Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00 ರಿಂದ 5.00ರವರೆಗೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿರುವ ಬಂದಿ ಕಲಾವಿದರಿಂದ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಜೈಲು ಹಕ್ಕಿಗಳ ಗಾನಸುಧೆ ಎಂಬ ಶೀರ್ಷಿಕೆಯಡಿ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ.
ಅಪರಾಧವನ್ನು ದ್ವೇಷಿಸು, ಅಪರಾಧಿಯನ್ನಲ್ಲ ಎಂಬ ತತ್ವದಡಿಯಲ್ಲಿ ಬಂದಿಗಳ ಮನಃಪರಿವರ್ತನೆಗಾಗಿ ಸಕಾರಾತ್ಮಕ ಸುಧಾರಣೆಯೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಸೇರಿಸುವುದು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಧ್ಯೇಯವಾಗಿರುತ್ತದೆ. 20 ಜನ ಬಂದಿಗಳನ್ನು ಉತ್ತಮ ಹಾಡುಗಾರರೆಂದು ಗುರುತಿಸಿ ಹಾಡುಗಳನ್ನು ಹಾಡಲು ಅಕಾಶ ಕಲ್ಪಿಸಲಾಗಿದ್ದು, Akashavani Bhadravati ಹಾಡುಗಳೊಂದಿಗೆ ಅವರ ಬದುಕಿನ ಪರಿವರ್ತನ ಸನ್ನಿವೇಶಗಳನ್ನು ಮತ್ತು ಮುಕ್ತ ಮನಸ್ಸಿನ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ.
ಆಸಕ್ತ ಕೇಳುಗರು ತಮ್ಮ ಮೊಬೈಲ್‌ನಲ್ಲಿ “NEWS ON AIR APP” ಡೌನ್ಲೋಡ್ ಮಾಡಿಕೊಂಡು 103.5 MHz and 101.4 MHz Frequency ಇಲ್ಲಿ ಕಾರ್ಯಕ್ರಮವನ್ನು ಕೇಳಬಹುದಾಗಿರುತ್ತದೆ.
ಪ್ರಚಾರದ ಆಡಿಯೋ ಲಿಂಕ್ https://www.image2url.com/r2/default/audio/1780556525429-149a6f75-62fb-4bf0-b385-3f0f40966105.mp3
ಸಾರ್ವಜನಿಕರು ಈ ಕಾರ್ಯಕ್ರಮವನ್ನು ಕೇಳಿ, ಆನಂದಿಸಿ, ಪ್ರೋತ್ಸಾಹಿಸುವಂತೆ ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.
DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್
DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ ಗಿಡಗಳನ್ನು ಬೆಳೆಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.
ಅವರು ಇಂದು ವಿಧಾನಸೌಧ ದಲ್ಲಿ ವಿಶ್ವ ಪರಿಸರದ ದಿನದ ಅಂಗವಾಗಿ ಗಿಡ ನೆಟ್ಟು ನೀರುಣಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ವಿಶ್ವ ಪರಿಸರದ ದಿನದ ಅಂಗವಾಗಿ ಇಂದು ವಿಮಾನ ನಿಲ್ದಾಣದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರೊಂದಿಗೆ ಕೂಡಾ ಸಸಿ ನೆಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
DK Shivakumar ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ
ಜೂನ್ 27 ರಂದು ಕೆಂಪೇಗೌಡ ದಿನಾಚರಣೆಯನ್ನು ಬಿಡಿಎ ವತಿಯಿಂದ ಆಚರಿಸುತ್ತಿದ್ದು, 15 ಲಕ್ಷ ಸಸಿ ನೆಡಲಾಗುವುದು ಎಂದರು.
B.Y. Raghavendra “ಅಮ್ಮನ ಹೆಸರಿನಲ್ಲಿ ಒಂದು ಗಿಡ” ನೆಡುವ ಸಂಕಲ್ಪ. ಪ್ರಧಾನಿ ಮೋದೀಜಿ ಅವರ ಅಭಿಯಾನವು ಭಾವುಕ ಸಂಬಂಧ ಬೆಸೆಯುವುದಾಗಿದೆ- ಬಿ.ವೈ.ರಾಘವೇಂದ್ರ.
