ಘನತೆಯ ಬದುಕಿಗಾಗಿ ಜಾಗೃತರಾಗುವುದು, ಅವರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಸಾಧನೆಗಳನ್ನು ಗುರುತಿಸಿ, ಗೌರವಿಸುವುದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಆಶಯ ಎಂದಿದ್ದಾರೆ.

ಅಡುಗೆ ಮನೆಯಿಂದ ಅಂತರಿಕ್ಷದ ವರೆಗೆ ಮಹಿಳೆಯರು ಏರದ ಎತ್ತರವಿಲ್ಲ, ಸಾಧಿಸದ ಸಾಧನೆಯಿಲ್ಲ ಎನ್ನುವಷ್ಟರ ಮಟ್ಟಿಗೆ ಮಹಿಳೆಯರು ತಮ್ಮ ಸಾಮಾಜಿಕ ಹಾಗೂ ದೈಹಿಕ ಸವಾಲುಗಳನ್ನು ಮೀರಿ ಬೆಳೆದಿದ್ದಾರೆ.

International Women’s Day ಹೆಣ್ಣು ಸಂಸಾರದ ಕಣ್ಣು ಮಾತ್ರವಲ್ಲ, ಪುರುಷರ ಬದುಕಿಗೆ ಪರಿಪೂರ್ಣತೆಯನ್ನು ಕೊಡುವ ಪ್ರಕೃತಿಯ ವಿಶಿಷ್ಟ, ಅನನ್ಯ ಸೃಷ್ಟಿ. ತಾಯಿಯಾಗಿ, ತಂಗಿಯಾಗಿ, ಹೆಂಡತಿಯಾಗಿ ಬದುಕಿನ ಬಂಡಿಯ ನೊಗಹೊತ್ತು, ಪುರುಷರಿಗೆ ಸಮನಾಗಿ ದುಡಿಯುತ್ತಿರುವ ಮಹಿಳೆಯರ ತ್ಯಾಗ, ಸೇವೆ, ಸಮರ್ಪಣೆಯನ್ನು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಇಂದು ಸ್ಮರಿಸಿ, ಗೌರವಿಸಬೇಕಿರುವುದು ನಮ್ಮೆಲ್ಲರ ಕರ್ತವ್ಯ ಎಂದಿದ್ದಾರೆ.

ಮತ್ತೊಮ್ಮೆ ನಾಡಿನ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳನ್ನು ತಿಳಿಸಬಯಸುತ್ತೇನೆ ಎಂದು ಶುಭಾಶಯ ಕೋರಿದ್ದಾರೆ.

B. R. Ambedkar ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಅರ್ಜಿ ಆಹ್ವಾನ ವಿಸ್ತರಣೆ

0

B. R. Ambedkar ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಏಪ್ರಿಲ್ 5 ರಂದು ಹಾಗೂ ಏಪ್ರಿಲ್ 14 ರಂದು ಕ್ರಮವಾಗಿ ರಾಜ್ಯಾದ್ಯಾಂತ ಡಾ. ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿರುವ ಹಿನ್ನಲೆಯಲ್ಲಿ 2026 ನೇ ಸಾಲಿಗೆ ಸದರಿ ಮಹನೀಯರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಯಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕೊನೆಯ ದಿನಾಂಕ: 10-03-2026 ಕ್ಕೆ ನಿಗಧಿಪಡಿಸಲಾಗಿರುತ್ತದೆ.

B. R. Ambedkar ಸದರಿ ಅವಧಿಯನ್ನು ದಿನಾಂಕ: 15-03-2026 ರವರೆಗೆ ವಿಸ್ತರಿಸಲಾಗಿರುತ್ತದೆ.

ಆದ್ದರಿಂದ ಆಸಕ್ತರು ದಿನಾಂಕ: 15-03-2026 ರೊಳಗೆ ಕೇಂದ್ರ ಕಛೇರಿಗೆ ಅಥವಾ ಸಂಬಂಧಪಟ್ಟ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಸಮಾಜ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಅರ್ಜಿಗಳನ್ನು ಸಲ್ಲಿಸಲು ಕೋರಿದೆ.

