Monday, April 13, 2026
Monday, April 13, 2026
Home Blog Page 707

CM Siddharamaih ಸಚಿವ ನಾಗೇಂದ್ರ ಅವರ ರಾಜಿನಾಮೆಯನ್ನ ಇನ್ನೂ ಕೇಳಿಲ್ಲ. ಎಸ್ ಐ ಟಿ ವರದಿಗೆ ಕಾಯುತ್ತಿದ್ದೇವೆ- ಸಿದ್ಧರಾಮಯ್ಯ

0

CM Siddharamaih ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ರಾಜಿನಾಮೆಯನ್ನು ಕೇಳಿಲ್ಲ.
ಪ್ರಕರಣದ ಬಗ್ಗೆ ಈಗಾಗಲೇ ಎಸ್.ಐ.ಟಿ ತನಿಖೆ ನಡೆಸುತ್ತಿದೆ. ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಒಳ್ಳೆ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗುತ್ತದೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ.

CM Siddharamaih ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರು ಚುನಾವಣೋತ್ತರ ಸಮೀಕ್ಷೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ, ಇದು ವಾಸ್ತವ. ಆದರೆ ಸಮೀಕ್ಷಾ ವರದಿ ಇದಕ್ಕೆ ವ್ಯತಿರಿಕ್ತವಾಗಿದೆ. ಈ ಸಮೀಕ್ಷೆಯನ್ನು ನಾವು ಸಂಪೂರ್ಣ ತಳ್ಳಿಹಾಕುತ್ತೇವೆ ಎಂದು ಸಿದ್ಧರಾಮಯ್ಯನವರು ತಮ್ಮ x ಖಾತೆಯ ಮೂಲಕ ಸಂದೇಶ ನೀಡಿದ್ದಾರೆ.

Thirtahalli Police ತೀರ್ಥಹಳ್ಳಿಯ ಉಂಟೂರುಕಟ್ಟೆಯಲ್ಲಿ ಮನೆಗಳ್ಳತನ ಮಾಡಿದ ಕಳ್ಳರು ಪೊಲೀಸರ ವಶ

0

Thirtahalli Police ತೀರ್ಥಹಳ್ಳಿ ತಾಲೂಕಿನ ಒಂಟಿ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಇಬ್ಬರನ್ನು ಆಗುಂಬೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಧ ಸಂಬಂಧವಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಮಂಜುನಾಥ ಅಲಿಯಾನ್ ಕೊಪ್ಪ ಮಂಜ (45), ಚೇತನ್ (35) ಪೊಲೀಸರು ಬಂಧಿಸಿದ್ದಾರೆ.

ತೀರ್ಥಹಳ್ಳಿ ತಾಲ್ಲೂಕಿನ ಉಂಟೂರುಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಗಳಕೊಪ್ಪ ಮಜರೆ ಗ್ರಾಮದ ಶಿವಪ್ಪ ಹೆಗ್ಡೆ ಎನ್ನುವವರ ಮನೆಯಲ್ಲಿ ಒಂದು ವಾರದ ಹಿಂದೆ ಕಳ್ಳತನವಾಗಿತ್ತು.

Thirtahalli Police ಸುಮಾರು 30 ಗ್ರಾಂ ತೂಕದ ಚಿನ್ನಾಭರಣ ಮನೆಯಲ್ಲಿ ಕಳುವಾಗಿತ್ತು. ತನಿಖೆಗಿಳಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಮಲೆನಾಡು ಭಾಗದ ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

Meteorological Department ಬೆಂಗಳೂರಿನಲ್ಲಿ ವರುಣನ ಆರ್ಭಟ ಅವಾಂತರ

0

Meteorological Department ಕೇರಳಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಿದ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಶುರುವಾಗಿದ್ದು, ಶನಿವಾರ ಸುರಿದ ಭಾರೀ ಮಳೆಗೆ ನಗರದ ತಗ್ಗುಪ್ರದೇಶಗಳು ಜಲಾವೃತಗೊಂಡು, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು.