B.Y. Raghavendra ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮ್ಮನ ಹೆಸರಲ್ಲಿ ಒಂದು ಗಿಡ ಎಂಬ ಮಹತ್ವಾಕಾಂಕ್ಷೆಯ ದೇಶವ್ಯಾಪಿ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಪರಿಸರ ಸಂರಕ್ಷಣೆಯ ಜೊತೆಗೆ ಪ್ರತಿಯೊಬ್ಬರಲ್ಲೂ ತಾಯಿಯ ಬಗೆಗಿನ ಭಾವುಕ ಸಂಬಂಧವನ್ನು ಬೆಸೆಯುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.
B.Y. Raghavendra ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ವಿಶೇಷ ಸಸಿ ನೆಡುವ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರು ಸಕ್ರಿಯವಾಗಿ ಭಾಗವಹಿಸಿದ್ದರು.
World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.
World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ, ನಿಖರ, ನಿರ್ದಿಷ್ಟ ಸಮಯದ ದತ್ತಾಂಶವನ್ನು ವಿಶ್ಲೇಷಿಸಲು ಮತ್ತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕೃತಕ ಬುದ್ಧಿಮತ್ತೆ (ಎಐ) ಬಳಕೆ ಪ್ರಮುಖ ಪಾತ್ರ ವಹಿಸುತ್ತದೆ. ಪರಿಸರ ಮಾಲಿನ್ಯ ನಿಯಂತ್ರಿಸುವಲ್ಲಿ ಎಐ ತಂತ್ರಜ್ಞಾನದ ಬಳಕೆ ಅಗತ್ಯ ಎಂದು ಟಿಎಂಎಇಎಸ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಜಿ.ಎ. ಹಿರೇಮಠ ಪ್ರತಿಪಾದಿಸಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ನಿದಿಗೆಯಲ್ಲಿರುವ ಟಿಎಂಎಇಎಸ್ ಆಯುರ್ವೇದ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಜೂ. 5ರ ಶುಕ್ರವಾರ ಮಧ್ಯಾಹ್ನ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಸರೀಕರಣಕ್ಕೆ ಕಾರ್ಯಕ್ರಮಕ್ಕೆ ಸಸಿ ನಡೆವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ನೆಲ- ಜಲ ಮತ್ತು ವಾಯು ಮಾಲಿನ್ಯ ಪತ್ತೆ, ಗಾಳಿ ಹಾಗೂ ನೀರಿನ ಗುಣಮಟ್ಟವನ್ನು ಸಂವೇದಕಗಳು (ಸೆನ್ಸರ‍್ಸ್) ಮತ್ತು ಉಪಗ್ರಹ ಚಿತ್ರಗಳ ಮೂಲಕ ನಿಖರವಾಗಿ ಎಐ ವಿಶ್ಲೇಷಿಸುತ್ತದೆ. ಅಲ್ಲದೆ ಮಾಲಿನ್ಯಕಾರಕಗಳು ಮತ್ತು ರಾಸಾಯನಿಕ ಸೋರಿಕೆಯನ್ನು ತ್ವರಿತವಾಗಿ ಗುರುತಿಸಲು ನೆರವಾಗುತ್ತದೆ ಎಂದರು.
ವಾಯು ಮಾಲಿನ್ಯಕ್ಕೆ ಕೈಗಾರಿಕೆಗಳು ಮತ್ತು ವಾಹನಗಳು ಹೊರಸೂಸುವ ಹೊಗೆ ಪ್ರಮುಖ ಕಾರಣ. ಕೈಗಾರಿಕೆಗಳಿಂದ ಉಂಟಾಗುವ ಮಾಲಿನ್ಯವನ್ನು ಮೇಲ್ವಿಚಾರಣೆ ಮಾಡಿ, ಹೊರಸೂಸುವಿಕೆಯನ್ನು ತಗ್ಗಿಸಲು ಮತ್ತು ಉತ್ಪಾದನಾ ಪ್ರಕ್ರಿಯೆಗಳನ್ನು ಪರಿಸರ ಸ್ನೇಹಿಯಾಗಿಸಲು ಎಐ ಸಹಕಾರಿಯಾಗಿದೆ. ವಾಹನಗಳಿಂದ ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸುವುದರೊಂದಿಗೆ ಟ್ರಾಫಿಕ್ ದಟ್ಟಣೆಯನ್ನು ಸುಗಮಗೊಳಿಸುವ ಮಾರ್ಗಗಳನ್ನು ಎಐ ಸೂಚಿಸುತ್ತದೆ ಎಂದು ತಿಳಿಸಿದರು.