DC Shivamogga ಕ್ರೀಡೆಯಲ್ಲಿ ಸ್ಪರ್ಧಾಮನೋಭಾವ ಮುಖ್ಯ, ಸೋಲು-ಗೆಲುವು ಅಲ್ಲ : ಪ್ರಭುಲಿಂಗ ಕವಳಿಕಟ್ಟಿ

0

DC Shivamogga ಸೋಲು-ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಭಾಗವಹಿಸುವಿಕೆ ಮತ್ತು ಸ್ಪರ್ಧಾ ಮನೋಭಾವ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.
ಅವರು ರಾಜ್ಯ ಸರ್ಕಾರಿ ನೌಕರರ ಸಂಘವು ಜೆ.ಎನ್.ಎನ್.ಸಿ.ಇ. ತಾಂತ್ರಿಕ ಮಹಾವಿದ್ಯಾಲಯದ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಇಲಾಖೆಗಳ ನಡುವೆ ನಡುವಿನ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಟೆನ್ನಿಸ್‌ಬಾಲ್‌ ಕ್ರಿಕೇಟ್‌ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಎಲ್ಲರಲ್ಲೂ ಸುಪ್ತವಾಗಿರುವ ಪ್ರತಿಭೆಯ ಅನಾವರಣಕ್ಕೆ ಅವಕಾಶ ಇದಾಗಲಿದೆ ಎಂದ ಅವರು, ದಿನನಿತ್ಯ ತಮ್ಮ ದೈನಂದಿನ ಒತ್ತಡದ ಕೆಲಸ-ಕಾರ್ಯಗಳ ಮದ್ಯೆ ದಿನಕಳೆಯುವ ನೌಕರರು ಎರಡು ದಿನಗಳ ಕಾಲವಾದರೂ ದೈನಂದಿನ ಒತ್ತಡದಿಂದ ಹೊರಬರಬಹುದಾಗಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ಘಟಕವು ಶಿವಮೊಗ್ಗದಲ್ಲಿ ಸದಾ ಕ್ರಿಯಾಶೀಲವಾಗಿರುವುದು ಸಂಘದ ಅ‍ಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಕಾಲಿಕ ಚಿಂತನೆ, ಪಾಲ್ಗೊಳ್ಳುವಿಕೆ, ಕಾರ್ಯಕ್ರಮಗಳ ಆಯೋಜನೆ ಉತ್ಕೃಷ್ಟವಾದುದಾಗಿದೆ. ಸಂಘದ ಪದಾಧಿಕಾರಿಗಳೊಂದಿಗೆ ಎಲ್ಲಾ ಇಲಾಖಾ ನೌಕರರು ಪಾಲ್ಗೊಳ್ಳುತ್ತಿರುವುದು ಸಂಭ್ರಮದ ವಾತಾವರಣವನ್ನು ನಿರ್ಮಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ಅವರು ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವ ಎಲ್ಲರೂ ಸ್ಪರ್ಧಾ ಮನೋಭಾವದಿಂದ ಕ್ರೀಡೆಯಲ್ಲಿ ಪಾಲ್ಗೊಂಡು ಕ್ರೀಡೆಯನ್ನು ಸಂಭ್ರಮಿಸುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಬಿ.ನಿಖಿಲ್‌ಅವರು ಮಾತನಾಡಿ, ವಿವಿಧ ಇಲಾಖಾ ಅಧಿಕಾರಿ-ಸಿಬ್ಬಂಧಿಗಳ ನಡುವೆ ಸೌಹಾರ್ಧಯುತವಾಗಿ ಮತ್ತು ಸ್ನೇಹಪೂರ್ವಕವಾಗಿ ಕ್ರಿಕೇಟ್‌ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದು ಇಲಾಖೆ-ಇಲಾಖೆಗಳ ಮತ್ತು ಅಧಿಕಾರಿಗಳ ನಡುವೆ ಸ್ನೇಹ ಸಂಬಂಧಗಳು ಏರ್ಪಟ್ಟು ತಮ್ಮ ಕಾರ್ಯಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುವಲ್ಲಿ ಈ ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದರು.
ಕ್ರೀಡಾಕೂಟವು ಸ್ಪರ್ಧಾತ್ಮಕವಾಗಿರುವಂತೆ ಸಂತೋಷದಾಯಕವೂ ಆಗಿರಲಿ. ಎಲ್ಲಾ ನೌಕರರು ಸಕ್ರಿಯವಾಗಿ ಆಟದಲ್ಲಿ ಪಾಲ್ಗೊಳ್ಳುವಂತೆ ಕ್ರೀಡೆ ಆಯೋಜನೆ ಮಾಡಿರುವುದು ನೌಕರರ ನಡುವೆ ಉತ್ತಮ ಬಾಂಧವ್ಯಕ್ಕೆ ಕಾರಣವಾಗಲಿದೆ ಮಾತ್ರವಲ್ಲ ಪರಸ್ಪರರಲ್ಲಿ ಸೌಹಾರ್ಧ ವಾತಾವರಣ ನಿರ್ಮಾಣಗೊಳ್ಳಲಿದೆ. ಇದು ತಮ್ಮ ಕಾರ್ಯಕ್ಷೇತ್ರದಲ್ಲಿ ಎಂದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಇಂತಹ ವಿಶೇಷ ಕಾರ್ಯಕ್ರಮಗಳು ರೂಪಿಸಿ ಅನುಷ್ಠಾನಕ್ಕೆ ತರುವಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಶಿವಮೊಗ್ಗ ಜಿಲ್ಲಾ ಘಟಕ ಮೊದಲ ಪಂಕ್ತಿಯಲ್ಲಿದೆ ಎಂದ ಅವರು ದೇಶದಲ್ಲಿಯೂ ಅಗ್ರಪಂಕ್ತಿಯಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದರು.
DC Shivamogga ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆ ಮತ್ತು ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನೌಕರರು ಮಾನಸಿಕ ಒತ್ತಡದಿಂದ ಹೊರಬರಲು ಸಹಕಾರಿಯಾಗಿದೆ. ಆಗಾಗ್ಗೆ ಸವಾಲು-ಸಮಸ್ಯಾತ್ಮಕ ಸಂದರ್ಭಗಳನ್ನು ಎದುರಿಸಿ, ಖಾಲಿ ಹುದ್ದೆಗಳು, ನೌಕರ-ಸಿಬ್ಬಂಧಿಗಳ ಕೊರತೆಯ ನಡುವೆಯೂ ಸಕಾಲದಲ್ಲಿ ಕಾರ್ಯನಿರ್ವಹಿಸುಲ್ಲಿ ನೌಕರರು ಸಮರ್ಥರಾಗಿದ್ದಾರೆ. ಎಲ್ಲಾ ನೌಕರರು ತಮ್ಮ ಕಾರ್ಯಕ್ಷೇತ್ರದಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಸರ್ಕಾರಕ್ಕೆ ಉತ್ತಮ ಹೆಸರು ಬರಲಿದೆ ಎಂದರು.
