Wednesday, August 5, 2026
Wednesday, August 5, 2026
Home Blog Page 75

Shivamogga News ತೆರಿಗೆ ಸಲಹೆಗಾರರೆ…ನಿಮಗಾಗಿ ಜೂನ್ 5 ರಂದು ವಿಶೇಷ ವಿಚಾರ ಸಂಕಿರಣ

0

Shivamogga News ಶಿವಮೊಗ್ಗ ಜಿಲ್ಲಾ ಟ್ಯಾಕ್ಸ್ ಬಾರ್ ವತಿಯಿಂದ ದಿನಾಂಕ 05-06-2026 ರ ಶುಕ್ರವಾರ ಬೆಳಗ್ಗೆ 9:00 ರಿಂದ ಸಂಜೆ 4:30ವರೆಗೆ ನೂತನ ಆದಾಯ ತೆರಿಗೆ ಕಾಯ್ದೆ 2025 ರ ಕುರಿತು ವಿಚಾರ ವಿಮರ್ಶೆಯನ್ನು ಖ್ಯಾತ ಚಾರ್ಟೆಡ್ ಅಕೌಂಟೆಂಟ್ ತರುಣ್ ಕೊಟಾರಿ ಇವರು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆವರಣದಲ್ಲಿ ನಡೆಸಿಕೊಡಲಿದ್ದು, ಜಿಲ್ಲೆಯ ಎಲ್ಲಾ ತೆರಿಗೆ ಸಲಹೆಗಾರರು ಈ ಸೆಮಿನಾರ್ ನಲ್ಲಿ ಭಾಗವಹಿಸಿ ಈ ವಿಚಾರ ಸಂಕಿರಣದ ಸದುಪಯೋಗ
ಪಡಿಸಿಕೊಳ್ಳಬೇಕೆಂದು ಕಾರ್ಯದರ್ಶಿಯವರಾದ ಆರ್. ಮನೋಹರವರು ತಿಳಿಸಿದ್ದಾರೆ.

B.Y. Raghavendra ನಿಮ್ಮ ಆಡಳಿತ ಸಹಕಾರ,ಸಮನ್ವಯ , ಸಾರ್ಥಕತೆಯಿಂದ ಮುನ್ನಡೆಯಲಿ” – ಸಂಸದ ಬಿ.ವೈ.ರಾಘವೇಂದ್ರ ಹಾರೈಕೆ

0

B.Y. Raghavendra ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ರಾಜ್ಯದ ಸರ್ವತೋಮುಖ ಪ್ರಗತಿ ಹಾಗೂ ಜನಕಲ್ಯಾಣದ ನಿಟ್ಟಿನಲ್ಲಿ ನಿಮ್ಮ ಅಧಿಕಾರಾವಧಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. ವಿಕಸಿತ ಭಾರತದ ನಿರ್ಮಾಣದ ನಿಟ್ಟಿನಲ್ಲಿ ಕರ್ನಾಟಕದ ವಿಕಾಸವೂ ಕೂಡ ಅತ್ಯಂತ ಪ್ರಮುಖವಾಗಿದ್ದು, ತಮ್ಮ ಆಡಳಿತಾವಧಿಯಲ್ಲಿ ವಿಕಸಿತ ಕರ್ನಾಟಕದ ನಿಟ್ಟಿನಲ್ಲಿ ವೇಗದಿಂದ ಮುನ್ನಡೆಯುವಂತಾಗಲಿ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಆಶಿಸಿದ್ದಾರೆ.

ನಮ್ಮ ಹೆಮ್ಮೆಯ ಕರುನಾಡು ಕೃಷಿ, ತಂತ್ರಜ್ಞಾನ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದ್ದು, ಪ್ರಾದೇಶಿಕ ಆಶೋತ್ತರಗಳನ್ನು ಈಡೇರಿಸುವಲ್ಲಿ ನಿಮ್ಮ ನಾಯಕತ್ವ ಯಶಸ್ವಿಯಾಗಲಿ, ನಮ್ಮ ಶ್ರೇಷ್ಠ ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನಿಮ್ಮ ಆಡಳಿತ ಸಹಕಾರ, ಸಮನ್ವಯ ಹಾಗೂ ಸಾರ್ಥಕತೆಯಿಂದ ಮುನ್ನಡೆಯಲಿ ಎಂದು ಆಶಿಸುತ್ತಾ, ನಮ್ಮ ಶಿವಮೊಗ್ಗ ಕ್ಷೇತ್ರವೂ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ನಿಮ್ಮ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿರ್ವಹಿಸುತ್ತೀರಿ ಎನ್ನುವ ಸದಾಶಯದೊಂದಿಗೆ ಶುಭಾಶಯ ಕೋರಿದ್ದಾರೆ.

