Sunday, April 12, 2026
Sunday, April 12, 2026
Home Blog Page 690

CM Siddharamaiah ಐದು ಗ್ಯಾರಂಟಿಗಳು ನಿಲ್ಲುವುದಿಲ್ಲ.- ಸಿದ್ಧರಾಮಯ್ಯ

0

CM Siddharamaiah ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ, ಈ ಬಗ್ಗೆ ಯಾವುದೇ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ x ಖಾತೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಲೋಕಸಭೆಯಲ್ಲಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯಷ್ಟು ಫಲಿತಾಂಶ ಬಂದಿಲ್ಲ. ಒಂದರಿಂದ 9 ಸ್ಥಾನಕ್ಕೇರಿದ್ದು, ಕಳೆದ ಬಾರಿಗಿಂತ 13% ಹೆಚ್ಚು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ ಆದರೆ ನಿರೀಕ್ಷೆಯಂತೆ ಆಗಿಲ್ಲ.

CM Siddharamaiah ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣದಲ್ಲಿ ದೂರು ನೀಡಿರುವವರು ಯಾರು? ಸರ್ಕಾರ ಅಲ್ಲ, ಖಾಸಗಿ ವ್ಯಕ್ತಿ ದೂರು ನೀಡಿದ್ದು ಹೌದಲ್ವಾ? ಹೀಗಿರುವಾಗ ದ್ವೇಷದ ರಾಜಕಾರಣ ಎಲ್ಲಿದೆ? ಕಾನೂನು ರೀತಿ ಕೆಲಸ ಮಾಡುವ ಪೋಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

H.D.Kumarswami ಸಂಸದರಾಗಿ ಗೆದ್ದ ಎಚ್ ಡಿಕೆ & ಬೊಮ್ಮಾಯಿ ಅವರಿಂದ ಶಾಸಕ ಸ್ಥಾನಕ್ಕೆ ರಾಜಿನಾಮೆ

0

H.D.Kumarswami ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದವ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು.
ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿರುವ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೊಮ್ಮಾಯಿ ಸತತ ನಾಲ್ಕನೇ ಬಾರಿಗೆ ಹಾವೇರಿ ಶಿಗ್ಗಾಂವಿ- ಸವಣೂರು ಮತ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಹಾಗೆಯೇ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಹೆಚ್.ಡಿ ಕುಮಾರಸ್ವಾಮಿ, ಇದೀಗ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಗೆದ್ದು ಕೇಂದ್ರ ಸಚಿವರಾಗಿದ್ದಾರೆ. ಈ ಹಿನ್ನಲೆ ಚನ್ನಪಟ್ಟಣ ಕ್ಷೇತ್ರ ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ.

ಹೆಚ್ಡಿಕೆ ಅವರು ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದು, ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಂತರ ವಿಧಾನಸೌಧಕ್ಕೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

H.D.Kumarswami ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಇಬ್ಬರೂ ನಾಯಕರು ರಾಜೀನಾಮೆ ಸಲ್ಲಿಸಿದರು. ಈ ವೇಳೆ ಬೊಮ್ಮಾಯಿ ಹಾಗೂ ಹೆಚ್ಡಿಕೆ ಅವರಿಗೆ ಖಾದರ್ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಶಾಸಕರಾದ ಜಿ.ಟಿ ದೇವೇಗೌಡ, ಮುನಿರಾಜು, ಡಾ. ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಮಾರುತಿ ಮೂಳೆ, ಬೋಜೆಗೌಡ ಉಪಸ್ಥಿತರಿದ್ದರು.

Lok Sabha Election ರಾಮನೇ ಅಹಂಕಾರಿಗಳನ್ನ ಕಟ್ಟಿ ಹಾಕಿದ್ದಾನೆ- ಆರ್ ಎಸ್ ಎಸ್ ನಾಯಕ ಇಂದ್ರೇಶ್ ಕುಮಾರ್

