Wednesday, August 5, 2026
Wednesday, August 5, 2026
Home Blog Page 78

ಜೂನ್ 6. ಹೊಳೆಬೆನವಳ್ಳಿ,ದೊಡ್ಡ ತಾಂಡ ,ಜಾವಳ್ಳಿ ಹಸೂಡಿ,ಚಿಕ್ಕಮರಡಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

0

ಮೆಸ್ಕಾಂ ವ್ಯಾಪ್ತಿಯ ಶಿವಮೊಗ್ಗದ ಎಂ.ಆರ್.ಎಸ್ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ
ಜೂನ್ 6 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಎಫ್‌-7 ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್‌-8 ಜಾವಳ್ಳಿ ಐ ಪಿ ಮಾರ್ಗಗಳಲ್ಲಿ‌ವಬರುವ
ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೇನವಳ್ಳಿ, ಹಾರೋಬೇನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಕೋರಿದೆ.

ವೃತ್ತಿ ಬದುಕಿನಲ್ಲಿ ಯಶಸ್ಸುಗಳಿಸಲು ಯುವಸದಸ್ಯರಿಗೆ ರೋಟರಿ ಸಂಸ್ಥೆ ಮಾರ್ಗದರ್ಶಿ- ಸತೀಶ್ ಚಂದ್ರ

0

ರೋಟರಿ ಪೂರ್ವ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಚಟುವಟಿಕೆಗಳನ್ನು ನಡೆಸುವ ಜತೆಯಲ್ಲಿ ವಿಶೇಷ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಆಯೋಸುತ್ತಿರುವುದು ಶ್ಲಾಘನೀಯ ಎಂದು ರೋಟರಿ ಶಿವಮೊಗ್ಗ ಪೂರ್ವ ಮಾಜಿ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಅನುಭವಿಗಳಿಂದ ಯುವ ಸದಸ್ಯರಿಗೆ ಮಾರ್ಗದರ್ಶನ ನೀಡಲು ಇಂತಹ ಕಾರ್ಯಕ್ರಮಗಳನ್ನು ಸಂಸ್ಥೆ ಆಯೋಜಿಸಿದ್ದು, ವೃತ್ತಿ ಬದುಕಿನಲ್ಲಿ ಯಶಸ್ಸು ಗಳಿಸಲು ನೆರವಾಗುತ್ತದೆ ಎಂದು ತಿಳಿಸಿದರು.

ರೋಟರಿ ಸಂಸ್ಥೆಯ ಆರ್.ಮನೋಹರ್ ಮಾತನಾಡಿ, ಸಮಾಜಮುಖಿ ಹಾಗೂ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ರೋಟರಿ ಸಂಸ್ಥೆ ನಿರಂತರ ಪ್ರೇರಣೆ ನೀಡುತ್ತದೆ ಎಂದು ಹೇಳಿದರು.

ರೋಟರಿ ಸಂಸ್ಥೆಯ ಎಚ್.ಎಸ್.ಅಜಿತ್ ಮಾತನಾಡಿ, ರೋಟರಿ ಪೂರ್ವ ಸಂಸ್ಥೆಯಲ್ಲಿ ನನ್ನನ್ನು ಸದಸ್ಯನಾಗಿ ಮಾಡುವ ಜತೆ ಹಿರಿಯರು ಮಾರ್ಗದರ್ಶನ ನೀಡುತ್ತಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ ರಾಂಪುರ ಮಾತನಾಡಿ, ರೋಟರಿ ಸಂಸ್ಥೆ ಸಾಮಾಜಿಕ ಸೇವೆಗಳಲ್ಲಿ ವಿಶೇಷ ಕೆಲಸಗಳನ್ನು ಮಾಡುತ್ತಿದ್ದು, ಸದಸ್ಯರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಹೇಳಿದರು.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಕಾಲಕಾಲಕ್ಕೆ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗಿದೆ. ಯುವಜನರಿಗೆ ಮಾರ್ಗದರ್ಶನ ನೀಡಲು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ನಿಯೋಜಿತ ಸೇನಾನಿ ಎ.ಒ.ಮಹೇಶ್, ಶ್ರೀಕಾಂತ್, ಗಣೇಶ್, ಶ್ರೀನಿವಾಸ್ ಗೌಡ, ರವಿಶಂಕರ್, ವಿಜಯ, ಜಗದೀಶ್, ಅರುಣ್ ದೀಕ್ಷಿತ್, ಶಶಿಕಾಂತ್ ನಾಡಿಗ್, ಸಂಜೀವ್, ವಿಜಯಪ್ರಕಾಶ್, ಕಾಳಾಚಾರ್ ಇತರರಿದ್ದರು.

