Monday, April 13, 2026
Monday, April 13, 2026
Home Blog Page 710

Gurudutt Hegde ನೈಋತ್ಯಪದವಿಧರ & ಶಿಕ್ಷಕರ ಕ್ಷೇತ್ರ ಚುನಾವಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸರ್ವ ಸಿದ್ಧತೆ- ಗುರುದತ್ತ ಹೆಗಡೆ

0

Gurudutt Hegde ಕರ್ನಾಟಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜೂನ್ 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದರು.
ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ನೈರುತ್ಯ ಪದವೀಧರ ಒಟ್ಟು 27412 ಒಟ್ಟು 38 ಮತಕೇಂದ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 4365 ಮತದಾರರು ಇದ್ದು ಒಟ್ಟು 32 ಮತಕೇಂದ್ರಗಳನ್ನು ತೆರೆಯಲಾಗಿದ್ದು ಮತದಾರರು ತಮ್ಮ ಮತ ಇರುವ ಕೇಂದ್ರದಲ್ಲಿ ಮತದಾನ ಮಾಡಬಹುದಾಗಿದೆ.

ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ 200 ಮೀ. ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧಿಸಿದಂತೆ ದಿನಾಂಕ:01-06-24 ಅಪರಾಹ್ನ 4 ಗಂಟೆಯಿಂದ 03-06-2024 ರ ಅಪರಾಹ್ನ 4 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ “ಒಣ ದಿನ” ಘೋಷಿಸಿ ಆದೇಶಿಸಲಾಗಿದೆ.

ಚುನಾವಣಾಧಿಕಾರಿ, ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ ಹಾಗೂ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ರವರ ಪತ್ರಿಕಾ ಪ್ರಕಟಣೆ ದಿನಾಂಕ:29.05.2024 ರಂತೆ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ಸಂಘ ಸಂಸ್ಥೆಗಳು ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇನ್ನಿತರ ಎಸ್ಟಬ್ಲಿಷ್‍ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತಚಲಾಯಿಸಲಿರುವ ಮತದಾರರಿಗೆ ದಿನಾಂಕ:03.06.2024 ರ ಸೋಮವಾರದಂದು ವಿಶೇಷ ಸಾಂಧರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿರುತ್ತಾರೆ. ಮತದಾನ ಮಾಡಲು ಚುನಾವಣಾ ಆಯೋಗ ಸೂಚಿಸಿರುವ ಭಾವಚಿತ್ರ ಇರುವ ಯಾವುದೇ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದು ಎಂದರು.

Gurudutt Hegde ದಿನಾಂಕ:02.06.2024 ರಂದು ಬೆಳಿಗ್ಗೆ 10.00 ಗಂಟೆಗೆ ಶಿವಮೊಗ್ಗ ನಗರ ಮಹಾನಗರ ಪಾಲಿಕೆ ಸೇರಿ ಎಲ್ಲಾ ತಾಲ್ಲೂಕು ಕಛೇರಿ ಕೇಂದ್ರಗಳಲ್ಲಿ ಮಸ್ಟರಿಂಗ್ ಕಾರ್ಯ ಪ್ರಾರಂಭಗೊಳ್ಳುತ್ತದೆ. ನಂತರ ದಿನಾಂಕ:03.06.2024 ರ ಸಂಜೆ 4.00 ಗಂಟೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ನಂತರ ಮತಪೆಟ್ಟಿಗೆಗಳನ್ನು ಮತ್ತು ಶಾಸನಬದ್ಧ ಲಕೋಟೆಗಳನ್ನು ಡಿಮಸ್ಟರಿಂಗ್ ಕೇಂದ್ರದಲ್ಲಿ ಕ್ರೋಢೀಕರಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಗೆ ಪೊಲೀಸ್ ಬೆಂಗಾವಲಿನಲ್ಲಿ ತರಲಾಗುವುದು.
ಮತಪೆಟ್ಟಿಗೆಗಳನ್ನು ಮತ್ತು ಶಾಸನಬದ್ಧ ಲಕೋಟೆಗಳನ್ನು ಪೊಲೀಸ್ ಬೆಂಗಾವಲಿನಲ್ಲಿ ಮೈಸೂರು ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಜೆ.ಎಲ್.ಬಿ ರಸ್ತೆ, ಮೈಸೂರು ಇಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಗೆ ಮತಗಟ್ಟೆವಾರು ಮತಪೆಟ್ಟಿಗೆಗಳನ್ನು ಇರಿಸಲು ಕ್ರಮವಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಉಪಸ್ಥಿತರಿದ್ದರು.

Karnataka Schools Reopening ಶಾಲಾರಂಭದ ದಿನ.ಮಕ್ಕಳಿಗೆ ಪಾಠ ಮಾಡಿ ಸಂತಸಪಟ್ಟ ಧಾರವಾಡ ಜಿಲ್ಲಾಧಿಕಾರಿ

Karnataka Schools Reopening ಶಾಲಾ ಪ್ರಾರಂಭೋತ್ಸವ ದಿನ. ರಜೆಯ ದಿನಗಳನ್ನು ಕಳೆದು ಮರಳಿ ಶಾಲೆಗೆ ಬರುತ್ತಿರುವ ಮಕ್ಕಳನ್ನು ಶಿಕ್ಷಕರು ಅತ್ಯಂತ ಸಂಭ್ರಮದಿಂದ ಬರಮಾಡಿಕೊಳ್ಳುತ್ತಿದ್ದಾರೆ. ಮಕ್ಕಳಿಗೆ ಸಿಹಿ ಹಂಚುವುದು, ಹೂಮಳೆ ಸುರಿಸುವ ಮೂಲಕ ಮಕ್ಕಳನ್ನು ಶಿಕ್ಷಕರು ಸ್ವಾಗತಿಸಿದ್ದಾರೆ.