DK Shivakumar ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ :ಜನತೆಗೆ ಮೊದಲ ವಾಗ್ದಾನ

0

DK Shivakumar ರಾಜ್ಯದ ಅಭಿವೃದ್ಧಿಗೆ ಹೊಸ ರೂಪ – ಹೊಸ ವೇಗ ನೀಡುವ ನನ್ನ‌ ಸಂಕಲ್ಪಕ್ಕೆ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ‌ ಸಚಿವ ಸಂಪುಟ ಸಭೆಯಲ್ಲಿ ಮುನ್ನುಡಿ ಬರೆದಿದ್ದೇನೆ. ರಾಜ್ಯದ ಜನರ ಸರ್ವತೋಮುಖ ಪ್ರಗತಿಯ ಭರವಸೆಯನ್ನಿತ್ತು ಅಧಿಕಾರಕ್ಕೆ ಬಂದಿರುವ ನಾವು ಜನತೆ ಕೊಟ್ಟ ಈ ಅವಕಾಶವನ್ನು ಅಧಿಕಾರವೆಂದು ಭಾವಿಸದೆ, ಸೇವೆಯ ಭಾಗ್ಯವೆಂದು ತಿಳಿದು ಈ ಎಲ್ಲಾ ನೂತನ ಕಾರ್ಯಕ್ರಮಗಳನ್ನು ನಾಡಿಗೆ ಜನತೆಗೆ ಅರ್ಪಿಸುತ್ತಿದ್ದೇನೆ ಎಂದು ನೂತನ ಮುಖ್ಯಮಂತ್ರಿಯಾದ ಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಎಲ್ಲಾ ಹಂತದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಸಂಬಂಧಪಟ್ಟ ಅರ್ಜಿ ವಿತರಣೆಯ ಬಗ್ಗೆ ಸಾರಿಗೆ ಇಲಾಖೆಯು ಸದ್ಯದಲ್ಲಿಯೇ ಕ್ರಮ ಕೈಗೊಳ್ಳಲಿದೆ.

ರಾಜ್ಯದಲ್ಲಿ ಉದ್ಯೋಗದ ಸಮಸ್ಯೆಯನ್ನು ನೀಗಿಸುವ ದಿಸೆಯಲ್ಲಿ ಸರ್ಕಾರ, ಈಗಾಗಲೇ 56,000 ಹುದ್ದೆಗಳನ್ನು ಭರ್ತಿಗೊಳಿಸುವ ನಿರ್ಣಯವನ್ನು ಕೈಗೊಂಡಿದೆ. ಈ ಬಗ್ಗೆ ಎಲ್ಲಾ ತೊಡಕುಗಳನ್ನು ನಿವಾರಿಸಿ ನೇಮಕಾತಿ ಪ್ರಕ್ರಿಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ. ಕರ್ನಾಟಕ ರಾಜ್ಯವು ಗುಣಮಟ್ಟದ ಮಾನವಸಂಪನ್ಮೂಲದಲ್ಲಿ ಭಾರತದ ರಾಜಧಾನಿಯೆಂದೇ ಹೆಸರು ಗಳಿಸಿದೆ. ಶಿಕ್ಷಣ, ಆರೋಗ್ಯ, ತಂತ್ರಜ್ಞಾನ, ಐಟಿ ಬಿಟಿ ಸೇರಿದಂತೆ ವಿವಿಧ ವಲಯಗಳಲ್ಲಿ ಕರ್ನಾಟಕದಿಂದ ಶ್ರೇಷ್ಠ ಮಾನವಸಂಪನ್ಮೂಲ ಮೂಡಿಬಂದಿದೆ. ಖಾಸಗಿ ರಂಗದಲ್ಲಿ ಉದ್ಯೋಗ ಬಯಸುವ ಯುವಜನರಿಗೆ ಹಾಗೂ ಖಾಸಗಿ ಕಂಪನಿಗಳ ಉದ್ಯೋಗದ ಬೇಡಿಕೆಗಳ ನಡುವೆ ಸಂಪರ್ಕ ಕಲ್ಪಿಸುವ ‘ಯುವ ಉದ್ಯೋಗ ಸೇತು’ ವ್ಯವಸ್ಥೆಯನ್ನು ರೂಪಿಸಲು ನಿರ್ಣಯಿಸಲಾಗಿದೆ.

ಈ ಸೌಲಭ್ಯ ಕೇಂದ್ರದಲ್ಲಿ ಕಂಪನಿಗಳಿಗೆ ಅಗತ್ಯವಿರುವ ತರಬೇತಿಯನ್ನೂ ನೀಡಿ, ಅಲ್ಲಿನ ಅಭ್ಯರ್ಥಿಗಳನ್ನು ಕಂಪನಿಗಳಿಗೆ ಆಯ್ಕೆ ಮಾಡಲಾಗುವುದು. ಕರ್ನಾಟಕದವರಿಗೆ, ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಪಾಲು ನೀಡಲಾಗುವುದು. ಕನ್ನಡಿಗರಿಗೆ ನೀಡಬೇಕಾದ ಉದ್ಯೋಗದ ಶೇಕಡಾವಾರನ್ನು ಕಂಪನಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು.

