Sunday, April 12, 2026
Sunday, April 12, 2026
Home Blog Page 693

B.S.Yediyurappa ಬಿಎಸ್ ವೈ ಅವರಿಂದ ನಿರೀಕ್ಷಣಾ ಜಾಮೀನಿಗೆ ಮನವಿ

0

B.S.Yediyurappa ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದಲ್ಲದೆ ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಬಾಲಕಿಯ ಸಹೋದರನ ಮನವಿ ಮೇರೆಗೆ ವಕೀಲ ಎಸ್‌ ಬಾಲನ್ ಅವರು ಜೂನ್ 10ರಂದು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ಇನ್ನು ನಡೆಯಬೇಕಿದೆ.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಗಂಭೀರತೆ ಪರಿಗಣಿಸಿದ ಸರಕಾರ ಸಿಐಡಿ ತನಿಖೆಗೆ ವಹಿಸಿತ್ತು.

ಈ ಮೊದಲು ಪ್ರಕರಣದ ರದ್ದು ಕೋರಿ ಅರ್ಜಿ ಸಲ್ಲಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಈಗ ಪೊಲೀಸರು ಬಂಧಿಸುವ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ದೂರಿನಲ್ಲಿ ಯಾವುದೇ ಅಪರಾಧದ ಅಂಶ ಕಂಡುಬರದ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

B.S.Yediyurappa ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಗತ್ಯ ಬಿದ್ದರೆ ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಸ್ವಾಭಾವಿಕವಾಗಿ ಯಡಿಯೂರಪ್ಪ ಅವರು ಬಂಧಿಸದಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಜೂನ್ 15ರ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಅಷ್ಟರ ಒಳಗೆ ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆ ಎಂದು ಹೇಳಿದ್ದಾರೆ.

Supreme Court ‘ಹಮಾರೆ ಬಾರಹ್’ಸಿನಿಮಾ ಬಿಡುಗಡೆಗೆ ಸುಪ್ರೀಂ ಮಧ್ಯಂತರ ತಡೆಯಾಜ್ಞೆ

0

Supreme Court ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿರುವ ಆರೋಪ ಹೊತ್ತಿರುವ ಹಿಂದಿ ಚಿತ್ರ ‘ಹಮಾರೆ ಬಾರಹ್‌’ ನ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಾಂಬೆ ಹೈಕೋರ್ಟ್ ಪ್ರಕರಣವನ್ನು ವಿಲೇವಾರಿ ಮಾಡುವವರೆಗೆ ಚಿತ್ರ ಬಿಡುಗಡೆ ಮಾಡದಂತೆ ಸೂಚಿಸಿದೆ.

ಚಿತ್ರದ ಬಿಡುಗಡೆಗೆ ಅನುಮತಿ ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠ ಈ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ : ಜೂನ್‌ 7ರಂದು ಹಮಾರೆ ಬಾರಹ್ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಈ ನಡುವೆ ಚಿತ್ರಕ್ಕೆ ನೀಡಲಾದ ಸೆನ್ಸಾರ್ ಸರ್ಟಿಫಿಕೇಟ್ ಹಿಂಪಡೆಯಬೇಕು ಮತ್ತು ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಅಝರ್ ಬಾಷಾ ತಂಬೋಲಿ ಎಂಬವರು ಬಾಂಬೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಚಿತ್ರವು ಸಿನಿಮಾಟೋಗ್ರಾಫ್ ಕಾಯ್ದೆ-1952ರ ನಿಯಮಗಳು ಮತ್ತು ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ಚಿತ್ರದ ಟ್ರೇಲರ್ ಭಾರತೀಯ ಮುಸ್ಲಿಮರ ನಂಬಿಕೆ ಮತ್ತು ವಿವಾಹಿತ ಮುಸ್ಲಿಂ ಮಹಿಳೆಯರನ್ನು ಅವಹೇಳಿಸುವಂತಿದೆ. ಈ ಚಿತ್ರದ ಬಿಡುಗಡೆ ಸಂವಿಧಾನದ 19(2) ಮತ್ತು 25 ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದರು.

