Monday, April 13, 2026
Monday, April 13, 2026
Home Blog Page 709

Sumalatha ರಾಜ್ಯ ವಿಧಾನಪರಿಷತ್ತಿನ ದ್ವೈವಾರ್ಷಿಕ ಚುನಾವಣೆ.ಬಿಜೆಪಿ ಸಂಭಾವ್ಯ ಪಟ್ಟಿಯಲ್ಲಿ ಸುಮಲತಾ ಹೆಸರು?

0

Sumalatha ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಜೂನ್‌ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ತನ್ನ ಪಾಲಿನ ಮೂರು ಸ್ಥಾನಗಳಿಗೆ ವಿಧಾನಪರಿಷತ್‌ನ ಹಾಲಿ ಸದಸ್ಯ ಎನ್‌.ರವಿಕುಮಾರ್‌, ಸಂಸದೆ ಸುಮಲತಾ ಮತ್ತು ಪ್ರೊ.ಎಂ.ನಾಗರಾಜ್ ಅವರನ್ನು ಸಂಭಾವ್ಯ ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸುವ ಸಾಧ್ಯತೆಗಳಿವೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್‌ ಅವರಿಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್‌ ಸಿಕ್ಕಿಲ್ಲ. 2024 ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜೊತೆಗೆ ಮೈತ್ರಿಯಾದ ಹಿನ್ನೆಲೆ ಸುಮಲತಾ ಅಂಬರೀಶ್‌ ಅವರಿಗೆ ಟಿಕೆಟ್‌ ಕೈ ತಪ್ಪಿದ್ದು, ಇದೀಗ ಬಿಜೆಪಿ ಹೈಕಮಾಂಡ್‌ ಬಂಪರ್‌ ಆಫರ್‌ ನೀಡಲು ಮುಂದಾಗಿದೆ ಎಂದು ತಿಳಿದು ಬಂದಿದೆ.

Sumalatha ಮೂರು ಸ್ಥಾನಗಳಿಗೆ ಬಿಜೆಪಿಯಲ್ಲಿ ಭಾರೀ ಪೈಪೋಟಿ ಏರ್ಪಟ್ಟಿತ್ತು. ಸುಮಾರು 40 ಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದರು. ನಳಿನ್‌ಕುಮಾರ್ ಕಟೀಲ್‌, ಪ್ರತಾಪ ಸಿಂಹ, ಸಿ.ಟಿ.ರವಿ, ಜೆ.ಸಿ.ಮಾಧುಸ್ವಾಮಿ ಸೇರಿದಂತೆ ಹಲವರ ಹೆಸರುಗಳು ಮುಂಚೂಣಿಗೆ ಬಂದಿದ್ದವು. ಸುಮಾರು 15 ಹೆಸರುಗಳನ್ನು ಅಂತಿಮಗೊಳಿಸಿ ವರಿಷ್ಠರಿಗೆ ಕಳುಹಿಸಲಾಗಿತ್ತು.

ಜೂನ್ 01ರಂದು ಅಧಿಕೃತ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ.

Dr. Shanth A. Thimmaiah ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನ ವಜಾಗೊಳಿಸಿ ಆದೇಶ

0

Dr. Shanth A. Thimmaiah ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಡಾ. ಶಾಂತ್ ಎ ತಿಮ್ಮಯ್ಯ ಅವರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ (ಮೇ 31) ಆದೇಶ ಹೊರಡಿಸಿದೆ.