ಈ ಕ್ರೀಡಾಕೂಟದಿಂದಾಗಿ ನೌಕರರ ನಡುವೆ ಸಮನ್ವಯತೆ, ಸೌಹಾರ್ಧತೆ ಮತ್ತು ಸಹಭಾಳ್ವೆ ಮೂಡಲಿದೆ ಅದರ ಮೂಲಕ ನಾವೆಲ್ಲರೂ ಏಕತೆಯಿಂದ ಇರಲು ಸಾಧ್ಯವಾಗಿದೆ ಎಂದ ಅವರು, ಎಲ್ಲಾ ನೌಕರರು ಜಿಲ್ಲಾಡಳಿತದೊಂದಿಗೆ ಸೌಹಾರ್ಧಯುತವಾಗಿ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಮನವಿ ಮಾಡಿದರು.
ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ರಾಜ್ಯದ ಅಲ್ಲಲ್ಲಿ ಸಾರ್ವಜನಿಕರು ಹಲ್ಲೆ ಮಾಡಿರುವ ಅಹಿತಕರ ಘಟನೆಗಳು ಕೇಳಿ ಬರುತ್ತಿವೆ. ಇದನ್ನು ನಿಯಂತ್ರಿಸುವಲ್ಲಿ ಕಾರ್ಯನಿರತ ಅಧಿಕಾರಿ-ಸಿಬ್ಬಂಧಿಗಳ ಮೇಲೆ ಹಲ್ಲೆಗೆ ಮುಂದಾಗುವುದು, ಅವಾಚ್ಯ ಶಬ್ಧಗಳಿಂದ ನಿಂದಿಸುವುದು, ಇತ್ಯಾದಿಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ಹೊಸದಾದ ಕಾಯ್ದೆಯನ್ನು ಮುಂದಿನ ಕ್ಯಾಬಿನೆಟ್‌ನಲ್ಲಿ ಜಾರಿಗೊಳಿಸಲಿದೆ. ಅದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹಾಗೂ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಇದರಿಂದಾಗಿ ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸೌಹಾರ್ಧಯುತವಾಗಿ ವ್ಯವಹರಿಸಲಿದ್ದಾರೆ ಎಂದರು.
ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿವಿಧ ಇಲಾಖೆಗಳ 32 ಟೀಮ್‌ಗಳ ಸದಸ್ಯರು ಸಕ್ರಿಯವಾಗಿ ಭಾಗವಹಿಸಿರುವುದು ಸಂತಸವೆನಿಸಿದೆ. 2ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದಲ್ಲಿ ಎಲ್ಲರೂ ಸೌಹಾರ್ಧಯುತವಾಗಿ, ಶಾಂತಿಯುತವಾಗಿ ವರ್ತಿಸಬೇಕು. ಅಲ್ಲದೇ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ-ಸಿಬ್ಬಂಧಿಗಳು ಮಾತ್ರ ಆಟದಲ್ಲಿ ಪಾಲ್ಗೊಳ್ಳಬೇಕು. ವಿನಃ ಇತರೆಯವರು ಭಾಗವಹಿಸಿ, ಅನಗತ್ಯ ಚರ್ಚೆಗೆ ಅವಕಾಶ ಮಾಡುವಂತಾಗಬಾರದು ಎಂದರು.
ಕಾರ್ಯಕ್ರಮದಲ್ಲಿ ಶಿವಪ್ರಕಾಶ್‌, ಯುವಕುಮಾರ್‌, ಉಪವಿಭಾಗಾಧಿಕಾರಿ ಸತ್ಯನಾರಾಯಣ್‌, ಆರ್.ಪಾಪಣ್ಣ, ಕೊಟ್ರೇಶ್‌, ರಂಗನಾಥ್‌, ಡಾ|| ಹಿರೇಮಠ್, ರವಿ, ಸುಮತಿ, ದಿನೇಶ್‌ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಂಟ್ರಿಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಆಯ್ಕೆ