ನಗರದಲ್ಲಿ ರಾತ್ರಿ 8.30ರವರೆಗೆ 13.4 ಮಿ.ಮೀ ಮಳೆ ದಾಖಲಾಗಿದೆ. ಭಾರೀ ಮಳೆಯಿಂದಾಗಿ ಯಲಚೇನಹಳ್ಳಿ ಮತ್ತು ರಾಮಕೃಷ್ಣನಗರದಲ್ಲಿ ಅವಾಂತರ ಸೃಷ್ಟಿಯಾಗಿತ್ತು. ಚರಂಡಿಯ ನೀರು ಅನೇಕ ಪ್ರದೇಶಗಳಿಗೆ ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು.

ಇದರಿಂದ ಬೇಸತ್ತ ಸ್ಥಳೀಯರು ಯಲಚೇನಹಳ್ಳಿ ಮತ್ತು ರಾಮಕೃಷ್ಣನಗರದಲ್ಲಿ ಉಂಟಾಗಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಪಟ್ಟು ಬಿಡದ ಕಾರಣ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

Meteorological Department ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ಜಂಟಿ ಆಯುಕ್ತ ಅಜಿತ್ ಎಂ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.

Assembly election ಸುಮಲತಾ ಅವರಿಗೆ ಮಿಸ್ ಆದ ಬಿಜೆಪಿ ಎಂಎಲ್ ಸಿ ಟಿಕೆಟ್

0

Assembly election ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್​ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆ ಕೊನೆದಿನವಾಗಿದ್ದು, ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಿಜೆಪಿಯಿಂದ ಸ್ಪರ್ಧೆಗೆ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಅವಕಾಶ ಸಿಕ್ಕಿದೆ. ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್​ ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ.
ಲೋಕಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಟಿಕೆಟ್ ಮೇಲೆ ಆಸೆಯಿರಿಸಿ ನಿರಾಸೆಯಾಗಿದ್ದ ಸಿಟಿ ರವಿ ಅವರಿಗೆ ಬಂಪರ್ ಗಿಫ್ಟ್​ ಸಿಕ್ಕಿದೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಸ್ಥಾನ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್​ಗೆ ಕೊನಗೂ ಅವಕಾಶ ಸಿಕ್ಕಿಲ್ಲ.
Assembly election ವಿಧಾನಸಭೆ ಚುನಾವಣೆಯಲ್ಲಿ ಸೋಲುಕಂಡಿರುವ ಸಿಟಿ ರವಿ ಅವರನ್ನು ವಿಧಾನ ಪರಿಷತ್​ಗೆ ಕಳುಹಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ಈ ಬಗ್ಗೆ ಪರೋಕ್ಷವಾಗಿ ಇತ್ತೀಚೆಗೆ ಸ್ವತಃ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಹೇಳಿದ್ದರು. ಅಲ್ಲದೇ ಕೋರ್​ ಕಮಿಟಿ ಸಭೆಯಲ್ಲೂ ಸಹ ಪಟ್ಟಿಯಲ್ಲಿ ಸಿಟಿ ರವಿ ಹಾಗೂ ಲೋಕಸಭಾ ಟಿಕೆಟ್​ ವಂಚಿತ ಸದಾನಂದಗೌಡ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರ ಹೆಸರುಗಳನ್ನು ಸಹ ಹೈಕಮಾಂಡ್​ಗೆ ಕಳುಹಿಸಲಾಗಿತ್ತು. ಅಂತಿಮವಾಗಿ ಹೈಕಮಾಂಡ್​ ಸಿಟಿ ರವಿಗೆ ಅವರಿಗೆ ಅವಕಾಶ ನೀಡಿದೆ.

Prajwal Revanna ವಿಚಾರಣೆಯಲ್ಲಿ ಎಸ್ ಐ ಟಿ ಯೊಂದಿಗೆ ತನಿಖೆಗೆ ಸಹಕರಿಸದ ಪ್ರಜ್ವಲ್?