ಮಂಡಳಿಯ ಪ್ರಚಾರ ಜಾಹೀರಾತು ನೀಡುವಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಶಾಂತ್ ಎ ತಿಮ್ಮಯ್ಯ ಅವರ ವಿರುದ್ಧ ಕೇಳಿ ಬಂದಿತ್ತು.
ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಮಂಜೂರಾತಿಯಲ್ಲಿ ಪಾರದರ್ಶಕತೆ ಕಾಯ್ದೆ ಉಲ್ಲಂಘಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಕಡೆಗಣಿಸಿ ಖಾಸಗಿ ಜಾಹೀರಾತು ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿ ಶಾಂತ್‌ ತಿಮ್ಮಯ್ಯ ಸಾರ್ವಜನಿಕ ಹಣದ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

Dr. Shanth A. Thimmaiah ಈ ಬಗ್ಗೆ ತನಿಖೆಗೆ ಸರ್ಕಾರ ಆದೇಶಿಸಿತ್ತು. ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಮಹದೇವ ಅವರು ತನಿಖೆ ನಡೆಸಿ ಸಲ್ಲಿಸಿದ ವರದಿಯನ್ನು ಆಧರಿಸಿ ಸರ್ಕಾರ ಕ್ರಮ ಕೈಗೊಂಡಿದೆ. ಮಂಡಳಿಯ ಸದಸ್ಯ ಸ್ಥಾನದಿಂದಲೂ ಶಾಂತ್‌ ತಿಮ್ಮಯ್ಯ ಅವರನ್ನು ಅನರ್ಹಗೊಳಿಸಲಾಗಿದೆ.

Harish Poonja ಶಾಸಕ ಹರೀಶ್ ಪೂಂಜಾ ಅವರಿಗೆ ಕೋರ್ಟ್ ತರಾಟೆ

0

Harish Poonja ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಹರೀಶ್ ಪುಂಜಾ ವಿರುದ್ಧ ದಾಖಲಾಗಿದ್ದ 2 FIRಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು.
ಅದು ಬಿಟ್ಟು ಜನಪ್ರತಿನಿಧಿ ಎಂಬ ಕಾರಣಕ್ಕೆ ‌ಪೋಲಿಸ್ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ?, ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸದಲ್ಲಿ ಮಾಡುವುದಕ್ಕೆ ಮುಂದಾಗುವುದು ಎಷ್ಟು ಸರಿ ಎಂದು ನ್ಯಾಯಾಲಯ ಪ್ರಶ್ನಿಸಿದೆ.

Harish Poonja ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಮಾಡುವುದಕ್ಕೆ ಬಿಡಿ ಎಂದು ನ್ಯಾಯಾಲಯ ಸಲಹೆ ನೀಡಿದೆ.
ಹಾಗೆಯೇ ಪ್ರಸಕ್ತ ದಿನಗಳಲ್ಲಿ ಪೊಲೀಸ್‌ ರ ವಿರುದ್ಧ ಧರಣಿ ಮಾಡುವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಈ ರೀತಿಯ ಪ್ರಕರಣದಲ್ಲಿ ಯಾವುದೇ ನ್ಯಾಯಾಲಯ ಆರೋಪಿತರ ಪರವಾಗಿ ಆದೇಶಿಸಿರುವ ಭಾರತದ ಯಾವುದೇ ನ್ಯಾಯಾಲಯದಲ್ಲಿ ವಿದೇಶ ನ್ಯಾಯಾಲಯಗಳಲ್ಲಿ ಒಂದೇ ಒಂದು ಆದೇಶ ನೀಡಿರುವ ಉದಾಹರಣೆ ಇದಿಯೇ? ಇದ್ದರೆ ಸಲ್ಲಿಸಿ ಅದರ ಆಧಾರದಲ್ಲಿ ಮುಂದಿನ ವಿಚಾರಣೆ ನಡೆಸಿ ಆದೇಶಿಸಲಾಗುವುದು ಎಂದು ನ್ಯಾಯಾಲಯ ಅಭಿಪ್ರಾಯಪಡಿಸಿದೆ.
ವಾದ ಆಲಿಸಿದ ನ್ಯಾಯಾಲಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಅಲ್ಲದೆ, ಮುಂದಿನ ವಿಚಾರಣೆಯವರೆಗೆ ಸಮಾಧಾನವಾಗಿರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗಬೇಡಿ ಎಂದು ಸೂಚಿಸಿ ವಿಚಾರಣೆ ಮುಂದೂಡಿದೆ.

Jaya Nagar Police Station ಕೋರ್ಟ್ ನಿಂದ ಮರಳುವಾಗ ವ್ಯಕ್ತಿಯ ಮಾಜಿಪತ್ನಿಯಿಂದ ಹಾಲಿ ಪತ್ನಿಯ ಮೇಲೆ ಹಲ್ಲೆ

0

Jaya Nagar Police Station ಕೋರ್ಟ್‌ ಸಮೀಪ ಕೋರ್ಟ್‌ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮೇಲೆ ಅವರ ಪತ್ನಿಯೇ ಹಲ್ಲೆ ಮಾಡಿದ ಸಂಬಂಧ ಜಯನಗರ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Jaya Nagar Police Station ಶಿವಮೊಗ್ಗ ನಗರದ ಅಜಾದ್ ನಗರ ನಿವಾಸಿಯೊಬ್ಬರು ತಮ್ಮ ಮೊದಲ ಪತ್ನಿಯಿಂದ ವಿಚ್ಚೇದನ ಪಡೆದಿದ್ದರು. ಆನಂತರ ಎರಡನೇ ಮದುವೆಯಾಗಿದ್ದರು. ಈ ವಿಚಾರದಲ್ಲಿ ಮೊದಲನೇ ಪತ್ನಿ ಹಾಗೂ ನಿವಾಸಿಯ ನಡುವೆ ವ್ಯಾಜ್ಯ ನಡೆದಿತ್ತು.
ಇದೇ ವಿಚಾರದಲ್ಲಿ ಈ ಹಿಂದೆ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಳೆದ 28 ರಂದು ಕ್ರಿಮಿನಲ್‌ ಅಫೀಲ್‌ ವೊಂದಕ್ಕೆ ಸಂಬಂಧಿಸಿದಂತೆ ದೂರುದಾರ ನಿವಾಸಿ ಕೋರ್ಟ್‌ಗೆ ಹೋಗಿ ವಾಪಸ್‌ ಬರುವ ಸಂದರ್ಭದಲ್ಲಿ ಅವರ ಮೇಲೆ ಅವರ ಮೊದಲ ಪತ್ನಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ಸಹ ದಾಖಲಾಗಿದೆ.

Shikaripur News ಸಾಲ ವಸೂಲಾತಿ ವಿಳಂಬ: ಖಾಸಗಿ ಬ್ಯಾಂಕ್ ನಿಂದ ಮನೆಗೆ ದಾಳಿ. ರೋಗಪೀಡಿತರನ್ನ ಹೊರಹಾಕಿ ಮನೆ ಸೀಜ್

0

Shikaripur News ಸಾಲ ಕಟ್ಟಿಲ್ಲ ಎನ್ನುವ ಕಾರಣಕ್ಕೆ ಮನೆಯಲ್ಲಿದ್ದ ರೋಗಿ ಹೊರಹಾಕಿ ಮನೆ ಸೀಜ್ ಮಾಡಿದ ಘಟನೆ ತಾಲೂಕಿನ ಚನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದು ಕುಟುಂಬ ಅಕ್ಷರಶಃ ಬೀದಿಗೆ ಬಿದ್ದಿದ್ದು ಅವರಿಗೆ ನೆರವಾಗುವವರು ಯಾರು ಎನ್ನುವ ಪ್ರಶ್ನೆ ಎದುರಾಗಿದೆ.