0

Lok Sabha Election ಆರ್ ಎಸ್ ಎಸ್ ನಾಯಕ ಇಂದ್ರೇಶ್ ಕುಮಾರ್ ಲೋಕಸಭೆ ಚುನಾವಣೆಯ ಫಲಿತಾಂಶಗಳ ಕುರಿತು ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಬಿಜೆಪಿಯ ಅಹಂಕಾರದ ವಿರುದ್ಧ ಟೀಕೆಯನ್ನು ಮಾಡಿದ್ದಾರೆ. ಅಹಂಕಾರಿಗಳನ್ನು ರಾಮನು 241ಕ್ಕೆ ನಿಲ್ಲಿಸಿದ್ದಾನೆ ಎಂದು ಹೇಳಿದ್ದಾರೆ.
ಕನೋಟಾದ ಜೈಪುರ ಬಳಿ ರಾಮರಥ ಅಯೋಧ್ಯೆ ಯಾತ್ರೆ ದರ್ಶನ ಪೂಜಾನ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಆರೆಸ್ಸೆಸ್‌ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಯಾವುದೇ ಪಕ್ಷಗಳನ್ನು ಸ್ಪಷ್ಟವಾಗಿ ಹೆಸರಿಸಲಿಲ್ಲ ಆದರೆ ಅವರ ವರ್ತನೆಗಳು ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸುತ್ತದೆ ಎಂದು ಹೇಳಿದ್ದಾರೆ.
ಭಗವಾನ್ ರಾಮನ ಭಕ್ತಿಯನ್ನು ಮಾಡಿದ ಪಕ್ಷವನ್ನು 241ರಲ್ಲಿ ನಿಲ್ಲಿಸಲಾಯಿತು ಆದರೆ ಅದನ್ನು ಅತಿದೊಡ್ಡ ಪಕ್ಷವನ್ನಾಗಿ ಮಾಡಲಾಯಿತು ಎಂದು ಅವರು ಲೋಕಸಭೆ ಸ್ಥಾನಗಳಲ್ಲಿ 240 ಸ್ಥಾನಗಳನ್ನು ಪಡೆದ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಹೇಳಿದ್ದಾರೆ.
Lok Sabha Election ರಾಮನಲ್ಲಿ ನಂಬಿಕೆಯಿಲ್ಲದವವರನ್ನು ಒಟ್ಟಿಗೆ 234ರಲ್ಲಿ ನಿಲ್ಲಿಸಲಾಯಿತು ಎಂದು ಅವರು ಹೇಳಿದ್ದು, ಸ್ಪಷ್ಟವಾಗಿ ಇದು ಅವರು ಇಂಡಿಯಾ ಮೈತ್ರಿಕೂಟವನ್ನು ಉಲ್ಲೇಖಿಸಿ ಹೇಳಿರುವುದಾಗಿದೆ. ಪ್ರಜಾಪ್ರಭುತ್ವದಲ್ಲಿ ರಾಮರಾಜ್ಯದ ‘ವಿಧಾನ’ ನೋಡಿ; ರಾಮನ ಪೂಜೆ ಮಾಡಿದವರು ಕ್ರಮೇಣ ಅಹಂಕಾರಕ್ಕೆ ತಿರುಗಿದರು, ಆ ಪಕ್ಷವು ದೊಡ್ಡ ಪಕ್ಷವಾಗಿ ಹೊರಹೊಮ್ಮಿತು, ಆದರೆ ಅವರ ದುರಹಂಕಾರದಿಂದ ನೀಡಬೇಕಾಗಿದ್ದ ಅಧಿಕಾರವನ್ನು ದೇವರು ತಡೆದನು ಎಂದು ಹೇಳಿದ್ದಾರೆ.
ರಾಮನನ್ನು ವಿರೋಧಿಸಿದವರಿಗೆ ಯಾರಿಗೂ ಅಧಿಕಾರ ನೀಡಲಾಗಿಲ್ಲ, ಅವರಿಗೆ ಎರಡನೇ ಸ್ಥಾನ ದೊರೆಯಿತು. ದೇವರ ನ್ಯಾಯವು ನಿಜ ಮತ್ತು ಆನಂದದಾಯಕವಾಗಿದೆ ಎಂದು ಹೇಳಿದ್ದಾರೆ. ರಾಮನನ್ನು ಆರಾಧಿಸುವವರು ವಿನೀತರಾಗಿರಬೇಕು ಮತ್ತು ರಾಮನನ್ನು ವಿರೋಧಿಸಿದವರನ್ನು ರಾಮನೇ ನೋಡಿಕೊಂಡ. ರಾಮ ದೇವರು ಯಾರಿಗೂ ನೋವುಂಟು ಮಾಡುವುದಿಲ್ಲ, ಎಲ್ಲರಿಗೂ ನ್ಯಾಯ ಒದಗಿಸುತ್ತಾರೆ. ರಾಮ ಯಾವತ್ತೂ ನ್ಯಾಯದ ಪರವಾಗಿದ್ದಾರೆ ಎಂದು ಇಂದ್ರೇಶ್‌ ಕುಮಾರ್‌ ಹೇಳಿದ್ದಾರೆ.
ಭಗವಾನ್ ರಾಮನು ತಾರತಮ್ಯ ಮಾಡುವುದಿಲ್ಲ ಅಥವಾ ಶಿಕ್ಷಿಸುವುದಿಲ್ಲ. ರಾಮನು ಯಾರಿಗೂ ದುಃಖವನ್ನುಂಟು ಮಾಡುವುದಿಲ್ಲ. ರಾಮನು ಎಲ್ಲರಿಗೂ ನ್ಯಾಯವನ್ನು ಒದಗಿಸುತ್ತಾನೆ. ಅವನು ಯಾವಾಗಲೂ ನ್ಯಾಯಯುತನಾಗಿರುತ್ತಾನೆ ಮತ್ತು ನ್ಯಾಯದಿಂದಲೇ ಮುಂದುವರಿಯುತ್ತಾನೆ. ಭಗವಾನ್ ರಾಮನು ಜನರನ್ನು ರಕ್ಷಿಸಿದನು ಮತ್ತು ರಾವಣನಿಗೆ ಒಳ್ಳೆಯದನ್ನು ಮಾಡಿದನು ಎಂದು ಕುಮಾರ್ ಹೇಳಿದ್ದಾರೆ.