0

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಹಾಸನದ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಗೆ ಸಹಕರಿಸುತ್ತಿಲ್ಲ ಎಂದು ಮೂಲಗಳು ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಎಸ್‌ಐಟಿ ಇಂದು ಅಥವಾ ಸೋಮವಾರ ಕ್ರೈಂ ಸ್ಪಾಟ್‌ನಲ್ಲಿ ವಿಚಾರಣೆ ನಡೆಸಲು ಮುಂದಾಗಿದೆ.
ಹಾಸನ ಜಿಲ್ಲೆಯ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣಗೆ ಮೇ 31ರಂದು ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಬಂಧಿಸಲಾಯಿತು.

ಲೈಂಗಿಕ ದೌರ್ಜನ್ಯದ ವಿಡಿಯೋ ವೈರಲ್‌ ಬಳಿಕ ಅವರು ಏಪ್ರಿಲ್‌ನಲ್ಲಿ ದೇಶದಿಂದ ಪರಾರಿಯಾಗಿದ್ದರು.
ಸತತ ಎರಡು ದಿನಗಳ ಕಾಲ ಎಸ್‌ಐಟಿಯ ಪ್ರಶ್ನೆಗಳಿಗೆ ಪ್ರಜ್ವಲ್‌ ರೇವಣ್ಣ ನುಣುಚಿಕೊಳ್ಳುವ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣವು ತನ್ನ ವಿರುದ್ಧದ ಷಡ್ಯಂತ್ರವಾಗಿದ್ದು, ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ನಿಮ್ಮ ತಾಯಿ ಇಲ್ಲದ ಸಂದರ್ಭದಲ್ಲಿ ಹೊಳೆನರಸೀಪುರದಲ್ಲಿರುವ ಮನೆಗೆ ಏಕೆ ಹೋಗಿದ್ದು? ಮನೆಯಲ್ಲಿ ಎಷ್ಟು ಮಂದಿ ಕೆಲಸಗಾರರು ಇದ್ದಾರೆ? ಎಂದು ಹಲವು ಪ್ರಶ್ನೆಗಳನ್ನು ಪ್ರಜ್ವಲ್ ರೇವಣ್ಣ ಅವರಿಗೆ ಎಸ್‌ಐಟಿ ತನಿಖಾಧಿಕಾರಿಗಳು ಕೇಳಿದ್ದು, ಕೆಲವು ಫೋಟೊಗಳನ್ನು ತೋರಿಸಿ ಇವರು ನಿಮಗೆ ಗೊತ್ತಾ? ಎಂದು ಕೇಳಿದಾಗ ಅದಕ್ಕೆ ಪ್ರಜ್ವಲ್ ರೇವಣ್ಣ ಅವರು ಗೊತ್ತಿಲ್ಲ, ಹಾಸನ ತೋಟದ ಮನೆಗಳಲ್ಲಿ ತುಂಬಾ ಜನ ಕೆಲಸದವರಿದ್ದಾರೆ.

Prajwal Revanna ಯಾರೆಂಬುದು ಗೊತ್ತಿಲ್ಲ. ಯಾರು ಎಂಬುದು ನೆನಪಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದಲ್ಲದೆ ದೂರು ಕೊಟ್ಟವರು ಯಾರು? ನೀವು ಹೇಳುತ್ತಿರುವ ಮಹಿಳೆಯ ಪರಿಚಯವೇ ನನಗಿಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ. ಈ ಹಿನ್ನೆಲೆ ಹಾಸನ ಜಿಲ್ಲೆಯ ಹೊಳೆನರಸೀಪುರಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಕರೆದುಕೊಂಡು ಹೋಗಿ ಎಸ್‌ಐಟಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

Arunachal Pradesh ಅರುಣಾಚಲ ಪ್ರದೇಶ್ ವಿಧಾನಸಭಾ ಚುನಾವಣೆ : ಬಿಜೆಪಿ ಗೆ ಬಹುಮತ

0

Arunachal Pradesh 60 ಸದಸ್ಯ ಬಲದ ಅರುಣಾಚಲ ಪ್ರದೇಶ ಅಸೆಂಬ್ಲಿಯಲ್ಲಿ ಬಿಜೆಪಿ 39 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತವನ್ನು ಪಡೆದುಕೊಂಡಿದ್ದರಿಂದ ಬಿಜೆಪಿ ಭಾನುವಾರ ಸತತ ಮೂರನೇ ಬಾರಿಗೆ ಅರುಣಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಮರಳಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

Arunachal Pradesh ಏಪ್ರಿಲ್ 19 ರಂದು ಈಶಾನ್ಯ ರಾಜ್ಯದಲ್ಲಿ ಚುನಾವಣೆ ನಡೆದ 50 ಸ್ಥಾನಗಳಿಗೆ ಇಂದು ಮತ ಎಣಿಕೆ ನಡೆಯಿತು.