Style Dance Crew Organization ಶಿವಮೊಗ್ಗದ ಶಶಿಕುಮಾರ್ ಮತ್ತು ನೇತ್ರಾವತಿ ಅವರಿಗೆ ಸಮಾಜ ಸೇವಾ ನೃತ್ಯ ಸಂಸ್ಥೆ ಪ್ರಶಸ್ತಿ

0

Style Dance Crew Organization ಸ್ಟೈಲ್ ಡಾನ್ಸ್ ಕ್ರಿವ್ ಸಂಸ್ಥೆಯ ಕಾರ್ಯಸಾಧನೆ ಮತ್ತು ಸಾರ್ವಜನಿಕ ಸಮಾಜಮುಖಿ ಸೇವೆಗೆ “ರೋಟರಿ ಇಂಟರ್ ನ್ಯಾಷನಲ್ ಶಿವಮೊಗ್ಗ ಮಿಡ್ ಟೌನ್ ಸಂಸ್ಥೆ” ಇವರು ನೃತ್ಯ ಸಂಸ್ಥೆಯ ಸಂಸ್ಥಾಪಕ ಶಶಿಕುಮಾರ್ ಮತ್ತು ಅವರ ತಾಯಿ ನೇತ್ರಾವತಿ ಅವರಿಗೆ “ಸಮಾಜಮುಖಿ ಸೇವಾ ನೃತ್ಯ ಸಂಸ್ಥೆ ಪ್ರಶಸ್ತಿ “ಯನ್ನು ಸ್ಟೈಲ್ ಡಾನ್ಸ್ ಕ್ರಿವ್ ಸಂಸ್ಥೆಗೆ ನೀಡಿ ಗೌರವಿಸಿದೆ.

ಈ ಸಂಧರ್ಭ ರೋಟರಿ ಅಧ್ಯಕ್ಷ ಹರ್ಷ ಕಾಮತ್ ಮತ್ತು ಕಾರ್ಯದರ್ಶಿಗಳಾದ ಮಂಜುನಾಥ್ , ರೋಟರಿಯ ಸರ್ವ ಸದಸ್ಯರು ಮತ್ತು ಸ್ಟೈಲ್ ಡಾನ್ಸ್ ಕ್ರಿವ್ ಸಂಸ್ಥೆಯ ವಿದ್ಯಾರ್ಥಿಗಳು ಹಾಜರಿದ್ದರು.

2026ನೇ ವಾರ್ಷಿಕ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿಗೆ ಅರ್ಜಿಗಳ ಆಹ್ವಾನ

0

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರ್ಕಾರದಿಂದ 2026ನೇ ಸಾಲಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ 5 ರಿಂದ 18 ವರ್ಷದೊಳಗಿನ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿದ ಎಲ್ಲಾ ಮಕ್ಕಳು ಇಲಾಖೆಯ ವೆಬ್‌ಸೈಟ್ https://.awards.gov.in ಮೂಲಕ ಜುಲೈ 31ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ ಆರ್. ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿರಸ್ತೆ, ಆಲ್ಕೋಳ, ಶಿವಮೊಗ್ಗ, ದೂ.ಸಂ.: 08182-295709 ನ್ನು ಸಂಪರ್ಕಿಸುವುದು.