0

ಶಿವಮೊಗ್ಗ ನಗರದ ಪ್ರತಿಷ್ಠಿತ ಕಂಟ್ರಿಕ್ಲಬ್‌ನ 2026-2028ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಿ.ಎನ್. ಪ್ರಕಾಶ್, ಉಪಾಧ್ಯಕ್ಷರಾಗಿ ಎನ್. ಭೀಮಣ್ಣ, ಕಾರ್‍ಯದರ್ಶಿಯಾಗಿ ಚೂಡಾಮಣಿ ಪವಾರ್, ಸಹಕಾರ್‍ಯದರ್ಶಿಯಾಗಿ ರಾಜೇಶ್ ಸುರಗಿಹಳ್ಳಿ ಹಾಗೂ ಖಜಾಂಚಿಯಾಗಿ ಜಿ. ಗಿರೀಶ್ ಅವರು ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಪಾಲ್ಗೊಂಡು ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಕಂಟ್ರಿಕ್ಲಬ್‌ನ ನೂತನ ನಿರ್ದೇಶಕರು ಉಪಸ್ಥಿತರಿದ್ದರು

International Women’s Day ಮಾ.08 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

0

International Women’s Day ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ – 2026 ಕಾರ್ಯಕ್ರಮವನ್ನು ಮಾ.8 ರ ಬೆಳಿಗ್ಗೆ 10.30 ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಸಂಸದರು, International Women’s Day ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಅಧಿಕಾರಿಗಳು, ಪಾಲ್ಗೊಳ್ಳುವರು. ರಾಷ್ಟçಕವಿ ಡಾ.ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಟಾನದ ಅಧ್ಯಕ್ಷರು ಹಾಗೂ ಕಮಲಾ ನೆಹರು ಮಹಿಳಾ ಕಾಲೇಜಿನ ನಿ.ಉಪನ್ಯಾಸಕರಾದ ಪ್ರೊ.ಕಿರಣ್ ಆರ್ ದೇಸಾಯಿ ವಿಶೇಷ ಉಪನ್ಯಾಸ ನೀಡುವರು.

Sahyadri Narayana Multi Specialty Hospital ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣೆ ಮತ್ತು ಸಲಹಾ ಶಿಬಿರ

0

Sahyadri Narayana Multi Specialty Hospital ಶಿವಮೊಗ್ಗ ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇದೇ ಸೋಮವಾರ, ಮಾರ್ಚ್ 9 ರಂದು ಸಾರ್ವಜನಿಕರಿಗಾಗಿ ಉಚಿತ ಮೂಳೆ ಸಾಂದ್ರತೆ (BMD) ತಪಾಸಣೆ ಮತ್ತು ವೈದ್ಯಕೀಯ ಸಲಹಾ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರವು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಆಸ್ಪತ್ರೆಯ ಆವರಣದಲ್ಲಿ ನಡೆಯಲಿದ್ದು, ಶಿಬಿರದಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ನೋಂದಣಿ, ಬಿಎಂಡಿ ಟೆಸ್ಟ್ (BMD Test) ಮತ್ತು ತಜ್ಞ ವೈದ್ಯರ ಸಮಾಲೋಚನೆ ಸಂಪೂರ್ಣ ಉಚಿತವಾಗಿರುತ್ತದೆ.

ಈ ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಚೇತನ್ ಎಂ.ಎಲ್ ಮತ್ತು ಡಾ. ನಾಗೇಂದ್ರ ಪ್ರಸಾದ್ ಎಂ.ಆರ್, ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ರಾಘವೇಂದ್ರ ಭಟ್ ಮತ್ತು ಡಾ. ರಶ್ಮಿ ಸಿ. ಹಂಚಿನಾಳ್ ಅವರು ಲಭ್ಯವಿದ್ದು, ರೋಗಿಗಳಿಗೆ ಉಚಿತ ತಪಾಸಣೆ ಮತ್ತು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ.

ಜನರಲ್ಲಿ, ವಿಶೇಷವಾಗಿ ಹಿರಿಯ ನಾಗರಿಕರು ಮತ್ತು ಮಹಿಳೆಯರಲ್ಲಿ ಮೂಳೆಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಆಸ್ಟಿಯೋಪೊರೋಸಿಸ್ (ಮೂಳೆ ಸವೆತ) ನಂತಹ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

Sahyadri Narayana Multi Specialty Hospital ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ ಆಸ್ಪತ್ರೆಯನ್ನು ಸಂಪರ್ಕಿಸಬಹುದು.

ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

0

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಹಾಗೂ ಕೆಲವು ಪಂಚಾಯ್ತಿಗಳನ್ನು ಗ್ರೇಡ್ -2 ರಿಂದ ಗ್ರೇಡ್-1ಕ್ಕೆ ಮೇಲ್ದರ್ಜೆಗೇರಿಸಲಾಗಿದೆ. ಅಂತಹ ಪಂಚಾಯಿತಿಗಳಿಗೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು https://sevasindhuservices.karnataka.gov.in / ರ ಮೂಲಕ ಮಾ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.