ಆದರೆ ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಸ್ವತಃ ಶಾಲೆಗೆ ತೆರಳಿ ಶಿಕ್ಷಕಿಯಾಗಿ ವಿಶೇಷವಾಗಿ ಬರಮಾಡಿಕೊಂಡಿರುವುದು ಗಮನ ಸೆಳೆದಿದೆ.
ಶಾಲಾ ಪುನಾರಂಭದ ಮೊದಲ ದಿನವಾದ ಇಂದು ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಮಕ್ಕಳ ಮೇಲೆ ಹೂಮಳೆ ಸುರಿಸಿ, ಚಾಕಲೇಟ್ ಕೊಡುವ ಮೂಲಕ ವಿಶೇಷವಾಗಿ ಬರಮಾಡಿಕೊಂಡರು.
ಮಕ್ಕಳನ್ನ ಅತ್ಯಂತ ಖುಷಿಯಾಗಿ ಸ್ವಾಗತಿಸಿದ ಜಿಲ್ಲಾಧಿಕಾರಿಗಳು ನಂತರ ಸ್ವತಃ ಶಿಕ್ಷಕಿಯಾಗಿ ಎಂಟನೇ ತರಗತಿಯ ಇಂಗ್ಲೀಷ್ ಪಾಠವನ್ನು ಬೋಧನೆ ಮಾಡುವ ಮೂಲಕ ಮಕ್ಕಳ ಗಮನ ಸೆಳೆದರು.

Karnataka Schools Reopening ಮಕ್ಕಳಿಗೆ ಯಾವ ಭಾಷೆ ಕಠಿಣ ಎನಿಸುತ್ತದೆ ಎಂದು ಕೇಳಿದಾಗ, ಇಂಗ್ಲೀಷ್ ಭಾಷೆ ಕಠಿಣವಾಗುತ್ತದೆ ಎಂದು ಮಕ್ಕಳು ಹೇಳಿದಾಗ ಅದೇ ಭಾಷೆ ಮೇಲೆ ಪಾಠ ಮಾಡಿದ ಜಿಲ್ಲಾಧಿಕಾರಿಗಳು, ಇಂಗ್ಲೀಷ್ ಭಾಷೆಯನ್ನು ಕೇವಲ ಒಂದು ವಿಷಯವಾಗಿ ನೋಡಬೇಕು ಯಾವುದೇ ಭಾಷೆಯಾಗಲಿ ಅದು ತಪ್ಪಾದರೂ ಮಾತನಾಡಲು ಕಲಿಯಬೇಕು ಎಂದು ಮಕ್ಕಳಲ್ಲಿ ಹೊಸ ಉತ್ಸಾಹ ತುಂಬಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾಡಿದ ಪಾಠವನ್ನು ಮಕ್ಕಳು ಕೂಡ ಆಸಕ್ತಿಯಿಂದ ಕೇಳಿದ್ದು ವಿಶೇಷವಾಗಿತ್ತು. ಪಾಠದ ನಂತರ ಮಕ್ಕಳಿಗೆ ಪ್ರಶ್ನೆಗಳನ್ನೂ ಕೇಳಿದ ಜಿಲ್ಲಾಧಿಕಾರಿಗಳು, ಸದ್ಯ ಆರಂಭವಾಗಿರುವ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಮಕ್ಕಳು ಉತ್ತಮ ಫಲಿತಾಂಶ ಹೊಂದಬೇಕು ಎಂದು ಕಿವಿಮಾತು ಹೇಳಿದರು.

K. S. Eshwarappa ಪೊಲೀಸರು ಎಲ್ಲಿ ತಿನ್ನಬೇಕೋ ಅಲ್ಲಿ ತಿನ್ನಲಿ.ಗೋವು ಸಾಗಣೆ& ಗಾಂಜಾ ವಿಷಯದಲ್ಲಿ ತಿನ್ನುವ ಕೆಲಸ ಬೇಡ- ಈಶ್ವರಪ್ಪ

K. S. Eshwarappa ಪೊಲೀಸ್ ಇಲಾಖೆ ಗೋವು ಸಾಗಾಟ ಮತ್ತು ಗಾಂಜಾ ವಿಷಯದಲ್ಲಿ ಪ್ರಾಮಾಣಿಕವಾಗಿ ನಡೆದುಕೊಳ್ಳಬೇಕೆಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗಾಂಜಾ, ಅಫೀಮು ಮಾರುವ ವ್ಯಕ್ತಿಗಳ ನಡುವೆ ಎಲ್ಲಿಯವರೆಗೆ ಪೊಲೀಸರಿಗೆ ಸಂಬಂಧವಿರುತ್ತದೆಯೋ, ಎಲ್ಲಿಯವರೆಗೂ ಗಾಂಜಾ, ಮಟ್ಕಾ ಹಣ ಮುಟ್ಟುವುದಿಲ್ಲವೋ ಅಲ್ಲಿಯವರೆಗೆ ಸಮಸ್ಯೆಗಳು ಬಗೆಹರಿಯುವುದಿಲ್ಲ. ಪೊಲೀಸರು ಉದ್ಧಾರವಾಗುವುದಿಲ್ಲ. ಶಾಲಾ-ಕಾಲೇಜಿನಲ್ಲಿ ಗಾಂಜಾ ಅಫೀಮು ಓಡಾಡುತ್ತಿದೆ. ಇದು ಪೊಲೀಸರಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು, ಪೊಲೀಸರು ಎಲ್ಲಿ ತಿನ್ನಬೇಕೋ ಅಲ್ಲಿ ತಿನ್ನಲಿ. ಆದರೆ ಗೋವು ಸಾಗಾಟ ಮತ್ತು ಗಾಂಜಾ ವಿಷಯದಲ್ಲಿ ತಿನ್ನುವ ಕೆಲಸ ಮಾಡಬಾರದು ಎಂದು ಹೇಳಿದರು.