World Environment Day ತ್ಯಾಜ್ಯ ನಿರ್ವಹಣೆ ಜಾಗತಿಕ ಸಮಸ್ಯೆಯಾಗಿ ಬಿಟ್ಟಿದೆ. ಮಹಾನಗರಗಳಲ್ಲೆಂತೂ ತ್ಯಾಜ್ಯ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ. ಸ್ಮಾರ್ಟ್ಬಿನ್‌ಗಳ ಮೂಲಕ ತ್ಯಾಜ್ಯ ನಿಯಂತ್ರಣವನ್ನು ಮುನ್ಸೂಚಿಸುವುದು ಎಐನಿಂದ ಸಾಧ್ಯ. ಈ ಮೂಲಕ ತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದೆAಬ ಆಶಯ ವ್ಯಕ್ತಪಡಿಸಿದರು.
ಎಐ ತಂತ್ರಜ್ಞಾನದ ಬಳಕೆ ಪರಿಸರ ಸಂರಕ್ಷಣೆಗೆ ವರದಾನವಾಗಿದ್ದರೂ, ಎಐ ಸರ್ವರ್‌ಗಳು ಮತ್ತು ಡೇಟಾ ಕೇಂದ್ರಗಳು ಅಪಾರ ಪ್ರಮಾಣದ ವಿದ್ಯುತ್ ಮತ್ತು ನೀರನ್ನು ಬಳಸುತ್ತವೆ. ಆದ್ದರಿಂದ ಸುಸ್ಥಿರ ಮತ್ತು ಇಂಧನ ದಕ್ಷತೆಯ ಎಐ ಮಾದರಿಗಳನ್ನು ಅಭಿವೃದ್ಧಿಪಡಿಸುವುದು ಅಗತ್ಯವಾಗಿದೆ ಎಂದರು.
ಕಾಲೇಜಿನ ಉಪ ಪ್ರಾಂಶುಪಾಲ ಸದಾನಂದ ಎಸ್. ಜೋಶಿ, ಡಾ.ಎಸ್.ವಿ. ಪ್ರಶಾಂತ್, ಎನ್‌ಎಸ್‌ಎಸ್ ಅಧಿಕಾರಿ ಡಾ. ಮಲ್ಲಿಕಾರ್ಜುನ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪರಿಸರ ಜಾಗೃತಿಗಾಗಿ ಮಾನವ ಸರಪಳಿ ರಚಿಸಲಾಗಿತ್ತು
MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ
MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ ಮತ್ತು ನಿರ್ವಹಣೆ ಉಪ ವಿಭಾಗ, ಮೆಸ್ಕಾಮ ಕಚೇರಿಯಲ್ಲಿ ಜೂ. 09 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00ರವರೆಗೆ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದ್ದು, ಅಂದು ಈ ಉಪವಿಭಾಗ ವ್ಯಾಪ್ತಿಯ ಗ್ರಾಹಕರು ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.
Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ನಡುವಿನ ಒಡಂಬಡಿಕೆಯಂತೆ ವಿದೇಶಗಳಿಗೆ ಹಾಗೂ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರಗಳಿಗೆ ಕಲಾತಂಡಗಳನ್ನು ಕಳುಹಿಸಲು ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯ ಅರ್ಹ ಕಲಾವಿದರು ಮತ್ತು ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಾಡಿಕೊಳ್ಳಲಾಗಿರುವ ಈ ಒಡಂಬಡಿಕೆಯನ್ವಯ, ಐಸಿಸಿ ಆರ್ ಸಂಸ್ಥೆಯ ವತಿಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡಲಾಗುತ್ತದೆ. ಈ ಮೂಲಕ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪ್ಯಾನಲ್ ಮಾಡಿ ಅವರ ಪ್ರತಿಭೆಯನ್ನು ಹೆಚ್ಚು ಪ್ರಚುರಪಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ.