Kannada Development Authority ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅಧಿಕಾರ ಸ್ವೀಕಾರ

0

Kannada Development Authority ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ಪ್ರಾಧಿಕಾರದ ಮುಖ್ಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

Kannada Development Authority ರಾಜ್ಯ ಸರ್ಕಾರವು ಮಾರ್ಚ್‌ 16,2024ರಂದು ಡಾ. ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಸರ್ಕಾರಿ ಆದೇಶ ಪ್ರಕಟಗೊಂಡ ದಿನದಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಅವರು ಇಷ್ಟು ದಿನ ಅಧಿಕಾರ ಸ್ವೀಕಾರ ಮಾಡಿರಲಿಲ್ಲ.
“ಎಲ್ಲಾ ವಲಯಗಳಲ್ಲೂ ಕನ್ನಡ ಬಳಕೆ ಮತ್ತು ಅನುಷ್ಠಾನಕ್ಕಾಗಿ ಹಾಗೂ ಕನ್ನಡದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಪ್ರಾಧಿಕಾರ ನಿರಂತರವಾಗಿ ಶ್ರಮಿಸಲಿದೆ” ಎಂದು ಅಧಿಕಾರ ಸ್ವೀಕರಿಸಿದ ಬಳಿಕ ಪುರುಷೋತ್ತಮ ಬಿಳಿಮಲೆ ಅವರು ಪ್ರಾಧಿಕಾರದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

Kuvempu University ಯೋಗಾಭ್ಯಾಸದಿಂದ ದೈಹಿಕ,ಮಾನಸಿಕ & ಆಧ್ಯಾತ್ಮಿಕ ಪ್ರಯೋಜನ- ಪ್ರೊ.ಶರತ್ ಅನಂತಮೂರ್ತಿ

0

Kuvempu University ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿದೆ ಹೀಗಾಗಿ ದಿನನಿತ್ಯ ಯೋಗ ಅಭ್ಯಾಸ ಮಾಡಿಕೊಳ್ಳಬೇಕು ಎಂದು ಕುವೆಂಪು ವಿವಿಯ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ  ವಿವಿಯ ವಿದ್ಯಾರ್ಥಿಗಳಿಗೆ ಎಂಟು ದಿನಗಳ ಕಾಲ ’ಯೋಗ ಅರಿವು ಕಾರ್ಯಕ್ರಮ’ವನ್ನು ಆಯೋಜಿಸಲಾಗಿದ್ದು ಕಾರ್ಯಕ್ರಮ ಉದ್ಘಾಟಿಸಿ ಕುಲಪತಿ ಮಾತನಾಡಿದರು.

ಯೋಗಭ್ಯಾಸವನ್ನು ದಿನನಿತ್ಯದ ಚಟುವಟಿಕೆಯ ಭಾಗವಾಗಿ ಅಳವಡಿಸಿಕೊಳ್ಳುವುದರಿಂದ ಹಲವಾರು ಪ್ರಯೋಜನಗಳು ಇರುವವೆಂದು ಅವರು ತಿಳಿಸಿದರು.
ಯೋಗಾಭ್ಯಾಸವು ಮಾನಸಿಕ ದೈಹಿಕ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ಆಂತರಿಕ ಶಾಂತಿಯನ್ನು ವೃದ್ಧಿಸುತ್ತದೆ ಹಾಗೂ ನಮ್ಮ ಸಾಮರ್ಥ್ಯಗಳ ಹರಿಯವನ್ನು ತಿಳಿಸಿಕೊಡುತ್ತದೆ ಎಂದು ಹೇಳಿದರು.