K. S. Eshwarappa ಶಿವಮೊಗ್ಗದ ಹೊಸಮನೆಯಲ್ಲಿ ನಡೆದ ಘಟನೆಯ ಬಗ್ಗೆ ಮಾತನಾಡಿದ ಈಶ್ವರಪ್ಪ, ಈ ಪ್ರಕರಣ ಗಾಂಜಾ ನಶೆಯಲ್ಲಿ ನಡೆದಿರುವ ಬಗ್ಗೆ ಅನುಮಾನವಿದೆ. ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆ ನಶೆಯಲ್ಲಿ ಹಲ್ಲೆ ಮಾಡಲು ಮತ್ತೆ ತನ್ನ ವಿರೋಧಿಯನ್ನು ಹುಡುಕಿಕೊಂಡು ಹೋಗುತ್ತಾನೆ. ಇವೆಲ್ಲ ಪೊಲೀಸರಿಗೆ ಗೊತ್ತಾಗುವುದಿಲ್ಲವೇ?. ಅವರು ತಮ್ಮ ಕೆಲಸವನ್ನು ನಿಷ್ಠೆ, ಪ್ರ‍್ರಾಮಾಣಿಕತೆಯಿಂದ ಮಾಡಬೇಕು ಎಂದರು.
ಮಂಗಳೂರಿನಲ್ಲಿ ರಸ್ತೆ ಮಧ್ಯೆಯೇ ನಮಾಜ್ ಮಾಡಿದ ಪ್ರಕರಣ, ಲವ್ ಜಿಹಾದ್ ಕುರಿತು ಮಾತನಾಡಿದ ಅವರು, ಮಂಗಳೂರಿನ ನಮಾಜ್ ಪ್ರಕರಣದಲ್ಲಿ ಪೊಲೀಸರು ಪ್ರ‍್ರಾಮಾಣಿಕತನ ಮೆರೆದರೂ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿರುವುದು ಸರ್ಕಾರದ ತುಷ್ಠೀಕರಣದ ನೀತಿಯ ಮುಂದುವರಿಕೆಯಾಗಿದೆ. ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದರು. ಆದರೆ ಇನ್‌ಸ್ಪೆಕ್ಟರ್‌ರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ. ಇದು ಮುಸ್ಲೀಂ ಸರ್ಕಾರ ಎಂದು ಘೋಷಿಸಲಿ ಎಂದರಲ್ಲದೆ, . ಈ ರೀತಿ ನಡೆದುಕೊಂಡರೆ ಕಾನೂನು ಸುವ್ಯವಸ್ಥೆ ಉಳಿಯಲು ಸಾಧ್ಯವೇ? ಚನ್ನಗಿರಿ ಪೊಲೀಸ್ ಠಾಣೆಯ ಮೇಲಿನ ದಾಳಿ ವಿಷಯದಲ್ಲೂ ಸರ್ಕಾರ ಎಡವಿದೆ ಎಂದು ಹೇಳಿದರು.

ಲವ್ ಜಿಹಾದ್‌ಗೆ ಹೆಲ್ಪ್ ಲೈನ್
ಪ್ರಮೋದ್ ಮುತಾಲಿಕ್ ಲವ್ ಜಿಹಾದ್ ವಿರುದ್ಧ ಹೆಲ್ಪ್ ಲೈನ್ ಆರಂಭಿಸಿದ್ದಾರೆ. ಇದನ್ನು ಸ್ವಾಗತಿಸುತ್ತೇನೆ. ನನ್ನ ಅವಶ್ಯಕತೆ ಅವರಿಗಿದ್ದರೆ ಈ ವಿಷಯದಲ್ಲಿ ಸಹಾಯ ಮಾಡಲು ಸಿದ್ಧ. ಶಿವಮೊಗ್ಗದಲ್ಲೂ ಈ ಹೆಲ್ಪ್ಲೈನ್ ಆರಂಭಿಸುವ ಕುರಿತು ಚಿಂತಿಸುವುದಾಗಿ ಘೋಷಿಸಿದರು.

ಮುಸ್ಲೀಂರ ಮತ ಎಷ್ಟು ಬೇಕಾದರೂ ತೆಗೆದುಕೊಳ್ಳಲಿ ಆದರೆ ಈ ರೀತಿಯ ನಡೆ ಸರಿಯಲ್ಲ. ಆದರೆ ಕಾನೂನು, ಸುವ್ಯವಸ್ಥೆ ವಿಚಾರದಲ್ಲಿ ರಾಜಿಯಾಗಬಾರದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಈಶ್ವರಪ್ಪ ಬೆಂಬಲಿಗರಾದ ವಿಶ್ವಾಸ್, ಎಂ ಜಿ ಬಾಲು, ಭೂಪಾಲ್, ಗನ್ನಿ ಶಂಕರ್ ಮೊದಲಾದವರಿದ್ದರು.