ಆದ್ದರಿಂದ, ಜಿಲ್ಲೆಯಲ್ಲಿರುವ ಆಸಕ್ತ ಕಲಾವಿದರು ಹಾಗೂ ಕಲಾತಂಡಗಳು ನಿಗದಿತ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆಯಾ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಗೆ ದಿನಾಂಕ: 12.06.2026 ರೊಳಗಾಗಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು.
Kannadasiri ಅರ್ಜಿ ನಮೂನೆಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.kannadasiri.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶಿವಮೊಗ್ಗ ಜಿಲ್ಲಾ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಪ್ರಕಟಣೆಯಲ್ಲಿ ಕೋರಿದ್ದಾರೆ.
Shivamogga News ಶಿವಮೊಗ್ಗದಲ್ಲಿ ಆಕರ್ಷಕ ಆಭರಣ ಪ್ರದರ್ಶನ ಮೇಳ ಉದ್ಘಾಟನೆ.
Shivamogga News ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ‘ದ ಜ್ಯುವೆಲರಿ ಷೋ’ ಪ್ರದರ್ಶನ ಮತ್ತು ಮಾರಾಟ ಚಿನ್ನ-ಬೆಳ್ಳಿ ಆಭರಣ ಮೇಳವನ್ನು ಇಂದು ಬೆಳಿಗ್ಗೆ ಖ್ಯಾತ ನಟಿ ಸೋನಾಲ್ ಮೊಂಥೆರೋ ಉದ್ಘಾಟಿಸಿದರು.
ಶ್ರೀಮತಿ ಜಯಲಕ್ಷ್ಮಿ ಕೆ.ಎಸ್. ಈಶ್ವರಪ್ಪ, ಶ್ರೀಮತಿ ಸುಮಾ ತೇಜಸ್ವಿ , ಮಾರ್ಕೆಟಿಂಗ್ ಮ್ಯಾನೇಜರ್ ವಿನಯ್ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು. ಈ ಮೇಳದಲ್ಲಿ ಭಾರತದ ಹೆಸರಾಂತ ೨೦ಕ್ಕೂ ಹೆಚ್ಚು ವಜ್ರ ಮತ್ತು ಚಿನ್ನಾಭರಣದ ಮಳಿಗೆಗಳು ಪಾಲ್ಗೊಂಡಿವೆ.ಬಿಐಎಸ್ ಹಾಲ್‌ಮಾರ್ಕ್ ಹೊಂದಿರುವ ವಿಶೇಷ ವಿನ್ಯಾಸಗಳನ್ನು ಹೊಂದಿರುವ ವಜ್ರ, ಚಿನ್ನ ಹಾಗೂ ಬೆಳ್ಳಿಯ ಆಭರಣಗಳು ಲಭ್ಯವಿದೆ. ಜೊತೆಗೆ ಹಳೆ ಚಿನ್ನ ಬದಲಾವಣೆಗೆ ಅವಕಾಶವಿದೆ.
Shivamogga News ಈ ಪ್ರದರ್ಶನ ಕೇವಲ ಮೂರು ದಿನಗಳಿದ್ದು, ಶಿವಮೊಗ್ಗೆಯ ಜನತೆ ಇದರ ಸದುಪಯೋಗ ಪಡೆಯುವಂತೆ ಗೋಲ್ಡನ್ ಕ್ರೀಪರ್ ಸಂಸ್ಥೆಯ ಬಿ.ಎನ್. ಜಗದೀಶ್ ಮತ್ತು ಹೇಮಲತಾ ಜಗದೀಶ್ ಅವರು ಕೋರಿದ್ದಾರೆ.
JCI Shimoga ಪರಿಸರವನ್ನ ನಾವು ರಕ್ಷಿಸಿದರೆ,ಅದು ನಮ್ಮನ್ನ ರಕ್ಷಿಸುತ್ತದೆ- ವಿಜಯಲಕ್ಷ್ಮೀ ಕಡಂಬ
JCI Shimoga ಗಿಡಗಳನ್ನು ಬೆಳೆಸುವ ಮೂಲಕ ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದು ಜೆಸಿಐ ಶಿವಮೊಗ್ಗ ವಿವೇಕ್ ಅಧ್ಯಕ್ಷೆ ವಿಜಯಲಕ್ಷ್ಮೀ ಕಡಂಬ ಹೇಳಿದರು.
ಜೆಸಿಐ ಶಿವಮೊಗ್ಗ ವಿವೇಕ್ ಹಾಗೂ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸಹಯೋಗದಲ್ಲಿ ಕಲ್ಲಿಹಾಳ್‌ನಲ್ಲಿ ಇರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ “ವಿಶ್ವ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ” ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಕಾರ್ಯದಲ್ಲಿ ಕೈಜೋಡಿಸಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿರುವುದನ್ನು ನಾವೆಲ್ಲರೂ ಕಾಣುತ್ತಿದ್ದೇವೆ. ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೂರಕವಾದ ಜೀವನಶೈಲಿ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ಜೆಸಿಐ ಸಂಸ್ಥೆಯ ಪೂರ್ವ ಅಧ್ಯಕ್ಷ ಡಾ. ನಾಗರಾಜ್ ಪರಿಸರ ಅವರು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ಅತ್ಯಂತ ಸರಳ ಹಾಗೂ ಪ್ರಭಾವಶಾಲಿಯಾಗಿ ಮನವರಿಕೆ ಮಾಡಿಕೊಟ್ಟರು.
JCI Shimoga ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸಂಸ್ಥೆಯ ಮ್ಯಾನೇಜ್‌ಮೇಂಟ್ ತಂಡದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳೊಂದಿಗೆ ಜೊತೆಗೂಡಿ ಕಾಲೇಜು ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಪ್ರತಿಯೊಬ್ಬರಿಗೂ ಪರಿಸರದ ಮಹತ್ವದ ಬಗ್ಗೆ ತಿಳಿಸಲಾಯಿತು.
ಕಲ್ಲಿಹಾಳ್ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲೆ ಪಂಕಜಾ, ಜೆಸಿಐ ಶಿವಮೊಗ್ಗ ವಿವೇಕ್ ಸದಸ್ಯರು ಹಾಗೂ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಪದಾಧಿಕಾರಿಗಳು, ಕಾಲೇಜಿನ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಇದ್ದರು.
Drinking Water Supplier Shivamogga ಜೂನ್ 7&8 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ. ಕನನೀಸ & ಒಳಚರಂಡಿ ಮಂಡಳಿ ಪ್ರಕಟಣೆ.
Drinking Water Supplier Shivamogga ಮೆಸ್ಕಾಂ ಇಲಾಖೆಯ ನಗರ ಉಪ-ವಿಭಾಗ-2 ರ ವ್ಯಾಪ್ತಿಯಲ್ಲಿರುವ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಕಾರಣದಿಂದಾಗಿ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಜೂನ್ 7 ರಂದು ಮೆಸ್ಕಾಂ ವತಿಯಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ.
Drinking Water Supplier Shivamogga ಪರಿಣಾಮವಾಗಿ, ಜೂನ್ 7 ಮತ್ತು ಜೂನ್ 8 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
World Environment Day ಹೆಚ್ಚು ಮರಗಳನ್ನ ಬೆಳೆಸಿ ಪರಿಸರ ಸಮತೋಲನ ಕಾಪಾಡಬೇಕು -ರಿತೇಶ್ ಜೋಷಿ.
World Environment Day ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ 05-06-2026 ರಂದು ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ವತಿಯಿಂದ ಕಾರ್ಖಾನೆಯ ಆವರಣದಲ್ಲಿ ವಿವಿಧ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಸುಸ್ಥಿರ ಅಭಿವೃದ್ಧಿಯ ಮಹತ್ವವನ್ನು ಸಿಬ್ಬಂದಿ ಮತ್ತು ಸಾರ್ವಜನಿಕರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಬೆಳಿಗ್ಗೆಯೇ ಚಾಲನೆ ದೊರೆತಿದ್ದು, ಸಂಸ್ಥೆಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ರೀ ಶ್ರೀವತ್ಸನ್, ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ಶ್ರೀ ಎಂ.ಜಿ. ನಾಗರಾಜ್, ಕಾರ್ಪೊರೇಟ್ ಹೆಡ್ ಆಫೀಸ್‌ನ ಮಾನವ ಸಂಪನ್ಮೂಲ ವಿಭಾಗದ ಸಿ.ಎಚ್.ಆರ್.ಓ ಶ್ರೀ ರಿತೇಶ್ ಜೋಶಿ, ಕಾರ್ಮಿಕ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳು ಒಟ್ಟಾಗಿ ಸೇರಿ ಕಾರ್ಖಾನೆಯ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವ ಮೂಲಕ ಪರಿಸರದ ಸಮತೋಲನ ಕಾಪಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು.
