Thursday, August 6, 2026
Thursday, August 6, 2026
Home Blog Page 85

Madhu Bangarappa ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಯಮಾನುಸಾರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧ- ಮಧು ಬಂಗಾರಪ್ಪ

0

Madhu Bangarappa ಶಿವಮೊಗ್ಗ ನಗರದ ಖಾಸಗಿ ಹೋಟೆಲ್‌ನಲ್ಲಿ ಇಂದು ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖ ಸಚಿವ ಮಧು ಬಂಗಾರಪ್ಪನವರು ಜಿಲ್ಲೆಯ ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು.
ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಿದರು

ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ SSLC ಹಾಗೂ PUC ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಶಿವಮೊಗ್ಗ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾಗೂ ಜೂನ್ 1 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಮಹತ್ವಾಕಾಂಕ್ಷಿ ಕರ್ನಾಟಕ ಪಬ್ಲಿಕ್ ಶಾಲೆ (KPS) ಶಂಕುಸ್ಥಾಪನೆ ಕಾರ್ಯಕ್ರಮದ ಯಶಸ್ವಿ ಆಯೋಜನೆ ಕುರಿತು ಜಿಲ್ಲಾ ಉಸ್ತುವಾರಿ ಮಂತ್ರ ಮಧು ಬಂಗಾರಪ್ಪ ಅವರು ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಖಾಸಗಿ ಮತ್ತು ಅನುದಾನಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳು, ಬೇಡಿಕೆಗಳು ಹಾಗೂ ಆಡಳಿತಾತ್ಮಕ ಸವಾಲುಗಳನ್ನು ಮನದಾಳದಿಂದ ಹಂಚಿಕೊಂಡರು. ಅವರ ಎಲ್ಲಾ ಅಭಿಪ್ರಾಯಗಳನ್ನು ಗಮನವಿಟ್ಟು ಸಚಿವ ಮಧು ಬಂಗಾರಪ್ಪ ಆಲಿಸಿ, ಶಾಲೆಗಳ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಯಮಾನುಸಾರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂಬ ಭರವಸೆ ನೀಡಿದರು

Madhu Bangarappa ಶಿವಮೊಗ್ಗ ಜಿಲ್ಲೆಯನ್ನು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಮಾದರಿ ಜಿಲ್ಲೆಯಾಗಿ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಈ ದಿಸೆಯಲ್ಲಿ ಸರ್ಕಾರ, ಶಿಕ್ಷಕರು, ಶಾಲಾ ಆಡಳಿತ ಮಂಡಳಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಉತ್ತಮ ಫಲಿತಾಂಶ ಸಾಧ್ಯ. ಮಕ್ಕಳ ಭವಿಷ್ಯ ನಿರ್ಮಾಣದ ಕಾರ್ಯದಲ್ಲಿ ನಮ್ಮ ಸರ್ಕಾರ ಸದಾ ನಿಮ್ಮೊಂದಿಗಿರಲಿದೆ ಎಂದು ಸಚಿವ ಮಧು‌ಬಂಗಾರಪ್ಪ ಹೇಳಿದರು.

ಈ ಸಭೆಯಲ್ಲಿ ಜಿಲ್ಲೆಯ ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

International Day for Biological Diversity ಪ್ಲಾಸ್ಟಿಕ್ ಹಾವಳಿ: ನಿತ್ಯ ಸಾವಿರಾರು ಜೀವಿಗಳುನಾಶ- ಡಾ.ನಾಗರಾಜ್ ಪರಿಸರ.

0

International Day for Biological Diversity ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯನ್ನು ಶಿವಮೊಗ್ಗದ ಅಮೃತ್ ನೋನಿ ಉತ್ಪಾದನಾ ಕೇಂದ್ರದಲ್ಲಿ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ನಾಗರಾಜ್ ಪರಿಸರ ಅವರು ಪರಿಸರದಲ್ಲಿ ಜೀವವೈವಿಧ್ಯತೆಯ ಪ್ರಾಮುಖ್ಯತೆ ಮತ್ತು ಸಂರಕ್ಷಣೆ ಕುರಿತು ವಿವರಿಸಿದರು.

ಪರಿಸರದಲ್ಲಿ ಪ್ಲಾಸ್ಟಿಕ್ ನಿಂದ ಆಗುತ್ತಿರುವ ಅನಾಹುತಗಳು ಜೀವ ವೈದ್ಯತೆಯ ನಾಶ ಮಾನವ ವನ್ಯಜೀವಿಗಳ ಮೇಲೆ ಹೆಚ್ಚುತ್ತಿರುವ ದುಷ್ಪರಿಣಾಮಗಳ ಕುರಿತು ತಿಳಿಸುತ್ತಾ ಸರ್ಕಾರ 20 22 ರಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಿರುವುದು ನಿಜ ಆದರೆ ಉತ್ಪತ್ತಿಯನ್ನು ನಿಲ್ಲಿಸಲಿಲ್ಲ, ಎಲ್ಲಿಯವರೆಗೂ ಉತ್ಪತ್ತಿಯನ್ನು ನಿಲ್ಲಿಸುವುದಿಲ್ಲವೋ ಅಲ್ಲಿಯವರೆಗೂ ಅದರ ಬಳಕೆ ನಿಲ್ಲುವುದಿಲ್ಲ .

ಪ್ರತಿನಿತ್ಯ ಸಾವಿರಾರು ಜೀವಿಗಳು ಪ್ಲಾಸ್ಟಿಕ್ ನ ಹಾವಳಿಯಿಂದ ನಶಿಸುತ್ತಿವೆ ಇದರ ವಿರುದ್ಧ ಸರ್ಕಾರ ನಿರ್ಧಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಬಹಳ ದೊಡ್ಡ ಗಂಡಾಂತರವನ್ನು ಎದುರಿಸಬೇಕಾಗುತ್ತದೆ. ಪರಿಸರ ಸಂರಕ್ಷಣೆಯಲ್ಲಿ ಸರ್ಕಾರದ ಜೊತೆ ಸಾರ್ವಜನಿಕರಾದ ನಾವೆಲ್ಲ ಕೈಜೋಡಿಸುವುದರಿಂದ ಮಾತ್ರ ಈ ಪ್ಲಾಸ್ಟಿಕ್ ನಿಂದ ಆಗುವ ದುಷ್ಪರಿಣಾಮಗಳನ್ನು ನಿಲ್ಲಿಸಲು ಸಾಧ್ಯ ಹಾಗಾಗಿ ನಾವೆಲ್ಲರೂ ಎಚ್ಚೆತ್ತುಕೊಂಡು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಮೂಲಕ ನಾವುಗಳು ನಮ್ಮ ಜೊತೆ ಜೀವವೈವಿಧ್ಯವನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

International Day for Biological Diversity ಬೇಕು ಗಳಿಗೆ ಕಡಿವಾಣ ಹಾಕಿ ಸಾಕು ಎನ್ನುವ ಮನಸ್ಥಿತಿಯನ್ನು ಅಳವಡಿಸಿಕೊಂಡರೆ ಪರಿಸರ ಸಂರಕ್ಷಣೆ ಮಾಡಲು ಸಹಾಯವಾಗುತ್ತದೆ. ಪ್ರತಿಯೊಬ್ಬರು ತಾವು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವಾಗ ಕೇಕ್ ಕತ್ತರಿಸುವುದರ ಬದಲು ಗಿಡ ನೆಟ್ಟು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಿ ಎಂದು ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ್ ನೋನಿ ವ್ಯಾಲ್ಯೂ ಪ್ರಾಡಕ್ಟ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶ್ರೀನಿವಾಸಮೂರ್ತಿ ಅವರು ವಹಿಸಿಕೊಂಡು ಅಮೃತ್ ನೋನಿ ಸಂಸ್ಥೆಯು ಬೆಳೆದು ಬಂದ ಹಾದಿಯನ್ನು ಸರಳವಾಗಿ ತಿಳಿಸಿ ಪರಿಸರದ ಪ್ರಾಮುಖ್ಯತೆಯ ಬಗ್ಗೆ ಪ್ರತಿಯೊಬ್ಬರಿಗೂ ಕಾಳಜಿ ಇರುವುದು ಅನಿವಾರ್ಯವಾಗಿದೆ ನಾವೆಲ್ಲ ಸೇರಿ ಈ ಸಂರಕ್ಷಣೆ ಕಾರ್ಯದಲ್ಲಿ ಭಾಗವಹಿಸೋಣ ಎಂದು ತಿಳಿಸುತ್ತಾ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ತಂಡದೊಂದಿಗೆ ಕಾರ್ಯನಿರ್ವಹಿಸಿದರೆ ಎಂತಹ ಸಾಧನೆಯನ್ನು ಮಾಡಲು ಸಾಧ್ಯವಿದೆ ಇದಕ್ಕೆ ನಮ್ಮ ಸಂಸ್ಥೆ ಸಾಕ್ಷಿ ಎಂದು ಹೇಳಿ ಈ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಮೂರ್ತಿ ಅವರ ಕುಟುಂಬಸ್ಥರು ಅಮೃತ್ ನೋನಿ ವ್ಯಾಲ್ಯೂ ಪ್ರಾಡಕ್ಟ್ಸ್ ಸಂಸ್ಥೆಯ ಎಲ್ಲ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು
ಶ್ರೀ ಶಶಿಕಾಂತ್ ನಾಡಿಗ್ ನಿರ್ವಹಿಸಿ ಪ್ರಶ್ನೋತ್ತರ ಕಾರ್ಯಕ್ರಮವನ್ನು ನಡೆಸುವುದರ ಮೂಲಕ ಜೀವವೈವಿಧ್ಯತೆಯ ಪ್ರಾಮುಖ್ಯತೆಯನ್ನು ತಿಳಿದು ನಾವೆಲ್ಲ ಹುಟ್ಟು ಹಬ್ಬದ ಸಂದರ್ಭದಲ್ಲಿ “ಕೇಕ್ ಬಿಡಿ ಗಿಡ ನೆಡಿ” ಎಂಬ ಅಭಿಯಾನದಲ್ಲಿ ಭಾಗವಹಿಸೋಣ ಎಂದು ತಿಳಿಸಿದರು.

Youth Hostel Association ಹಿಮಾಲಯ ಚಾರಣ: ಶಿವಮೊಗ್ಗದ ವಿಜೇಂದ್ರ ರಾವ್ & ಎಮ್.ಕೆ .ಜ್ಯೋತಿ ಅವರಿಗೆ ತಂಡಗಳ ನಾಯಕತ್ವ.

0

Youth Hostel Association ಶಿವಮೊಗ್ಗ ನಗರದ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕದ ಸ್ಥಾಪಕರಲ್ಲಿ ಒಬ್ಬರಾದ ಅ.ನಾ.ವಿಜಯೇಂದ್ರ ರಾವ್ ಹಾಗೂ ವೈ.ಹೆಚ್.ಏ.ಐ. ಸಾಗರ ಘಟಕದ ಸದಸ್ಯೆ ಎಮ್.ಕೆ.ಜ್ಯೋತಿ ನಂಜುಂಡ ಸ್ವಾಮಿಯವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ದವರು ತಮ್ಮ ವಿದ್ಯಾಥಿ‍ಗಳಿಗೆ ಇದೇ ತಿಂಗಳು 26 ರಿಂದ ಹಿಮಾಲಯ ಚಾರಣವನ್ನು ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್‌ ಇಂಡಿಯಾ ರಾಷ್ಟ್ರೀಯ ಘಟಕ, ವೈ.ಹೆಚ್.ಏ.ಐ. ತರುಣೋದಯ ಘಟಕ, ಗೀರ್ವಾಣಭಾರತಿ ಶ್ರೀ ಆದಿಚುಂಚನಗಿರಿ, ಸಂಸ್ಕೃತ ಭಾರತಿ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದಲ್ಲಿ ಕುಲು ಮನಾಲಿ ಸಮೀಪದ ರೋಲಿಖೋಲಿ ಪರ್ವತದಲ್ಲಿ ಹಮ್ಮಿಕೊಳ್ಳಲಾಗಿದೆ.

Youth Hostel Association ಕೆಂದ್ರೀಯ ಸಂಸ್ಕೃತ ವಿದ್ಯಾಲಯ ದೇಶದಲ್ಲಿ ಇರುವ ತಮ್ಮ ವಿದ್ಯಾಶಾಖೆಯಿಂದ ಆಯ್ದ 50 ವಿದ್ಯಾಥಿ‍ಗಳಿಗೆ ಈ ಅವಕಾಶ ಮಾಡಿಕೊಡುತ್ತಿದೆ
ಇಂತಹ ತಂಡದ ನಾಯಕರಾಗಿ ಆಯ್ಕೆಯಾದ ಅ.ನಾ ವಿಜಯೇಂದ್ರ ರಾವ್ ಮತ್ತು ಎಮ್.ಕೆ ಜ್ಯೋತಿ ಯವರಿಗೆ ವೈ.ಹೆಚ್.ಏ.ಐ ತರುಣೋದಯ ಘಟಕದ ಅಧ್ಯಕ್ಷರಾದ ಎನ್.ಗೋಪಿನಾಥ್, ಕಾರ್ಯಾಧ್ಯಕ್ಷ ಎಸ್.ಎಸ್.ವಾಗೇಶ್, ತಸಂಸೇಸಂ ಅಧ್ಯಕ್ಷ ಟಿ.ವಿ.ನರಸಿಂಹ ಮೂರ್ತಿ ಅಭಿನಂದನೆ ಸಲ್ಲಿಸಿದ್ದಾರೆ.

Diploma Admission ಸಹಕಾರ ಡಿಪ್ಲೊಮಾ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ.

0

Diploma Admission ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇವರ ವತಿಯಿಂದ 01.07.2026 ರಿಂದ ಪ್ರಾರಂಭವಾಗುವ ಸಹಕಾರ ಸಂಘ/ಸಂಸ್ಥೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ 6 ತಿಂಗಳ ದೂರಶಿಕ್ಷಣ ಮತ್ತು ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಡಿ ಸಿ ಎಂ ಕೋರ್ಸ್ ತರಬೇತಿ ಸೇರಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಜುಲೈ ರಿಂದ ಡಿಸೆಂಬರ್ ಹಾಗೂ ಜನವರಿ ಯಿಂದ ಜೂನ್‌ವರೆಗೆ ವಾರ್ಷಿಕ ಎರಡು ತಂಡಗಳ ಡಿ.ಸಿ.ಎಂ ಕೋರ್ಸ್ ತರಬೇತಿ ನಡೆಸಲಾಗುವುದು.

ಕನಿಷ್ಠ ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿಯನ್ನು ಪೂರ್ಣಗೊಳಿಸಿರಬೇಕು ಮತ್ತು ರೆಗ್ಯೂಲರ್ ಡಿ.ಸಿ.ಎಂ ಕೋರ್ಸ್ ತರಬೇತಿ ಪಡೆಯುವ ಉದ್ಯೋಗ ಆಕಾಂಕ್ಷಿಗಳು ಅವರವರ ಶೈಕ್ಷಣಿಕ ಅರ್ಹತೆಗೆ ಅನುಸಾರವಾಗಿ ಸಹಕಾರ ಇಲಾಖೆ ಮತ್ತು ಸಹಕಾರ ಕ್ಷೇತ್ರದ ಎಲ್ಲಾ ಸಂಘ / ಸಂಸ್ಥೆಗಳ ಉನ್ನತ ಹುದ್ದೆಗಳಿಗೂ ನೇಮಕಾತಿ ಹೊಂದಲು ಅರ್ಹರಾಗುತ್ತಾರೆ.

ಪ್ರವೇಶ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೆ ಕಂಪ್ಯೂಟರ್ ತರಬೇತಿಯ ಜೊತೆಗೆ ಪ್ರತಿ ತಿಂಗಳೂ ರೂ. 500/- ಹಾಗೂ ಪ.ಜಾ / ಪ.ಪಂಗಡ ಅಭ್ಯರ್ಥಿಗಳಿಗೆ ರೂ. 600/- ಶಿಷ್ಯ ವೇತನ ನೀಡಲಾಗುವುದು. ಹಾಗೂ ಸಹಕಾರ ಕ್ಷೇತ್ರದ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೆಎಂಎಫ್, ಶಿಮುಲ್ (ಹಾಲು ಒಕ್ಕೂಟ) ಮ್ಯಾಮ್ಕೋಸ್, ಟುಮ್ಕೋಸ್, ರಮ್ಕೋಸ್, ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಇತರೆ ಎಲ್ಲಾ ವರ್ಗದ ಸಹಕಾರ ಸಂಘಗಳ ಉದ್ಯೋಗಗಳ ನೇಮಕಾತಿಯಲ್ಲಿ ಈ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ಮೇಲಿನ ಎಲ್ಲಾ ವರ್ಗದ ಸಹಕಾರ ಸಂಘ/ಸಂಸ್ಥೆಗಳ ಉದ್ಯೋಗಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು ಜೊತೆಗೆ ಕೆಎಎಸ್ ಮತ್ತು ಇತರೆ ಉದ್ಯೋಗಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗಿದೆ.

Diploma Admission ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯಲ್ಲಿ ಸುಸಜ್ಜಿತ ತರಗತಿ ಕೊಠಡಿ, ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್‌ಲ್ಯಾಬ್ ಹಾಗೂ ವೈ-ಫೈ ಸೌಲಭ್ಯವನ್ನು ಇದ್ದು, ಡಿಸಿಎಂ ಕೋರ್ಸ್ ಜೊತೆಗೆ 5 ತಿಂಗಳ ಕಂಪ್ಯೂಟರ್ ತರಬೇತಿ ನೀಡಲಾಗುವುದು ಹಾಗೂ ಸಹಕಾರ ಇಲಾಖೆ ಮತ್ತು ಸಹಕಾರ ಸಂಘ/ಸAಸ್ಥೆಗಳಲ್ಲಿನ ನೌಕರರೂ ಪ್ರವೇಶ ಪಡೆಯಬಹುದು.
ದೂರ ಶಿಕ್ಷಣ ಡಿಸಿಎಂ ಕೋರ್ಸ್: ಸಹಕಾರ ಸಂಘ/ಸAಸ್ಥೆಗಳಲ್ಲಿನ ಖಾಯಂ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾತ್ರ ದೂರ ಶಿಕ್ಷಣ ಡಿ.ಸಿ.ಎಂ ಕೋರ್ಸ್ಗೆ ಪ್ರವೇಶ ನೀಡಲಾಗುವುದು.

ಜುಲೈ ರಿಂದ ಡಿಸೆಂಬರ್ ಹಾಗೂ ಜನವರಿ ಯಿಂದ ಜೂನ್ ವರೆಗೆ ವಾರ್ಷಿಕ ಎರಡು ತಂಡಗಳ ಡಿ.ಸಿ.ಎಂ ಕೋರ್ಸ್ ತರಬೇತಿ ನಡೆಸಲಾಗುವುದು. ಅಭ್ಯರ್ಥಿಗಳಿಗೆ ಅಧ್ಯಯನ ಸಾಹಿತ್ಯ ನೀಡುವುದರ ಜೊತೆಗೆ ಕೋರ್ಸ್ ಅವಧಿಯಲ್ಲಿ 10 ದಿನಗಳ (5+5) ಸಂಪರ್ಕ ತರಗತಿಗಳನ್ನು ನಡೆಸಲಾಗುವುದು ಇದು ಸಹಕಾರ ಸಂಘ/ಸAಸ್ಥೆಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳ ಪದೋನ್ನತ್ತಿಗೆ ಡಿ.ಸಿ.ಎಂ ಕೋರ್ಸ್ ಕಡ್ಡಾಯವಾಗಿದೆ.

ದೂರ ಶಿಕ್ಷಣ ಡಿಸಿಎಂ ತರಬೇತಿಗೆ ಆನ್‌ಲೈನ್ ಲಿಂಕ್ www.ksefdem.co.in ಮೂಲಕವೂ ಪ್ರವೇಶ ಪಡೆಯಬಹುದು.
ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನವಾಗಿರುತ್ತೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ : 08182 248873, 9449075746, 9845068191 : 7022441115, 7026246493, 9482216930 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಮ್ಯಾನೇಜಮೆಂಟ್ ಪ್ರಾಂಶುಪಾಲರು ತಿಳಿಸಿದ್ದಾರೆ.

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

0

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು ಆಗ್ರಹಿಸಿ
ಮೆಡಿಕಲ್ ಐಕಾನ್ಸ್ ಸಾಮಾಜಿಕ ಸ್ವಯಂ ಸೇವಾ ತಂಡದ ವತಿಯಿಂದ ಇಂದು ಜಿಲ್ಲಾಧಿಕಾರಿ ಗಳ ಮೂಲಕ
ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಮಧ್ಯ ಕರ್ನಾಟಕ ಭಾಗದ ಜನರಿಗೆ ನ್ಯಾಯಾಂಗ ಸೇವೆಗಳು ಸುಲಭವಾಗಿ ದೊರಕುವ ಉದ್ದೇಶದಿಂದ ಶಿವಮೊಗ್ಗ ದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡುವುದು ಅತ್ಯಂತ ಅಗತ್ಯವಾಗಿದೆ ಎಂದು ಮನವಿದಾರರು ತಿಳಿಸಿದರು.

High Court ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಸೇರಿದಂತೆ ಮಧ್ಯಕರ್ನಾಟಕ ಭಾಗದ ನಾಗರೀಕರು ಹೈಕೋರ್ಟ್ ಸಂಬಂಧಿತ ಪ್ರಕರಣಗಳು ಮೇಲ್ಮನವಿ ಅರ್ಜಿಗಳು, ಕಾನೂನು ವ್ಯವಹಾರಗಳು, ಹಾಗೂ ಇತರೆ ನ್ಯಾಯಾಂಗ ವಿಚಾರಗಳಿಗಾಗಿ ದೂರದ ಮಂಗಳೂರಿಗೆ ಅಥವಾ ಬೆಂಗಳೂರಿಗೆ ತೆರಳಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಇದರಿಂದ ಸಾರ್ವಜನಿಕರಿಗೆ ಆರ್ಥಿಕ, ಸಮಯ ಹಾಗೂ ದೂರದ ಪ್ರಯಾಣದ ತೊಂದರೆಗಳು ಹೆಚ್ಚಾಗುತ್ತಿದೆ ಎಂದು ಮನವಿದಾರರು ತಿಳಿಸಿದರು.
ಮಧ್ಯ ಕರ್ನಾಟಕದ ಶಿವಮೊಗ್ಗ ಭಾಗವು ಶಿಕ್ಷಣ, ಆರೋಗ್ಯ, ವ್ಯಾಪಾರ ಹಾಗೂ ಆಡಳಿತಾತ್ಮಕವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶವಾಗಿದ್ದು ಇಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾದರೆ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಈಗಾಗಲೆ ರಾಜ್ಯದ ಇತರೆ ಭಾಗಗಳಿಗೆ ನೀಡಿರುವಂತೆ ಶಿವಮೊಗ್ಗಕ್ಕೂ ನ್ಯಾಯಯುತ ಆದ್ಯತೆ ನೀಡಬೇಕಾಗಿದೆ ಆದುದ್ದರಿಂದ ಶಿವಮೊಗ್ಗ ಜಿಲ್ಲೆಯ ಹಾಗೂ ಮಧ್ಯ ಕರ್ನಾಟಕ ಭಾಗದ ಜನರ ಹಿತ ದೃಷ್ಠಿಯಿಂದ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಇದಕ್ಕೂ ಮೊದಲು ಮನವಿದಾರರು ಕೋರ್ಟ್ ಹಿಂಭಾಗದಲ್ಲಿ ಹಲವು ದಿನಗಳಿಂದ ವಕೀಲರು ನೆಡೆಸುತ್ತಿರುವ ಹೋರಾಟ ಸ್ಥಳಕ್ಕೆ ತೆರಳಿ ತಮ್ಮ ಬೆಂಬಲ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ, ಮೆಡಿಕಲ್ ಐಕಾನ್ಸ್ ನ ಸಾಮಾಜಿಕ ಸ್ವಯಂ ಸೇವಾ ತಂಡದ ಗೌರವ ಅಧ್ಯಕ್ಷ ಹೇಮರಾಜ್ ಜಿ ಎಚ್ ,ಅಧ್ಯಕ್ಷ ಮಂಜುನಾಥ್ ಎಂಎಲ್, ಉಪಾಧ್ಯಕ್ಷ ಜಯರಾಜ್,ಸತೀಶ್
ಸಂಘಟನಾ ಕಾರ್ಯದರ್ಶಿ ಗುರುರಾಜ್ .ಎಲ್ ಪದಾಧಿಕಾರಿಗಳಾದ ಸತೀಶ್, ಗಿರೀಶ್ ಮಸರೂರು,
ಮಂಜುನಾಥ್ ಬಿ , ಮಧು ಕೆ.ಜಿ ಅಶೋಕ್, ಶಫಿ ,ಭವಾನಿ ರಾಜ್ ಸಿಂಧ್ಯ, ಉಮೇಶ್, ರಘು ಸೇರಿದಂತೆ ಹಲವರಿದ್ದರು.

Breaking News ಕ್ರಿಕೆಟ್ ಪಟು ಅಕ್ಷಯ್ ನಿಧನಕ್ಕೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ಸಂತಾಪ.

0

Breaking News ಕ್ರಿಕೆಟ್ ಆಟ ಆಡುವಾಗಲೇ ರಣಜಿ ಕ್ರಿಕೆಟ್ ನ ಮಾಜಿ ಆಟಗಾರ, ಕರ್ನಾಟಕ ಬ್ಯಾಂಕ್ ನ ಉದ್ಯೋಗಿ, ಉಪ್ಪಾರ ಸಮಾಜದ ಯುವಕ ಎಸ್. ಎಲ್. ಅಕ್ಷಯ್ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ. ಅಕ್ಷಯ್ ರವರು ಇಂದು ಬೆಂಗಳೂರು ನ SLR ಗ್ರೌಂಡ್ ನಲ್ಲಿ 3ನೇ ವಿಭಾಗದ ಪಂದ್ಯ ಆಡುವ ಸಮಯ ದಲ್ಲಿ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ.

Breaking News ಅಕ್ಷಯ್ ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಕ್ಲಬ್ ನಲ್ಲಿ ಕ್ರಿಕೆಟ್ ಅಭ್ಯಾಸ ಮಾಡಿದ್ದರು. ಅಕ್ಷಯ್ ದುರ್ಗಿಗುಡಿ ಕ್ರಿಕೆಟ್ ಕ್ಲಬ್ ನ ಮಾಜಿ ಅಧ್ಯಕ್ಷರಾಗಿದ್ದ ಪುಟ್ಟಪ್ಪನವರ ಮೊಮ್ಮಗ. ಇವರ ಅಂತ್ಯಕ್ರಿಯೆ ನಾಳೆ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ಅಕಾಡೆಮಿ ಅಧ್ಯಕ್ಷರಾದ ಮುರಳಿ ಹೆಚ್ ಸಣ್ಣಕ್ಕಿ , ಗುರುಪ್ರಸಾದ್, ಕಾರ್ತಿಕ್ , ಮಂಜುನಾಥ್, ನವೀನ್, ಸಂಜು, ಭರತ್, ಶಿವಮೊಗ್ಗ ಜಿಲ್ಲಾಧ್ಯಕ್ಷರು ಮಾಲತೇಶ್ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಇವರುಗಳು ಸಂತಾಪ ಸೂಚಿಸುತ್ತಿದ್ದಾರೆ.

Aryabhata Award ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ.

0

Aryabhata Award ಜ್ಞಾನೇಶ್ವರ ಗೋಶಾಲಾ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ
ನಗರದ ಜ್ಞಾನೇಶ್ವರ ಗೋಶಾಲೆಯ ಟ್ರಸ್ಟಿನ ಕಾರ್ಯದರ್ಶಿ ಸಮಾಜ ಸೇವಕ ಹಲವಾರು ಸಂಸ್ಥೆಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಅವರಿಗೆ ಬೆಂಗಳೂರಿನ ಪ್ರತಿಷ್ಠಿತ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ಪ್ರಶಾಂತ್ ರಾಯ್ಕರ್ ರವರು ಸಾಮಾಜಿಕ ಸೇವೆಯಲ್ಲಿ ಸಲ್ಲಿಸಿರುವ ಸಾರ್ಥಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಗಣ್ಯರು ಪ್ರಧಾನ ಮಾಡಿ ಸನ್ಮಾನಿಸಿದ್ದಾರೆ. ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ವಿದೇಶಿ ಗಣ್ಯರು ಸೇರಿದಂತೆ 72 ಜನ ವಿಶೇಷ ಸಾಧಕರಿಗೆ ಈ ಬಾರಿ 2026ನೇ 51ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ Aryabhata Award ಪ್ರಶಸ್ತಿಯನ್ನುನೀಡಿ ಗೌರವಿಸಿದೆ ಪ್ರಶಾಂತ್ ಕುಮಾರ್ ಸಿ ರಾಯ್ಕರ್ ಅವರು ಗ್ರಾಮೀಣ ಭಾಗದಲ್ಲಿ ಅದರಲ್ಲೂ ಗೋ ಶಾಲೆಯಲ್ಲಿ ವಿಶೇಷ ಸೇವೆ ಸಲ್ಲಿಸಿದ ಇವರ ಸೇವೆಯನ್ನ ಪರಿಗಣಿಸಿ ನೀಡಿರುವುದು ತುಂಬಾ ಗಮನಾರ್ವಾಗಿದೆ. ಇವರಿಗೆ ಜ್ಞಾನೇಶ್ವರ ಗೋಶಾಲಯ ಟ್ರಸ್ಟಿನ ಅಧ್ಯಕ್ಷರಾದ ಚಂದ್ರಹಾಸ್ ಪಿ ರಾಯ್ಕರ್ ಹಾಗೂ ಪದಾಧಿಕಾರಿಗಳು ಟ್ರಸ್ಟಿಗಳು ಅಭಿನಂದಿಸಿದ್ದಾರೆ

Shimoga News ಹಾವು ಕಡಿತ ಚಿಕಿತ್ಸೆ; ನಾಟಿ ವೈದ್ಯರ ವಿರುದ್ಧ ಸೂಕ್ತ ಕ್ರಮ -ವಿ.ಅಭಿಷೇಕ್.

0

Shimoga News ಹಾವು ಕಡಿತ ಉಂಟಾದ ತಕ್ಷಣ ಹತ್ತಿರದ ಪಿಹೆಚ್‌ಸಿ ಅಥವಾ ಯಾವುದೇ ಆಸ್ಪತ್ರೆಗೆ ತೆರಳಿ ಶೀಘ್ರ ಚಿಕಿತ್ಸೆ ಪಡೆಯಬೇಕು. ನಾಟಿ ವೈದ್ಯರ ಬಳಿ ತೆರಳಿ ಜೀವಕ್ಕೆ ಆಪತ್ತು ತಂದುಕೊಳ್ಳಬಾರದು. ಹಾವು ಕಡಿತಕ್ಕೆ ನಾಟಿ ಔಷಧಿ ನೀಡುವ ನಾಟಿ ವೈದ್ಯರ ವಿರುದ್ದ ಸೂಕ್ತ ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಸೂಚನೆ ನೀಡಿದರು.

ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿ ಅವರು ಮಾತನಾಡಿದರು.
ಡಿಎಸ್‌ಓ ಡಾ.ನಾಗರಾಜ್ ನಾಯ್ಕ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 226 ಹಾವು ಕಡಿತದ ಪ್ರಕರಣಗಳಿದ್ದು 3 ಸಾವು ಸಂಭವಿಸಿದೆ. ಸಾಗರ ಮತ್ತು ಶಿಕಾರಿಪುರ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ ಎಂದರು.
ಹಾವು ಕಡಿತ ಆಡಿಟ್ ನಡೆಸಿದ ಎಡಿಸಿ, ಹಾವು ಕಡಿತ ಉಂಟಾದ ತಕ್ಷಣದಲ್ಲೇ ಆಸ್ಪತ್ರೆಗೆ ಕರೆತರಬೇಕು. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ನೀಡುವ ಅಗತ್ಯ ಔಷಧಿ ಲಭ್ಯ ಇಟ್ಟುಕೊಳ್ಳಬೇಕು. ಹಾಗೂ ಮುನ್ನೆಚ್ಚರಿಕೆ ಹಾಗೂ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಮನೆ ಸುತ್ತಮುತ್ತ ಸ್ವಚ್ಚತೆ ಕಾಪಾಡಕೊಳ್ಳಬೇಕು. ಹಾಗೂ ಶಾಲಾ ಆವರಣದಲ್ಲಿ ಅನಗತ್ಯ ಗಿಡ ಗಂಟೆಗಳನ್ನು ಸ್ವಚ್ಚಗೊಳಿಸಬೇಕು ಎಂದು ಸೂಚನೆ ನೀಡಿದರು.

ಹಾಗೂ ಹಾವು ಕಡಿತಕ್ಕೆ ಯಾವುದೇ ಕಾರಣಕ್ಕೆ ನಾಟಿ ವೈದ್ಯರ ಬಳಿ ತೆರಳದೇ ತತ್‌ಕ್ಷಣ ಆಸ್ಪತ್ರೆಗೆ ರೋಗಿಯನ್ನು ಕರೆತರಬೇಕು. ಹಾವು ಕಡಿತಕ್ಕೆ ನಾಟಿ ಔಷಧಿ ನೀಡುವ ವೈದ್ಯರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆರ್‌ಸಿಹೆಚ್ ಅಧಿಕಾರಿಗಳಿಗೆ ಸೂಚಿಸಿದರು.

ಕೆಎಫ್ ಡಿ :
ಡಾ.ನಾಗರಾಜ್ ನಾಯ್ಕ್, ಜಿಲ್ಲೆಯಲ್ಲಿ ಈವರೆಗೆ ಕೆಎಫ್‌ಡಿ 123 ಪಾಸಿಟಿವ್ ಪ್ರಕರಣಗಳಿದು,್ದ ಚಿಕಿತ್ಸೆ ನಡೆಸಲಾಗುತ್ತಿದೆ. ಒಟ್ಟು 5 ಸಾವು ಸಂಭವಿಸಿದೆ. ಟಿಕ್ ಮಾದರಿ ಪರೀಕ್ಷೆ ನಡೆಸಲಾಗುತ್ತಿದ್ದು ಈವರೆಗೆ 625 ಮಾದರಿಯನ್ನು ಪುಣೆಗೆ ಕಳುಹಿಸಲಾಗಿದೆ ಅದರಲ್ಲಿ 3 ಟಿಕ್ ಪೂಲ್ ಪಾಸಿಟಿವ್ ಬಂದಿದೆ. ಈವರೆಗೆ 147 ಮಂಗಗಳು ಸಾವನ್ನಪ್ಪಿದ್ದು ಇದರಲ್ಲಿ 34 ಅಟಾಪ್ಸಿ ನಡೆಸಲಾಗಿದ್ದು, ಯಾವುದೇ ಪಾಸಿಟಿವ್ ಪ್ರಕರಣ ಬಂದಿಲ್ಲ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿಗಳು, ಕೆಎಫ್‌ಡಿ ಗೆ ಕಾರಣವಾಗುವ ಉಣ್ಣೆ ಕಡಿತದಿಂದ ರಕ್ಷಣೆ ಪಡೆಯಲು ತೀರ್ಥಹಳ್ಳಿ, ಹೊಸನಗರ, ಸಾಗರ ಭಾಗದಲ್ಲಿ ಡೇಪಾ ಎಣ್ಣೆಯನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು. ಇಲ್ಲಿನ ಮಕ್ಕಳು ಶಾಲೆಗೆ ಮತ್ತು ಹೊರಗೆ ಹೋಗುವಾಗ ಡೇಪಾ ಎಣ್ಣೆ, ಸಾಕ್ಸ್ ಧರಿಸಿಕೊಂಡು ಹೋಗಬೇಕು. ಜ್ವರ ಲಕ್ಷಣಗಳಿದ್ದರೆ ತಕ್ಷಣ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ಒಳಪಡಿಸಬೇಕು ಎಂದು ಎಚ್ಚರಿಕೆ ನೀಡಬೇಕು ಎಂದರು.

ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ:
ಜಿಲ್ಲೆಯಲ್ಲಿ ಈ ತಿಂಗಳು 2254 ನಾಯಿ ಕಡಿತ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಈವರೆಗೆ 8140 ನಾಯಿ ಕಡಿತ ಪ್ರಕರಣ ದಾಖಲಾಗಿದೆ. ಯಾವುದೇ ಸಾವು ಸಂಭವಿಸಿಲ್ಲ.
ನಾಯಿ ಕಡಿತ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತçಚಿಕಿತ್ಸೆ ಮಾಡುವ ಪ್ರಕ್ರಿಯೆಯನ್ನು ಪರಿಣಾಮಕಾರಿಗೊಳಿಸಬೇಕು. ಹೋಟೆಲ್, ದರ್ಶಿನಿಗಳು ಛತ್ರಗಳು, ಶಾಲೆಗಳು, ಹಾಸ್ಟೆಲ್ ಗಳಲ್ಲಿ ಆಹಾರ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಹಾಗೂ ಎಲ್ಲೆಂದರಲ್ಲಿ ಬೀದಿ ನಾಯಿಗಳಿಗೆ ಆಹಾರ ಪದಾರ್ಥ ಹಾಕಬಾರದು.
ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲು ಹಾಗೂ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾವು ಕಡಿತದ ಔಷಧಿ ದಾಸ್ತಾನು ಲಭ್ಯವಿರುವಂತೆ ಕ್ರಮ ವಹಿಸುವಂತೆ ಸೂಚಿಸಿದರು.

Shimoga News ಕಾಲರ, ಟೈಫಾಯ್ಡ್, ಟಿಬಿ, ಕ್ಷಯ ಇತರೆ ಹರಡುವ ಖಾಯಿಲೆಗಳನ್ನು ನಿಯಂತ್ರಣದಲ್ಲಿಡಲು ಜಿಲ್ಲೆಯಲ್ಲಿ ಶುದ್ದ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸುವಂತೆ ಕ್ರಮ ವಹಿಸುವದನ್ನು ಖಾತ್ರಿಪಡಿಸಿಕೊಳ್ಳಬೇಕು. ಕುಡಿಯುವ ನೀರಿನ ಪೈಪ್ ಲೈನ್ ಲೀಕೇಜ್ ಇದ್ರೆ ಗ್ರಾಮ ಪಂಚಾಯ್ತಿಗೆ ಮಾಹಿತಿ ನೀಡಬೇಕು. ಶಾಲೆಗಳು, ಹಾಸ್ಟೆಲ್‌ಗಳಲ್ಲಿ ನೀರಿನ ಮಾದರಿಯ ಪರೀಕ್ಷೆಯನ್ನು ನಿಯಮಿತವಾಗಿ ಮಾಡಿಸಬೇಕು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಗುಡದಪ್ಪ ಕಸಬಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಈವರೆಗೆ 1682 ಪರೀಕ್ಷೆ ನಡೆದಿದ್ದು 42 ಪಾಸಿಟಿವ್ ಪ್ರಕರಣ ದಾಖಲಾಗಿ ಚಿಕಿತ್ಸೆ ನಡೆಯುತ್ತಿದೆ. ಮಲೇರಿಯಾ 5 ಪ್ರಕರಣ ದಾಖಲಾಗಿದ್ದು. ಚಿಕಿತ್ಸೆ ನೀಡಲಾಗುತ್ತಿದೆ.
ಈವರೆಗೆ ಮುಂಗಾರು ಪೂರ್ವ ಮತ್ತು ಮುಂಗಾರು ಅವಧಿಯಲ್ಲಿ ಹೆಚ್ಚಾಗುವ ಈಡಿಸ್ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಿ, ಡೆಂಗಿ ಜ್ವರ ಹರಡದಂತೆ ನಿಯಂತ್ರಿಸಲು ಕರ್ನಾಟಕ ಸರ್ಕಾರವು ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

ಶುಕ್ರವಾರ – ಮೂಲ ಉತ್ಪತ್ತಿ ನಾಶ ದಿನ: ಪ್ರತಿ ಶುಕ್ರವಾರದಂದು ಈಡಿಸ್ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗುವ ತಾಣಗಳನ್ನು ನಾಶಪಡಿಸುವ ಚಟುವಟಿಕೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳಲಾಗುವುದು. ಎಲ್ಲಾ ಆರೋಗ್ಯ ಸಂಸ್ಥೆಗಳು, ಆಸ್ಪತ್ರೆಗಳು ಹಾಗೂ ಶಾಲಾ-ಕಾಲೇಜುಗಳು ಮತ್ತು ಅಂಗನವಾಡಿಗಳ ಒಳಾಂಗಣ ಮತ್ತು ಹೊರಾಂಗಣಗಳನ್ನು ಪರಿಶೀಲಿಸಿ ಸೊಳ್ಳೆ ಮುಕ್ತ ವಲಯವನ್ನಾಗಿ ಮಾಡಲು ಸೂಚನೆ ನೀಡಿದ್ದು ಎಲ್ಲರೂ ಸಹಕರಿಸಬೇಕೆಂದರು.

ಅಪರ ಜಿಲ್ಲಾಧಿಕಾರಿಗಳು ಮಾತನಾಡಿ, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕ್ಷೇತ್ರ ಭೇಟಿಯ ಸಮಯದಲ್ಲಿ ನಿಗದಿತ ಮನೆಗಳಲ್ಲಿ ಲಾರ್ವಾ ಸಮೀಕ್ಷೆ ಹಾಗೂ ನಾಶಪಡಿಸುವ ಕಾರ್ಯವನ್ನು ಮುಂದುವರಿಸಬೇಕು. ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶುಕ್ರವಾರದಂದು ನಗರ ಪ್ರದೇಶಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾರ್ವಾ ನಾಶ ಚಟುವಟಿಕೆಗಳನ್ನು ಮುಂದುವರಿಸುವುದು. ಇದರಲ್ಲಿ ಪ್ರಮುಖವಾಗಿ ಹೈ-ರಿಸ್ಕ್ ಪ್ರದೇಶಗಳು, ಸರ್ಕಾರಿ/ಖಾಸಗಿ ಕಚೇರಿಗಳು ಹಾಗೂ ನಿರ್ಮಾಣ ಹಂತದ ಕಟ್ಟಡಗಳ ಸ್ಥಳಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು
ವಾತಾವರಣ ಬದಲಾವಣೆ, ತ್ವರಿತ ನಗರೀಕರಣ ಮತ್ತು ಘನತ್ಯಾಜ್ಯಗಳ ಅಸಮರ್ಪಕ ವಿಲೇವಾರಿಯಿಂದಾಗಿ ಸೊಳ್ಳೆಗಳು ಹೆಚ್ಚುತ್ತಿದ್ದು, ಇದನ್ನು ತಡೆಯಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಸಾರ್ವಜನಿಕರೊಂದಿಗೆ ಕೈಜೋಡಿಸಿ ಬಹುಮುಖಿ ವಿಧಾನದ ಮೂಲಕ ಡೆಂಗಿ ನಿಯಂತ್ರಣ ಸಾಧಿಸಲು ಸರ್ಕಾರ ಸೂಚಿಸಿದೆ.

ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಹಾಸ್ಟೆಲ್, ರೈಲ್ವೇ ಸ್ಟೇಷನ್, ಬಸ್ ಸ್ಟ್ಯಾಂಡ್, ಟೆರೇಸ್, ಟೈರುಗಳು, ಹೀಗೆ ನೀರು ಸಂಗ್ರಹವಾಗುವ ಜಾಗ ಪತ್ತೆ ಹಚ್ಚಿ, ನೀರನ್ನು ತೆಗೆಸು ಹಾಕಿ, ನೀರು ನಿಲ್ಲದಂತೆ
ಪರಿಶೀಲಿಸಿ ಕ್ರಮ ವಹಿಸಬೇಕು ಹಾಗೂ ಎಲ್ಲ ಕಚೇರಿಗಳಲ್ಲಿ ಕಚೇರಿ ಸುತ್ತಮುತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು ಸೂಚನೆ ನೀಡಿದ ಅವರು ಅಗತ್ಯವಿರುವೆಡೆ ಟೆಮಿಫಾಸ್ ಸಿಂಪಡಣೆ, ಫಾಗಿಂಗ್ ಮಾಡಲು ತಿಳಿಸಿದರು.

ಜಿ.ಪಂ ಉಪ ಕಾರ್ಯದರ್ಶಿ ಸುಜಾತಾ ಮಾತನಾಡಿ, 14 ರಿಂದ 15 ವರ್ಷದೊಳಗಿನ ಎಲ್ಲ ವಿದ್ಯಾರ್ಥಿನಿಯರಿಗೆ ಹೆಚ್‌ಪಿವಿ ಲಸಿಕೆ ಹಾಕಿಸಬೇಕು. ವಿದ್ಯಾರ್ಥಿನಿಯರು ತಮ್ಮ ಹತ್ತಿರದ ಪಿಹೆಚ್‌ಸಿ, ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಈ ಲಸಿಕೆ ಹಾಕಿಸಿಕೊಳ್ಳಬೇಕು. ಇದರಿಂದ ಗರ್ಭಗೊರಳಿನ ಕ್ಯಾನ್ಸರ್‌ನ್ನು ತಡೆಗಟ್ಟಬಹುದಾಗದಿದು, ಎಲ್ಲ ಪ್ರೌಢಶಾಲೆಗಳಲ್ಲಿ ಈ ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ಶಿಕ್ಷಕರು ತಿಳಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಸುಜಾತ, ಡಿಹೆಚ್ ಓ ಡಾ.ನಟರಾಜ್, ಆರ್ ಸಿ ಹೆಚ್ ಓ ಡಾ. ಮಲ್ಲಪ್ಪ, ಇತರೆ ಕಾರ್ಯಕ್ರಮಗಳ ಅನುಷ್ಟಾನ ಅಧಿಕಾರಿಗಳು, ಟಿಹೆಚ್‌ಓಗಳು ಹಾಜರಿದ್ದರು.

Shimoga News ಜೂನ್ 28. ಪಲ್ಸ್ ಪೋಲಿಯಿ ಲಸಿಕಾ ಅಭಿಯಾನ ಯಶಸ್ವಿಯಾಗಿ ಅನುಷ್ಠಾನಗೊಳಿಸಿ- ಅಪರ ಜಿಲ್ಲಾಧಿಕಾರಿ ವಿ‌.ಅಭಿಷೇಕ್

0

Shimoga News ಶಿವಮೊಗ್ಗ ಜಿಲ್ಲೆಯಲ್ಲಿ 2026-27ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಮುಂಬರುವ ಜೂನ್ 28ರ ಭಾನುವಾರದಂದು ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚಿಸಿದರು.

ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಪ್ರಥಮ ಸಭೆಯಲ್ಲಿ ಅಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿ ಅವರು ಮಾತನಾಡಿದರು.
ಜೂನ್ 28ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾದ್ಯಂತ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು ಜಿಲ್ಲೆಯ ಎಲ್ಲಾ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಅಂದು ಪೋಲಿಯೋ ಲಸಿಕೆ ಹಾಕಿಸಬೇಕು. ಲಸಿಕಾ ಕೇಂದ್ರಗಳಿಗೆ ಮಕ್ಕಳನ್ನು ಕರೆತರಲು ಶಾಲಾ ಮಕ್ಕಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮ ಪಂಚಾಯತ್, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಸದಸ್ಯರು, ಗ್ರಾ.ಪಂ ಕಾರ್ಯದರ್ಶಿಗಳು ಮತ್ತು ಗ್ರಾಮ ಲೆಕ್ಕಿಗರು ಸಕ್ರಿಯವಾಗಿ ಸಹಕರಿಸಬೇಕು ಎಂದರು.

ಕೇಂದ್ರಗಳ ವ್ಯವಸ್ಥೆ: ಪೋಲಿಯೋ ಬೂತ್‌ಗಳನ್ನು ತೆರೆಯಲು ಶಾಲಾ ಕೊಠಡಿಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಅಗತ್ಯವಿರುವ ಇತರ ಸರ್ಕಾರಿ ಮತ್ತು ಅರೆ ಸರ್ಕಾರಿ ಕಟ್ಟಡಗಳ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು.
ನಗರ ವ್ಯಾಪ್ತಿಯಲ್ಲಿ ಉಸ್ತುವಾರಿ: ನಗರ ಪ್ರದೇಶಗಳಲ್ಲಿ ಕಾರ್ಯಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ನಗರಸಭೆ/ಪುರಸಭೆಗಳ ಮುಖ್ಯ ಅಧಿಕಾರಿಗಳು ಆಯಾ ತಾಲೂಕಿನ ಆರೋಗ್ಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಜವಾಬ್ದಾರಿ ನಿರ್ವಹಿಸಬೇಕು.
ಸಾರಿಗೆ ಮತ್ತು ಮೂಲಸೌಕರ್ಯ: ಲಸಿಕಾ ಅಭಿಯಾನದ ಸುಗಮ ಸಂಚಾರಕ್ಕಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಜೀಪುಗಳ ವ್ಯವಸ್ಥೆ ಮಾಡಬೇಕು. ಹಾಗೂ ಜೂನ್ 27ರಿಂದ ಜುಲೈ 1 ರವರೆಗೆ ಜಿಲ್ಲಾದ್ಯಂತ ನಿರಂತರ ವಿದ್ಯುತ್ ಸರಬರಾಜು ಇರುವಂತೆ ನೋಡಿಕೊಳ್ಳಲು ಮೆಸ್ಕಾಂ ಗೆ ಸೂಚಿಸಿದರು.

ಧಾರ್ಮಿಕ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಾ.ಪಂ.ಇಓ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಬೇಕು. ಹಾಗೂ ಕಾರ್ಯಕ್ರಮದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಮಾಹಿತಿ, ಶಿಕ್ಷಣ ಮತ್ತು ಸಂಪರ್ಕ (ಐಇಸಿ) ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಕಸ ವಿಲೇವಾರಿ ವಾಹನಗಳಲ್ಲಿ ಆಡಿಯೋ ಜಿಂಗಲ್ಸ್ ನುಡಿಸಬೇಕು.

Shimoga News ತಾಲ್ಲೂಕುಗಳಲ್ಲಿ ಸಿಡಿಪಿಇ ಗಳು ಮೇಲ್ವಿಚಾರಣೆ ಮಾಡಬೇಕು. ನಗರಾಭಿವೃದ್ಧಿ ಇಲಾಖೆಯಿಂದ ನಗರ ಟಾಸ್ಕ್ಫೋರ್ಸ್ ಸಭೆ ನಡೆಸಿ ಬ್ಯಾನರ್, ಪೋಸ್ಟರ್ ಮೂಲಕ ಪ್ರಚಾರ ನೀಡಬೇಕು. ಹಾಗೂ ಎಲ್ಲರೂ ಕೈಜೋಡಿಸಿ ಜಿಲ್ಲೆಯಲ್ಲಿ ಶೇ.100 ರಷ್ಟು ಪೋಲಿಯೋ ಲಸಿಕೆಯನ್ನು ಹಾಕುವ ಮೂಲಕ ಅಭಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಅಂದು ಎಲ್ಲಾ ಶಾಲೆಗಳನ್ನು ಪೋಲಿಯೋ ಲಸಿಕೆ ನೀಡಲು ತೆರೆದಿರಬೇಕು. ಹಿಂದಿನ ದಿನವೇ ಮಕ್ಕಳಿಂದ ಜಾಥಾ ನಡೆಸಿ ಸುತ್ತಮುತ್ತ ಜಾಗೃತಿ ಮೂಡಿಸಬೇಕು. ಕಾರ್ಮಿಕ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಅಭಿಯಾನ ಯಶಸ್ವಿಗೊಳಿಸಲು ಕೈಜೋಡಿಸಬೇಕೆಂದರು.
ಆರ್ ಸಿ ಹೆಚ್ ಓ ಡಾ. ಮಲ್ಲಪ್ಪ ಮಾತನಾಡಿ, ಭಾರತ ದೇಶವು 2014 ರಿಂದ ಪೋಲಿಯೋ ಮುಕ್ತವಾಗಿದೆ. 2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕಡೆಯ ಪ್ರಕರಣ ಕಂಡುಬಂದಿತ್ತು.

ಪಾಕಿಸ್ತಾನ ಮತ್ತು ಅಘ್ತಾನಿಸ್ತಾನದಲ್ಲಿ ಒಂದೆರಡು ಪ್ರಕರಣಗಳಿದ್ದು ಅಲ್ಲಿಂದ ಬರುವ ಸಂಭವ ಇರುವ ಕಾರಣ ಅಭಿಯಾನವನ್ನು ನಿರಂತರವಾಗಿ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ 4,39,013 ಮನೆಗಳಿಂದ 123388 ಮಕ್ಕಳನ್ನು ಪೋಲಿಯೋ ಲಸಿಕೆ ನೀಡಲು ಗುರುತಿಸಲಾಗಿದೆ. ಟ್ರಾನ್ಸಿಟ್, ಮೊಬೈಲ್ ಸೇರಿ ಒಟ್ಟು 1069 ಬೂತ್‌ಗಳು ಅಂದು ಕಾರ್ಯ ನಿರ್ವಹಿಸಲಿವೆ. 3960 ಲಸಿಕಾ ಕಾರ್ಯಕರ್ತರಿದ್ದು, ಬೂತ್‌ಗೆ ಬಾರದೇ ಉಳಿದ ಮಕ್ಕಳನ್ನು ಗುರುತಿಸಲು ಜೂನ್ 29 ಮತ್ತು 30 ರಂದು ಗ್ರಾಮೀಣ ಭಾಗದಲ್ಲಿ ಹಾಗೂ ಜುಲೈ 1 ರಂದು ನಗರ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ನೀಡಲಾಗುವುದು. ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್ ಹಾಗೂ ಇತೆರೆಡೆ ಟ್ರಾನ್ಸಿಟ್ ತಂಡಗಳನ್ನು ನಿಯೋಜಿಸಲಾಗುವುದು ಎಂದರು.

ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಸುಜಾತಾ, ಡಿಹೆಚ್ ಓ ಡಾ.ನಟರಾಜ್, ಡಿಎಸ್ ಓ ಡಾ.ನಾಗರಾಜ್ ನಾಯ್ಕ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಗುಡದಪ್ಪ, ಇತರೆ ಕಾರ್ಯಕ್ರಮಗಳ ಅನುಷ್ಟಾನ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಹಾಜರಿದ್ದರು.

B.Y. Raghavendra ನ್ಯಾಯಕ್ಕಾಗಿ 300 ಕಿಮೀ ಅಲೆದಾಟ: ಭೌಗೋಳಿಕವಾಗಿ ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸೂಕ್ತ- ಬಿ.ವೈ.ರಾಘವೇಂದ್ರ.

0

B.Y. Raghavendra ನ್ಯಾಯ ಎಲ್ಲರಿಗೂ ಸುಲಭವಾಗಿ ಸಿಗಬೇಕು’ ಎನ್ನುವುದು ಸಂವಿಧಾನದ ಆಶಯ. ಆದರೆ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರು ನ್ಯಾಯಕ್ಕಾಗಿ 300ಕ್ಕೂ ಹೆಚ್ಚು ಕಿಲೋಮೀಟರ್ ದೂರದ ಬೆಂಗಳೂರಿಗೆ ಅಲೆಯಬೇಕಾದ ಪರಿಸ್ಥಿತಿ ಇದೆ. ಧಾರವಾಡ ಮತ್ತು ಕಲಬುರಗಿ ಮಾದರಿಯಲ್ಲಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳನ್ನು ಬೆಸೆಯುವ ಮಧ್ಯಬಿಂದುವಾಗಿರುವ ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವುದು ಭೌಗೋಳಿಕವಾಗಿ ಹಾಗೂ ನ್ಯಾಯದ ದೃಷ್ಟಿಯಿಂದ ಅತ್ಯಗತ್ಯವಾಗಿದೆ.

ಜಸ್ವಂತ್ ಸಿಂಗ್ ಆಯೋಗ ನಿಗದಿಪಡಿಸಿರುವ ಎಲ್ಲಾ ಮಾನದಂಡಗಳನ್ನು ನಮ್ಮ ಶಿವಮೊಗ್ಗ ಪೂರ್ಣವಾಗಿ ಪೂರೈಸುತ್ತದೆ.

B.Y. Raghavendra ಕೆಲವರು ಮಂಗಳೂರು ಪೀಠದ ವ್ಯಾಪ್ತಿಗೆ ಶಿವಮೊಗ್ಗವನ್ನು ಸೇರಿಸುವ ಮಾತನಾಡುತ್ತಿದ್ದಾರೆ. ಆದರೆ ಭೀಕರ ಮಳೆಗಾಲದಲ್ಲಿ ಶಿರಾದಿ, ಚಾರ್ಮಾಡಿ ಅಥವಾ ಆಗುಂಬೆ ಘಾಟ್‌ಗಳಂತಹ ಅಪಾಯಕಾರಿ ರಸ್ತೆಗಳನ್ನು ದಾಟಿ ಜನರು ಮಂಗಳೂರಿಗೆ ಸಂಚರಿಸಿ ನ್ಯಾಯ ಪಡೆಯುವುದು ಪ್ರಾಯೋಗಿಕವಾಗಿ ಅಸಾಧ್ಯ. ಅದಕ್ಕಾಗಿಯೇ ವಕೀಲರ ಸಮುದಾಯ ಮತ್ತು ವಿವಿಧ ಬಾರ್ ಅಸೋಸಿಯೇಷನ್‌ಗಳು ಮಂಗಳೂರು ಪ್ರಸ್ತಾಪವನ್ನು ತಿರಸ್ಕರಿಸಿವೆ.

ನಿಮ್ಮ ಸಂಸದನಾಗಿ ಕೇಂದ್ರ ಕಾನೂನು ಸಚಿವಾಲಯದ ಮಟ್ಟದಲ್ಲಿ ಈ ಪ್ರಸ್ತಾಪಕ್ಕೆ ಧ್ವನಿಯಾಗಲು ನಾನು ಬದ್ಧನಾಗಿದ್ದೇನೆ. ರಾಜ್ಯ ಸರ್ಕಾರವು ಅಗತ್ಯ ಮೂಲಸೌಕರ್ಯ ಒದಗಿಸಿ, ಮುಖ್ಯ ನ್ಯಾಯಮೂರ್ತಿಗಳ ಸಹಮತಿಯೊಂದಿಗೆ ಕೇಂದ್ರಕ್ಕೆ ಸ್ಪಷ್ಟ ಪ್ರಸ್ತಾಪವನ್ನು ಸಲ್ಲಿಸಬೇಕಿದೆ. ಶಿವಮೊಗ್ಗ ಹೈಕೋರ್ಟ್ ಪೀಠ ಸ್ಥಾಪನೆಯಾಗುವವರೆಗೆ ನಾವೆಲ್ಲರೂ ಪಕ್ಷಾತೀತವಾಗಿ ಒಟ್ಟಾಗಿ ಹೋರಾಡೋಣ.