Hosahalli News ಹೊಸನಗರ ತಾಲ್ಲೂಕಿನ ವಡಾ ಹೊಸಹಳ್ಳಿಯಲ್ಲಿ ಕಿಡಿಗೇಡಿಗಳಿಂದ ತೆಂಗಿನ ಗಿಡ ನಾಶ

0

Hosahalli News ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರ ತೋಟದಲ್ಲಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ದುಷ್ಖೃತ್ಯ ಮೆರೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ
ವಡಾಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಮ್ಮ ಕೋಂ ಗೋಪಾಲ ರವರ ತೋಟದ ಮಧ್ಯ ಮತ್ತು ಅಂಚುಗಳಲ್ಲಿ ತೆಂಗಿನ ಮರಗಳನ್ನು ಕಡಿಯಲಾಗಿದೆ.

Hosahalli News ತೋಟದ ಅಂಚಿನಲ್ಲಿ ಮನೆ ಇದ್ದು ಬುಧವಾರ ತಡರಾತ್ರಿ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವಡಾಹೊಸಳ್ಳಿ ಗ್ರಾಮದ ಸ.ನಂ.28ರಲ್ಲಿ 1-20 ಎಕರೆ ಜಮೀನನ್ನು ಸುಮಾರು ವರ್ಷಗಳಿಂದ ಬಗಹುಕುಂ ಸಾಗುವಳಿ ಮಾಡುತ್ತಿರುವ ಲಕ್ಷ್ಮಮ್ಮ ಸದರಿ ಜಮೀನಿಗೆ ಸುತ್ತಲು ಕಲ್ಲು ಕಂಬದ ಬೇಲಿ ನಿರ್ಮಿಸಿದ್ದಾರೆ. ಸದರಿ ಜಮೀನಿನ ಮಂಜೂರಾತಿಗಾಗಿ ಈ ಹಿಂದೆಯೇ ಫಾರಂ 53ಯಡಿ ಅರ್ಜಿ ಸಲ್ಲಿಸಿದ್ದಾರೆ. ಕಿಡಿಗೇಡಿಗಳು ಮಾಲೀಕರು ಮಲಗಿರುವ ವೇಳೆಯಲ್ಲಿ ಹತ್ತು ತೆಂಗಿನ ಗಿಡಗಳನ್ನು ಕಿತ್ತು ಕಡಿದು ಹಾಕಿದ್ದಾರೆ.

Kateel Ashok Pai Memorial College ಎನ್ಎಸ್ಎಸ್,ವಿದ್ಯಾರ್ಥಿಗಳಲ್ಲಿ ಸಮನ್ವಯತೆ ಸೌಹಾರ್ದತೆ & ಸ್ವಯಂಸೇವೆ ಮನೋಭಾವ ಬೆಳೆಸುತ್ತದೆ- ಡಾ.ಶುಭಾ ಮರವಂತೆ

0

Kateel Ashok Pai Memorial College ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ದಿನಾಂಕ 25ಮೇ 2024 ರಿಂದ ದಿನಾಂಕ 31 ಮೇ 2024ರ ವರೆಗೆ ಬಾಳೆಕೊಪ್ಪ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಶಿಬಿರವನ್ನು ಉದ್ಘಾಟಿಸಿದ ಕುವೆಂಪು ವಿ ವಿಯ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ಶುಭ ಮರವಂತೆ,ಯವರು ತಮ್ಮ ಉದ್ಘಾಟನಾ ಭಾಷಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಮತ್ತು ದೂರದೃಷ್ಟಿಯನ್ನು ವಿವರಿಸಿದರು. ಗಾಂಧಿಯ ತತ್ವಗಳನ್ನು ಅಡಿಪಾಯವಾಗಿಟ್ಟು ಸ್ವಾತಂತ್ಯೋತ್ತರದಲ್ಲಿ ಪ್ರಾರಂಭಿಸಿದ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ‘ಸಮನ್ವಯತೆ ಸೌಹಾರ್ದತೆ’ ಹಾಗೂ ಸ್ವಯಂಸೇವೆಯ ಮನೋಭಾವವನ್ನು ಮೂಡಿಸುತ್ತದೆ ಎಂದರು.

‘ನನಗಲ್ಲ ನಿಮಗೆ’ ಎಂಬ ಧ್ಯೇಯ ವಾಕ್ಯವು ಒಂದು ಬಹಳ ದೊಡ್ಡ ಮೌಲ್ಯವನ್ನು ವ್ಯಕ್ತಿತ್ವದಲ್ಲಿ ಸೇರ್ಪಡೆಗೊಳಿಸುತ್ತದೆ ಎಂದು ಅವರು ಉದಾಹರಣೆಗಳೊಂದಿಗೆ ತಿಳಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಬಾಳೆಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಕವಿತಾ ವಾಸು, ಉಪಾಧ್ಯಕ್ಷರಾದ ಆಶಾ ಬಾಗೇಶ, ಸದಸ್ಯರಾದ ಶ್ರೀಮತಿ ಆಶಾ ಜಯಣ್ಣ, ಶ್ರೀ ರುದ್ರಪ್ಪ, ಶ್ರೀಧರ್ಮಪ್ಪ, ಶ್ರೀ ಪ್ರಕಾಶ್, ಶ್ರೀಮತಿ ಕವಿತಾ ಗುತ್ತೇರ್ ಹಾಗೂ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ. ರಾಜೇಂದ್ರ ಚೆನ್ನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ ಸಂಧ್ಯಾ ಕಾವೇರಿ ವಹಿಸಿದ್ದರು. ಏಳು ದಿನಗಳ ಶಿಬಿರದಲ್ಲಿ ಗ್ರಾಮ ಸ್ವಚ್ಛತೆ ಅರಿವಿನ ಕಾರ್ಯಕ್ರಮಗಳು, ಪಥ ಸಂಚಲನ, ಸುಬ್ಬಯ್ಯ ಮೆಡಿಕಲ್ ಕಾಲೇಜು ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಹಾಗೂ ರೋಟರಿ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಾಲಾ ಆವರಣದಲ್ಲಿ ನಡೆದ ಈ ಶಿಬಿರದಲ್ಲಿ ಶಿಬಿರಾರ್ಥಿಗಳು ಶಾಲೆಯ ಗೋಡೆಗಳಿಗೆ ಹಸೆ ಚಿತ್ತಾರಗಳನ್ನು ಬರೆದರು. ದಿನಾಂಕ 31 ಮೇ 2024 ರಂದು ಶಿಬಿರದ ಸಮಾರೋಪ ನೋಡಿಗಳನ್ನು ಆಡಿದ ಕಾಲೇಜಿನ ಆಡಳಿತ ಅಧಿಕಾರಿಗಳಾದ ಪ್ರೊಫೆಸರ್ ರಾಮಚಂದ್ರ ಬಾಳಿಗಾ ಅವರು ‘ಈ ಶಿಬಿರದಿಂದ ವಿದ್ಯಾರ್ಥಿಗಳು ಅತ್ಯುತ್ತಮವಾದ ಅನುಭವಗಳನ್ನು ಪಡೆದುಕೊಂಡಿದ್ದಾರೆ.

Kateel Ashok Pai Memorial College ಇಂತಹ ಒಂದು ಸಂಘಟನಾ ಕೌಶಲ್ಯ, ಸಂಯೋಜನೆಯ ಮನೋಭಾವ, ಹೊಂದಾಣಿಕೆಯ ಸಾಮರ್ಥ್ಯ ಇಂದು ಸಮಾಜವನ್ನು ಮುನ್ನಡೆಸಲು ಬಹಳ ಅಗತ್ಯ, ಈ ಕಲಿಕೆ ರಾಷ್ಟ್ರೀಯ ಸೇವಾ ಯೋಜನೆಯಿಂದ ಮಾತ್ರ ಸಾಧ್ಯ’ ಎಂದು ತಿಳಿಸಿದರು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಾಳೆಕೊಪ್ಪ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಲಿಂಗಪ್ಪನವರು ಶಿಬಿರದ ಕಲಿಕೆ ಒಂದು ಕಾರ್ಯಾನುಭವದ ಕಲಿಕೆ ಎಂದು ವಿಶ್ಲೇಷಿಸಿದರು. ಊರಿನ ಮುಖಂಡರು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿಗಳು ಮಾದರಿ ನಡತೆಯನ್ನು ತೋರಿದ್ದಾರೆ ಇವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು. ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದ ಶಿಬಿರ ಅಧಿಕಾರಿಗಳಾದ ಡಾಕ್ಟರ್ ಸುಕೀರ್ತಿ ಹಾಗೂ ಶ್ರೀ ರಾಬರ್ಟ್ರಾಯಪ್ಪ ರವರು ಶಿಬಿರದ ಅತ್ಯುತ್ತಮ ತಂಡ ಶರಾವತಿ ತಂಡವೆಂದು, ಅತ್ಯುತ್ತಮ ಸ್ವಯಂಸೇವಕ ಶ್ರೀ ಜನಾರ್ಧನ್ ಹಾಗೂ ಅತ್ಯುತ್ತಮ ಸ್ವಯಂ ಸೇವಕಿ ಕುಮಾರಿ ಪ್ರಜ್ಞಾದೀಪ್ತಿ ಎಂದು ಘೋಷಿಸಿದರು.

ಸಮಾರೋಪ ಸಮಾರಂಭದಲ್ಲಿ ಗ್ರಾಮದ ಮುಖಂಡರು, ಶಾಲೆಯ ಶಿಕ್ಷಕರು, ಕಾಲೇಜಿನ ಉಪನ್ಯಾಸಕರುಗಳು ಭಾಗವಹಿಸಿದ್ದರು. ಕಾಲೇಜಿನ ಹಿರಿಯ ಸ್ವಯಂಸೇವಕರಾದ, ಗಣರಾಜ್ಯ ಪಥಸಂಚಲನದಲ್ಲಿ ವಿ ವಿಯನ್ನು ಪ್ರತಿನಿಧಿಸಿದ್ದ ಶ್ರೀ ಹರ್ಷವರ್ಧನ್ ಹಾಗೂ ಕು. ಸಂಧ್ಯಾ ಶಿಬಿರದ ನಾಯಕತ್ವವನ್ನು ವಹಿಸಿದ್ದರು. ಒಟ್ಟಿನಲ್ಲಿ 7 ದಿನಗಳ ಗ್ರಾಮವಾಸ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಬಾಳೆಕೊಪ್ಪ ಗ್ರಾಮದ ಜನರೊಂದಿಗೆ ಒಡನಾಡಲು, ಹಲವಾರು ಕೌಶಲ್ಯಗಳನ್ನು ಕಲಿಯಲು ಹಾಗೂ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಕಾರಿಯಾಯಿತು.

Gurudatta Hegde ಶಿವಮೊಗ್ಗ ಲೋಕಸಭಾ‌ಕ್ಷೇತ್ರ ಚುನಾವಣೆ.ಮತಗಳ ಎಣಿಕೆಗೆ ಸಕಲ ಸಿದ್ಧತೆ-ಗುರುದತ್ತ ಹೆಗಡೆ

Gurudatta Hegde ಲೋಕಸಭಾ ಚುನಾವಣೆ-2024 ಮತ ಎಣಿಕೆ ಜೂನ್ 04 ರಂದು ನಡೆಯಲಿದ್ದು ಚುನಾವಣಾ ಆಯೋಗದ ನಿಯಮಾನುಸಾರ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪತ್ರಿಕಾಗೊಷ್ಠಿಯಲ್ಲಿ ತಿಳಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಜೂನ್ 04 ರಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಬೆಳಗ್ಗೆ 8.00 ಗಂಟೆ ಆರಂಭಿಸಲಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಒಟ್ಟು 1752885 ಮತದಾರರು ಇದ್ದು ಒಟ್ಟು 1372949 ಮತ ಚಲಾವಣೆಯಾಗಿದೆ. ಮತ ಎಣಿಕೆಗೆ ಒಟ್ಟು 523 ಸಿಬ್ಬಂದಿಗಳನ್ನು ನೇಮಿಸಲಾಗಿದೆ.

ಮತ ಎಣಿಕೆ ಕುರಿತು ಅಭ್ಯರ್ಥಿಗಳಿಗೆ ಅಥವಾ ಚುನಾವಣಾ ಏಜೆಂಟರಿಗೆ ಜೂನ್ 04 ರಂದು ಬೆಳಗ್ಗೆ 7 ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ತಿಳಿಸಲಾಗಿದೆ. ಬೆಳಿಗ್ಗೆ 7.00 ಗಂಟೆಗೆ ಭದ್ರತಾ ಕೊಠಡಿಯ ಬಾಗಿಲನ್ನು ತೆರೆಯಲು ಕ್ರಮವಹಿಸುವ ಮಾಹಿತಿಯನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗಿದೆ.

ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್ ಗಳು ಇರುತ್ತದೆ. ಮತ ಎಣಿಕೆ ಟೆಬಲ್ ಕೌಂಟರ್‍ಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರು ಪ್ರವೇಶಿಸಲು ಅವಕಾಶವಿರುತ್ತದೆ.
ಅಂಚೆ ಮತಪತ್ರಗಳನ್ನು ಬೆಳಿಗ್ಗೆ 8.00 ಗಂಟೆಗೆ ಚುನಾವಣಾಧಿಕಾರಿಗಳ ಮೇಜಿನಲ್ಲಿ ಆರಂಭಿಸಲಾಗುವುದು. ಅಂಚೆ ಮತಪತ್ರಗಳ ಎಣಿಕೆ ಆರಂಭವಾದ 30 ನಿಮಿಷಗಳ ನಂತರ ಕಂಟ್ರೋಲ್ ಯೂನಿಟ್ ಮೂಲಕ ಮತ ಎಣಿಕೆಯನ್ನು ಆರಂಬಿಸಲಾಗುವುದು. ಪ್ರತೀ ಮತ ಎಣಿಕೆ ಟೇಬಲ್ ಗೆ ಒಬ್ಬರು ಮೇಲ್ವಿಚಾರಕರು, ಒಬ್ಬರು ಸಹಾಯಕರು ಮತ್ತು ಒಬ್ಬರು ಮೈಕ್ರೋ ಅಬ್ಸರ್ವರ್ ಗಳನ್ನು ನೇಮಕಗೊಳಿಸಿ ತರಬೇತಿ ನೀಡಲಾಗಿದೆ.

ಇ.ವಿ.ಎಂ ಮತ ಎಣಿಕೆಗಳು ಪೂರ್ಣಗೊಂಡ ನಂತರ ಪ್ರತೀ ವಿಧಾನಸಭಾ ಕ್ಷೇತ್ರದಿಂದ ಐದು ವಿವಿಪ್ಯಾಟ್‍ಗಳ ಎಣಿಕೆಯನ್ನು ಒಂದಾದ ಮೇಲೆ ಒಂದರಂತೆ ಎಣಿಕೆ ಕಾರ್ಯ ಮಾಡಲಾಗುತ್ತದೆ. ಮತ ಎಣಿಕೆ ಹಾಲ್ ನಲ್ಲಿ ಮೊಬೈಲ್ ಗಳಿಗೆ ಅವಕಾಶವಿರುವುದಿಲ್ಲ.
ಮತ ಎಣಿಕೆ ಆವರಣದ ಸುತ್ತಮುತ್ತ ಸೆಕ್ಷನ್ 144 ನ್ನು ಜಾರಿ ಮಾಡಲಾಗಿದೆ ಮಾಧ್ಯಮ ಕೇಂದ್ರವನ್ನು ಮತ ಎಣಿಕೆ ಆವರಣದಲ್ಲಿ ಪ್ರತ್ಯೇಕ ಕೊಠಡಿಯನ್ನು ತೆರೆಯಲಾಗಿದೆ ವಿಧಾನಸಭಾ ಕ್ಷೇತ್ರ 18ರಿಂದ21 ಸುತ್ತಿನ ಎಣಿಕೆ ನಡೆಯಲಿದ್ದು ಪ್ರತಿಯೊಂದು ಸುತ್ತಿನ ಫಲಿತಾಂಶವನ್ನು ಚುನಾವಣಾ ವೀಕ್ಷಕರ ಸಹಿ ಹಾಕಿದ ನಂತರ ಮಾಧ್ಯಮ ಹಾಗೂ ಮೈಕ್ ಮೂಲಕ ತಿಳಿಸಲಾಗುತ್ತದೆ ಎಂದರು.