ಜೂನ್ 5. ಶಿವಮೊಗ್ಗ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ

0

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 05 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಎನ್‌ಐಡಿಇಸಿ ಇಂಡಸ್ಟ್ರೀಯಲ್ ಆಟೋ ಮಷಿನ್ ಇಂಡಿಯಾ ಪ್ರೈ.ಲಿ. ಮತ್ತು ಎನ್‌ಟಿಟಿಎಫ್ ಪ್ರೈ.ಲಿ. ಕಂಪನಿಗಳು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಎಲೆಕ್ಟ್ರಿಕಲ್ & ಎಲೆಕ್ಟ್ರಿಷಿಯನ್, ಎಲೆಕ್ಟ್ರೋ & ಮೆಕಾನಿಕಲ್, ಮೆಕಾನಿಕಲ್, ಫಿಟ್ಟರ್, ಟರ್ನರ್, ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ & ಕಮ್ಯೂನಿಕೇಷನ್ ಪದವಿ ಪೂರೈಸಿದ, 18 ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

ಉದ್ಯೋಗದಾತರು ಕಾನೂನುಗಳನ್ನ ಸರಿಯಾಗಿ ಅನುಸರಿಸಬೇಕು.ಆರೋಗ್ಯಕರ ಕೆಲಸದ ವಾತಾವರಣ ನಿರ್ಮಿಸಬೇಕು- ನ್ಯಾ.ಎಂ.ಎಸ್.ಸಂತೋಷ್.

0

ಶಿವಮೊಗ್ಗ, ಭದ್ರಾವತಿ ಕೈಗಾರಿಕಾ ಸಂಘವು ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಅರ್ಥಪೂರ್ಣ ಕಾರ್ಮಿಕರ ದಿನಾಚರಣೆಯನ್ನು ಬುಧವಾರ ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವು ಕಾರ್ಮಿಕರ ಕಲ್ಯಾಣ, ನೌಕರರ ಹಕ್ಕುಗಳು, ಕೈಗಾರಿಕಾ ಸೌಹಾರ್ದತೆ, ಕೆಲಸದ ಸ್ಥಳದ ಸುರಕ್ಷತೆ ಮತ್ತು ಸುಸ್ಥಿರ ಕೈಗಾರಿಕಾ ಬೆಳವಣಿಗೆಗೆ ಕೈಗಾರಿಕೆಗಳು ಹಾಗೂ ಕಾರ್ಮಿಕರ ನಡುವಿನ ಸಮನ್ವಯದ ಮಹತ್ವದ ಕುರಿತು ಜಾಗೃತಿ ಮೂಡಿಸುವುದರ ಮೇಲೆ ಕೇಂದ್ರೀಕರಿಸಿತ್ತು.

ಈ ವೇಳೆ ಮಾತನಾಡಿದ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರ ಕಾರ್ಯದರ್ಶಿಗಳಾದ ಸಂತೋಷ್.ಎಂ.ಎಸ್., ಕಾನೂನು ಅನುಸರಣೆ, ಆನ್‌ಲೈನ್ ಕಾನೂನು ಸೇವೆಗಳು, ಉದ್ಯೋಗದಾತ-ಉದ್ಯೋಗಿ ಸಂಬಂಧ ಮತ್ತು ಪ್ರಮುಖ ಕಾನೂನು ಅರಿವಿನ ವಿಷಯಗಳ ಕುರಿತು ನಿಮ್ಮ ಮೌಲ್ಯಯುತ ಮಾರ್ಗದರ್ಶನವು ಎಲ್ಲಾ ಭಾಗವಹಿಸುವವರಿಗೆ ಅಪಾರ ಸ್ಪಷ್ಟತೆ ಮತ್ತು ವಿಶ್ವಾಸವನ್ನು ನೀಡಿದೆ. ಉದ್ಯಮಗಳು ಮತ್ತು ಉದ್ಯೋಗಿಗಳು ಕಾನೂನು ವಿಷಯಗಳನ್ನು ಜವಾಬ್ದಾರಿಯುತವಾಗಿ ಹೇಗೆ ನಿರ್ವಹಿಸಬೇಕು, ಸರಿಯಾದ ಅನುಸರಣೆಯನ್ನು ಕಾಪಾಡಿಕೊಳ್ಳಬೇಕು ಮತ್ತು ಆರೋಗ್ಯಕರ ಕೆಲಸದ ವಾತಾವರಣವನ್ನು ನಿರ್ಮಿಸಬೇಕು ಎಂಬುದರ ಕುರಿತು ಹಂಚಿಕೊಂಡ ಪ್ರಾಯೋಗಿಕ ಒಳನೋಟಗಳು ನಿಜಕ್ಕೂ ಪ್ರಯೋಜನಕಾರಿಯಾಗಿದ್ದವು. ಅರಿವು, ಶಿಸ್ತು, ಪಾರದರ್ಶಕತೆ ಮತ್ತು ಉದ್ಯೋಗದಾತರು ಹಾಗೂ ಉದ್ಯೋಗಿಗಳ ನಡುವಿನ ಪರಸ್ಪರ ಗೌರವಕ್ಕೆ ನೀವು ನೀಡಿದ ಒತ್ತು, ಹೆಚ್ಚು ಕಾನೂನುಬದ್ಧವಾಗಿ, ಜಾಗೃತ ಮತ್ತು ಸೌಹಾರ್ದಯುತ ಕೈಗಾರಿಕಾ ವಾತಾವರಣದತ್ತ ಕೆಲಸ ಮಾಡಲು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಹೇಳಿದರು.