DK Shivakumar ಈ ರಾಜ್ಯದ ಯುವಕರು, ವಿದ್ಯಾರ್ಥಿಗಳು, ನಿರುದ್ಯೋಗಗಳ ಉದ್ಯೋಗದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ. ಇಲ್ಲಿನ ಯುವಕರನ್ನು ಜಾಗತಿಕ ಮಟ್ಟದಲ್ಲಿ ತಯಾರು ಮಾಡುವ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದ್ದು, ತಿಂಗಳೊಳಗೆ ಈ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು. ಎಲ್ಲವೂ ಆನ್ ಲೈನ್ ಮೂಲಕ ಲಭ್ಯವಾಗಲಿದೆ.

10,000 ಭಾರತ ಜೋಡೋ ಯುವಕ ಸಂಘ ರಚಿಸಲು ತೀರ್ಮಾನಿಸಲಾಗಿದ್ದು, ಪ್ರತಿ ಪಂಚಾಯತಿಗೂ ಒಂದು ಯುವಕ ಸಂಘ ರಚಿಸುತ್ತೇವೆ. ಸಂಘದಲ್ಲಿ ಕನಿಷ್ಠ 150 ರಿಂದ 200 ಜನರಿರುತ್ತಾರೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಯುವಕ ಸಂಘಗಳು ಕೈಗೊಳ್ಳುವುದಲ್ಲದೇ ನಾಯಕತ್ವ ಬೆಳವಣಿಗೆಗೆ, ಸಾಮಾಜಿಕ ಸಾಮರಸ್ಯ ಕಾಪಾಡಲು ಶ್ರಮಿಸಲಿವೆ. ಅವರ ಪ್ರತಿಭೆಗೂ ಇಲ್ಲಿ ಅವಕಾಶ ದೊರೆಯಲಿದೆ. ಭಾರತ ಜೋಡೋ ಯುವಕ ಸಂಘಗಳಿಗೆ ಸರ್ಕಾರ ತಲಾ 10 ಲಕ್ಷ ರೂ.ಗಳ ಅನುದಾನ ನೀಡಲಿದೆ.

ಬೆಂಗಳೂರು ನಗರದಲ್ಲಿ ವಿದ್ಯುತ್ ಸಮಸ್ಯೆ ಇದ್ದು, 2500 ಅಡಿ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ಒಸಿ (OC) ಮತ್ತು ಸಿಸಿ (CC) ಪಡೆಯುವುದರಿಂದ ಒಂದು ಬಾರಿ ಮಾತ್ರ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ.

ಬಿ ಖಾತೆಯನ್ನು ಎ ಖಾತೆಯಾಗಿ ಪರಿವರ್ತಿಸುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ತೀರ್ಮಾನಿಸಲಾಗಿದೆ. ಆರನೇ ಗ್ಯಾರಂಟಿಯಾದ ಭೂ ಗ್ಯಾರಂಟಿಗೆ ಸೂಕ್ತ ದಾಖಲೆ ಮಾಡಿಕೊಡಲು ತೀರ್ಮಾನಿಸಲಾಗಿದೆ.

ನಗರ ಮೂಲಸೌಕರ್ಯವನ್ನು ಉತ್ತಮಗೊಳಿಸಲು, ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಹೊರತುಪಡಿಸಿ ಜಿಬಿಎ, ಬಿಡಿಎ ವ್ಯಾಪ್ತಿ ಸೇರಿ ಕೇವಲ ರಸ್ತೆಗಳನ್ನು ಉತ್ತಮಪಡಿಸಲು 2000 ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ.

District Legal Services Authority ಯುವಜನತೆ ಮನಸ್ಸು ನಿಯಂತ್ರಿಸಿ, ದುಶ್ಚಟಗಳಿಂದ ದೂರವಿರಬೇಕು- ನ್ಯಾ.ಜಿ.ಎ.ಮಂಜುನಾಥ್