ಚಿತ್ರದ ಟ್ರೇಲರ್ ವಿವಾಹಿತ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸ್ವತಂತ್ರ ಹಕ್ಕುಗಳಿಲ್ಲ ಎಂದು ಚಿತ್ರಿಸಿದೆ. ಕುರಾನ್‌ನ 223ನೇ ಆಯತ್ ಅನ್ನು ತಪ್ಪಾಗಿ ವಿವರಿಸಿದೆ. ಚಿತ್ರದ ಬಿಡುಗಡೆಗೆ ಮುನ್ನ ಮಾರ್ಪಾಡುಗಳನ್ನು ಕೈಗೊಳ್ಳಲು ನಿರ್ದೇಶಿಸಲಾಗಿದ್ದರೂ, ಟ್ರೇಲರ್ ಯಾವುದೇ ಡಿಸ್ಕ್ಲೈಮರ್ ಅಥವಾ ಸಿಬಿಎಫ್‌ಸಿ ನೀಡಿದ ಸರ್ಟಿಫಿಕೇಟ್‌ನ್ನು ಉಲ್ಲೇಖಿಸಿಲ್ಲ ಎಂದಿದ್ದರು.

ಈ ಆರೋಪವನ್ನು ಅಲ್ಲಗಳೆದಿದ್ದ ಸಿಬಿಎಫ್‌ಸಿ, “ಎಲ್ಲಾ ಅಗತ್ಯ ಕಾರ್ಯವಿಧಾನಗಳನ್ನು ಅನುಸರಿಸಿದ ನಂತರ ಚಿತ್ರಕ್ಕೆ ಪ್ರಮಾಣಪತ್ರ ನೀಡಲಾಗಿದೆ. ಆಕ್ಷೇಪಾರ್ಹ ದೃಶ್ಯಗಳು ಮತ್ತು ಸಂಭಾಷಣೆಗಳನ್ನು ಅಳಿಸಲಾಗಿದೆ. ಯೂಟ್ಯೂಬ್ ಮತ್ತು ಬುಕ್‌ಮೈಶೋನಲ್ಲಿ ಬಿಡುಗಡೆಯಾದ ಚಿತ್ರದ ಟ್ರೇಲರ್‌ಗಳು ಪ್ರಮಾಣೀಕೃತ ಟ್ರೇಲರ್‌ಗಳಲ್ಲ ಎಂದು ಹೇಳಿತ್ತು.

Supreme Court ವಾದ-ಪ್ರತಿವಾದ ಆಲಿಸಿದ್ದ ಬಾಂಬೆ ಹೈಕೋರ್ಟ್‌ ಜೂನ್ 14ರವರೆಗೆ ಚಿತ್ರ ಬಿಡುಗಡೆ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಅಲ್ಲದೆ, ಚಿತ್ರ ವೀಕ್ಷಿಸಿ ವರದಿ ನೀಡಲು ಮೂವರು ಸದಸ್ಯರ ಸಮಿತಿ ರಚಿಸಿತ್ತು. ಆದರೆ, ಈ ಸಮಿತಿ ಕಾಲ ಮಿತಿಯೊಳಗೆ ವರದಿ ನೀಡದೆ ಹೆಚ್ಚಿನ ಕಾಲವಕಾಶ ಕೋರಿತ್ತು. ಹಾಗಾಗಿ, ಹೈಕೋರ್ಟ್ ಜೂನ್ 14ರಂದು ಚಿತ್ರ ಬಿಡುಗಡೆಗೆ ಅವಕಾಶ ನೀಡಿತ್ತು. ನಿರ್ಮಾಪಕರು ಸ್ವಯಂ ಪ್ರೇರಿತರಾಗಿ ಆಕ್ಷೇಪಾರ್ಹ ಅಂಶಗಳನ್ನು ತೆಗದು ಹಾಕುವಂತೆ ಸೂಚಿಸಿತ್ತು.

ಚಿತ್ರ ಬಿಡುಗಡೆಗೆ ಅನುಮತಿ ನೀಡಿರುವ ಮತ್ತು ಸಿಬಿಎಫ್‌ಸಿಯಿಂದ ಸಮಿತಿ ರಚನೆಗೆ ನಿರ್ದೇಶನ ನೀಡಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿದಾರ ಅಝರ್ ಬಾಷಾ ತಂಬೋಲಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಬಾಂಬೆ ಹೈಕೋರ್ಟ್ ಪ್ರಕರಣ ವಿಲೇವಾರಿ ಮಾಡುವವರೆಗೆ ಚಿತ್ರ ಬಿಡುಗಡೆ ಮಾಡದಂತೆ ತಡೆ ನೀಡಿದೆ.