ಸಾಯಂಕಾಲ 4.00 ಗಂಟೆಗೆ ಕಾರ್ಖಾನೆಯ ಆಡಿಟೋರಿಯಂನಲ್ಲಿ ವಿಶ್ವ ಪರಿಸರ ದಿನಾಚರಣೆಯ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೋಪ್ಪಳ ಪರಿಸರ ಇಲಾಖೆಯ ಹಿರಿಯ ಸಹಾಯಕ ಪರಿಸರ ಅಧಿಕಾರಿಗಳಾದ ಶ್ರೀ ಮುರುಳೀಧರ್ ಅವರು ಭಾಗವಹಿಸಿ ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ ಹಾಗೂ ಹವಾಮಾನ ಬದಲಾವಣೆಯ ಸವಾಲುಗಳ ಕುರಿತು ಸಮಗ್ರವಾಗಿ ಮಾತನಾಡಿದರು. ಕೈಗಾರಿಕೆಗಳು ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ತಿಳಿಸಿದರು.
ವೇದಿಕೆಯಲ್ಲಿ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ಶ್ರೀ ಎಂ.ಜಿ. ನಾಗರಾಜ್, ಹೆಚ್ ಆರ್ ಎಂ ವಿಭಾಗದ ಉಪಾಧ್ಯಕ್ಷರು ಶ್ರೀ ಶಿವಯ್ಯ ಸ್ವಾಮಿ ಹಾಗೂ ಮುಖ್ಯ ಅತಿಥಿ ಶ್ರೀ ಮುರುಳೀಧರ್ ಉಪಸ್ಥಿತರಿದ್ದು ಪರಿಸರದ ಉನ್ನತಿ, ಕೈಗಾರಿಕಾ ಅಭಿವೃದ್ಧಿ ಮತ್ತು ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಪರಿಸರ ಸಂರಕ್ಷಣೆಯು ಕೇವಲ ಒಂದು ದಿನದ ಕಾರ್ಯಕ್ರಮವಾಗಿರದೆ ಪ್ರತಿಯೊಬ್ಬರ ಜೀವನ ಶೈಲಿಯ ಭಾಗವಾಗಬೇಕು ಎಂದು ಅವರು ಕರೆ ನೀಡಿದರು.
World Environment Day ಪರಿಸರ ದಿನಾಚರಣೆಯ ಅಂಗವಾಗಿ ಸಿಬ್ಬಂದಿ ಹಾಗೂ ಕಾರ್ಮಿಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಚಿತ್ರಕಲೆ, ಪ್ರಬಂಧ, ಘೋಷಣೆ ಮತ್ತು ಪೋಟೋಗ್ರಾಫಿ ಸ್ಪರ್ಧೆಯ ವಿಜೇತರಾದವರಿಗೆ ವೇದಿಕೆಯಲ್ಲಿ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.
ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೋಪ್ಪಳ ತಾಲ್ಲೂಕಿನ ಅತ್ಯಧಿಕ ಅಂಕ ಗಳಿಸಿದ ಎಂಟು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಸನ್ಮಾನಿಸಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯು ಪ್ರೋತ್ಸಾಹ ನೀಡಿತು.
ಕಾರ್ಯಕ್ರಮದಲ್ಲಿ ಕಾರ್ಮಿಕರು ಮುಖಂಡರು, ಕಾರ್ಮಿಕರು, ಗುತ್ತಿಗೆದಾರರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆಯ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಹಸಿರು ಪರಿಸರ ನಿರ್ಮಾಣ, ಮಾಲಿನ್ಯ ನಿಯಂತ್ರಣ ಮತ್ತು ಪ್ರಕೃತಿ ಸಂಪನ್ಮೂಲಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂಬ ಸಂದೇಶದೊಂದಿಗೆ ವಿಶ್ವ ಪರಿಸರ ದಿನಾಚರಣೆ-2026 ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಮುರುಳೀಧರ್ ನಾಡಿಗೇರ್