0

District Legal Services Authority ಯುವಜನತೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು, ಚಟಗಳನ್ನಲ್ಲ. ತಾತ್ಕಾಲಿಕ ಸಂತೋಷಕ್ಕಿAತ ಶಾಶ್ವತ ಸಂತೋಷವನ್ನು ತಮ್ಮದಾಗಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ಜಿ.ಎ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಸುಬ್ಬಯ್ಯ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸಂಸ್ಥೆ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಭಾರತೀಯ ದಂತ ವೈದ್ಯಕೀಯ ಸಂಘ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಶಿವಮೊಗ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಿಲ್ಲಾಡಳಿತ ಕಚೇರಿಯಿಂದ ಏರ್ಪಡಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರೌಢಾವಸ್ಥೆಯಲ್ಲಿ ಯುವಜನತೆ ಕೆಲವು ಆಕರ್ಷಣೆಗಳಿಗೆ ಒಳಗಾಗಿ ಅಥವಾ ಮತ್ಯಾವುದೋ ಒತ್ತಡಕ್ಕೆ ಮಣಿದು ದುಶ್ಚಟಗಳಿಗೆ ಬೀಳುವ ಸಾಧ್ಯತೆ ಇರುತ್ತದೆ. ಆದರೆ ತಮ್ಮ ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಿ, ಉತ್ತಮ ಪುಸ್ತಕಗಳನ್ನು ಓದುವುದು, ಸಂಗೀತ ಕೇಳುವುದು ಈ ರೀತಿಯ ಉತ್ತಮ ಹವ್ಯಾಸಗಳನ್ನು ತಮ್ಮದಾಗಿಸಿಕೊಳ್ಳಬೇಕು. ಎಷ್ಟೋ ಜನರು ದುಶ್ಚಟಗಳಿಗೆ ಬಲಿಯಾಗಿ ತೀವ್ರವಾಗಿ ಹಾಳಾಗಿರುವುದನ್ನು ಕಂಡಿದ್ದೇವೆ. ಆದ್ದರಿಂದ ದುಶ್ಚಟಗಳಿಂದ ದೂರ ಇರಬೇಕು.
ಸಿನೆಮಾ ಮೊದಲಿಗೆ ಬರುವ ಜಾಹಿರಾತನ್ನು ನೋಡಬೇಕು. ಚಟದಿಂದಾಗುವ ಪರಿಣಾಮವನ್ನು ಪ್ರತಿ ಚಲನಚಿತ್ರದ ಮೊದಲಿಗೆ ತೋರಿಸಲಾಗುತ್ತದೆ ಎಂದ ಅವರು ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಯುವ ಪೀಳಿಗೆಗೆ ಪರಿಣಾಮಕಾರಿಯಾಗಿ ಅರಿವನ್ನು ಮೂಡಿಸಬೇಕಿದೆ ಎಂದರು.
ಡಿಹೆಚ್‌ಓ ಡಾ.ನಟರಾಜ್ ಕೆ ಎಸ್ ಮಾತನಾಡಿ, ತಂಬಾಕು ಸೇವನೆ ಅತ್ಯಂತ ಮಾರಕವಾಗಿದ್ದು, ಕ್ಯಾನ್ಸರ್, ಹೃದಯ, ಶ್ವಾಸ ಸಂಬAಧಿ ಇತ್ಯಾದಿ ಮಾರಣಾಂತಿಕ ಕಾಯಿಲೆಗಳು ಬರುತ್ತವೆ. ಧೂಮಸಹಿತ ತಂಬಾಕು ವಸ್ತುಗಳಲ್ಲಿ 7000 ರಾಸಾಯನಿಕ ವಸ್ತುಗಳಿದ್ದು ಇದರಲ್ಲಿ 69 ರಷ್ಟು ಕ್ಯಾನ್ಸರ್‌ಕಾರಕ ವಸ್ತುಗಳಾಗಿವೆ.
ಪ್ರತಿ ವರ್ಷ ವಿಶ್ವವಿದ್ಯಾದಂತ 60 ಲಕ್ಷಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆ ಕಾರಣದಿಂದ ಮರಣ ಹೊಂದುತ್ತಿದ್ದಾರೆ. ಪ್ರತಿ 6 ಸೆಕೆಂಡಿಕೆ ಒಂದು ಸಾವು ಸಂಭವಿಸುತ್ತಿದೆ. ಆದ್ದರಿಂದ ಎಲ್ಲರೂ ಎಚ್ಚೆತ್ತುಕೊಳ್ಳಬೇಕಾಗಿದೆ.