ಶಿವಮೊಗ್ಗ ಭದ್ರಾವತಿ ಕೈಗಾರಿಕೆಗಳ ಸಂಘದ ಅಧ್ಯಕ್ಷರು ಹಾಗೂ ಮಾಚೇನಹಳ್ಳಿಯ ವಿಜಯ ಪ್ರೈವೇಟ್ ಲಿಮಿಟೆಡ್ ನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಿ.ಜಿ.ಬೆನಕಪ್ಪ ಅವರು, ಉದ್ಯೋಗಿಗಳಿಗೆ ಹಣಕಾಸಿನ ಅರಿವು ಹಾಗೂ ಮಾಸಿಕ ಖರ್ಚು ನಿರ್ವಹಣೆ ಕುರಿತು ಮಹತ್ವದ ಜಾಗೃತಿ ಮೂಡಿಸಿದರು. ತಮ್ಮ ಉಪನ್ಯಾಸದಲ್ಲಿ ಆದಾಯಕ್ಕೆ ಅನುಗುಣವಾಗಿ ಖರ್ಚು ಮಾಡುವ ಅಗತ್ಯತೆ, ಅನಾವಶ್ಯಕ ವೆಚ್ಚಗಳನ್ನು ನಿಯಂತ್ರಿಸುವುದು, ಉಳಿತಾಯದ ಮಹತ್ವ ಹಾಗೂ ಭವಿಷ್ಯದ ಸುರಕ್ಷತೆಗಾಗಿ ಹಣವನ್ನು ಸಮರ್ಪಕವಾಗಿ ಯೋಜಿಸುವ ಕುರಿತು ವಿವರಿಸಿದರು.

ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸಭೆಯನ್ನುದ್ದೇಶಿಸಿ ಮಾತನಾಡಿ, ಕಾರ್ಮಿಕ ಕಾನೂನುಗಳು, ಕಾರ್ಮಿಕರ ಪ್ರಯೋಜನಗಳು, ಸುರಕ್ಷತಾ ಕ್ರಮಗಳು ಮತ್ತು ಅನುಸರಣಾ ಕಾರ್ಯವಿಧಾನಗಳ ಕುರಿತು ಮೌಲ್ಯಯುತ ಮಾರ್ಗದರ್ಶನ ನೀಡಿದರು. ನೌಕರರ ಕಲ್ಯಾಣವನ್ನು ಬೆಂಬಲಿಸುವಲ್ಲಿ ಮತ್ತು ಆರೋಗ್ಯಕರ ಕೈಗಾರಿಕಾ ಸಂಬಂಧಗಳನ್ನು ಕಾಪಾಡಿಕೊಳ್ಳುವಲ್ಲಿ ಕೈಗಾರಿಕೆಗಳು ಮಾಡುತ್ತಿರುವ ಪ್ರಯತ್ನಗಳನ್ನು ಅವರು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಉಪ ವಿಭಾಗದ ಕಾರ್ಮಿಕ ಅಧಿಕಾರಿ ವೇಣುಗೋಪಾಲ್.ಎಂ.ಪಿ.,
ಶಿವಮೊಗ್ಗ ಭದ್ರಾವತಿ ಕೈಗಾರಿಕೆಗಳ ಸಂಘದ ಉಪಾಧ್ಯಕ್ಷರಾದ ಎ.ಎಲ್.ಚಂದ್ರಶೇಖರ್, ಶಿವಮೊಗ್ಗ ಭದ್ರಾವತಿ ಕೈಗಾರಿಕೆ ಸಂಘದ ಕಾರ್ಯದರ್ಶಿ ರಾಜೇಶ್ – ಎಸ್ ಎಸ್ ಟಿ, ಶಿವಮೊಗ್ಗ 2 ನೇ ವೃತ್ತದ ಕಾರ್ಮಿಕ ನಿರೀಕ್ಷಕರಾದ ಸುಖಿತ.ಕೆ.ಸಿ., ಭದ್ರಾವತಿ 1 ನೇ ವೃತ್ತದ ಕಾರ್ಮಿಕರ ನಿರೀಕ್ಷಕರಾದ ಸುಪಿತ್ತಾ.ಜೆ.ವಿ., ಭದ್ರಾವತಿ 2 ನೇ ವೃತ್ತದ ಕಾರ್ಮಿಕ ನಿರೀಕ್ಷಕರಾದ ರಕ್ಷಿತ್.ಬಿ.ಎಂ., ಶಿವಮೊಗ್ಗ ಭದ್ರಾವತಿ ಕೈಗಾರಿಕೆಗಳ ಸಂಘದ ಖಜಾಂಚಿ ದಿನೇಶ್.ಹೆಚ್‌.ಎಲ್., ಕೌನ್ಸಿಲ್ ಮೆಂಬರ್ಸ್ ಶಿವಮೊಗ್ಗ ಭದ್ರಾವತಿ ಕೈಗಾರಿಕೆ ಸಂಘ, ಹಾಗೂ ಕಾರ್ಮಿಕರು ನೆರವೇರಿದರು. ಕೈಗಾರಿಕಾ ಪ್ರತಿನಿಧಿಗಳು, ಕಾರ್ಮಿಕರು, ಸಂಘದ ಸದಸ್ಯರು ಮತ್ತು ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ವಾರಸುದಾರರಿಲ್ಲದ ಶವ ಪತ್ತೆ. ಸುಳಿವಿಗೆ ಸಹಕರಿಸಲು ಹೊಸನಗರ ಪೊಲೀಸ್ ಠಾಣೆ ಪ್ರಕಟಣೆ

0

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೋಡು ಅಗಸರಮನೆ ಗ್ರಾಮದ ವಿಹಂಗಮ ಕಾರ್ ಪಾಯಿಂಟ್ ಷೋರೂಂ ಎದುರು ಸುಮಾರು 45 ವರ್ಷದ ವ್ಯಕ್ತಿಯೊಬ್ಬ ಚರಂಡಿಯಲ್ಲಿ ಬಿದ್ದು ಹೊರಳಾಡುತ್ತಿದ್ದು, ಆತನನ್ನು ಸಾರ್ವಜನಿಕರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾನೆ.

ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈತನ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರಕಿರುವುದಿಲ್ಲ.
ಮೃತ ವ್ಯಕ್ತಿಯು 5.4 ಅಡಿ ಎತ್ತರ, ದುಂಡುಮುಖ, ಸದೃಢ ಮೈಕಟ್ಟು ಹೊಂದಿದ್ದು, ಡಿಸ್ಟೆಂಪರ್ ಕಲರ್‌ನ ಬಿಳಿಗೆರೆಯುಳ್ಳ ಅರ್ಧ ತೋಳಿನ ಟೀಶರ್ಟ್ ಧರಿಸುತ್ತಾನೆ.

ಈ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಸುಳಿವು ಇದ್ದಲ್ಲಿ ಹೊಸನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

ಕುಂಚೇನಹಳ್ಳಿಯಲ್ಲಿ ಮಳೆಗೆ ಮನೆ ಕುಸಿತ, ಪರಿಹಾರಕ್ಕೆ ಮನೆ ಮಾಲೀಕರ ಆಗ್ರಹ

0

ಕಳೆದ ವಾರ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಹಾನಿಯಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುಂಚೇನಹಳ್ಳಿ ಗ್ರಾಮದ ಗಂಗಾಬಾಯಿ ಎಂಬುವರಿಗೆ ಸೇರಿದ ಮನೆ ಮಳೆಯಿಂದ ಹಾನಿಯಾಗಿದ್ದು ಕುಟುಂಬಸ್ಥರು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಕಳೆದ ವಾರದ ಸುರಿದ ಅಕಾಲಿಕ ಮಳೆಯ ಗೋಡೆ ಸಂಪೂರ್ಣ ಕುಸಿದು ಬಿದ್ದಿದೆ. ಇದರಿಂದ ಮನೆಯಲ್ಲಿದ್ದ ವಸ್ತುಗಳು ಕೂಡ ಹಾನಿಯಾಗಿವೆ. ಮನೆ ಕಳೆದ ಕೊಂಡ ಕುಟುಂಬ ಬೀದಿಪಾಲಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನೆ ಮಾಲೀಕರು ಆಗ್ರಹಿಸಿದ್ದಾರೆ

ಜೂನ್ 5 ರಂದು ಶಿವಮೊಗ್ಗದಲ್ಲಿ ವಿವಿಧ ಕಂಪೆನಿಗಳಿಗೆ ಉದ್ಯೋಗ ನೇಮಕಾತಿ, ನೇರ ಸಂದರ್ಶನ

0

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 05 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಎನ್‌ಐಡಿಇಸಿ ಇಂಡಸ್ಟ್ರೀಯಲ್ ಆಟೋ ಮಷಿನ್ ಇಂಡಿಯಾ ಪ್ರೈ.ಲಿ. ಮತ್ತು ಎನ್‌ಟಿಟಿಎಫ್ ಪ್ರೈ.ಲಿ. ಕಂಪನಿಗಳು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಎಲೆಕ್ಟ್ರಿಕಲ್ & ಎಲೆಕ್ಟ್ರಿಷಿಯನ್, ಎಲೆಕ್ಟ್ರೋ & ಮೆಕಾನಿಕಲ್, ಮೆಕಾನಿಕಲ್, ಫಿಟ್ಟರ್, ಟರ್ನರ್, ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ & ಕಮ್ಯೂನಿಕೇಷನ್ ಪದವಿ ಪೂರೈಸಿದ, 18 ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

ಅಕ್ರಮ ಮರಳು ದಂಧೆ: ಜಿಲ್ಲೆಯಲ್ಲಿ 17.000 ಮೆ.ಟನ್ ಮರಳು ಮತ್ತು 52 ವಾಹನ ವಶಕ್ಕೆ

0

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಾಣಿಕೆ ದಂಧೆಯ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆಯು ಶನಿವಾರ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಮರಳು ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದೆ.
ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲ್ಲೂಕುಗಳಲ್ಲಿ ಹರಿಯುವ ತುಂಗಭದ್ರಾ ಮತ್ತು ಶರಾವತಿ ನದಿ ಪಾತ್ರದ ಸ್ಥಳಗಳಲ್ಲಿ ವ್ಯಾಪಕವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿರುವ ಕುರಿತು ಗೌರವಾನ್ವಿತ ಕರ್ನಾಟಕ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಲು ಹಾಗೂ ಶಿವಮೊಗ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಗಳ ಕಛೇರಿಯ ದಾಖಲಾತಿಗಳನ್ನು ಪರಿಶೀಲಿಸುವಂತೆ ಲೋಕಾಯುಕ್ತರು ಆದೇಶಿಸಿದ್ದರು.
15 ತಂಡಗಳಿಂದ 25 ಕಡೆ ಏಕಕಾಲದಲ್ಲಿ ದಾಳಿ:
ಲೋಕಾಯುಕ್ತ ಆದೇಶದ ಹಿನ್ನೆಲೆಯಲ್ಲಿ, ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್. ಕೌಲಾಪುರೆ ಹಾಗೂ ಪೊಲೀಸ್ ಉಪಾಧೀಕ್ಷಕರಾದ ಬಿ.ಪಿ. ಚಂದ್ರಶೇಖರ್ ಅವರ ಮಾರ್ಗದರ್ಶನ ಮತ್ತು ಮೇಲ್ವಿಚಾರಣೆಯಲ್ಲಿ ಬೃಹತ್ ತಂಡವನ್ನು ರಚಿಸಲಾಗಿತ್ತು. ಕರ್ನಾಟಕ ಲೋಕಾಯುಕ್ತದ ವಿವಿಧ ಘಟಕಗಳನ್ನೊಳಗೊಂಡ 15 ಪ್ರತ್ಯೇಕ ತಂಡಗಳು ಜಿಲ್ಲೆಯ 25ಕ್ಕೂ ಹೆಚ್ಚು ಅಕ್ರಮ ಮರಳು ತಾಣಗಳ ಮೇಲೆ ಶನಿವಾರ ಏಕಕಾಲದಲ್ಲಿ ದಾಳಿ ನಡೆಸಿವೆ.
ಮರಳು, ವಾಹನಗಳು ವಶಕ್ಕೆ:
ಈ ಕಾರ್ಯಾಚರಣೆಯಲ್ಲಿ 17,000 ಮೆಟ್ರಿಕ್ ಟನ್ ಅಕ್ರಮ ಮರಳು ಸಂಗ್ರಹಣೆಯನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಇದರೊಂದಿಗೆ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಗೆ ಬಳಸಲಾಗುತ್ತಿದ್ದ ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು, ಟ್ರ್ಯಾಕ್ಟರ್‌ಗಳು, ಬೋಟ್‌ಗಳು ಹಾಗೂ ಮರಳು ಫಿಲ್ಟರ್ ಮಾಡುವ ಯಂತ್ರಗಳು ಸೇರಿದಂತೆ ಒಟ್ಟು 52 ವಾಹನ/ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶಿವಮೊಗ್ಗದ ಹಿರಿಯ ಭೂ ವಿಜ್ಞಾನಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಛೇರಿಯ ಮೇಲೂ ಶೋಧನಾ ವಾರೆಂಟ್ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಕಛೇರಿಯ ಪ್ರಮುಖ ದಾಖಲೆಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಸಿದ್ದಾರೆ.
ಜಂಟಿ ಕ್ರಮಕ್ಕೆ ಸೂಚನೆ:
ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರ್.ಟಿ.ಓ, ಅರಣ್ಯ ಇಲಾಖೆ, ಸಹಾಯಕ ಭೂ ದಾಖಲಾತಿ ಇಲಾಖೆ, ಪರಿಸರ ಮಾಲಿನ್ಯ ಮತ್ತು ನಿಯಂತ್ರಣ ಇಲಾಖೆ ಹಾಗೂ ಪಿ.ಡಬ್ಲ್ಯುಡಿ ಇಲಾಖೆಗಳಿಗೆ ಲೋಕಾಯುಕ್ತರು ಸೂಚನೆ ನೀಡಿದ್ದಾರೆ.
ಈ ಜಂಟಿ ಕಾರ್ಯಾಚರಣೆಯಲ್ಲಿ ಶಿವಮೊಗ್ಗ ಮಾತ್ರವಲ್ಲದೆ ದಾವಣಗೆರೆ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಬೆಳಗಾವಿ ಜಿಲ್ಲೆಗಳ ಲೋಕಾಯುಕ್ತ ಘಟಕಗಳ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಭಾಗವಹಿಸಿದ್ದರು ಎಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.