Gurudatta Hegde ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಮಾತನಾಡಿ ಲೋಕಸಭಾ ಚುನಾವಣೆ ಮತ ಏಣಿಕೆ 200 ಮೀಟರ್ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಸಹ್ಯಾದ್ರಿ ಕಾಲೇಜು ಮುಖ್ಯರಸ್ತೆ, ಎಂಆರ್ ಎಸ್ ವೃತ್ತ ವಾಹನ ಸಂಚಾರ ನಿಷೇಧಿಸಲಾಗಿದ್ದು ವಾಹನ ಸವಾರರಿಗೆ ಬದಲಿ ಮಾರ್ಗ ಕಲ್ಪಿಸಲಾಗಿದೆ. 1000ಕ್ಕೂ ಅಧಿಕ ಪೋಲಿಸ್ ಸಿಬ್ಬಂದಿ, ಹೋಂ ಗಾರ್ಡ್, ಕೆಎಸ್‍ಆರ್‍ಪಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ವಹಿಸಲಾಗಿದೆ ಹಾಗೂ ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಭೆಗಳನ್ನು ನಡೆಸಿ ಮಾಹಿತಿಯನ್ನು ನೀಡಿಲಾಗಿದೆ ಎಂದರು.

Department of Education ಶಿಕ್ಷಣ ಇಲಾಖೆಯಲ್ಲಿ ಖಾಲಿಯಿರುವ ಮತ್ತಷ್ಟು ಹುದ್ದೆಗಳ ಭರ್ತಿ – ಸಚಿವ ಮಧು ಬಂಗಾರಪ್ಪ

0

Department of Education ಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಮತ್ತಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರಕಾರ ಬಂದ ಮೇಲೆ ೧೩ ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು, 12 ಸಾವಿರ ಮಂದಿ ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಅನುದಾನಿತ ಶಾಲೆಗಳು ಹಾಗೂ ಸರಕಾರಿ ಪಿಯು ಕಾಲೇಜುಗಳ 900 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ನೀತಿಸಂಹಿತೆ ಕೊನೆಗೊಂಡ ಬಳಿಕ ಪ್ರಕ್ರಿಯೆ ಆರಂಭಿಸಲಾಗುವುದು. ಶಾಲಾ ಕಾಲೇಜುಗಳನ್ನು ಸಶಕ್ತಗೊಳಿಸುವಲ್ಲಿ ನಮ್ಮ ಸರಕಾರ ಬದ್ಧತೆಯಿಂದ ಕೆಲಸ ಮಾಡಲಿದೆ ಎಂದರು.

ಹಿಂದಿನ ಸರಕಾರ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ್ದ ಕೊಳಕನ್ನು ತೊಳೆಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾ ಅವರ ಇಡೀ ಅವಧಿಯಲ್ಲಿ ಕೇವಲ 3300 ಶಿಕ್ಷಕರನ್ನು ನೇಮಕ ಮಾಡಲಾಗಿತ್ತು.

Department of Education ಈಗ ಆಧಾರರಹಿತ ಆರೋಪ ಮಾಡುತಿದ್ದಾರೆ. 3000 ಕೆಪಿಎಸ್ ಶಾಲೆ ಆರಂಭಕ್ಕೆ ಸರಕಾರ ಬದ್ಧವಾಗಿದೆ. ರಾಜ್ಯದ 600 ಶಾಲೆಗಳ ದುರಸ್ತಿಗೆ ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಶಾಲಾ ಕಟ್ಟಡ ದುರಸ್ತಿಗೂ ಆದ್ಯತೆ ನೀಡಲಾಗುವುದು. ನಾಳೆಯಿಂದ ಶಾಲೆಗಳು ಆರಂಭವಾಗಲಿದ್ದು, ಎಲ್ಲಾ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಮೊದಲ ವಾರದಲ್ಲಿ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.

Kimmane Ratnakara ಸಿನಿಮಾ ನೋಡಿ ಗಾಂಧಿ ಬಗ್ಗೆ ತಿಳಿದು ಕೊಂಡೆ” ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕಿಮ್ಮನೆ ಮಾತಿನ ಟಾಂಗ್

0

Kimmane Ratnakara ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮ ಗಾಂಧೀಜಿ ಕುರಿತ ಓದದೇ ಇರುವ ಪ್ರಧಾನಿ ಇದ್ದರೆ, ಅದು ನರೇಂದ್ರ ಮೋದಿ ಮಾತ್ರ. ಇದು ದೇಶದ ಅತಿ ದೊಡ್ಡ ದುರಂತ. ಆದ್ದರಿಂದ, ಗಾಂಧಿ ಬಗ್ಗೆ ಅಧ್ಯಯನ ನಡೆಸಲು ಶೀಘ್ರವಾಗಿ ಪುಸ್ತಕ ಕಳುಹಿಸಿ ಕೊಡುವೆ. ಅರ್ಥ ಆಗುವ ಭಾಷೆಗೆ ತರ್ಜುಮೆ ಮಾಡಿಕೊಂಡು ಮೋದಿ ಓದಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.

ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿನಿಮಾ ನೋಡಿ ಗಾಂಧಿ ಬಗ್ಗೆ ತಿಳಿದುಕೊಂಡೆ ಎನ್ನುವ ಮೋದಿ ಅವರ ಜ್ಞಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಬೇಕು. ದೇಶದಲ್ಲಿ ಗಾಂಧಿ ಬಗ್ಗೆ ಕಲಿಸದ ಶಾಲೆಗಳು ಎಲ್ಲಿಯೂ ಇಲ್ಲ. ಗಾಂಧಿ ಮರಣ ಹೊಂದಿದಾಗ ಅದೇ ಮೊದಲ ಬಾರಿ ಅರ್ಧ ಬಾವುಟ ಹಾರಿಸಲಾಗಿತ್ತು. ಇದರ ಬಗ್ಗೆಯೂ ಮೋದಿಗೆ ಅರಿವಿಲ್ಲ. ಇಲ್ಲಿ ಗಾಂಧಿ ಬಗ್ಗೆ ಸರಿ ಸಮನಾದ ವ್ಯಕ್ತಿ ಮತ್ತೊಬ್ಬರಿಲ್ಲ. ಮುಂದಿನ ದಿನದಲ್ಲಾದರೂ ಮೋದಿ ಅವರು ಗಾಂಧೀಜಿ ಬಗ್ಗೆ ಅರಿಯಲಿ ಎಂದರು.

ಮಾರ್ಟಿನ್ ಲೂಥರ್, ನೆಲ್ಸನ್ ಮಂಡೇಲಾ, ವಿನ್‌ಸ್ಟೆನ್ ಚರ್ಚಿಲ್, ಐನ್‌ಸ್ಟಿನ್, ಲಾರ್ಡ್ ಮೌಂಟ್ ಬ್ಯಾಟೆನ್ ಸೇರಿದಂತೆ ವಿಶ್ವದ ಅನೇಕ ಮಹನೀಯರು ಗಾಂಧೀಜಿಯವರನ್ನು ಹಾಡಿಹೊಗಳಿದ್ದಾರೆ. ಗಾಂಧೀಜಿಯವರ ತತ್ವಗಳೇ ನಮಗೆ ಮಾರ್ಗದರ್ಶನ ಎಂದು ಹೇಳಿದ್ದಾರೆ.

Kimmane Ratnakara ಸುಮಾರು 250 ದೇಶಗಳಲ್ಲಿ ಗಾಂಧಿ ಅಧ್ಯಯನ ಕೇಂದ್ರವಿದೆ. ಸುಮಾರು 35 ಸಾವಿರಕ್ಕೂ ಹೆಚ್ಚು ಪುಸ್ತಕಗಳು ಗಾಂಧೀಜಿ ಕುರಿತು ಬಂದಿದೆ. 145ಕ್ಕೂ ಹೆಚ್ಚು ದೇಶಗಳಲ್ಲಿ ಗಾಂಧೀಜಿಯವರ ಪ್ರತಿಮೆಗಳಿವೆ. ಭವಿಷ್ಯ ಇವೆಲ್ಲವೂ ಮೋದಿಯವರಿಗೆ ಗೊತ್ತಿರಲಿಕ್ಕಿಲ್ಲ ಎಂದರು.
ಮೋದಿ ಈಗ ಹತಾಶರಾಗಿದ್ದಾರೆ. ಸುಳ್ಳು ಹೇಳಿಕೆಗಳನ್ನು ನೀಡತೊಡಗಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ತೆಗೆದುಬಿಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಸ್ವಾತಂತ್ರ್ಯಾ ನಂತರ ಇಷ್ಟು ವರ್ಷಗಳಲ್ಲಿ ಆರ್‌ಎಸ್‌ಎಸ್ ಆಗಲಿ, ಬಿಜೆಪಿಯಾಗಲಿ ಮೀಸಲಾತಿ ಪರವಾಗಿ ಇಲ್ಲ ಎಂದರು.

Shivamogga Police ಕುಡುಕರ ಪುಂಡಾಟಿಕೆ ನಡೆದ ಹೊಸಮನೆ ಏರಿಯಾಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ

0

shivamogga Police ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ತಾರು ವಾಹನಗಳ ಜಖಂ ನಡೆದ ಹೊಸಮನೆ ಏರಿಯಕ್ಕೆ ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದರು.

ಇಂತಹ ಕೃತ್ಯವನ್ನು ನಡೆಸಿರುವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಯಾರಿಗೂ ಭಯ ಬೇಡ ನಿಮ್ಮೊಂದಿಗೆ ಸದಾ ನಾವಿದ್ದೇವೆ ಆರೋಪಿಗಳನ್ನು ಕೂಡಲೇ ಪತ್ತೆ ಮಾಡಿ ಅವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಈಗಾಗಲೇ ಶಿವಮೊಗ್ಗ ನಗರದಾದ್ಯಂತ ರಾತ್ರಿಗಸ್ತು ಪೂಟ್ ಪೆಟ್ರೋಲಿಂಗ್ , ಏರಿಯಾ ಡಾಮಿನೇಷನ್ ನಡೆಸಲಾಗುತ್ತಿದ್ದು ಹೊಸಮನೆ ಏರಿಯಕ್ಕೆ ವಿಶೇಷ ಒತ್ತು ನೀಡಿ ಹೆಚ್ಚಿನ ನಿಗಾ ವಹಿಸಲಾಗುವುದು.

Shivamogga Police ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಗಾಂಜಾ ಸೇವನೆ ಮಾಡಿರುವ ವ್ಯಕ್ತಿಗಳು ಕಂಡುಬಂದರೆ ಕೂಡಲೇ ಮಾಹಿತಿ ನೀಡಿ ಅಂತವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.

Election Commission of India ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು

0

Election Commission of India ಭಾರತ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂ. 03 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ.

Election Commission of India ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಷ್‍ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಚುನಾವಣೆಯಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ ಹಾಗೂ ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್)ಯನ್ನು ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಎಪಿಕ್ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂಕ ದಾಖಲಾತಿಗಳ ಪೈಕಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಇಂಡಿಯನ್ ಪಾಸ್‍ಪೋರ್ಟ್ ಇತ್ಯಾದಿಗಳಲ್ಲಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.