ಕೆಟ್ಟ ಅಭ್ಯಾಸಗಳು ಬೇಗ ಅಂಟಿಕೊಳ್ಳುತ್ತವೆ. ಆರಂಭದಲ್ಲಿ ಖುಷಿಗಾಗಿ ಶುರುವಾದ ತಂಬಾಕು ಸೇವನೆ ಬರ ಬರುತ್ತಾ ಚಟವಾಗುವ ಕಾರಣ ಮುಖ್ಯವಾಗಿ ಯುವ ಪೀಳಿಗೆಯನ್ನು ಇದರಿಂದ ದೂರ ಇಡಲು ಶ್ರಮಿಸಬೇಕಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ಮಾತನಾಡಿ, ತಂಬಾಕು ಸೇವನೆ ಅತ್ಯಂತ ಮಾರಕವಾಗಿದೆ. ಕೋಟ್ಪಾ ಕಾಯ್ದೆಯ ಸೆಕ್ಷನ್ 6 ರ ಪ್ರಕಾರ ತಂಬಾಕು ಉತ್ಪನ್ನಗಳನ್ನು ಅಪ್ರಾಪ್ತ ವಯಸ್ಕರಿಗೆ ಮಾರಾಟ ಮಾಡುವುದು ಹಾಗೂ ಅಪ್ರಾಪ್ತ ವಯಸ್ಕರಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದು ಶಿಕ್ಷಾರ್ಹ ಅಪರಾಧ. ಹಾಗೂ ಸೆಕ್ಷನ್ 6ಬಿ ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಗಜದ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಹಾಗೂ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ನಾಮಫಲಕವನ್ನು ಕಡ್ಡಾಯವಾಗಿ ಸಂಸ್ಥೆಯ ಮುಂದೆ ಪ್ರದರ್ಶನ ಮಾಡಬೇಕು. ಶಿಕ್ಷಣ ಸಂಸ್ಥೆ ಸುತ್ತಮುತ್ತ ತಂಬಾಕು ಮಾರಾಟ ಮಾಡುವುದು ಕಂಡುಬAದಲ್ಲಿ ಪಬ್ಲಿಕ್ ಐ ವಾಟ್ಸಾಪ್ ಸಂಖ್ಯೆ : 8277982900 ತಿಳಿಸಬಹುದು ಅಥವಾ 1098 ಗೆ ವಿದ್ಯಾರ್ಥಿಗಳು ಕರೆ ಮಾಡಿ ತಿಳಿಸಬಹುದು ಎಂದರು.
District Legal Services Authority ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ಗೀತಾ ಎಮ್ ಮಾತನಾಡಿ, ತಂಬಾಕು ಸೇವೆನೆ ಮಹಿಳೆ ಮತ್ತು ಪುರುಷರಿಬ್ಬರಿಗೂ ಮಾರಕವಾಗಿದ್ದು, ತಂಬಾಕು ಸೇವನೆ ಮಾಡುವ ಮಹಿಳೆಯರಲ್ಲಿ ಬಂಜೆತನ, ಗರ್ಭಧಾರಣೆಯಲ್ಲಿ ಸಮಸ್ಯೆಗಳು, ಬಾಯಿಯ ಕ್ಯಾನ್ಸರ್ ಬರಬಹುದು ಹಾಗೂ ಪುರುಷರಲ್ಲಿ ಸಹ ನಪುಂಸಕತೆ ಕಂಡು ಬರುವ ಸಾಧ್ಯತೆ ಇದ್ದು, ಇಡೀ ಕುಟುಂಬವೇ ಸಂಕಷ್ಟಕ್ಕೀಡಾಗುವ ಸಂಭವ ಹೆಚ್ಚಿದೆ. ಆದ್ದರಿಂದ ಎಲ್ಲರೂ ತಂಬಾಕು ಸೇವನೆಯಿಂದ ದೂರು ಇರಬೇಕು ಎಂದರು.
ಈ ಬಾರಿ ‘ಆಕರ್ಷಣೆಯ ಮುಖವಾಡವನ್ನು ಕಳಚುವುದು-ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು” ಎಂಬ ವಿಶೇಷ ಘೋಷವಾಕ್ಯದೊಂದಿಗೆ ಈ ಜಾಥಾ ಕಾರ್ಯಕ್ರಮ ನಡೆಯಿತು.
ಜಾಥಾದಲ್ಲಿ ಎಎಸ್‌ಪಿ ಕಾರಿಯಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ನಾಗರಾಜ್ ನಾಯ್ಕ್ ಎಲ್, ಬಾಯಿಯ ಆರೋಗ್ಯದ ಜಿಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿ ಡಾ.ಮೋಹನ್, ಟಿಹೆಚ್‌ಓ ಡಾ.ಚಂದ್ರಶೇಖರ್, ಡಾ.ರವೀಶ್, ಡಾ.ಸತೀಶ್ ಸೇರಿದಂತೆ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ವಿವಿಧ ಇಲಾಖಾ ಮುಖ್ಯಸ್ಥರು, ಸಿಬ್ಬಂದಿಗಳು ಹಾಗೂ ಸಿಮ್ಸ್ ಮತ್ತು ಸುಬ್ಬಯ್ಯ ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿದ್ದರು.

ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ,ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಿ- ಪ್ರಭುಲಿಂಗ ಕವಳಿಕಟ್ಟಿ

0

ಪ್ರತಿಯೊಂದು ಮಗುವು ಕುಟುಂಬದ ಭಾಗವಾಗಿದ್ದು, ಕುಟುಂಬದ ಪ್ರೀತಿ, ಪಾಲನೆ, ಗೌರವ, ಕುಟುಂಬದ ರಕ್ಷಣೆ ಹಾಗೂ ಭದ್ರತೆಗೆ ಅರ್ಹವಾಗಿರುತ್ತದೆ. ಮಗುವಿನ ಸುರಕ್ಷತೆ ಭಾವನಾತ್ಮಕ ಒಳಿತು ಹಾಗೂ ಕಲಿಕೆಗೆ ಮಾರಕವಾಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯು ಒಂದು ಸಾಮಾಜಿಕ ಕಳಂಕ ಮತ್ತು ಆರ್ಥಿಕ ಸಮಸ್ಯೆಯಾಗಿದ್ದು, ಸಮಾಜದ ಸಂಘಟಿತ ಪ್ರಯತ್ನ ಹಾಗೂ ಹೋರಾಟದಿಂದ ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾದ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ಮೇಲ್ವಿಚಾರಣೆ ಮತ್ತು ಜಾಗರೂಕತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬಾಲಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶಗಳನ್ನು ತಡೆಗಟ್ಟುತ್ತದೆ. ಮಕ್ಕಳಿಂದ ದುಡಿಸಿಕೊಳೂವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದವರು ನುಡಿದರು.
ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಇಂದಿನ ತುರ್ತು ಅವಶ್ಯಕತೆಯಾಗಿದೆ. ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ದೇಶದ ಮುಂದಿರುವ ಕಠಿಣ ಸವಾಲಾಗಿದ್ದು, ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯು ಈ ಪದ್ಧತಿಯನ್ನು ಎದುರಿಸಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಸಂಬಂಧಿತ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ತಮ್ಮ ಜಬಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದರು.
14 ರಿಂದ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಕೆಲಸಗಳು, ಗಣಿಗಾರಿಕೆ, ಪಟಾಕಿ ಕಾರ್ಖಾನೆ, ರಾಸಾಯನಿಕ ಕಾರ್ಖಾನೆ ಮುಂತಾದ ಅಪಾಯಕಾರಿ ಸ್ಥಳಗಳಲ್ಲಿ ದುಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಮಾಲೀಕರಿಗೆ 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ 20,000 ರೂ.ನಿಂದ 50,000 ರೂ.ವರೆಗೆ ದಂಡ ವಿಧಿಸಬಹುದಾಗಿದೆ. ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚುರ ಪಡಿಸುವಂತೆ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.
ಜನಜಾಗೃತಿಗಾಗಿ ಬಾಲಕಾರ್ಮಿಕ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ನಡೆಸುವುದು, ತರಬೇತಿ ಕಾರ್ಯಕ್ರಮಗಳ ಆಯೋಜನೆ, ಜಾಥಾ ಹಾಗೂ ಬೀದಿನಾಟಕಗಳ ಆಯೋಜನೆ, ಗೋಡೆ ಬರಹಗಳನ್ನು ಹಾಗೂ ಸ್ಟಿಕರ್‌ಗಳು ಹಾಗೂ ಕರಪತ್ರಗಳನ್ನು ಹಂಚುವುದು ಮತ್ತು ಬಾಲ ಕಾರ್ಮಿಕ ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲು ವಿಶೇಷ ಗಮನಹರಿಸುವಂತೆ ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಬಿ.ನಿಖಿಲ್‌ ಅವರು ಮಾತನಾಡಿ, ಇಟ್ಟಿಗೆ ಗುಮ್ಮಿ, ಗ್ಯಾರೇಜ್‌, ವೆಲ್ಡಿಂಗ್‌ವರ್ಕ್ಸ್‌ ಮುಂತಾದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಬಾಲಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದ್ದು, ಸ್ಥಳೀಯ ಅಧಿಕಾರಿಗಳು ಅನಿರೀಕ್ಷಿತ ದಾಳಿಗಳನ್ನು ನಡೆಸಿ, ಯಾವುದೇ ವಿನಾಯಿತಿ ನೀಡದೇ ಮೊಕದ್ದಮೆಗಳನ್ನು ದಾಖಲಿಸುವಂತೆ ಸೂಚಿಸಿದ ಅವರು, ದಾಳಿಗಳಲ್ಲಿ ಪತ್ತೆಯಾದ ಬಾಲಕಾರ್ಮಿಕರನ್ನು ಮಕ್ಕಳ ಕಲ್ಯಾಣ ಸಮಿತಿ (Child welfare committe) ಯ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಿಗೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಿಗೆ, ಮುಖ್ಯವಾಹಿನಿ ಶಾಲೆಗಳಲ್ಲಿ ಮಕ್ಕಳ ಅರ್ಹತೆಗನುಗುಣವಾಗಿ ದಾಖಲು ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜೂನ್‌ ಮಾಸಾಂತ್ಯದೊಳಗೆ ಇನ್ನೂ ಶಾಲೆಗೆ ದಾಖಲಾಗದ ಮಕ್ಕಳ ವಿವರಗಳನ್ನು ಶಿಕ್ಷಣ ಇಲಾಖೆಯಿಂದ ಪಡೆದು ಕಾರ್ಮಿಕ ಅಧಿಕಾರಿಗಳು ಕ್ರಮ ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್‌, ಜಿ.ಪಂ.ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ, ಉಪವಿಭಾಗಾಧಿಕಾರಿ ಸತ್ಯನಾರಾಯಣ್‌, ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣುಗೋಪಾಲ್‌, ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರಘು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್‌ಖಾನ್‌ ಸೇರಿದಂತೆ ವಿವಿಧ ಇಲಾಖೆಯಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಕಾರ್ಮಿಕ ನಿರೀಕ್ಷಕರು ಉಪಸ್ಥಿತರಿದ್ದರು.