Assembly Constituency ಜಯಲಕ್ಷ್ಮೀ ಒಲಿಯದ ಮಾಜಿ ಫುಟ್ಬಾಲ್ ಕ್ರೀಡಾಳು ಬೈಚುಂಗ್ ಭುಟಿಯಾ

0

Assembly Constituency ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಮತ್ತು ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಉಪಾಧ್ಯಕ್ಷ ಬೈಚುಂಗ್ ಭುಟಿಯಾ ಅವರು ನಾಮ್ಚಿ ಜಿಲ್ಲೆಯ ಬರ್ಫುಂಗ್ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ.

ಎಸ್‌ಕೆಎಂನ ರಿಕ್ಷಾಲ್ ದೋರ್ಜಿ ಭುಟಿಯಾ ವಿರುದ್ಧ ಭುಟಿಯಾ ಸುಮಾರು 4 ಸಾವಿರಕ್ಕೂ ಅಧಿಕ ಮತಗಳ ಅಂತದಲ್ಲಿ ಸೋತಿದ್ದಾರೆ. ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಅಭ್ಯರ್ಥಿ 8,358 ಮತಗಳನ್ನು ಪಡೆದರೆ, ಭುಟಿಯಾ 4,012 ಮತಗಳನ್ನು ಪಡೆದಿದ್ದಾರೆ.
ಉಳಿದಂತೆ ಸಿಟಿಜನ್ ಆಕ್ಷನ್ ಪಾರ್ಟಿ — ಬಾರ್ಫುಂಗ್ ಕ್ಷೇತ್ರದಲ್ಲಿ ಸಿಕ್ಕಿಂ ಅಭ್ಯರ್ಥಿ ದಾದುಲ್ ಲೆಪ್ಚಾ 656 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ತಾಶಿ ದಾದುಲ್ ಭುಟಿಯಾ ಕೇವಲ 298 ಮತಗಳನ್ನು ಪಡೆದಿದ್ದಾರೆ.
ಈ ಮೂಲಕ 10 ವರ್ಷಗಳಲ್ಲಿ ಬರೋಬ್ಬರಿ ಆರು ಬಾರಿ ಸೋಲುವ ಮೂಲಕ ಸೋಲಿನಲ್ಲೂ ಭುಟಿಯಾ ದಾಖಲೆ ಬರೆದಿದ್ದಾರೆ.

ಬೈಚುಂಗ್ ಭುಟಿಯಾ ಅವರು 2018 ರಲ್ಲಿ ತಮ್ಮದೇ ಆದ ಹಮ್ರೋ ಸಿಕ್ಕಿಂ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ಕಳೆದ ವರ್ಷ ಅದನ್ನು ಎಸ್‌ಡಿಎಫ್‌ನೊಂದಿಗೆ ವಿಲೀನಗೊಳಿಸಿದ್ದರು. ಪ್ರಸ್ತುತ ಅವರು ಎಸ್‌ಡಿಎಫ್‌ನ ಉಪಾಧ್ಯಕ್ಷರಾಗಿದ್ದಾರೆ. ಇದಕ್ಕೂ ಮೊದಲು ಮಾಜಿ ಫುಟ್ಬಾಲ್ ಆಟಗಾರ ಬೈಚುಂಗ್ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

2014 ರ ಲೋಕಸಭಾ ಚುನಾವಣೆಯಲ್ಲಿ ಡಾರ್ಜಿಲಿಂಗ್‌ನಿಂದ ಹಾಗೂ 2016 ರ ವಿಧಾನಸಭಾ ಚುನಾವಣೆಯಲ್ಲಿ ಸಿಲಿಗುರಿಯಿಂದ ಸ್ಪರ್ಧಿಸಿದ್ದರು. ಆದರೆ ಎರಡೂ ಕಡೆಯೂ ಅವರು ಸೋಲು ಅನುಭವಿಸಿದ್ದರು.

ನಂತರ ಹಿಮಾಲಯ ಪ್ರದೇಶದಲ್ಲಿ ಬರುವ ಸರೋವರಗಳಿಗೆ ಹೆಸರುವಾಸಿಯಾಗಿರುವ ಸುಂದರವಾದ ರಾಜ್ಯ ಸಿಕ್ಕಿಂನಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಬಯಸಿದ ಅವರು ಅಲ್ಲಿ ತಮ್ಮದೇ ಪಕ್ಷವನ್ನು ಸ್ಥಾಪಿಸಿದರು. 2019 ರ ವಿಧಾನಸಭಾ ಚುನಾವಣೆಯಲ್ಲಿ ಗ್ಯಾಂಗ್ಟಾಕ್ ಮತ್ತು ತುಮೆನ್ ಲಿಂಗಿಯಿಂದ ಸ್ಪರ್ಧಿಸಿದರು ಆದರೆ ಎರಡೂ ಕ್ಷೇತ್ರಗಳಲ್ಲೂ ಅವರು ಮತ್ತೆ ಸೋಲು ಕಂಡರು.

2019 ರಲ್ಲಿ ಮತ್ತೆ ಗ್ಯಾಂಗ್‌ಟಾಕ್‌ನ ಉಪ ಚುನಾವಣೆಯಲ್ಲಿಯೂ ಸ್ಪರ್ಧಿಸಿ ಸೋತರು.
ಬೈಚುಂಗ್ ಭುಟಿಯಾ
ಚುನಾವಣಾ ಫಲಿತಾಂಶದ ಕುರಿತು ಕಾರ್ಯತಂತ್ರ ರೂಪಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಭೆ
ಬೈಚುಂಗ್ ಭುಟಿಯಾ ಸಿಕ್ಕಿಂ ವಿಧಾನಸಭಾ ಚುನಾವಣೆಗೂ ಮುನ್ನ ಎಸ್‌ಡಿಎಫ್‌ಗೆ ಸೇರಿದ್ದರು.

Assembly Constituency ಅವರು ಹಿಂದಿನ ಹಮ್ರೊ ಸಿಕ್ಕಿಂ ಪಕ್ಷವನ್ನು ಎಸ್‌ಡಿಎಫ್‌ನೊಂದಿಗೆ ವಿಲೀನಗೊಳಿಸಿದ್ದರು. ಇದೀಗ ವಿಧಾನಸಭೆ ಚುನಾವಣೆಯಲ್ಲೂ ಸೋಲು ಕಂಡಿದ್ದಾರೆ.
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಭಾನುವಾರ ಹಿಮಾಲಯ ರಾಜ್ಯದಲ್ಲಿ 32 ಸದಸ್ಯ ಬಲದ ಅಸೆಂಬ್ಲಿಯಲ್ಲಿ 31 ಸ್ಥಾನಗಳನ್ನು ಗೆದ್ದು ಪ್ರಚಂಡ ಜಯಗಳಿಸುವ ಮೂಲಕ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ.

Dr. Keladi Gunda jois ನಾಡಿನ ಪ್ರಸಿದ್ಧ ಇತಿಹಾಸ ಸಂಶೋಧಕ ಡಾ.ಕೆಳದಿ ಗುಂಡಾಜೊಯಿಸ್ ನಿಧನ

0

Dr. Keladi Gundajois ಇತಿಹಾಸ ಸಂಶೋಧಕ, ಕೈ ಬರಹಗಳ ತಜ್ಞ, ಉತ್ಸಾಹದ 94 ವರ್ಷದ ಡಾ. ಕೆಳದಿ ಗುಂಡಾ ಜೋಯ್ಸ್ ರವರು ಭಾನುವಾರ ಸಂಜೆ ಸ್ವರ್ಗಸ್ಥರಾದರೆಂದು ತಿಳಿದುಬಂದಿದೆ.

ಅಂತಿಮ ದರ್ಶನಕ್ಕಾಗಿ ದೇಹವನ್ನು ಅವರ ಪುತ್ರರಾದ ಕೆಳದಿ ಡಾ.ವೆಂಕಟೇಶ್ ಜೋಯ್ಸ್ ರವರ ಸಾಗರದ ಅಣಲೇ ಕೊಪ್ಪ ಬಡಾವಣೆ ಮನೆಯಲ್ಲಿ ಇರಿಸಲಾಗಿತ್ತು. ಮೃತರ ಅಂತ್ಯಕ್ರಿಯೆ ಸೋಮವಾರ ಸಾಗರದ ಮಾರಿಕಾಂಬ ಚಿತಾಗಾರದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಡಾ. ಕೆಳದಿ ಗುಂಡಾ ಜೋಯಿಸ ಅವರ ದೈವಾಧೀನರಾಗಿದ್ದಾರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಕನ್ನಡ ನಾಡಿನ ಶ್ರೇಷ್ಠ ಇತಿಹಾಸ ವಿದ್ವಾಂಸರಾದ ಡಾ. ಕೆಳದಿ ಗುಂಡಾ ಜೋಯಿಸರು ಕೆಳದಿ ಇತಿಹಾಸವನ್ನು ವಿಶ್ವಪ್ರಸಿದ್ಧ ಮಾಡುವಲ್ಲಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ್ದಾರೆ. ಇತಿಹಾಸ ಮತ್ತು ಲಿಪಿ ಕ್ಷೇತ್ರದಲ್ಲಿ ಅವರ ಸಾಧನೆಗಳು ಹಿರಿಯವು.
ಶ್ರೀಯುತರು ೨೦೦೪ರಲ್ಲಿ ಹೊನ್ನಾಳಿಯಲ್ಲಿ ನಡೆದ ಕರ್ನಾಟಕ ಇತಿಹಾಸ ಅಕಾಡೆಮಿಯ 18ನೇ ವಾರ್ಷಿಕ ಸಮ್ಮೇಳನ ಸರ್ವಾಧ್ಯಕ್ಷರಾಗಿದ್ದರು. ೨೦೧೮ರಲ್ಲಿ ಬಾದಾಮಿಯಲ್ಲಿ ನಡೆದ 32ನೇ ವಾರ್ಷಿಕ ಸಮ್ಮೇಳನದಲ್ಲಿ ‘ಇತಿಹಾಸ ಸಂಸ್ಕೃತಿ ಶ್ರೀ’ ಪ್ರಶಸ್ತಿಗೆ ಭಾಜನರಾಗಿದ್ದರು. ಕರ್ನಾಟಕ ಇತಿಹಾಸ ಅಕಾದೆಮಿಯ ಹಿರಿಯ ಸದಸ್ಯರು ˌ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಾರ್ಗದರ್ಶಕರಾಗಿ ಸದಾ ಲವಲವಿಕೆಯಿಂದ ಬೆರೆಯುತ್ತಿದ್ದ ಹಿರಿಯರು ತಮ್ಮ ಕೊನೆಯ ದಿನಗಳವರೆಗೂ ಅಕಾದೆಮಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು.

Dr. Keladi Gundajois ನಿರಂತರ ಅಧ್ಯಯನ ಅಧ್ಯಾಪನ ಇತಿಹಾಸ ಸಂರಕ್ಷಣೆ ಹಾಗೂ ಹಲವು ಸಮಾಜಮುಖಿ ಕಾರ್ಯಗಳನ್ನು ತಮ್ಮ ಜೀವನದುದ್ದಕ್ಕೂ ನಡೆಸಿದ ಹಿರಿಯರ ಅಗಲಿಕೆ ನಾಡಿನ ಸಾಂಸ್ಕೃತಿಕ ಲೋಕಕ್ಕೆ, ಇತಿಹಾಸ ಅಕಾಡೆಮಿಗೆ ತುಂಬಲಾರದ ನಷ್ಟವಾಗಿದೆ. ಕರ್ನಾಟಕ ಇತಿಹಾಸ ಅಕಾಡೆಮಿಯು ನಾಡಿನ ಶ್ರೇಷ್ಠ ವಿದ್ವಾಂಸ ಡಾ. ಕೆಳದಿ ಗುಂಡಾ ಜೋಯಿಸರಿಗೆ ಗೌರ

Shivamogga Cycle Club ರಕ್ತದಾನದಿಂದ ದೈಹಿಕ & ಮಾನಸಿಕ ಆರೋಗ್ಯ ಸದೃಢ-ಶ್ರೀಕಾಂತ್

0

Shivamogga Cycle Club ವೃತ್ತಿ ಜತೆಯಲ್ಲಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ರಕ್ತದಾನ ಮಾಡುವುದರಿಂದ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಸದೃಢವಾಗುತ್ತದೆ ಎಂದು ಶಿವಮೊಗ್ಗ ಸೈಕಲ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಭಾರಧ್ವಾಜ್ ಹೇಳಿದರು.

ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಸೈಕಲ್ ಕ್ಲಬ್, ಮೂರ್ತಿ ಸೈಕಲ್ ಆಂಡ್ ಫಿಟ್ನೆಸ್ ವತಿಯಿಂದ ಹರ್ಕ್ಯೂಲಸ್ ಕಂಪನಿ ಸಹಯೋಗದಲ್ಲಿ ಆಯೋಜಿಸಿದ್ದ ಸೈಕಲ್ ಸವಾರಿ ಜಾಗೃತಿ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸೈಕಲ್ ಕ್ಲಬ್ ವತಿಯಿಂದ ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದ್ದು, 50ಕ್ಕೂ ಹೆಚ್ಚು ಸದಸ್ಯರು ಗಿನ್ನೆಸ್ ದಾಖಲೆ ಮಾಡಿದ ಗೌರವ ನಮ್ಮ ಸಂಸ್ಥೆಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸೈಕಲ್ ಕ್ಲಬ್ ಹಿರಿಯ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಸೈಕಲ್ ತುಳಿಯುವ್ಯದರಿಂದ ಸದಾ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ.

ಸದಾ ಲವಲವಿಕೆಯಿಂದ ಇರುವ ಜತೆಯಲ್ಲಿ ಬುದ್ಧಿಶಕ್ತಿ ಚುರುಕಾಗುತ್ತದೆ ಎಂದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮಾತನಾಡಿ, ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹಿರೋಗಳು. ರಕ್ತದ ಕೊರತೆ ಹೆಚ್ಚಿರುವುದನ್ನು ನಾವು ಕಾಣುತ್ತೇವೆ. ರಕ್ತದಾನ ಮಾಡಲು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಗಳು ಮುಂದಾಗಬೇಕು. ಇತರರನ್ನು ರಕ್ತದಾನ ಮಾಡಲು ಪ್ರೇರೆಪಿಸಬೇಕು ಎಂದು ಹೇಳಿದರು.

Shivamogga Cycle Club ಹರ್ಕ್ಯೂಲಸ್ ಕಂಪನಿಯ ಅಜಿತ್ ಚವ್ಹಾಣ್, ತೇಜಸ್ವಿ, ದಿನಕರ್ ವಸಂತ್, ಅಭಿಲಾಶ್, ರಾಜೇಶ್, ಪ್ರಮೋದ್, ದರ್ಶನ್, ಶ್ರೀಧರಚಂದ್ರ ಕೇಸರಿ, ನಾಗರಾಜ್, ಅಕ್ಷಯ್, ಕಾರ್ಯದರ್ಶಿ ಗೀರೀಶ್ ಕಾಮತ್, ಸಂಜಯ್, ಡಾ. ನಂದಕಿಶೋರ್, ಧರಣೇಂದ್ರ ದಿನಕರ್, ರಜನಿಕಾಂತ್ ಉಪಸ್ಥಿತರಿದ್ದರು.

ICC T-20 ಐಸಿಸಿ ಟಿ-20 ವಿಶ್ವಕಪ್ ಕ್ರಿಕೆಟ್:ಕೆನಡಾ ವಿರುದ್ಧ ಯುಎಸ್ಎ ದಾಖಲೆ ವಿಜಯ

0

ICC T-20 ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲೇ ಅತಿಥೇಯ ಯುಎಸ್ ಎ ತಂಡ ಕೆನಡಾ ವಿರುದ್ಧ ದಾಖಲೆಯ ಜಯ ದಾಖಲಿಸಿದೆ.

ಕೆನಡಾ ನೀಡಿದ 195 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಯುಎಸ್ಎ ತಂಡ 17.4 ಓವರ್ ನಲ್ಲಿ 3 ವಿಕೆಟ್ ಕಳೆದುಕೊಂಡು 197 ರನ್ ಗಳಿಸಿ ಭರ್ಜರಿ ಜಯ ಗಳಿಸಿದೆ. ಯುಎಸ್ಎ ಪರ ಆರಂಭಿಕ ಆಟಗಾರ ಸ್ಟೀವೆನ್ ಟೈಲರ್ ಡಕೌಟ್ ಆಗಿ ಆರಂಭಿಕ ಆಘಾತ ನೀಡಿದರು.

ಆದರೂ ದೃತಿಗೆಡದ ಯುಎಸ್ ಎ ತಂಡ ಆ್ಯಂಡ್ರಿಸ್ ಗಾಸ್ 65 ರನ್ ಮತ್ತು ಆ್ಯರನ್ ಜೋನ್ಸ್ ರ ಅಜೇಯ 94 ರನ್ ಗಳ ನೆರವಿನಿಂದ 17.4 ಓವರ್ ನಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 197 ರನ್ ಗಳಿಸಿ ಭರ್ಜರಿ ಜಯ ಗಳಿಸಿತು.

ಕೆನಡಾ ವಿರುದ್ಧ ಯುಎಸ್ಎ ದಾಖಲೆಯ ಜಯ:

ಇದು ಟಿ20 ಇತಿಹಾಸದಲ್ಲೇ ಮೂರನೇ ದಾಖಲೆಯ ಜಯವಾಗಿದೆ. ಚೇಸಿಂಗ್ ನಲ್ಲಿ 3ನೇ ಗರಿಷ್ಠ ರನ್ ಚೇಸಿಂಗ್ ಇದಾಗಿದೆ. ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಕೆನಡಾ ನಿಗಧಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 194 ರನ್ ಕಲೆಹಾಕಿತು.

ಕೆನಡಾ ಪರ ಆರನ್ ಜೋನ್ಸ್ 23 ರನ್, ನವನೀತ್ ಧಲಿವಾಲ್ 61 ರನ್, ನಿಕೋಲಸ್ ಕಿರ್ಟನ್ 51 ರನ್, ಕನ್ನಡಿಗ ಕರ್ನಾಟಕದ ದಾವಣಗೆರೆ ಮೂಲದ ಶ್ರೇಯಸ್ ಮೊವ್ವಾ 32 ರನ್ ಕಲೆ ಹಾಕಿದರು.

ICC T-20 ಇನ್ನು ಯುಎಸ್ಎ ಚೇಸ್ ಮಾಡಿದ 195 ರನ್ ಗಳ ಗುರಿ ಟಿ20 ವಿಶ್ವಕಪ್ ನಲ್ಲಿ ದಾಖಲಾದ 3ನೇ ಗರಿಷ್ಠ ರನ್ ಗಳ ಯಶಸ್ವಿ ಚೇಸಿಂಗ್ ಆಗಿದೆ. ಈ ಹಿಂದೆ 2016ರಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಅಫ್ರಿಕಾ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ 230 ರನ್ ಗಳ ಬೃಹತ್ ಗುರಿಯನ್ನು ಯಶಸ್ವಿಯಾಗಿ ಚೇಸ್ ಮಾಡಿತ್ತು.

ಇದಕ್ಕೂ ಮೊದಲು 2007ರಲ್ಲಿ ಜೋಹನ್ಸ್ ಬರ್ಗ್ ನಲ್ಲಿ ನಡೆದ ವಿಂಡೀಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 206ರನ್ ಗಳನ್ನು ಯಶಸ್ವಿಯಾಗಿ ಚೇಸ್ ಮಾಡಿತ್ತು. ಇದೀಗ 194ರನ್ ಗಳನ್ನು ಯುಎಸ್ಎ ಯಶಸ್ವಿಯಾಗಿ ಚೇಸ್ ಮಾಡಿದೆ.