NEET UG ನೀಟ್-ಯುಜಿ ವಿದ್ಯಾರ್ಥಿಗಳ ಕೃಪಾಂಕ ರದ್ದು, ಪರೀಕ್ಷೆಗೆ ಮರು ಹಾಜರಾಗಲು ಆಯ್ಕೆಹೊಂದಿರುತ್ತಾರೆ- ‘ಸುಪ್ರೀಂ’ಸೂಚನೆ

0

NEET UG ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ 2024 (ನೀಟ್-ಯುಜಿ 2024) ಗೆ ಹಾಜರಾದ 1563 ವಿದ್ಯಾರ್ಥಿಗಳ ಗ್ರೇಸ್ ಅಂಕಗಳನ್ನು ರದ್ದುಗೊಳಿಸಲಾಗುವುದು; ಅವರು ಮತ್ತೆ ಪರೀಕ್ಷೆಗೆ ಹಾಜರಾಗಲು ಆಯ್ಕೆಯನ್ನು ಹೊಂದಿರುತ್ತಾರೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೇಂದ್ರದ ನಿರ್ಧಾರವನ್ನು ಆಲಿಸಿದ ನ್ಯಾಯಾಲಯ, 1,563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದೆ.

“ಪರೀಕ್ಷಾ ಸಮಿತಿಯು ನಮ್ಮ ಮುಂದೆ ಇರಿಸಲಾದ ಚರ್ಚೆಗಳ ನಂತರ ಶಿಫಾರಸುಗಳನ್ನು ಮಾಡಿದೆ. ಶಿಫಾರಸಿನ ಪ್ರಕಾರ, 1563 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲಾಗುತ್ತದೆ ಮತ್ತು ಹಿಂತೆಗೆದುಕೊಳ್ಳಲಾಗುತ್ತದೆ. ಈ 1563 ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು.

ಪರೀಕ್ಷೆ ಎದುರಿಸಲು ಇಚ್ಛಿಸದವರ ಫಲಿತಾಂಶಗಳು ಪರಿಹಾರದ ಅಂಕಗಳಿಲ್ಲದೆ ಅವರ ನಿಜವಾದ ಅಂಕಗಳನ್ನು ಆಧರಿಸಿರುತ್ತವೆ” ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನು ಒಳಗೊಂಡ ರಜಾಕಾಲದ ಪೀಠ ಹೇಳಿದೆ.

“ಮರು ಪರೀಕ್ಷೆಗೆ ಹಾಜರಾಗುವವರಿಗೆ, 5 ಅಂಕಗಳನ್ನು ತಿರಸ್ಕರಿಸಲಾಗುತ್ತದೆ” ಎಂದು ನ್ಯಾಯಾಲಯವು ಸೇರಿಸಿತು.
ಮರು ಪರೀಕ್ಷೆಯನ್ನು ಗುರುವಾರವೇ ತಿಳಿಸಲಾಗುವುದು ಮತ್ತು ಜೂನ್ 23 ರಂದು ನಡೆಯುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತಿಳಿಸಿದೆ. ಜುಲೈನಲ್ಲಿ ಕೌನ್ಸೆಲಿಂಗ್ ಅನ್ನು ನಿಗದಿಪಡಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಮರು ಪರೀಕ್ಷೆಯ ಫಲಿತಾಂಶಗಳು ಜೂನ್ 30 ರ ಮೊದಲು ಹೊರಬರಬೇಕು.

NEET UG ಶಂಕಿತ ಪೇಪರ್ ಸೋರಿಕೆ ಮತ್ತು ಅಕ್ರಮಗಳ ಕಾರಣದಿಂದ ನೀಟ್-ಯುಜಿ 2024ಕ್ಕೆ ಮರುಪರೀಕ್ಷೆ ನಡೆಸುವಂತೆ ಕೋರಿದ ಮನವಿಯ ಮೇಲೆ ನ್ಯಾಯಾಲಯವು ಜೂನ್ 11 ರಂದು ಎನ್‌ಟಿಎಗೆ ನೋಟಿಸ್ ನೀಡಿತ್ತು. ಹತ್ತು ನೀಟ್ ಅಭ್ಯರ್ಥಿಗಳು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠವು ಪರಿಶೀಲಿಸಿತು.

ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳ ಕೌನ್ಸೆಲಿಂಗ್ ಅನ್ನು ಮುಂದೂಡಲು ರಜೆಯ ಪೀಠ ನಿರಾಕರಿಸಿದೆ.

Dengue fever ಜಿಲ್ಲೆಯಲ್ಲಿ ಡೆಂಗ್ಯು ಜ್ವರದಿಂದ ಒಂದು ಸಾವು

0

Dengue fever ಡೆಂಗ್ಯೂ ಜ್ವರಕ್ಕೆ ಸಾಗರ ಉಪವಿಭಾಗೀಯ ಆಸ್ಪತ್ರೆಯ ನೌಕರನೊಬ್ಬ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ತಾಲೂಕಿನ ತಾಳಗುಪ್ಪದ ನಿವಾಸಿ ನಾಗರಾಜ್ (33), ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ.

Dengue fever ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು.
ಅನಾರೋಗ್ಯ ಹಿನ್ನೆಲೆ ಎರಡು ದಿನಗಳ ಹಿಂದೆ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗುರುವಾರ ಬೆಳಗಿನ ಜಾವ ನಾಗರಾಜ್ ಕೊನೆಯುಸಿರೆಳೆದಿದ್ದಾರೆ.
ಡೆಂಗ್ಯೂ ಜ್ವರವು ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದೆ.

Dr. G. Parameshwar ಅಗತ್ಯ ಬಿದ್ದರೆ ಬಿಎಸ್ವೈ ಬಂಧನ- ಗೃಹಸಚಿವ ಡಾ.ಜಿ.ಪರಮೇಶ್ವರ್

0

Dr. G. Parameshwar ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಗತ್ಯ ಬಿದ್ದರೆ ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಸ್ವಾಭಾವಿಕವಾಗಿ ಯಡಿಯೂರಪ್ಪ ಅವರು ಬಂಧಿಸದಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಜೂನ್ 15ರ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಅಷ್ಟರ ಒಳಗೆ ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಸಿಐಡಿ ಪರ ವಾದ ಮಂಡಿಸಲು ವಕೀಲ ಅಶೋಕ್ ನಾಯಕ್ ಅವರನ್ನು ನೇಮಿಸಿ ಈ ಮೊದಲು ಸರಕಾರ ಆದೇಶಿಸಿತ್ತು.

ಫೆಬ್ರವರಿ 2ರಂದು ಬೆಂಗಳೂರಿನ ಸಂಜಯನಗರದ ತಮ್ಮ ಮನೆಯಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಯಡಿಯೂರಪ್ಪ ಮೇಲಿದೆ. ಈ ಸಂಬಂಧ ಬಾಲಕಿಯ ತಾಯಿ ಮಾರ್ಚ್ 14ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣದ ಗಂಭೀರತೆ ಪರಿಗಣಿಸಿದ ಸರಕಾರ ಸಿಐಡಿ ತನಿಖೆಗೆ ವಹಿಸಿತ್ತು.
ಇದಲ್ಲದೆ ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಬಾಲಕಿಯ ಸಹೋದರನ ಮನವಿ ಮೇರೆಗೆ ವಕೀಲ ಎಸ್‌ ಬಾಲನ್ ಅವರು ಜೂನ್ 10ರಂದು ಅರ್ಜಿ ಸಲ್ಲಿಸಿದ್ದಾರೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಬಾಲಕಿಯ ಹೇಳಿಕೆಯನ್ನು ಈಗಾಗಲೇ ದಾಖಲಿಸಲಾಗಿದೆ ಎಂದು ರಿಟ್ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Dr. G. Parameshwar ಬಾಲಕಿಯ ತಾಯಿ ಏಪ್ರಿಲ್ 29ರಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ಪತ್ರ ಬರೆದು ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಮನವಿ ಮಾಡಿದ್ದರು.
ಎರಡು ತಿಂಗಳ ನಂತರವೂ, ಯಡಿಯೂರಪ್ಪ ವಿರುದ್ಧದ ತನಿಖೆಯು ಸಿಆರ್‌ಪಿಸಿಯ ಸೆಕ್ಷನ್ 2 (ಹೆಚ್) ಅಡಿಯಲ್ಲಿ ವ್ಯಾಖ್ಯಾನಿಸಲ್ಪಟ್ಟಂತೆ ಪ್ರಗತಿಯಾಗಿಲ್ಲ. ಸೆಕ್ಷನ್ 41(ಎ) ಅಡಿಯಲ್ಲಿ ಅವರಿಗೆ ನೋಟಿಸ್ ಕೂಡ ನೀಡಿಲ್ಲ. ಆದ್ದರಿಂದ ನ್ಯಾಯಾಲದ ಮೊರೆ ಹೋಗುವುದರ ಹೊರತು ಬೇರೆ ಪರಿಹಾರವಿರಲಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

Rotary Shivamogga ಪ್ರಕೃತಿಯಿಂದ ಲಾಭ ಪಡೆದು ಪ್ರಕೃತಿಯನ್ನೇ ನಾಶ ಮಾಡುತ್ತಿದ್ದೇವೆ- ಎಚ್.ವಿ.ಅನಿಲ್ ಕುಮಾರ್

0

Rotary Shivamogga ಮರ ಗಿಡಗಳನ್ನು ನಾಶ ಮಾಡುತ್ತಿರುವುದರಿಂದ ಪ್ರಕೃತಿ ಸಮತೋಲನ ಕಳೆದುಕೊಳ್ಳುತ್ತಿದೆ. ಪರಿಸರ ನಾಶದಿಂದ ಪ್ರಕೃತಿ ವಿನಾಶದತ್ತ ಸಾಗುತ್ತಿದೆ ಎಂದು ಡಿವಿಎಸ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಎಚ್.ವಿ.ಅನಿಲ್‌ಕುಮಾರ್ ಹೇಳಿದರು.

ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಪರಿಸರ ವಿನಾಸದಿಂದ ಆಗುವ ದುಷ್ಪರಿಣಾಮಗಳು ಕುರಿತು ಮಾತನಾಡಿ, ಇಂದು ಆಧುನೀಕರಣದಿಂದ ಗಿಡಗಳನ್ನು ಬೆಳೆಸಲು ಸ್ಥಳವೇ ಇಲ್ಲವಾಗಿದೆ. ಪ್ರಕೃತಿಯಿಂದ ಸಂಪೂರ್ಣ ಲಾಭ ಪಡೆದು ಪ್ರಕೃತಿಯನ್ನೇ ನಾಶ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ವಾತಾವರಣ ಹಾಳಾಗುತ್ತಿದೆ. ಉತ್ತಮ ಆಮ್ಲಜನಕ ದೊರೆಯುತ್ತಿಲ್ಲ. ಬದುಕಲು ಪೂರಕವಾದ ಪರಿಸರ ಇಲ್ಲವಾಗಿದೆ. ಪರಿಸರ ವಿನಾಶದಿಂದ ಜೀವಿತ ಅವಧಿ ಕಡಿಮೆ ಆಗುತ್ತಿದೆ. ನಾವು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಚೆನ್ನಾಗಿ ಇಟ್ಟುಕೊಳ್ಳುವುದರ ಮುಖಾಂತರ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದರು.

ದೆಹಲಿ ಸೇರಿದಂತೆ ಬೇರೆ ಕಡೆಗಳಲ್ಲಿ ಬಿಸಿಲಿನ ತಾಪಮಾನ ಮತ್ತು ವಾಯುಮಾಲಿನ್ಯದಿಂದ ನೂರಾರು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸತೀಶ್ ಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಯುವ ಜನರಲ್ಲಿ ಪರಿಸರ ಜಾಗೃತಿ ಮೂಡಿಸಬೇಕು. ಪರಿಸರ ದಿನದ ಆಶಯ ವರ್ಷಪೂರ್ತಿ ಜಾರಿಗೆ ತರಬೇಕು ಎಂದು ತಿಳಿಸಿದರು.

Rotary Shivamogga ಇದೇ ಸಂದರ್ಭದಲ್ಲಿ ಉಪನ್ಯಾಸ ನೀಡಿದ ನಂತರ ಸಭಿಕರೊಂದಿಗೆ ಸಂವಾದ ಏರ್ಪಡಿಸಲಾಗಿತ್ತು. ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ಎಚ್.ಬಿ.ಆದಿಮೂರ್ತಿ, ಡಾ. ಪರಮೇಶ್ವರ್ ಶಿಗ್ಗಾವ್, ಅರುಣ್ ದೀಕ್ಷಿತ್, ಡಾ. ಲಲಿತಾ ಭರತ್, ಸಂತೋಷ್, ಎನ್.ಎಚ್.ಶ್ರೀಕಾಂತ್, ಎಸ್.ಗಣೇಶ್, ಕೇಶವಪ್ಪ, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್‌ಕುಮಾರ್, ಶಶಿಕಾಂತ್ ನಾಡಿಗ್, ಡಾ. ಧನಂಜಯ್, ಡಾ. ಮಹಾದೇವಸ್ವಾಮಿ, ರೋಟರಿ ಸದಸ್ಯರು ಉಪಸ್ಥಿತರಿದ್ದರು.

Kannada and Culture Department ವಿವಿಧ ಅಕಾಡೆಮಿಗಳಿಗೆ ನೇಮಕಾತಿ ಪರಿಷ್ಕೃತ ಆದೇಶ

0

Kannada and Culture Department ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಸ್ಥಾನಗಳಿಗೆ ಈ ಹಿಂದೆ ನೇಮಕಗೊಂಡವರು ಸಂಘ ಪರಿವಾರದ ಕಾರ್ಯಕರ್ತರು ಎಂಬ ವರದಿಗಳ ಹಿನ್ನೆಲೆ, ಅವರ ನೇಮಕಾತಿ ರದ್ದುಪಡಿಸಿ ಹೊಸ ನೇಮಕಾತಿ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಶಿವಮೊಗ್ಗದ ಶುಭಾ ಧನಂಜಯ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಸದಸ್ಯ ಸ್ಥಾನಕ್ಕೆ ಬಿ ಎಲ್ ರಾಜು ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಜಿ ವಿ ರವೀಂದ್ರನಾಥ (ರವೀಂದ್ರನಾಥ ಸಿರಿವರ) ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ ಎಂದು ತಿಳಿದು ಬಂದಿದೆ.

Kannada and Culture Department ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ಮೈಸೂರಿನ ಡಾ. ಕೃಪಾ ಫಡಕೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ವಿಜಯಲಕ್ಷ್ಮಿ ಕೌಟಗಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಸ್ಥಾನಕ್ಕೆ ಮಾಲೂರು ವಿಜಿ ಅವರನ್ನು ಈ ಹಿಂದೆ ನೇಮಿಸಲಾಗಿತ್ತು. ಇವರ ನಾಮನಿರ್ದೇಶನಗೊಳಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಸರ್ಕಾರ ಆದೇಶಿಸಿದೆ ಎಂದು ವರದಿ ಹೇಳಿದೆ.

Karnataka Skill Development Corporation ಕರ್ನಾಟಕ ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ಒಂದು ದಿನದ ಕಾರ್ಯಾಗಾರ

0

Karnataka Skill Development Corporation 2023 & 2024 ರಲ್ಲಿ 2ನೇ PUC (ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ) ಪಾಸ್ ಆಗಿರುವ ವಿದ್ಯಾರ್ಥಿಗಳು ಐಟಿ ಸೇವೆಗಳು ಮತ್ತು ಅಸೋಸಿಯೇಟ್ ಉದ್ಯೋಗದ ಪಾತ್ರಗಳಿಗಾಗಿ 12 ತಿಂಗಳ ತರಬೇತಿ ಜೊತೆಗೆ ಇಂಟರ್ನಶಿಪ್ ಪಡೆಯುತ್ತಾರೆ.

ಇದು ಒಟ್ಟಾರೆ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಿದ್ಧಗೊಳಿಸಲು ಅವರ ವ್ಯಕ್ತಿತ್ವವನ್ನು ವಿಕಾಸಗೊಳಿಸುವುದರ ಮೇಲೆ ಕೇಂದ್ರೀಕರಿಸುವ ಕಾರ್ಯಕ್ರಮವಾಗಿದೆ.

ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಅಭ್ಯರ್ಥಿಗಳು HCLTech ನಲ್ಲಿ ಉದ್ಯೋಗ ಪಡೆಯುತ್ತಾರೆ.
ಕೆಲಸ ಮಾಡುವಾಗ ಅಭ್ಯರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು (Degree) IIIT, BITS Pilani, AMITY, KL ವಿಶ್ವವಿದ್ಯಾಲಯ ಅಥವಾ SASTRA ವಿಶ್ವವಿದ್ಯಾನಿಲಯದಲ್ಲಿ ಮುಂದುವರಿಸಲು ಆಯ್ಕೆಯನ್ನು ಹೊಂದಿದ್ದಾರೆ .

TechBee ಅಭ್ಯರ್ಥಿಗಳು ಇಂಟರ್ನ್‌ಶಿಪ್ ಸಮಯದಲ್ಲಿ ಪ್ರತಿ ತಿಂಗಳು ₹.10,000 ಸ್ಟೈಫಂಡ್ ಗಳಿಸುತ್ತಾರೆ ಮತ್ತು HCLTech ನಿಂದ ಒಮ್ಮೆ ನೇಮಕಗೊಂಡ ನಂತರ ವಾರ್ಷಿಕ ₹1.70 – ₹2.20 ಲಕ್ಷಗಳ ನಡುವೆ ಸಂಬಳವನ್ನು ಗಳಿಸಲು ಪ್ರಾರಂಭಿಸುತ್ತಾರೆ.

ಕರ್ನಾಟಕದಲ್ಲಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ದೊಂದಿಗೆ ಒಪ್ಪಂದ ಪ್ರಯುಕ್ತ ಕರ್ನಾಟಕದಲ್ಲಿ HCL TechBee ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ.

Karnataka Skill Development Corporation 2023 & 2024 ರಲ್ಲಿ PUC 2ನೇ ವರ್ಷ ಪಾಸಾಗಿರುವವರು ಈಗಲೇ ಕೆಳಗಿನ ಲಿಂಕ್‌ ಮೂಲಕ ನೋಂದಾಯಿಸಿಕೊಳ್ಳಿ ಮತ್ತು HCL TechBee ನೊಂದಿಗೆ ನಿಮ್ಮ ಭವಿಷ್ಯವನ್ನು ಉಜ್ವಲ ಗೊಳಿಸಿಕೊಳ್ಳಬಹುದಾಗಿದೆ.

ಲಿಂಕ್- https://bit.ly/TechBeeKSDC

ಕಾರ್ಯಗಾರ ನಡೆಯುವ ಸ್ಥಳ : DVS Independent PU College ಶಿವಮೊಗ್ಗ.
ದಿನಾಂಕ : 15-06-2024

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
8217478207 / 8722790340 / 9845454471

Women And Child Development Department ಪೋಷಣ್ ಅಭಿಯಾನದಡಿ ವಿವಿಧ ಹುದ್ದೆಗಳಿಗೆ ಗುತ್ತಿಗೆ ನೇಮಕದ ಅರ್ಹರ ತಾತ್ಕಾಲಿಕ ಪಟ್ಟಿ ಪ್ರಕಟಣೆ

0

Women And Child Development Department ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಸಂಬಂಧಿಸಿದಂತೆ ಪೋಷಣ್ ಅಭಿಯಾನ ಯೋಜನೆಯಡಿ ಜಿಲ್ಲಾ ಸಂಯೋಜಕರು, ಜಿಲ್ಲಾ ಕಾರ್ಯಕ್ರಮ ಸಹಾಯಕರು, ಶಿವಮೊಗ್ಗ ತಾ|| ಯೋಜನಾ ಸಹಾಯಕರು, ಸೊರಬ ತಾ|| ಯೋಜನಾ ಸಹಾಯಕರು, ಸಖಿ ಒನ್ ಸ್ಟಾಪ್ ಸೆಂಟರ್ ಸಾಗರ ಘಟಕಕ್ಕೆ ಸಂಬಂಧಿಸಿದ ಸೆಂಟರ್ ಅಡ್ಮಿನಿಸ್ಟ್ರೇಟರ್, ಸಮಾಲೋಚಕರು, ಸಾಮಾಜಿಕ ವಿಷಯ ನಿರ್ವಾಹಕರು, ವಿವಿದೋದ್ಧೇಶ ಕಾರ್ಯಕರ್ತರು (ಸೆಕ್ಯೂರಿಟಿ), ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಿಷನ್ ಕೋ-ಆರ್ಡಿನೇಟರ್, ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟ್ರಸಿ ಅಂಡ್ ಅಕೌಂಟೆಂಟ್ ಹುದ್ದೆಗಳಿಗೆ ನೇರ ಗುತ್ತಿಗೆ / ಬಾಹ್ಯ ಸಂಪನ್ಮೂಲದಿಂದ ಸಿಬ್ಬಂದಿಗಳನ್ನು ನಿಯೋಜನೆಗೆ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಹಾಗೂ ಕಾಯ್ದಿರಿಸಿದ ಪಟ್ಟಿಯನ್ನು ಕಚೇರಿಯ ಪ್ರಚಾರ ಫಲಕದಲ್ಲಿ ಪ್ರಟಿಸಿದ್ದು, ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಇಲಾಖಾ ಕಚೇರಿಗೆ ಲಿಖಿತವಾಗಿ ಮುದ್ದಾಂ ಆಕ್ಷೇಪಣೆಯನ್ನು ಜೂನ್ 21 ರೊಳಗಾಗಿ ಸಲ್ಲಿಸತಕ್ಕದ್ದು.

Women And Child Development Department ತದನಂತರ ಬಂದ ಆಕ್ಷೇಪಣೆಗಳನ್ನು ಪುರಸ್ಕರಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Khadi And Village Industries Board ಕೆವಿಐಬಿ ಯಿಂದ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

0

Khadi And Village Industries Board ಶಿವಮೊಗ್ಗ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಬ್ಯಾಂಕುಗಳಿಂದ ಸಾಲ ಪಡೆದು ಉತ್ಪಾದನಾ/ ಸೇವಾ ಘಟಕ ಪ್ರಾರಂಭಿಸಲು ಗ್ರಾಮೀಣ ಮತ್ತು ನಗರ ಪ್ರದೇಶಗಳ ಯುವಕ/ಯುವತಿಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದನಾ ಮತ್ತು ಸೇವಾ ವಲಯದ ಚಟುವಟಿಕೆ ಪ್ರಾರಂಭಿಸಲು ಕೇಂದ್ರ ಸರ್ಕಾರದಿಂದ ಶೇ. 25 ರಿಂದ 35ರವರೆಗೆ ಮತ್ತು ನಗರ ಪ್ರದೇಶದವರಿಗೆ ಶೇ. 15 ರಿಂದ 25ರವರೆಗೆ ಸಹಾಯಧನ ಲಭ್ಯವಿದ್ದು, ಉತ್ಪಾದನಾ ಘಟಕಗಳಿಗೆ ರೂ. 50 ಲಕ್ಷ ಹಾಗೂ ಸೇವಾ ಘಟಕಗಳಿಗೆ 20 ಲಕ್ಷ ಗರಿಷ್ಠ ಯೋಜನಾ ವೆಚ್ಚದ ಘಟಕಗಳಿಗೆ ಬ್ಯಾಂಕುಗಳಿಂದ ಆರ್ಥಿಕ ನೆರವು ಪಡೆಯಲು ಅವಕಾಶವಿರುತ್ತದೆ.

ಆಸಕ್ತರು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ, ‘ಬಿ’ ಬ್ಲಾಕ್-7, ಎರಡನೇ ಮಹಡಿ, ಉಪವಿಭಾಗಾಧಿಕಾರಿಗಳ ಕಚೇರಿ ಕಟ್ಟಡ, ಬಾಲರಾಜ್ ಅರಸ್ ರಸ್ತೆ, ಶಿವಮೊಗ್ಗ ಇಲ್ಲಿಗೆ ಭೇಟಿ ನೀಡಿ ನಿಖರ ಮಾಹಿತಿ ಪಡೆದು ಜಾಲತಾಣ https://www.kviconline.gov.in/pmegpeportal ರಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ತಿಳಿಸಿದ್ದಾರೆ.

Khadi And Village Industries Board ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕೆ. ಗೋವಿಂದಪ್ಪ ಇವರನ್ನು ಕಚೇರಿಯಲ್ಲಿ ಖುದ್ದಾಗಿ ಅಥವಾ ದೂ.ಸಂ.: 08182-223273/ 9480825637 ಇವರನ್ನು ಸಂಪರ್ಕಿಸಬಹುದು