ಕಣಿವೆಮನೆಯಿಂದ ಮಹಿಳೆ ತನ್ನ ಮಕ್ಕಳೊಂದಿಗೆ ನಾಪತ್ತೆ, ಶಿಕಾರಿಪುರ ಪೊಲೀಸ್ ಠಾಣೆ ಪ್ರಕಟಣೆ

0

ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಣಿವೆಮನೆ ಗ್ರಾಮ ವಾಸಿ ಮಹೇಶ ಎಂಬುವವರ ಪತ್ನಿ ಪೂರ್ಣಿಮಾ ಎಂಬ 27 ವರ್ಷದ ಮಹಿಳೆ ತನ್ನ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಮೇ 31 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ 5.1 ಅಡಿ ಎತ್ತರ. ಸಾಧಾರಣ ಮೈ ಕಟ್ಟು, ಗೋದಿ ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಆಕಾಶ ನೀಲಿ ಬಣ್ಣದ ಚೂಡಿದಾರ, ಬಿಳಿ ಬಣ್ಣದ ವೇಲ್ ಧರಿಸಿರುತ್ತಾರೆ.
8 ವರ್ಷದ ಮಗ ಧೃವನ ಚಹರೆ 3 ಅಡಿ ಎತ್ತರ, ತೆಳ್ಳನೆಯ ಮೈ ಕಟ್ಟು, ಗೋದಿ ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಮನೆಯಿಂದ ಹೋಗುವಾಗ ಬಿಳಿ ಕಪ್ಪು ಬಣ್ಣದ ತುಂಬುತೋಳಿನ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ
2 ವರ್ಷದ ಮಗ ಧನವೀರ್‌ನ ಚಹರೆ 2 ಅಡಿ ಎತ್ತರ, ತೆಳ್ಳನೆಯ ಮೈ ಕಟ್ಟು, ಗೋದಿ ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಮನೆಯಿಂದ ಹೋಗುವಾಗ ಬಿಳಿಬಣ್ಣದ ಶರ್ಟ್, ಜಿನ್ಸ್ ಪ್ಯಾಂಟ್ ಧರಿಸಿರುತ್ತಾನೆ.
ಈ ತಾಯಿ ಮಕ್ಕಳ ಕುರಿತು ಸುಳಿವು ಇದ್ದಲ್ಲಿ ಜಿಲ್ಲಾ ಪೊಲೀಸ್ ಕಚೇರಿ, ಶಿವಮೊಗ್ಗ ನಂ:-08182- 261413, ಡಿ.ಎಸ್.ಪಿ ಶಿಕಾರಿಪುರ ಉಪ ವಿಭಾಗ:-08187-222443, 9480803323, ಪಿ..ಐ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ. 08187-222443, 9480803366 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ದೀರ್ಘಕಾಲದಿಂದ ನಾಪತ್ತೆಯಾಗಿರುವ ವ್ಯಕ್ತಿಯ ಬಗ್ಗೆ ಮಾಳೂರು ಪೊಲೀಸ್ ಠಾಣೆ ಮಾಹಿತಿ

0

ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಆರ್. ಜಗನ್ನಾತ ಬಿನ್ ರಂಗಪ್ಪ ನಾಯ್ಕ ಎಂಬ ವ್ಯಕ್ತಿಯು 25 ವರ್ಷಗಳ ಹಿಂದೆ ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.9 ಅಡಿ ಎತ್ತರ, ದುಂಡನೆಯ ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡಕ ಧರಿಸುತ್ತಾರೆ. ಈ ವ್ಯಕ್ತಿಯ ಕುರಿತು ಸುಳಿವು ಇದ್ದಲ್ಲಿ ಪಿ.ಎಸ್.ಐ. ಮಾಳೂರು ಠಾಣೆ, ಮೊ.08181-235142, ಮೊ. 9480803353.
ಸಿಪಿಐ ಮಾಳೂರು ವೃತ್ತ, 08181-228310.ಮೊ. 9480803333, ಶಿವಮೊಗ್ಗ ಪೊಲೀಸ್ ಕಂಟ್ರೋಲ್ ರೂಂ.08182-261413, ಮೊ. 9480803300 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

ಭದ್ರಾವತಿ ಸರ್ಕಾರಿ ಐಟಿಐ ನಲ್ಲಿ ಎಟಿಎಸ್ ಕ್ಯಾಂಪಸ್ ಸೆಲೆಕ್ಷನ್ ಡ್ರೈವ್

0

Bhadravati Government Industrial Training Institute ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜೂ. 05 ರಂದು ಪ್ರತಿಷ್ಠಿತ ಕಂಪನಿಗಳಾದ ಟೋಯೋಟಾ ಕಿರ್ಲೋಸ್ಕರ್ ಮೋಟರ‍್ಸ್ ಬೆಂಗಳೂರು ಹಾಗೂ ಕೋಲಾರದ ಹೋಂಡಾ ಮೋಟಾರ್ ಸೈಕಲ್ ಆಂಡ್ ಸ್ಕೂಟರ‍್ಸ್ ಇಂಡಿಯಾ ಪ್ರೈ. ಲಿ ರವರಿಂದ ಎಟಿಎಸ್ ಕ್ಯಾಂಪಸ್ ಸೆಲೆಕ್ಷನ್ ಡ್ರೈವ್ ಆಯೋಜಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರನ್ನು. ದೂ.ಸಂ.: 08282-200080/ 9980129595/ 9483288356 ಗಳನ್ನು ಸಂಪರ್ಕಿಸುವುದು.