Kuvempu University ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ಮಂಜುನಾಥ್ ಎ ಎಲ್,  ಪರೀಕ್ಷಾಂಗ ಕುಲಸಚಿವ ಪ್ರೊ. ಗೋಪಿನಾಥ್ ಎಸ್ ಎಂ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್ ಡಿ ವಿರೂಪಾಕ್ಷ, ಡಾ. ಎಸ್ ಎಂ ರವೀಂದ್ರ ಗೌಡ ಉಪಸ್ಥಿತರಿದ್ದರು.

ಯೋಗ ಅರಿವು ಕಾರ್ಯಕ್ರಮದಲ್ಲಿ ವಿವಿಯ ವಿವಿಧ ವಿಭಾಗಗಳ ನೂರಕ್ಕೂ ಅಧಿಕ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

International Yoga Day ಜೂನ್ 21 ರ ಅಂತಾರಾಷ್ಟ್ರೀಯ ಯೋಗದಿನಾಚರಣೆಗೆ ಸಕಲ ಸಿದ್ಧತೆ- ಸಿದ್ದಲಿಂಗರೆಡ್ಡಿ

0

International Yoga Day ಜೂನ್ 21 ರಂದು ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಂಡಿದ್ದು, ಯೋಗ ದಿನದ ಯಶಸ್ವಿ ಆಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜೂನ್ 15 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಯೋಗ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜೂ.21 ಕ್ಕೆ ‘ಯೋಗ ಫಾರ್ ಸೆಲ್ಫ್ ಆಂಡ್ ಸೊಸೈಟಿ’,ಘೋಷವಾಕ್ಯದಡಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳ್ಳಿಗೆ 6.30 ಕ್ಕೆ ವಿದ್ಯಾರ್ಥಿಗಳು, ಸ್ವಯಂ ಸೇವಕರು, ಸಾರ್ವಜನಿಕರು ಮತ್ತು ಅಧಿಕಾರಿಗಳು ಸೇರಿದಂತೆ 500 ಜನರು ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳುವರು.

ಜೂನ್ 21 ರ ಬೆಳಿಗ್ಗೆ 6.30 ಕ್ಕೆ ಎಲ್ಲರೂ ಒಂದೆಡೆ ಸೇರಿ, ಬೆಳಿಗ್ಗೆ 6.45 ರಿಂದ 7 ಗಂಟೆವರೆಗೆ ಯೋಗ ಗೀತೆ, ಬೆಳಿಗ್ಗೆ 7 ರಿಂದ 7.45 ರವರೆಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ವಯ ಯೋಗ ಪ್ರದರ್ಶನ, ಬೆಳಿಗ್ಗೆ 8 ರಿಂದ 8.30 ರವರೆಗೆ ವೇದಿಕೆ ಕಾರ್ಯಕ್ರಮ. 8.30 ರಿಂದ 9.45 ರವರೆಗೆ ಉಪನ್ಯಾಸ ಮತ್ತು 9.20 ಕ್ಕೆ ಉಪಹಾರ ವ್ಯವಸ್ಥೆ ಇರುತ್ತದೆ.

ಪೊಲೀಸ್ ಇಲಾಖೆಯವರು ಕಾರ್ಯಕ್ರಮ ನಡೆಯುವ ಸ್ಥಳದ ಭದ್ರತೆ , ವಾಹನ ದಟ್ಟಣೆ ನಿರ್ವಹಣೆ, ಹಾಗೂ ಮಹಾನಗರಪಾಲಿಕೆ ವತಿಯಿಂದ ಕುಡಿಯುವ ನೀರು ಸ್ವಚ್ಚತಾ ವ್ಯವಸ್ಥೆ ಮತ್ತು ಮಾಹಿತಿ ಫಲಕ ಹಾಕಲು ಸಹಕರಿಸಬೇಕು. ಆಯುರ್ವೇದ ಮಹಾವಿದ್ಯಾಲಯ ಹಾಗೂ ಡಿಡಿಪಿಯು ಅವರು ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಬೇಕು. ಹಾಗೂ ಯೋಗ ದಿನಾಚರಣೆಗೆ ಅಗತ್ಯವಾದ ಇತರೆ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

International Yoga Day ಜಿಲ್ಲಾ ಆಯುಷ್ ಅಧಿಕಾರಿಯಾದ ಡಾ. ಲಿಂಗರಾಜ ಎಸ್ ಹಿಂಡಸಗಟ್ಟಿ ಮಾತನಾಡಿ, ಜೂ 10 ರಿಂದ 20 ವರೆಗೆ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಯೋಗ ಅಭ್ಯಾಸ ಆಯೋಜಿಸಲಾಗುತ್ತಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಯಲ್ಲಿ ಏಕಕಾಲದಲ್ಲಿ ಯೋಗಾಭ್ಯಾಸ ಮತ್ತು ಆಯುಷ್ ಅರಿವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಪಿಸಿಓಡಿ ಮತ್ತು ಥೈರಾಡ್ ನಿರ್ವಹಣೆ ಕುರಿತು ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬ ಪರಿಕಲ್ಪನೆಯಡಿ ಮಹಿಳೆಯರಿಗೆ ಯೋಗಾಭ್ಯಾಸ ನಡೆಸಲಾಗಿದೆ ಎಂದು ಮಾಹಿತಿ ಒದಗಿಸಿದರು.

ಸಭೆಯಲ್ಲಿ ಡಿ.ಹೆಚ್.ಒ ಡಾ.ನಟರಾಜ್, ಡಿಡಿಪಿಯು ಕೃಷ್ಣಪ್ಪ, ಪೋಲಿಸ್ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಯೋಗ ಸಂಸ್ಥೆಗಳ ಪದಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Adichunchanagiri Education Trust ವಿದ್ಯಾರ್ಥಿಗಳು ,ಶಿಕ್ಷಕರ ಮತ್ತು ಪೋಷಕರ ಮಾತನ್ನು ಪಾಲಿಸಿದಾಗ ಅವರಿಗೆ ಉತ್ತಮ ಭವಿಷ್ಯ- ಶ್ರೀಪ್ರಸನ್ನನಾಥಶ್ರೀ

0

Adichunchanagiri Education Trust ವಿದ್ಯಾರ್ಥಿಗಳು ಬದುಕಿನ ರಕ್ಷಣೆಯ ಬಗ್ಗೆ ಹಾಗೂ ತಮ್ಮನ್ನು ಸಾಕಿ ಸಲಹಿದ ತಂದೆ ತಾಯಿಗಳ ಬಗ್ಗೆಯೂ ಕೂಡ ಚಿಂತನೆ ನಡೆಸಬೇಕೆಂದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪರಿಚಯ ಕಾರ್ಯಕ್ರಮ ಹಾಗೂ ಕಳೆದ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು
ವಿದ್ಯಾರ್ಥಿಗಳು,ಶಿಕ್ಷಕರು ಹಾಗೂ ಪೋಷಕರು ಹೇಳುವಂತಹ ಮಾತನ್ನು ಪಾಲಿಸಿದಾಗ ಉತ್ತಮ ಭವಿಷ್ಯವನ್ನು ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ತಾನು ಓದಲು ಕೂರುವ ಸ್ಥಳದಲ್ಲಿ ವೇಳಾ ಪಟ್ಟಿ, ದಿನಚರಿಯ ಪಟ್ಟಿಯನ್ನು ಸದಾ ಕಣ್ಣಿಗೆ ಕಾಣುವಂತೆ ಇರಿಸಿಕೊಳ್ಳಬೇಕು. ತರಗತಿಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದ ಸಹಪಾಠಿಯನ್ನು ಕಂಡು ಅಸೂಯೆ ಪಡದೆ ಅವನ ಓದಿನ ವಿಧಾನವನ್ನು ಅರಿತು ತಾನೂ ಅದನ್ನು ಕ್ರಮೇಣ ಅಳವಡಿಸಿಕೊಳ್ಳಬಹುದು.ಓದುವಾಗ ಏಕಾಗ್ರತೆ ಹೆಚ್ಚಲು ತನಗೆ ತಾನೆ ಸಕಾರತ್ಮಾಕವಾದ ಅಂಶಗಳನ್ನು ಹೇಳಿಕೊಂಡು ಓದಲು ಕೂರುವ ಮುನ್ನ ಎಲ್ಲವನ್ನು ಬಳೆಯಲ್ಲಿರಿಸಿಕೊಂಡು ಒಂದೆಡೆ ಏಕಾಗ್ರತೆಯಿಂದ ಕೂತು ಕಲಿಯಲು ಪ್ರಯತ್ನಿಸಬೇಕು. 10 ನಿಮಿಷಗಳ ನಂತರ ಪುಸ್ತಕವನ್ನು ಮುಚ್ಚಿ ಅಲ್ಲಿಯವರೆಗೆ ಓದಿದ್ದನ್ನು ಮರುಕಳಿಸಬೇಕು.

ಪರೀಕ್ಷೆಯ ಸಮಯದಲ್ಲಾಗಲಿ ಇತರ ದಿನಗಳಲ್ಲಾಗಲಿ, ವಿದ್ಯಾರ್ಥಿ 8 ಗಂಟೆಗಳ ನಿದ್ರೆ ಅತ್ಯಾವಶ್ಯಕ, ಪರೀಕ್ಷೆಯ ಸಮಯದಲ್ಲಿ ಓದಿನ ಜೊತೆಗೆ ನಿದ್ರೆಯೂ ಇರಬೇಕು. ಪೋಷಕರು ಮಕ್ಕಳನ್ನು ವಿನಾಕಾರಣ ದೂಷಿಸುವುದಾಗಲಿ, ಮತ್ತೊಬ್ಬರೊಡನೆ ಹೋಲಿಸಿ ಶಿಕ್ಷಿಸುವುದಾಗಲಿ ಮಾಡಬಾರದು ಎಂದು ಕಿವಿಮಾತು ಹೇಳಿದರು.

Adichunchanagiri Education Trust ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಶೈಕ್ಷಣಿಕ ಸಲಹೆಗಾರರಾದ ಶ್ರೀ ವಿಜಯವಾಮನ್ ಮಾತನಾಡುತ್ತಾ,
ತಂದೆ ತಾಯಿಗಳು ನಿಮ್ಮ ಎಲ್ಲಾ ಬೇಕು ಬೇಡಿಕೆಗಳನ್ನು ಈಡೇರಿಸುತ್ತಾರೆ. ಜೀವನದ ಸಂಧ್ಯಾ ಕಾಲದಲ್ಲಿ ನಿಮಗೆ ಬದುಕು ನೀಡಿದ ತಂದೆ ತಾಯಿಗಳ ರಕ್ಷಣೆ ಹಾಗೂ ಪೋಷಣೆ ನಿಮ್ಮ ಮೇಲಿರುತ್ತದೆ. ಅದನ್ನು ಚಾಚು ತಪ್ಪದೇ ಮಾಡುವುದು ನಿಮ್ಮ ಕರ್ತವ್ಯ ಕೂಡ ಆಗಿರುತ್ತದೆ. ಆದರೆ ಆಧುನಿಕ ಬದುಕಿನಿಂದಾಗಿ ಇಂದು ಎಷ್ಟೋ ತಂದೆ ತಾಯಿಗಳು ವೃದ್ದಾಶ್ರಮ ಸೇರುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬೇವಿನ ಬೀಜವನ್ನು ಬಿತ್ತಿ, ಮಾವಿನ ಫಸಲನ್ನು ನಿರೀಕ್ಷಿಸಲು ಸಾಧ್ಯವಿಲ್ಲವೋ ಅದೇ ರೀತಿ ವಿದ್ಯಾರ್ಥಿಗಳಿಗೆ ಒಳ್ಳೆಯ ಅಂಶಗಳನ್ನು ಬಿತ್ತದೇ ಅವರುಗಳನ್ನು ಒಳ್ಳೆಯವರನ್ನಾಗಿ ರೂಪಿಸುವುದು ಕೂಡ ಕಷ್ಟ ಸಾಧ್ಯ. ಆದ್ದರಿಂದ ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಒಳ್ಳೆಯ ಅಂಶಗಳನ್ನು ಒತ್ತಿ ಒತ್ತಿ ಹೇಳಬೇಕು. ಆ ಮೂಲಕ ವಿದ್ಯಾರ್ಥಿ ಸಮೂಹವನ್ನು ಉತ್ತಮ ಸತ್ಪ್ರಜೆಗಳಾಗಿ ರೂಪಸಿಬೇಕೆಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಗುರುರಾಜ್ಎಸ್. ವಿ., ಗುರುಪುರದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್.ಹೆಚ್, ಮತ್ತು ಗಣ್ಯರು ಹಾಗೂ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

Department of Agriculture ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ಮುಂದುವರಿಕೆಗೆ ಸರ್ಕಾರದ ಅಸಮ್ಮತಿ- ಸಚಿವ ಎಂ.ಬಿ.ಪಾಟೀಲ್

0

Department of Agriculture ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಸಿನಿಮಾ ನಟ ದರ್ಶನ್‌ಗೆ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಸುವುದು ಅಸಾಧ್ಯ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಬಿಜೆಪಿ ಆಡಳಿತಾವಧಿಯಲ್ಲಿ ದರ್ಶನ್‌ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ 2021ರಲ್ಲಿ ನೇಮಕ ಮಾಡಲಾಗಿತ್ತು. ರೈತರ ಹಿತಕ್ಕಾಗಿ ಕೈಗೊಂಡ ಕಾರ್ಯಕ್ರಮಗಳ ಪ್ರಚಾರ, ಕೃಷಿಕರಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ಸಲುವಾಗಿ ಕೃಷಿ ಇಲಾಖೆಯಲ್ಲಿ ರಾಯಭಾರಿಯನ್ನು ನೇಮಕ ಮಾಡಲಾಗಿತ್ತು.
ಆದರೆ ಪ್ರಸ್ತುತ ಕೊಲೆ ಆರೋಪವನ್ನು ಹೊತ್ತಿರುವ ದರ್ಶನ್‌ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಮುಂದುವರಿಸುವುದಕ್ಕೆ ಸರಕಾರ ಅಸಮ್ಮತಿಯನ್ನು ಸೂಚಿಸಿದೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ದರ್ಶನ್‌ಗೆ ವಿಐಪಿ ಸೌಕರ್ಯ ನೀಡಿಲ್ಲ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆಯಾಗುತ್ತದೆ‌ ಎಂದು ಹೇಳಿದ್ದಾರೆ.

Department of Agriculture ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳಹಿಸಿದ್ದಾನೆ ಎಂಬ ಆರೋಪದಲ್ಲಿ ಚಿತ್ರದುರ್ಗದ ಅಪೋಲೋ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸ್ವಾಮಿಯನ್ನು ದರ್ಶನ್‌ ಮತ್ತು ಗ್ಯಾಂಗ್‌ ಅಪಹರಿಸಿ, ಕೊಲೆ ಮಾಡಿ ಕಾಮಾಕ್ಷಿ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಕಸದ ತೊಟ್ಟಿಯಲ್ಲಿ ಎಸೆದು ಹೋಗಿದ್ದರು. ಪ್ರಕರಣದಲ್ಲಿ ಇಲ್ಲಿಯವರೆಗೂ ಬರೋಬ್ಬರಿ 17 ಆರೋಪಿಗಳ ಪೈಕಿ 13 ಜನರನ್ನು ಬಂಧಿಸಲಾಗಿದೆ. ಇನ್ನು ನಾಲ್ವರು ಘಟನೆ ಬಳಿಕ ನಾಪತ್ತೆ ಆಗಿದ್ದರು. ಇದೀಗ ಆ ನಾಲ್ವರ ಪೈಕಿ ಓರ್ವ ಇಂದು ತಾನಾಗಿಯೇ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಕೇಸ್​ನ 8ನೇ ಆರೋಪಿ ಆಗಿರುವ ಆಟೋ ಚಾಲಕ ರವಿಶಂಕರ್​​ ಇಂದು ಚಿತ್ರದುರ್ಗ ಡಿವೈಎಸ್​ಪಿ ಕಚೇರಿಗೆ ಬಂದು ಶರಣಾಗಿದ್ದಾನೆ.

Gujarat High Court ನಟ ಅಮೀರ್ ಖಾನ್ ಪುತ್ರ ಹೀರೋ ಆಗಿರುವ ‘ ಮಹಾರಾಜ್’ ಚಿತ್ರ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ

0

Gujarat High Court ನಟ ಅಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ಅಭಿನಯದ ‘ಮಹಾರಾಜ್’ ಸಿನಿಮಾ ಬಿಡುಗಡೆಗೆ ಗುಜರಾತ್ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಚಲನಚಿತ್ರವು ಜೂನ್ 14 ರಂದು ಟಾಪ್ (OTT) ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿತ್ತು. ನ್ಯಾಯಮೂರ್ತಿ ಸಂಗೀತಾ ಕೆ ವಿಶನ್ ಅವರು ಚಲನಚಿತ್ರದ ಬಿಡುಗಡೆಯನ್ನು ತಡೆಹಿಡಿದು ಮಧ್ಯಂತರ ಆದೇಶವನ್ನು ಹೊರಡಿಸಿದ್ದು, ಈ ಕುರಿತು ಹೆಚ್ಚಿನ ವಿಚಾರಣೆಯನ್ನು ಜೂನ್ 18ಕ್ಕೆ ನಿಗದಿಪಡಿಸಲಾಗಿದೆ.

ಅರ್ಜಿಗಳನ್ನು ಪರಿಗಣಿಸಲಾಗಿದೆ, ಪ್ರತಿವಾದಿಗಳಿಗೆ ನೋಟಿಸ್ ನೀಲಾಗಿದೆ, ಮುಂದಿನ ವಿಚಾರಣೆಯವರೆಗೆ ಪ್ಯಾರಾಗ್ರಾಫ್ 11(ಸಿ) ಪ್ರಕಾರ ಸಿನಿಮಾ ಬಿಡುಗಡೆ ಮಾಡದಂತೆ ನ್ಯಾಯಾಲಯ ಮಧ್ಯಂತರ ನಿರ್ದೇಶನ ನೀಡಿದೆ.

ಶ್ರೀಕೃಷ್ಣನ ಭಕ್ತರು ಮತ್ತು ಪುಷ್ಟಿಮಾರ್ಗ್ ಪಂಥದ ಅನುಯಾಯಿಗಳ ಪರವಾಗಿ ಸಲ್ಲಿಸಲಾದ ಮನವಿಯ ಮೇರೆಗೆ ಈ ಆದೇಶವನ್ನು ನೀಡಲಾಗಿದೆ.

1862ರ ಮಾನಹಾನಿ ಪ್ರಕರಣವನ್ನು ಆಧರಿಸಿದ “ಮಹಾರಾಜ್” ಚಲನಚಿತ್ರವು ಸಾರ್ವಜನಿಕ ಸುವ್ಯವಸ್ಥೆಯನ್ನು ಅಡ್ಡಿಪಡಿಸುತ್ತದೆ ಮತ್ತು ಪಂಥ ಮತ್ತು ಹಿಂದೂ ಧರ್ಮದ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುತ್ತದೆ ಎಂದು ವಾದಿಸಲಾಗಿದೆ. ಸುಪ್ರೀಂಕೋರ್ಟ್‌ನ ಅಂದಿನ ನ್ಯಾಯಾಧೀಶರು ನಿರ್ಧರಿಸಿದ 1862ರ ಪ್ರಕರಣವು ಹಿಂದೂ ಧರ್ಮ, ಭಗವಾನ್ ಕೃಷ್ಣ ಮತ್ತು ಭಕ್ತಿಗೀತೆಗಳು ಮತ್ತು ಸ್ತೋತ್ರಗಳ ಬಗ್ಗೆ ತೀವ್ರವಾಗಿ ನಿಂದಿಸುವ ಟೀಕೆಗಳನ್ನು ಒಳಗೊಂಡಿದೆ ಎಂದು ಅರ್ಜಿದಾರರು ಕೋರ್ಟ್‌ನಲ್ಲಿ ವಾದಿಸಿದ್ದಾರೆ.

Gujarat High Court ಚಿತ್ರದ ಕಥಾಹಂದರವನ್ನು ಮರೆಮಾಚಲು ಯಾವುದೇ ಟ್ರೇಲರ್ ಅಥವಾ ಪ್ರಚಾರ ಕಾರ್ಯಕ್ರಮಗಳಿಲ್ಲದೆ ಚಿತ್ರದ ಬಿಡುಗಡೆಯನ್ನು ರಹಸ್ಯವಾಗಿ ಮಾಡಲಾಗುತ್ತಿದೆ. ಚಲನಚಿತ್ರವನ್ನು ಬಿಡುಗಡೆ ಮಾಡುವುದರಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಅಡ್ಡಿಯಾಗುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಚಿತ್ರದ ಬಿಡುಗಡೆಯನ್ನು ತಡೆಯಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ತುರ್ತಾಗಿ ಮನವಿ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅರ್ಜಿದಾರರು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

Jagan Mohan Reddy ಮೌನ ಮುರಿದು ಮಾತಾಡಿದ ಆಂಧ್ರದ ಮಾಜಿ “ಸಿಎಂ” ಜಗನ್

0

Jagan Mohan Reddy ಆಂಧ್ರಪ್ರದೇಶದ ಈ ಬಾರಿಯ ಚುನಾವಣೆಯಲ್ಲಿ YSRCP 40% ಮತಗಳನ್ನು ಪಡೆದಿದೆ. ಹಿಂದಿನ ಚುನಾವಣೆಗೆ ಹೋಲಿಸಿದರೆ ಶೇ.10ರಷ್ಟು ಮತಗಳ ಪ್ರಮಾಣ ಕಡಿಮೆ
ಆಗಿದೆ. ಮುಂಬರುವ ದಿನಗಳಲ್ಲಿ, ಈ 10% ಮತದಾರರು ಟಿಡಿಪಿಗಿಂತ ವೈಎಸ್‌ಆರ್‌ಸಿಪಿ ಏಕೆ ಉತ್ತಮ ಎಂದು ಗುರುತಿಸುತ್ತಾರೆ.

Jagan Mohan Reddy YSRCP ಎದುರಿಸುತ್ತಿರುವ ತೊಂದರೆಗಳು ಮತ್ತು ಸವಾಲುಗಳು ತಾತ್ಕಾಲಿಕ.
ಜನರು ಖಂಡಿತವಾಗಿಯೂ ವೈಎಸ್‌ಆರ್‌ಸಿಪಿ ಮತ್ತು ಟಿಡಿಪಿ ಆಡಳಿತವನ್ನು ಹೋಲಿಸುತ್ತಾರೆ. YSRCP ಖಂಡಿತವಾಗಿಯೂ ಮತ್ತೆ ಅಧಿಕಾರಕ್ಕೆ ಬರುತ್ತದೆ,ಎಂದು ಆಂಧ್ರ ಪ್ರದೇಶದ ಮಾಜಿ ‘ಸಿಎಂ’ ಜಗನ್ ಮೋಹನ್ ರೆಡ್ಡಿ ವಿಶ್ವಾಸದಿಂದ ನುಡಿದಿದ್ದಾರೆ