ಶಿಕಾರಿಪುರ ಪಟ್ಟಣದ ಖಾಸಗಿ ಬ್ಯಾಂಕ್‌ವೊಂದರಲ್ಲಿ ಕಳೆದ ಆರು ವರ್ಷಗಳ ಹಿಂದೆ ಚನ್ನಹಳ್ಳಿ ಗ್ರಾಮದ ಲತಾ ನಾಗರಾಜಪ್ಪ 3.60 ಲಕ್ಷ ರೂ. ಸಾಲ ಸಾಲ ಪಡೆದಿದ್ದರು. ಅದರಲ್ಲಿ ಈಗಾಗಲೆ 3.10ಲಕ್ಷ ರೂ. ಮರುಪಾವತಿಸಿದ್ದಾರೆ.
ಇನ್ನೂ 3.65ಲಕ್ಷ ರೂ. ಬಾಕಿ ಇದ್ದು ಅದನ್ನು ಕಟ್ಟುವುದಕ್ಕೆ ಸಮಯ ಕೇಳಿದರೂ ಪ್ರಯೋಜವಾಗಿಲ್ಲ. ಮನೆಯಲ್ಲಿ ಹೆಂಡತಿ, ಮಗ, ಇಲ್ಲದ ಸಂದರ್ಭದಲ್ಲಿ ಪ್ಯಾರಲಿಸಿಸ್ ಪೀಡಿತ ನಾಗರಾಜಪ್ಪ ಅವರಿಗೆ ಮನೆಯಿಂದ ಹೊರಗೆ ಕಳುಹಿಸಿ ಮನೆಯ ಹಿಂಬಾಗಿಲು, ಮುಂಬಾಗಿಲು ಸೀಜ್ ಮಾಡಲಾಗಿದ್ದು ಕುಟುಂಬ ಕಂಗಾಲಾಗಿದೆ.

Shikaripur News ಇಡೀ ಕುಟುಂಬ ಅವರಿವರ ಮನೆಯಲ್ಲಿ ಊಟ ಮಾಡುತ್ತಿದ್ದು ಮಗ ದೇವಸ್ಥಾನ ಕಟ್ಟೆಮೇಲೆ ಮಲಗಿದರೆ, ಗಂಡ ಹೆಂಡತಿ ಮತ್ತೊಬ್ಬರ ಮನೆಯಲ್ಲಿ ರಾತ್ರಿ ಆಶ್ರಯ ಪಡೆದಿದ್ದಾರೆ. ಬೆಳಗ್ಗೆ ಆಗುತ್ತಿದ್ದಂತೆ ಹೆಂಡತಿ, ಮಗ ಕೂಲಿ ಕೆಲಸಕ್ಕೆ ಹೋದರೆ ನಾಗರಾಜಪ್ಪ ಅವರಿವರ ಮನೆ ಕಟ್ಟೆ ಮೇಲೆ ಕಾಲಕಳೆಯುತ್ತಿದ್ದಾರೆ.

ಕುಟುಂಬದ ಯಜಮಾನ ನಾಗರಾಜಪ್ಪ ಅವರಿಗೆ 2 ವರ್ಷದ ಹಿಂದೆ ಪ್ಯಾರಲಿಸಿಸ್ ಆಗಿದ್ದು ಅಂದಿನಿಂದ ಸಾಲದ ಕಂತು ಕಟ್ಟುವುದು ವಿಳಂಬವಾಗಿದೆ.
ಕುಟುಂಬಕ್ಕೆ ಇದ್ದ 10 ಗುಂಟೆ ಜಮೀನು ಮಾರಾಟ ಮಾಡಿದ್ದು ಹಣ ಬಾರದೆ ಸಮಸ್ಯೆ ಇನ್ನಷ್ಟು ಬಿಗುಡಾಯಿಸಿದೆ. ನಿತ್ಯ ನುಂಗುವ ಗುಳಿಗೆಯೂ ಮನೆಯೊಳಗೆ ಇದ್ದು ಅದನ್ನಾದರೂ ತೆಗೆದುಕೊಡಿ ಎನ್ನುವ ಬೇಡಿಕೆಗೂ ಮನ್ನಣೆ ಸಿಕ್ಕಿಲ್ಲ. ಮನೆಯಿದ್ದರೂ ಬೇರೊಬ್ಬರ ಮನೆ ಆಶ್ರಯದಲ್ಲಿ ಇರಬೇಕಾದ ಅನಿವಾರ್‍ಯ ಸ್ಥಿತಿಗೆ ತಲುಪಿರುವ ಕುಟುಂಬಕ್ಕೆ ತಾಲೂಕು ಆಡಳಿತ ರಕ್ಷಣೆ ನೀಡಬೇಕು ಎಂದು ಗ್ರಾಮಸ್ಥರು ಕೋರಿದ್ದಾರೆ.

R. Ashoka ಮೃತ ಚಂದ್ರಶೇಖರ್ ಕುಟುಂಬಕ್ಕೆಸಾಂತ್ವನ ಹೇಳಿದ ಆರ್ .ಅಶೋಕ್

0

R. Ashoka ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಜಾಲದಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ ಶ್ರೀ ಚಂದ್ರಶೇಖರ್ ಅವರ ನಿವಾಸಕ್ಕೆ ವಿಪಕ್ಷನಾಯಕ ಆರ್ ಅಶೋಕಗ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿ
ಪ್ರಕರಣದ ತನಿಖೆ ಸರಿಯಾಗಿ ನಡೆದು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕು, ಕುಟುಂಬಸ್ಥರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು

R. Ashoka ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ ಎಸ್ ಅರುಣ್, ಜಿಲ್ಲಾಧ್ಯಕ್ಷ ಶ್ರೀ ಟಿ ಡಿ ಮೇಘರಾಜ್ ಹಾಗೂ ಇತರರು ಉಪಸ್ಥಿತರಿದ್ದರು.

S. N. Channabasappa ನಿವೃತ್ತರಾಗಿ ಸಮಾಜಮುಖಿಯಾಗಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ- ಶಾಸಕ ‘ಚೆನ್ನಿ’

0

S. N. Channabasappa ಶಿಕ್ಷಕ ವೃತ್ತಿಯಲ್ಲಿ ಯಶಸ್ಸು ಕಾಣುವುದು ತುಂಬಾ ಕಠಿಣ ಕೆಲಸ ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು.
ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಎನ್‌ಎಸ್‌ಎಸ್ ಘಟಕ, ರೇಂಜರ‍್ಸ್, ರೋವರ‍್ಸ್, ರೆಡ್‌ಕ್ರಾಸ್ ಘಟಕದ ವತಿಯಿಂದ ವಾಣಿಜ್ಯಶಾಸ್ತ್ರದ ಮುಖ್ಯಸ್ಥ, ಸಹ ಪ್ರಾಧ್ಯಾಪಕ ಪ್ರೊ. ಎಸ್.ಜಗದೀಶ್ ಅವರಿಗೆ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಗರದ ಪ್ರತಿಷ್ಠಿತ ಕಾಲೇಜು ಎಟಿಎನ್‌ಸಿಸಿಯಲ್ಲಿ ಕೆಲಸ ಮಾಡುವ ಅವಕಾಶ ಸಿಗುವುದು ಒಂದು ಭಾಗ್ಯ. ನಿವೃತ್ತಿ ಜೀವನವು ಸಮಾಜಮುಖಿಯಾಗಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಮುಂದಾಗಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ನಾವು ವೃತ್ತಿ ಅವಧಿಯಲ್ಲಿ ಮಾಡಿರುವ ಕಾರ್ಯಗಳಿಂದ ನಮ್ಮನ್ನು ಗುರುತಿಸಿದಾಗ ನಿವೃತ್ತಿ ಜೀವನ ಸಾರ್ಥಕವಾಗುತ್ತದೆ. ಪ್ರೊ. ಜಗದೀಶ್ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.
S. N. Channabasappa ಇದೇ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ. ಕೆ.ಎ.ವಿಷ್ಣುಮೂರ್ತಿ ಮಾತನಾಡಿ, 32 ವರ್ಷಗಳಿಂದ ಶಿಕ್ಷಕ ವೃತ್ತಿಯನ್ನು ಜಗದೀಶ್ ಅವರು ಉತ್ತಮವಾಗಿ ಸಲ್ಲಿಸಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಪ್ರೋತ್ಸಾಹಿಸಿದ್ದಾರೆ. ಎನ್‌ಎಸ್‌ಎಸ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿರುತ್ತಾರೆ ಎಂದು ತಿಳಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರೊ. ಜಗದೀಶ್ ಮಾತನಾಡಿ, 32 ವರ್ಷಗಳಿಂದ ಸಲ್ಲಿಸಿದ ಸೇವೆಯು ತೃಪ್ತಿ ತಂದಿದೆ. ಆಡಳಿತ ಮಂಡಳಿ, ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಯಶಸ್ವಿಯಾಗಿ ಪೂರೈಸಿದ್ದೇನೆ ಎಂದರು.
ಪ್ರಾಚಾರ್ಯೆ ಪ್ರೊ. ಪಿ.ಆರ್.ಮಮತಾ, ಕುವೆಂಪು ವಿವಿ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ, ಪ್ರೊ. ಎನ್.ಮಂಜುನಾಥ್, ನಿವೃತ್ತ ಪ್ರಾಚಾರ್ಯ ಎಚ್.ಎಂ.ಸುರೇಶ್, ಪ್ರೊ. ರವಿಶಂಕರ್, ರೋಟರಿ ಮಾಜಿ ಸಹಾಯಕ ಗೌರ್ನರ್ ಜಿ ವಿಜಯಕುಮಾರ್ ಸುಜಾತಾ ಮತ್ತಿತರರು ಉಪಸ್ಥಿತರಿದ್ದರು.

National Students’ Union of India ಎನ್ ಎಸ್ ಯು ಐ ರಾಷ್ಟ್ರೀಯ ಕಾರ್ಯದರ್ಶೀ ಸತ್ಯಸಾಯಿ ಶವವಾಗಿ ಪತ್ತೆ!

0

National Students’ Union of India ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ರಾಜ್ ಸಂಪತ್ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಹೊರವಲಯದ ನೀರಾವರಿ ಟ್ಯಾಂಕ್ ಬಳಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿದ್ದ ಸಂಪತ್(36) ಲೋಕಸಭೆ ಚುನಾವಣೆಗೆ ಕೇರಳದಲ್ಲಿ ಎನ್‌ಎಸ್‌ಯುಐ ಉಸ್ತುವಾರಿಯನ್ನು ವಹಿಸಿದ್ದರು ಮತ್ತು ರಾಹುಲ್ ಗಾಂಧಿಯವರ ಐದು ತಿಂಗಳ ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು.

ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ರಾಜ್ ಸಂಪತ್‌ಗೆ ಅವರ ಸ್ನೇಹಿತರು ಕೊನೆಯ ಬಾರಿ ನೋಡಿದ್ದರು. ಆ ಬಳಿಕ ಅವರು ನಾಪತ್ತೆಯಾಗಿದ್ದರು. ಸ್ಥಳೀಯರು ಮೃತದೇಹವೊಂದು ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬಯಲಾಗಿದೆ.

National Students’ Union of India ಪ್ರಾಥಮಿಕ ತನಿಖೆಯಿಂದ ಸಂಪತ್‌ನನ್ನು ಬೇರೆಡೆ ಕೊಲೆ ಮಾಡಿ ಶವವನ್ನು ಪಟ್ಟಣದ ಹೊರವಲಯದ ತೊಟ್ಟಿಯ ಬಳಿ ಎಸೆದು ಹೋಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಡಿಎಸ್ಪಿ ಶ್ರೀನಿವಾಸ ರಾವ್, ವಿಧಿವಿಜ್ಞಾನ ತಂಡದೊಂದಿಗೆ ಶವ ಪತ್ತೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಂಪತ್‌ಗೆ ಸಹ ವಕೀಲರೊಬ್ಬರ ಜತೆ ಜಮೀನು ವಿವಾದವಿದ್ದು, ಈ ಕುರಿತು ಇತ್ತೀಚೆಗೆ ಹಿರಿಯ ಪೊಲೀಸ್‌ ಅಧಿಕಾರಿಗೆ ವಾಟ್ಸಾಪ್‌ ಸಂದೇಶ ಕಳುಹಿಸಿ ಜೀವಕ್ಕೆ ಅಪಾಯವಿದೆ ಎಂದು ಹೇಳಿದ್ದರು ಎಂದು ಸಂಪತ್‌ ಅವರ ಆಪ್ತ ಮೂಲಗಳು ತಿಳಿಸಿವೆ. ಈ ಕುರಿತು ಎಲ್ಲಾ ಕೋನಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Sharan Pumpwell ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಹಿಂದುತ್ವ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಎಫ್ ಐ ಆರ್

0

Sharan Pumpwell ಪ್ರಚೋದನಕಾರಿ‌ ಪೋಸ್ಟ್: ಹಿಂದುತ್ವ ಮುಖಂಡನ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ನಗರದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಚೋದನಕಾರಿ ಪೋಸ್ಟ್ ಹಾಕಿದ ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಳೆದ ಶುಕ್ರವಾರ ನಗರದ ಕಂಕನಾಡಿಯಲ್ಲಿ ಮಸೀದಿ ಪಕ್ಕದ ಒಳ ರಸ್ತೆ ಬದಿಯಲ್ಲಿ ಕೆಲ ಯುವಕರು ನಮಾಝ್ ಮಾಡಿದ ವಿಡಿಯೋ ವೈರಲ್ ಆಗಿತ್ತು. ನಮಾಝ್ ನಿರ್ವಹಿಸಿದ್ದಕ್ಕೆ ಸಂಘಪರಿವಾರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೆ ಪೊಲೀಸರು ಸುಮೋಟೊ ಪ್ರಕರಣ (ಐಪಿಸಿ ಸೆಕ್ಷನ್ 341, 283, 143 ಜೊತೆಗೆ 149 ಸೆಕ್ಷನ್) ದಾಖಲಿಸಿಕೊಂಡಿದ್ದರು. ಪೊಲೀಸರ ಕ್ರಮಕ್ಕೆ ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು.
Sharan Pumpwell ಮೇ 29ರಂದು ಕಾಂಗ್ರೆಸ್ ಮುಖಂಡ ಕೆ ಕೆ ಶಾಹುಲ್ ಹಮೀದ್ ನೇತೃತ್ವದ ಮುಸ್ಲಿಂ ನಾಯಕರ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಕೇಸ್ ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು. ಇಲ್ಲದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದರು. ಎಸ್‌ಡಿಪಿಐ ಪಕ್ಷ ಇಂದು (ಮೇ 31) ಶುಕ್ರವಾರ ಪ್ರತಿಭಟನೆ ಕೂಡ ಹಮ್ಮಿಕೊಂಡಿತ್ತು.
ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಸುಮೋಟೊ ಪ್ರಕರಣ ರದ್ದಾಗಿದೆ. ಈ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ “ರಸ್ತೆಯಲ್ಲಿ ನಮಾಝ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಕ್ಕೆ ಅಡೆತಡೆ ಮಾಡುವ ಯಾವುದೇ ಉದ್ದೇಶ ಇಲ್ಲದಿರುವುದರಿಂದ ಸದ್ರಿ ಪ್ರಕರಣದಲ್ಲಿ ‘ಬಿ’ ಅಂತಿಮ ವರದಿ ಸಲ್ಲಿಸಲಾಗಿದೆ ಮತ್ತು ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿಯನ್ನು ನೀಡದೆ ಸುಮೋಟೊ ಪ್ರಕರಣ ದಾಖಲಿಸಿದ ಕದ್ರಿ ಪೊಲೀಸ್ ನಿರೀಕ್ಷಕರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ, ಎಸಿಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ಭಂಗ ಉಂಟು ಮಾಡುವ ಪೋಸ್ಟ್ ಹಾಕಿದ್ದ ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶರಣ್ ಪಂಪವೆಲ್ ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್‌ನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

Gurudutt Hegde ನೈಋತ್ಯಪದವಿಧರ & ಶಿಕ್ಷಕರ ಕ್ಷೇತ್ರ ಚುನಾವಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸರ್ವ ಸಿದ್ಧತೆ- ಗುರುದತ್ತ ಹೆಗಡೆ

0

Gurudutt Hegde ಕರ್ನಾಟಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜೂನ್ 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದರು.
ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ನೈರುತ್ಯ ಪದವೀಧರ ಒಟ್ಟು 27412 ಒಟ್ಟು 38 ಮತಕೇಂದ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 4365 ಮತದಾರರು ಇದ್ದು ಒಟ್ಟು 32 ಮತಕೇಂದ್ರಗಳನ್ನು ತೆರೆಯಲಾಗಿದ್ದು ಮತದಾರರು ತಮ್ಮ ಮತ ಇರುವ ಕೇಂದ್ರದಲ್ಲಿ ಮತದಾನ ಮಾಡಬಹುದಾಗಿದೆ.

ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ 200 ಮೀ. ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧಿಸಿದಂತೆ ದಿನಾಂಕ:01-06-24 ಅಪರಾಹ್ನ 4 ಗಂಟೆಯಿಂದ 03-06-2024 ರ ಅಪರಾಹ್ನ 4 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ “ಒಣ ದಿನ” ಘೋಷಿಸಿ ಆದೇಶಿಸಲಾಗಿದೆ.

ಚುನಾವಣಾಧಿಕಾರಿ, ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ ಹಾಗೂ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ರವರ ಪತ್ರಿಕಾ ಪ್ರಕಟಣೆ ದಿನಾಂಕ:29.05.2024 ರಂತೆ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ಸಂಘ ಸಂಸ್ಥೆಗಳು ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇನ್ನಿತರ ಎಸ್ಟಬ್ಲಿಷ್‍ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತಚಲಾಯಿಸಲಿರುವ ಮತದಾರರಿಗೆ ದಿನಾಂಕ:03.06.2024 ರ ಸೋಮವಾರದಂದು ವಿಶೇಷ ಸಾಂಧರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿರುತ್ತಾರೆ. ಮತದಾನ ಮಾಡಲು ಚುನಾವಣಾ ಆಯೋಗ ಸೂಚಿಸಿರುವ ಭಾವಚಿತ್ರ ಇರುವ ಯಾವುದೇ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದು ಎಂದರು.

Gurudutt Hegde ದಿನಾಂಕ:02.06.2024 ರಂದು ಬೆಳಿಗ್ಗೆ 10.00 ಗಂಟೆಗೆ ಶಿವಮೊಗ್ಗ ನಗರ ಮಹಾನಗರ ಪಾಲಿಕೆ ಸೇರಿ ಎಲ್ಲಾ ತಾಲ್ಲೂಕು ಕಛೇರಿ ಕೇಂದ್ರಗಳಲ್ಲಿ ಮಸ್ಟರಿಂಗ್ ಕಾರ್ಯ ಪ್ರಾರಂಭಗೊಳ್ಳುತ್ತದೆ. ನಂತರ ದಿನಾಂಕ:03.06.2024 ರ ಸಂಜೆ 4.00 ಗಂಟೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ನಂತರ ಮತಪೆಟ್ಟಿಗೆಗಳನ್ನು ಮತ್ತು ಶಾಸನಬದ್ಧ ಲಕೋಟೆಗಳನ್ನು ಡಿಮಸ್ಟರಿಂಗ್ ಕೇಂದ್ರದಲ್ಲಿ ಕ್ರೋಢೀಕರಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಗೆ ಪೊಲೀಸ್ ಬೆಂಗಾವಲಿನಲ್ಲಿ ತರಲಾಗುವುದು.
ಮತಪೆಟ್ಟಿಗೆಗಳನ್ನು ಮತ್ತು ಶಾಸನಬದ್ಧ ಲಕೋಟೆಗಳನ್ನು ಪೊಲೀಸ್ ಬೆಂಗಾವಲಿನಲ್ಲಿ ಮೈಸೂರು ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಜೆ.ಎಲ್.ಬಿ ರಸ್ತೆ, ಮೈಸೂರು ಇಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಗೆ ಮತಗಟ್ಟೆವಾರು ಮತಪೆಟ್ಟಿಗೆಗಳನ್ನು ಇರಿಸಲು ಕ್ರಮವಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಉಪಸ್ಥಿತರಿದ್ದರು.