ವಿಶ್ವ ವಿಕಲಚೇತನರ ದಿನಾಚರಣೆಗೆ ಫೂರ್ವ ರಾಷ್ಟ್ರೀಯ ಪ್ರಶಸ್ತಿಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

0

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ವತಿಯಿಂದ ಪ್ರತಿ ವರ್ಷ ಡಿಸೆಂಬರ್ 03 ರಂದು ಆಯೋಜಿಸಲಾಗುವ ‘ವಿಶ್ವ ವಿಕಲಚೇತನರ ದಿನಾಚರಣೆ’ ಸಂದರ್ಭದಲ್ಲಿ ನೀಡಲಾಗುವ ರಾಷ್ಟ್ರೀಯ ಪ್ರಶಸ್ತಿಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಕಲಚೇತನರ ವಿವಿಧ ಕ್ಷೇತ್ರಗಳ ಸಾಧನೆಗಳನ್ನು (ಸಬಲೀಕರಣ, ಪುನರ್ವಸತಿ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ತಡೆರಹಿತ ವಾತಾವರಣ, ಸಂಶೋಧನೆ, ನಾವೀನ್ಯತೆ, ಕ್ರೀಡೆ, ಕಲೆ, ಸಾಹಿತ್ಯ ಮತ್ತು ಇತರೆ ಕ್ಷೇತ್ರಗಳು) ಗುರುತಿಸಿ ಗೌರವಿಸಲು ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ಅರ್ಜಿಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ.
ಪ್ರಶಸ್ತಿಗಾಗಿ ನಾಮನಿರ್ದೇಶನ ಹಾಗೂ ಅರ್ಜಿಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.in ಮೂಲಕ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಬೇಕಿರುತ್ತದೆ. ಭೌತಿಕ ರೂಪದಲ್ಲಿ ಅಥವಾ ಯಾವುದೇ ಇತರೆ ಮಾಧ್ಯಮದ ಮೂಲಕ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಪೋರ್ಟಲ್‌ನಲ್ಲಿ ಲಭ್ಯವಿರುವ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ, ಸಾಧನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಅದರೊಂದಿಗೆ ಪ್ರಮುಖ ಪ್ರಶಸ್ತಿ ವಿಭಾಗಗಳಾದ: “ಸರ್ವಶ್ರೇಷ್ಠ ದಿವ್ಯಾಂಗಜನ” (ಅತ್ಯುತ್ತಮ ವಿಶೇಷಚೇತನ ವ್ಯಕ್ತಿ), “ಶ್ರೇಷ್ಠ ದಿವ್ಯಾಂಗಜನ” (ಉತ್ತಮ ವಿಶೇಷಚೇತನ ವ್ಯಕ್ತಿ), “ಶ್ರೇಷ್ಠ ಸೃಜನಶೀಲ ದಿವ್ಯಾಂಗ ಬಾಲ/ಬಾಲಿಕಾ” (ಅತ್ಯುತ್ತಮ ಸೃಜನಶೀಲ ವಿಶೇಷಚೇತನ ಮಗು) ಈ ವಿಭಾಗಗಳಿಗೆ ಅರ್ಜಿ ಸಲ್ಲಿಸುವವರು ಯುಡಿಐಡಿ ಕಾರ್ಡ್ ಅಥವಾ ವಿಕಲಾಂಗತೆಯ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕಾಗುತ್ತದೆ.
ಅರ್ಹತಾ ಮಾನದಂಡಗಳು, ರಾಷ್ಟ್ರೀಯ ಪ್ರಶಸ್ತಿಗಳ ಮಾರ್ಗಸೂಚಿ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ www.depwd.gov.in ಹಾಗೂ ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.in ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಜಿಲ್ಲಾ ಕಚೇರಿಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 6. ಶಿವಮೊಗ್ಗದ ಚಿಕ್ಕಲ್ಲು ,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

ಶಿವಮೊಗ್ಗ ನಗರದ 110/11 ಕೆ.ವಿ. ವಿ.ವಿ.ಕೇಂದ್ರ, ಎಮ್.ಆರ್.ಎಸ್. ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 06 ರ ಶನಿವಾರದಂದು ಬೆಳಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಮ್.ಆರ್.ಎಸ್. ವಾಟರ್ ಸಪ್ಲೈ, ಎಮ್.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್. ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹಮದ್ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆ, ಪಾರ್ಕ್ ಬಡಾವಣೆ.
ಸರ್.ಎಂ.ವಿ. ರಸ್ತೆ (ವೀರಭದ್ರೇಶ್ವರ ಚಿತ್ರ ಮಂದಿರದಿಂದ ಮಹಾವೀರ ವೃತ್ತದವರೆಗೆ), ಬಾಲರಾಜ್ ಅರಸ್ ರಸ್ತೆ (ಮಹಾವೀರ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರ ಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಮೆಹದಿ ನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಬ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಕೋರಿದೆ.