Thursday, August 6, 2026
Thursday, August 6, 2026
Home Blog Page 87

ಅಬ್ಬಲಗೆರೆಯಲ್ಲಿ ಯುವತಿಯ ಸರಕಳವು: ಪೊಲೀಸರ ಚಾಣಾಕ್ಷತನದಿಂದ ಆರೋಪಿ ಅಂದರ್

0

ಶಿವಮೊಗ್ಗ ತಾಲೂಕಿನ ಅಬ್ಬಲಗೆರೆಯ ಸಮೀಪ ನಡೆದ ಯುವತಿಯೊಬ್ಬರ ಸರ ಕಳವು ಮಾಡಿದ ಪ್ರಕರಣವನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಮೇ.22 ರ ಸಂಜೆ ಯುವತಿಯೊಬ್ಬರು ಕಾರಿಂದ ಕೆಳಗೆ ಇಳಿಯುತ್ತಿದ್ದ ವೇಳೆ, ಹಿಂಭಾಗದಿಂದ ಇಕೋ ಸ್ಪೋರ್ಟ್ ಕಾರಿನಲ್ಲಿ ಬಂದ ಇಬ್ಬರು ಅಪರಿಚಿತರು ಯುವತಿಯ ಕೊರಳಿನಲ್ಲಿದ್ದ ಬಂಗಾರದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ, ಆರೋಪಿಗಳ ಪತ್ತೆ ಹಾಗೂ ಮಾಲು ವಶಕ್ಕೆ ವಿಶೇಷ ತಖಾ ತಂಡವನ್ನು ರಚಿಸಿತು. ಸಿಪಿಐ ರಾಘವೇಂದ್ರ ಕಾಂಡಿಕೆ ಹಾಗೂ ಪಿಎಸ್‌ಐ ನವೀನ್ ಮಠಪತಿ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.

ತನಿಖಾ ತಂಡದಲ್ಲಿ ಸಿಪಿಸಿ ಶ್ರೀಕಾಂತ್, ಕಾಶಿನಾಥ ಹಾಗೂ ಕವನ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು. ಕಾರ್ಯಾಚರಣೆಯ ವೇಳೆ ಆರೋಪಿ ಮಂಜುನಾಥನಾಯ್ಕ ನನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ಸುಮಾರು 5 ಲಕ್ಷ ರೂ. ಮೌಲ್ಯದ ಕಾರು ಹಾಗೂ ಸುಮಾರು 1.50 ಲಕ್ಷ ರೂ. ಮೌಲ್ಯದ 10 ಗ್ರಾಂ ತೂಕದ ಬಂಗಾರದ ಸರವನ್ನು ವಶಪಡಿಸಿಕೊಳ್ಳಲಾಗಿದೆ.

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

0

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಬೆಳೆಸಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್‌ಕುಮಾರ್ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ವಿದುಷಿ ಶ್ವೇತಾ ಪ್ರಕಾಶ್ ಅವರನ್ನು ಸನ್ಮಾನಿಸಿ ಮಾತನಾಡಿ, ವೈವಿಧ್ಯ ಕಲಾಪ್ರಕಾರಗಳ ಕಲಿಕೆಯು ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ ಮಾತನಾಡಿ, ಮಾಹಿತಿ ಮತ್ತು ತಂತ್ರಜ್ಞಾನ ಯುಗದಲ್ಲಿ ಶಿಕ್ಷಣ ಕಲಿಕೆಯ ಜತೆಗೆ ಭರತನಾಟ್ಯ ಕಡೆಗೆ ಆಸಕ್ತಿ ವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಮಕ್ಕಳು ಮೊಬೈಲ್, ಡಿಜಿಟಲ್ ಉಪಕರಣಗಳಲ್ಲಿ ಸಮಯ ವ್ಯರ್ಥ ಮಾಡಲು ಬಿಡದೆ ಅವರಲ್ಲಿ ಉತ್ತಮ ಆಸಕ್ತಿ ಬೆಳೆಸಬೇಕು ಎಂದು ಸಲಹೆ ನೀಡಿದರು.

ಮಯೂರಿ ನಾಟ್ಯಶಾಲೆಯ ವಿದುಷಿ ಶ್ವೇತಾ ಪ್ರಕಾಶ್ ಮಾತನಾಡಿ, ಭರತನಾಟ್ಯ ಭಾರತೀಯ ಸಂಸ್ಕೃತಿ ಪರಂಪರೆಯನ್ನು ಬಿಂಬಿಸುತ್ತದೆ. ಮಕ್ಕಳಲ್ಲಿ ಶಿಸ್ತು, ಸಂಯಮ ಬೆಳೆಸುತ್ತದೆ ಎಂದು ಹೇಳಿದರು.

Rotary Shivamogga ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ನಿಯೋಜಿಯ ಸೇನಾನಿ ಎ.ಒ.ಮಹೇಶ್, ಶ್ರೀಕಾಂತ್, ಆದಿಮೂರ್ತಿ, ಕೃಷ್ಣಮೂರ್ತಿ, ಡಾ. ಗುಡದಪ್ಪ ಕಸಬಿ, ಚಂದ್ರಶೇಖರಯ್ಯ, ಪರಮೇಶ್ವರ್ ಶಿಗ್ಗಾವ್, ಆಶಿತ್, ಜಗದೀಶ್, ಶ್ರೀನಿವಾಸ್ ಗೌಡ, ಎಸ್.ಗಣೇಶ್, ಬಿ.ಗಂಗಪ್ಪ ರೋಟರಿ ಶಿವಮೊಗ್ಗ ಪೂರ್ವ ಸದಸ್ಯರು ಹಾಗೂ ಕುಟುಂಬದ ಸದಸ್ಯರು ಹಾಜರಿದ್ದರು.

ಚಾರಣಿಗರಿಗೆ ಹಿಮಾಲಯ ತವರುಮನೆ.ಇಲ್ಲಿ ಚಾರಣಮಾಡುವ ಮೂಲಕ ದೈಹಿಕ, ಮಾನಸಿಕ ಸದೃಢತೆ ಲಭಿಸುತ್ತದೆ- ಎಸ್.ಎಸ್.ವಾಗೀಶ್.

0

ಇಂದು ಶಿವಮೊಗ್ಗದ ರೈಲ್ವೆ ನಿಲ್ದಾಣದಿಂದ ಆದಿ ಕೈಲಾಸಕ್ಕೆ ಚಾರಣಹೊರಟವರಿಗೆ ಬೀಳ್ಕೊಡುತ್ತಾ ಮಾತನಾಡಿದ ತರುಣೋದಯ ಘಟಕದ ಛೇರ್ಮನ್ ಎಸ್.ಎಸ್.ವಾಗೇಶ್ ಚಾರಣಗರಿಗೆ ಹಿಮಾಲಯ ತವರುಮನೆ ಇದ್ದಂತೆ. ಪ್ರತೀ ವರ್ಷ ಇಲ್ಲಿ ಚಾರಣ ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಡವಾಗಲು ಸಹಕಾರಿ ಎಂದರು.

ಭಾರತದ ಉತ್ತರಾಖಂಡ ರಾಜ್ಯದ ಪಿಥೋರಗಢ ಜಿಲ್ಲೆಯ ಹಿಮಾಲಯದಲ್ಲಿ ಆದಿ ಕೈಲಾಸ ಪರ್ವತವಿದೆ. ಸಮುದ್ರಮಟ್ಟದಿಂದ ಸುಮಾರು 6,191 ಮೀಟರ್ ಎತ್ತರದಲ್ಲಿರುವ ಈ ಪವಿತ್ರ ಸ್ಥಳವು ಕೈಲಾಸ ಮಾನಸ ಸರೋವರದ ಪ್ರತಿಕೃತಿಯಾಗಿದೆ. ಪಾರ್ವತಿ ಸರೋವರ ಮತ್ತು ಗೌರಿ ಕುಂಡ ಆದಿ ಕೈಲಾಸದ ತಪ್ಪಲಿನಲ್ಲಿರುವ ಪವಿತ್ರ ಸರೋವರಗಳು. ಈ ಯಾತ್ರೆಯಲ್ಲಿ ನೈಸರ್ಗಿಕವಾಗಿ ‘ಓಂ’ ಆಕಾರವನ್ನು ಹೋಲುವ ಮತ್ತೊಂದು ಪವಿತ್ರ ಪರ್ವತವನ್ನು ಕಾಣಬಹುದು.

ಇದನ್ನು ಹಿಂದೂ ಧರ್ಮದಲ್ಲಿ ಪಂಚ ಕೈಲಾಸಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ. ಈ ಯಾತ್ರೆಯು ಸಂಪೂರ್ಣವಾಗಿ ಭಾರತೀಯ ಭೂಪ್ರದೇಶದಲ್ಲೇ ನಡೆಯುತ್ತದೆ.

ದೆಹಲಿಯಿಂದ ಕುಮಾವೂನ್ ಪ್ರದೇಶದ ಮೂಲಕ ಧಾರ್ಚುಲಾ ತಲುಪಿ, ಅಲ್ಲಿಂದ ಟ್ರೆಕ್ಕಿಂಗ್ ಮೂಲಕ ಆದಿ ಕೈಲಾಸ ತಲುಪಬಹುದು. ಉತ್ತರಾಖಂಡ ಪ್ರವಾಸೋದ್ಯಮ ಅತ್ಯುತ್ತಮವಾಗಿ ಆಯೋಜನೆ ಮಾಡಿದೆ, ಇದನ್ನು ಶಿವ ಕೈಲಾಶ್ , ಚೋಟಾ ಕೈಲಾಶ್, ಬಾಬಾ ಕೈಲಾಶ್ ಅಥವಾ ಜೊಂಗ್ಲಿಂಗ್‌ಕಾಂಗ್ ಶಿಖರ ಎಂದೂ ಕರೆಯುತ್ತಾರೆ ಎಂದರು.

ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ ಆದಿ ಕೈಲಾಸವು ಶಿವ ಮತ್ತು ತಾಯಿ ಪಾರ್ವತಿಯ ಪವಿತ್ರ ನೆಲೆಯಾಗಿದೆ. ಹಿಂದೂ ಪುರಾಣಗಳ ಪ್ರಕಾರ ಆದಿ ಕೈಲಾಸ ಪಂಚ ಕೈಲಾಸಗಳಲ್ಲಿ ಒಂದಾಗಿದೆ ಆದಿ ಕೈಲಾಸ ಯಾತ್ರೆಯು ಆಧ್ಯಾತ್ಮಿಕ ಅನ್ವೇಷಕರಿಗೆ ಮತ್ತು ಸಾಹಸವನ್ನು ಬಯಸುವವರಿಗೆ ಹಿಮಾಲಯದ ಭವ್ಯವಾದ ಇಳಿಜಾರುಗಳ ನಡುವಿನ ಪವಿತ್ರ ಮತ್ತು ರಮಣೀಯ ಪ್ರಯಾಣವಾಗಿದೆ ಎಂದರು.

ಘಟಕದ ಕಾರ್ಯದರ್ಶಿ ಸುರೇಶ್ ಕುಮಾರ್, ನಾಗರಾಜ್, ಡಾ.ಗುರುಪಾದಪ್ಪ, ಡಾ.ಶೇಖರ್, ಡಾ.ಶಾಂತ, ಡಾ.ಶಶಿಕಲಾ, ಭಾರತಿ, ದಾನಮ್ಮ, ಮಲ್ಲಿಕಾರ್ಜುನ್, ರವೀಂದ್ರ ಮುಂತಾದವರು ಇದ್ದರು.

ವಿಶೇಷ ಮತದಾರರ ಪಟ್ಡಿ ಪರಿಷ್ಕರಣೆ ಅಭಿಯಾನ- ಎಸ್.ದತ್ತಾತ್ರಿ. ಶಿವಮೊಗ್ಗ

0

ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ನೀಡಿರುವುದು ಒಂದು ವಿಶೇಷ ವ್ಯವಸ್ಥೆ. ಈ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಅವಶ್ಯಕತೆ ಇರುವ ಸಂದರ್ಭಗಳಲ್ಲಿ ಪರಿಷ್ಕರಣೆ ಮಾಡಿ ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸಿ, ನಿಧನ ಹೊಂದಿದವರ, ವರ್ಗಾವಣೆಗೊಂಡವರ, ಅಕ್ರಮವಾಗಿ ನೆಲೆಸಿ ನಾಗರೀಕರೆಂದು ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಿಕೊಂಡವರನ್ನು ಪತ್ತೆಹಚ್ಚಿ ಆ ಹೆಸರುಗಳನ್ನು ತೆಗೆದು, ಹೊಸದಾಗಿ ಮತದಾರ ಪಟ್ಟಿಯನ್ನು ರಚಿಸುವುದೇ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ.

ಕರ್ನಾಟಕದಲ್ಲಿ 30.06.26 ರಿಂದ BLO ಗಳ ಮುಖಾಂತರ ಈ ಕಾರ್ಯ ಪ್ರಾರಂಭವಾಗಲಿದೆ.ಈ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಚುನಾವಣಾ ಆಯೋಗಕ್ಕೆ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಲು ರಾಜ್ಯ ಬಿಜೆಪಿ ವತಿಯಿಂದ ತಂಡ ರಚಿಸಿ ಈಗಾಗಲೇ ಕಳೆದ ಆರು ತಿಂಗಳಿಂದ ಕಾರ್ಯವನ್ನು ಮುಖ್ಯವಾಗಿದೆ.

ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬೀನ್ ರವರು ರಾಜ್ಯದ ಎಸ್ಐಆರ್ ತಂಡದೊಂದಿಗೆ ಸಭೆ ನಡೆಸಿ ಸಾಕಷ್ಟು ಮಾಹಿತಿಗಳನ್ನು ಪಡೆದು, ಅನೇಕ ಸಲಹೆ ಸೂಚನೆಗಳನ್ನು ನೀಡಿದರು ರಾಷ್ಟ್ರೀಯ ಪಕ್ಷದ ಅಧ್ಯಕ್ಷರೊಬ್ಬರು ಈ ರೀತಿ SIR ಬಗ್ಗೆ ಅತ್ಯಂತ ಹೆಚ್ಚು ಪ್ರಾಶಸ್ತ್ಯ ನೀಡಿ ಸಲಹೆ ಮಾರ್ಗದರ್ಶನ ನೀಡಿ ,ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗೂಳಿಯದಂತೆ ನೋಡುವ ನಮ್ಮ ಪಕ್ಷದ ಕಾರ್ಯಕರ್ತರ ಜವಾಬ್ದಾರಿಯನ್ನು ತಿಳಿಸಿದರು.

ಈ ಸಭೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ರಾಜ್ಯ ಉಸ್ತುವಾರಿಗಳಾದ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಜೀವ್ ವಿಧಾನ ಪರಿಷತ್ ಸದಸ್ಯರಾದ ಶ್ರೀ ನವೀನ್, ಸಹ ಸಂಚಾಲಕರಾದ ಶ್ರೀಮತಿ ಶ್ಯಾಮಲಾ ಹಾಗೂ ಈ ಕಾರ್ಯವನ್ನು ಮುನ್ನಡೆಸುತ್ತಿರುವ ವಿಭಾಗಗಳ ಸಂಯೋಜಕರುಗಳು ಉಪಸ್ಥಿತರಿದ್ದರು.

ವಿಶೇಷ ವರದಿ:
ಎಸ್ ದತ್ತಾತ್ರಿ,
ರಾಜ್ಯ ಸಂಚಾಲಕರು,
ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರೀಕ್ಷಕರಣೆ ತಂಡ,( SIR)
ಬಿಜೆಪಿ ಕರ್ನಾಟಕ.

ತೇಜಸ್ ಶಾಸ್ತ್ರಿಗೆ ” ಭಟ್ಕಳದಲ್ಲಿ ನಡೆದ ಸ್ಪರ್ಧೆಯಲ್ಲಿ” ಗಾನ ಸಿರಿ ಸ್ಟಾರ್ ಸಿಂಗರ್” ಪ್ರಶಸ್ತಿ

0

ಇಂದು ಭಟ್ಕಳ ದಲ್ಲಿ ನಡೆದ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು “ಗಾನ ಸಿರಿ ಸ್ಟಾರ್ ಸಿಂಗರ್” ನ ಪಟ್ಟವನ್ನು ತೇಜಸ್ ಶಾಸ್ತ್ರೀ ತನ್ನದಾಗಿಸಿಕೊಂಡಿದ್ದಾನೆ.
ತೇಜಸ್ ಶಾಸ್ತ್ರಿ ಚನ್ನಗಿರಿಯಲ್ಲಿ ಸಂಗೀತ ಗುರುಗಳಾಗಿದ್ದ ನರಸಿಂಹಮೂರ್ತಿ ಅವರ ಮೊಮ್ಮಗ. ಈಗಾಗಲೇ ಟೀವಿಗಳ ರಿಯಾಲಿಟಿ ಷೋ ಗಳಲ್ಲಿ ಹಾಡಿ ಮೆಚ್ಚುಗೆ, ಪ್ರಶಸ್ತಿ ಗಳಿಸಿದ್ದಾನೆ.
ನಾಡಿನಾದ್ಯಂತ ತನ್ನ ಗಾಯನದ ಮೂಲಕ
ಅಪಾರ ಜನಪ್ರಿಯತೆ ಸಂಪಾದಿಸಿದ್ದಾನೆ.

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

0

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ ಅಗತ್ಯ ಕ್ರಮ

ಸಾರ್ವಜನಿಕರು ಸಹಕರಿಸಿ

  • ವಿದೇಶಿ ಪ್ರಯಾಣ ಮುಗಿಸಿ ಬಂದ 21 ದಿನಗಳ ಒಳಗೆ ಎಬೋಲಾ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡಿ
  • ಪ್ರಯಾಣಿಕರ ಸುರಕ್ಷತೆ ಮತ್ತು ಅಂತಾರಾಷ್ಟ್ರೀಯ ಆರೋಗ್ಯ ನಿಯಮಗಳ ಪ್ರಕಾರ, ವಿಮಾನ ನಿಲ್ದಾಣದಲ್ಲಿ ಡಿಆರ್‌ ಕಾಂಗೋ, ಉಗಾಂಡಾ ಹಾಗೂ ದಕ್ಷಿಣ ಸುಡಾನ್‌ ದೇಶಗಳಿಂದ ಬರುವ ಯ ಪ್ರಯಾಣಿಕರಿಗೆ ನಡೆಯುವ ಆರೋಗ್ಯ ತಪಾಸಣೆಗೆ ಸಹಕರಿಸಬೇಕು ಎಂದು‌ ಕೋರಲಾಗಿದೆ.

Dinesh Gundu Rao ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ. ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ದೇಶದಲ್ಲಿ ಇನ್ನೂ ಪ್ರಕರಣ ಪತ್ತೆಯಾಗಿಲ್ಲ. ಆದರೂ ಕೂಡ ನಾವು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ವಿದೇಶಗಳಿಂದ ಬಂದವರನ್ನು 21 ದಿನಗಳ ಕಾಲ ನಿಗಾದಲ್ಲಿ ಇರಿಸಲಾಗುವುದು. ರೋಗಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಮಾಹಿತಿ ನೀಡಲು ಸೂಚಿಸಲಾಗಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ. ಸರ್ಕಾರ ಎಲ್ಲ ರೀತಿಯ ಮುಂಜಾಗ್ರತೆ ವಹಿಸಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸಿ ಎಂ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

0

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ “ರಾಜ್ಯಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆ (KPS) ಅಡಿಗಲ್ಲು ಸಮಾರಂಭ”ದ ಹಿನ್ನೆಲೆಯಲ್ಲಿ, ಇಂದು ಶಿವಮೊಗ್ಗದ ‘ಅಲ್ಲಮ ಪ್ರಭು ಮೈದಾನ’ ಕ್ಕೆ ಉನ್ನತ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಇತಿಹಾಸ ಸೃಷ್ಟಿಸಲಿರುವ ಈ ಬೃಹತ್ ಕಾರ್ಯಕ್ರಮದ ವೇದಿಕೆ ನಿರ್ಮಾಣ, ಸಾರ್ವಜನಿಕ ಸೌಕರ್ಯ, ಟ್ರಾಫಿಕ್ ದಟ್ಟಣೆ ಹಾಗೂ ಭದ್ರತಾ ವ್ಯವಸ್ಥೆಗಳು ಯಾವುದೇ ಲೋಪವಿಲ್ಲದೆ ಅಚ್ಚುಕಟ್ಟಾಗಿ ಮೂಡಿಬರಲು ಅಧಿಕಾರಿಗಳಿಗೆ ಸೂಕ್ತ ಸಲಹೆ ಮತ್ತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.

Madhu Bangarappa ಈ ವೇಳೆ ಜಿಲ್ಲಾಧಿಕಾರಿ ಶ್ರೀ ಪ್ರಭುಲಿಂಗ ಕವಳಿಕಟ್ಟಿ, ಸಿಇಒ ಶ್ರೀ ಹೇಮಂತ್ ಕುಮಾರ್, ಎಸ್ಪಿ ಶ್ರೀ ನಿಖಿಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕಿಶ್ ಬಾನು, ಜವಳಿ ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಸೇರಿದಂತೆ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಜರಿದ್ದರು.

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

0

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ಹುಲಿಕಲ್ ಘಾಟ್ ರಸ್ತೆ ನಿರ್ಮಾಣದ ವೇಳೆ ಮರಣ ಹೊಂದಿದ ಕಾರ್ಮಿಕರ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರದ ಚೆಕ್‌ಗಳನ್ನು ವಿತರಿಸಲಾಯಿತು.

ಬಳಿಕ ಶಿವಮೊಗ್ಗ ಜಿಲ್ಲೆಯ ಹಿತದೃಷ್ಟಿಯಿಂದ ಸಭೆಯಲ್ಲಿ ಪಕ್ಷಾತೀತವಾಗಿ ಎರಡು ಅತ್ಯಂತ ಪ್ರಮುಖ ಸರ್ವಾನುಮತದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

1️⃣ ಬೇಸೂರು ಅಣುಸ್ಥಾವರಕ್ಕೆ ಸ್ಪಷ್ಟ ವಿರೋಧ: ಮಲೆನಾಡು ಭಾಗದ ಸೂಕ್ಷ್ಮ ಪರಿಸರ ಮತ್ತು ಈಗಾಗಲೇ ಮುಳುಗಡೆಯಿಂದ ಸಂಕಷ್ಟ ಎದುರಿಸಿರುವ ಸಾಗರ ತಾಲ್ಲೂಕಿನ ಬೇಸೂರು ಗ್ರಾಮದ ರೈತರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಇಲ್ಲಿ ಅಣುಸ್ಥಾವರ ಸ್ಥಾಪಿಸಲು ನಾವು ಬಿಡುವುದಿಲ್ಲ ಎಂದು ಸಭೆಯಲ್ಲಿ ಸರ್ವಾನುಮತದ ದೃಢ ನಿರ್ಣಯ ಕೈಗೊಳ್ಳಲಾಯಿತು.

2️⃣ ಹೈಕೋರ್ಟ್ ಸಂಚಾರಿ ಪೀಠಕ್ಕೆ ಒತ್ತಾಯ: ಮಧ್ಯ ಕರ್ನಾಟಕ ಭಾಗದ ಜನರಿಗೆ ಹಾಗೂ ವಕೀಲರ ಸಂಘದ ದಶಕಗಳ ಹೋರಾಟಕ್ಕೆ ನ್ಯಾಯ ಒದಗಿಸಲು ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಈ ಕುರಿತು ಸಹಿ ಹೊಂದಿದ ಪ್ರತಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಶೀಘ್ರದಲ್ಲೇ ಒತ್ತಡ ತರಲಾಗುವುದು.

Madhu Bangarappa  “ಸಭೆಯಲ್ಲಿ ಬಹು ಮುಖ್ಯವಾಗಿ ಚರ್ಚಿಸಲಾದ ವಿಷಯಗಳು”

♦️ಆರೋಗ್ಯ ವಲಯದ ಸುಧಾರಣೆ: ಮೆಗ್ಗಾನ್ ಆಸ್ಪತ್ರೆಯ ಸಮಸ್ಯೆಗಳು ಹಾಗೂ ಜಿಲ್ಲೆಯಲ್ಲಿರುವ ವೈದ್ಯರ ಕೊರತೆಯನ್ನು ನೀಗಿಸಲು ಮುಂದಿನ 10 ರಿಂದ 15 ದಿನಗಳ ಒಳಗಾಗಿ ವಿಶೇಷ ಉಸ್ತುವಾರಿ ಸಮಿತಿಯನ್ನು ರಚಿಸಿ, ಸೂಕ್ತ ಕ್ರಮ ಕೈಗೊಳ್ಳಲು ಭರವಸೆ ನೀಡಲಾಗಿದೆ.

♦️ಅಕ್ರಮ ಮರಳು ಸಾಗಣೆಗೆ ಬ್ರೇಕ್: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆಯಿಂದ ಸರ್ಕಾರಕ್ಕೆ ಆಗುತ್ತಿರುವ ನಷ್ಟವನ್ನು ತಡೆಯಲು ಮತ್ತು ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳಿಗೆ ಕಠಿಣ ನಿರ್ದೇಶನ ನೀಡಲಾಗಿದೆ. ಅಧಿಕಾರಿಗಳ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ.

♦️ಮಳೆಗಾಲದ ಮುನ್ನೆಚ್ಚರಿಕೆ: ಶಾಲಾ ಆವರಣಗಳಲ್ಲಿ ಬಿದ್ದಿರುವ ಹಾಗೂ ಅಪಾಯಕಾರಿಯಾಗಿರುವ ಮರಗಳು ಮತ್ತು ಮೆಸ್ಕಾನ್ ವಿದ್ಯುತ್ ತಂತಿಗಳನ್ನು ತ್ವರಿತವಾಗಿ ತೆರವುಗೊಳಿಸಿ ಸಾರ್ವಜನಿಕರು ಹಾಗೂ ಮಕ್ಕಳ ಸುರಕ್ಷತೆ ಕಾಯಲು ಜಿಲ್ಲಾಧಿಕಾರಿಗಳಿಗೆ ಮತ್ತು ಅರಣ್ಯ ಇಲಾಖೆಗೆ ತಾಕೀತು ಮಾಡಲಾಗಿದೆ.

♦️ರೈತರನ್ನು ಅರಣ್ಯ ಇಲಾಖೆಯವರು ವಿಶ್ವಾಸಕ್ಕೆ ತೆಗೆದುಕೊಳ್ಳಿ: ಅರಣ್ಯ ಕಾಯ್ದೆಯ ಚೌಕಟ್ಟಿನಲ್ಲಿ ಕೆಲಸ ಮಾಡುವಾಗ ಸ್ಥಳೀಯ ರೈತರನ್ನು ಮತ್ತು ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಾರ್ವಜನಿಕರಲ್ಲಿ ಆತಂಕ ಮೂಡಿಸುವ ಧೋರಣೆಯನ್ನು ಒಪ್ಪಲು ಸಾಧ್ಯವಿಲ್ಲ. ಯಾವುದೇ ಕ್ರಮ ಕೈಗೊಳ್ಳುವ ಮುನ್ನ ಕಡ್ಡಾಯವಾಗಿ ಪೂರ್ವಭಾವಿ ಸಭೆ ಕರೆಯಬೇಕು ಎಂದು ನಿರ್ದೇಶನ ನೀಡಿದೆ.

ಸಭೆಯಲ್ಲಿ ಜಿಲ್ಲೆಯ ಎಲ್ಲಾ ಗೌರವಾನ್ವಿತ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಹಾಗೂ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

0

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ನುಡಿದರು.

ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ ಯೋಜನೆಗೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಾಂಕೇತಿಕ ನಿವೇಶನ ಹಂಚಿಕೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

ಇಲ್ಲಿಯವರೆಗೂ ಕೇವಲ ವಸತಿ ನಿರ್ಮಾಣ ಮಾಡುತ್ತಿದ್ದ ವಸತಿ ಇಲಾಖೆ ಮತ್ತು KHB ಈಗ 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವುದು ಪ್ರಗತಿಯ ದೂರದೃಷ್ಟಿಯಾಗಿದೆ . ಇದಕ್ಕಾಗಿ ಶಿವಲಿಂಗೇಗೌಡರು ಮತ್ತು ಜಮೀರ್ ಅಹಮದ್ ಅವರು ಅಭಿನಂದನಾರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗುಜರಾತ್ ನಲ್ಲಿರುವ ಕ್ರೀಡಾಂಗಣ 90 ಸಾವಿರ ಆಸನ ವ್ಯವಸ್ಥೆ ಇರುವಂಥಾದ್ದು. ನಮ್ಮ ರಾಜ್ಯದ್ದು ಎರಡನೇ ದೊಡ್ಡ ಕ್ರೀಡಾಂಗಣವಾಗಿದೆ. ಇದರಿಂದ ಪ್ರವಾಸೋದ್ಯಮದ ಪ್ರಗತಿಯ ಜೊತೆಗೆ ಸುತ್ತ ಮುತ್ತಲ ಊರುಗಳ ಆರ್ಥಿಕತೆಯೂ ಹೆಚ್ಚುತ್ತದೆ. ಉದ್ಯೋಗವೂ ಹೆಚ್ವುತ್ತದೆ. ಸರ್ಕಾರದ ಆರ್ಥಿಕ ನೆರವಿಲ್ಲದೆ KHB ಹಣದಿಂದಲೇ ಕ್ರೀಡಾಂಗಣ ನಿರ್ಮಾಣ ಆಗಲಿದೆ ಎಂದು ಶಿವಲಿಂಗೇಗೌಡರು ಹೇಳಿದ್ದಾರೆ ಎಂದು ಸಿಎಂ ಉಲ್ಲೇಖಿಸಿದರು.

CM Siddharamaiah ಖಾಲಿ ಇರುವ KHB ನಿವೇಶನಗಳ ಮಾರಾಟದಿಂದ KHB ಗೆ 20ಸಾವಿರ ಕೋಟಿ ಆದಾಯ ಬರುವ ಅಂದಾಜಿದೆ. ನೆತ್ತಿ ಮೇಲೆ ಸೂರು ಇರಬೇಕು ಎನ್ನುವುದು ಪ್ರತಿಯೊಬ್ಬರ ಆಸೆ. ಈಗ ಭೂಮಿ ಬೆಲೆ ಹೆಚ್ಚುತ್ತಿರುವುದರಿಂದ ಬಡ, ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ kHB ನಿವೇಶನಗಳನ್ನು ನಿರ್ಮಿಸಿ ಒದಗಿಸುತ್ತಿದೆ ಎಂದರು.

ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಜಿಗಣಿ ಹೋಬಳಿಯ ಪ್ರಮುಖ ಸಂಪರ್ಕ ರಸ್ತೆ ನಿರ್ಮಾಣಕ್ಕೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಧಿಕಾರಿಗಳು ಈ ಕೆಲಸವನ್ನೂ ಆರಂಭಿಸುತ್ತಾರೆ. ಕ್ರೀಡಾಂಗಣ, ರಸ್ತೆ ಮಾತ್ರವಲ್ಲದೆ ವಸತಿ ಇಲಾಖೆ ಈ ಬಾರಿ ಇಲ್ಲಿಯವರೆಗೂ 3 ಲಕ್ಷಕ್ಕೂ ಹೆಚ್ಚು ಮನೆ ಮತ್ತು ನಿವೇಶನಗಳನ್ನೂ ರಾಜ್ಯದಲ್ಲಿ ನೀಡಲಾಗಿದೆ ಎಂದರು.

ಹೀಗಾಗಿ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಸಮಗ್ರ ಅಭಿವೃದ್ಧಿಗೆ ನಾವು ನಾಂದಿ ಹಾಡಿದ್ದೇವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ವಸತಿ ಸಚಿವ ಜಮೀರ್ ಅಹಮದ್, ಕೆಹೆಚ್ ಬಿ ಅಧ್ಯಕ್ಷರಾದ ಶಾಸಕ ಶಿವಲಿಂಗೇಗೌಡ, ಶಾಸಕ ಆನೇಕಲ್ ಶಿವಣ್ಣ, ಹಿರಿಯ ಶಾಸಕರುಗಳಾದ ಟಿ.ಬಿ.ಜಯಚಂದ್ರ, ಕೃಷ್ಣಪ್ಪ, ಮಾಜಿ ಸಂಸದ ಡಿ.ಕೆ.ಸುರೇಶ್, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶಾಸಕ ಅಬ್ಬಯ್ಯ, MLC ರಾಮೋಜಿಗೌಡ, ಗ್ಯಾರಂಟಿ ಅನುಷ್ಠಾನ ಸಮುತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

DC Shivamogga ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸೋಣ- ಪ್ರಭುಲಿಂಗ ಕವಳಿಕಟ್ಟಿ

0

DC Shivamogga ಮುಂಬರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಶ್ರದ್ಧಾಭಕ್ತಿಗಳಿಂದ ಆಚರಿಸೋಣವೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಶನಿವಾರ ನಗರದ ಡಿಎಆರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬಕ್ರೀದ್ ಹಬ್ಬ ಕುಎಇತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದಂತೆ ಸೌಹಾರ್ದಯುತವಾಗಿ ರಾಜ್ಯಕ್ಕೇ ಮಾದರಿಯಾಗಿ ಹಬ್ಬವನ್ನು ಆಚರಿಸೋಣ.
ಹಬ್ಬದ ವೇಳೆ ಸ್ವಚ್ಚತೆ ಕಾಪಾಡುವುದು ಮತ್ತು ಸುರಕ್ಷತೆ ಕುರಿತು ಈಗಾಗಲೇ ಎರಡು ಬಾರಿ ಸಭೆಯನ್ನು ಮಾಡಿ ಸಮಾಲೋಚನೆ ನಡೆಸಿ, ಅದೇ ರೀತಿ ಯೋಜನೆಗಳನ್ನು ರೂಪಿಸಿಕೊಂಡು
ಪೂರ್ವಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಹಬ್ಬದ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು ಹಬ್ಬದ ದಿನದಂದು ಯಾವುದೇ ರೀತಿಯ ಕಾನೂನುಬಾಹಿರ ಘಟನೆಗಳು ನಡೆದರೆ ಅದನ್ನು ನಮ್ಮ ಗಮನಕ್ಕೆ ತರಬೇಕು ಎಂದರು.
ಎಲ್ಲರನ್ನೂ ನಾವು ಸಮಾನವಾಗಿ ಕಾಣುತ್ತೇವೆ. ಯಾರೇ ತಪ್ಪು ಮಾಡಿದರೂ ಅವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮವನ್ನು ಕ್ಯೆಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸ್ವಚ್ಛತೆಯನ್ನು ನಿರಂತರವಾಗಿ ಮಾಡಲಾಗುತ್ತಿದೆ. ಹಬ್ಬದ ವೇಳೆ ಶೀಘ್ರವಾಗಿ ತ್ಯಾಜ್ಯವನ್ನು ವಿಲೇವಾರಿ ಮಾಡಲು ಪಾಲಿಕೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಮಳೆ ಬಂದರೆ ಅದಕ್ಕೂ ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಮಾತನಾಡಿ, ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಮೆರೆದು ಹಬ್ಬಗಳನ್ನು ಆಚರಣೆ ಮಾಡಿಕೊಂಡು ಹೋಗಬೇಕು.
DC Shivamogga ಹಬ್ಬದ ನೆಪದಲ್ಲಿ ಜಿಲ್ಲೆಯ ಶಾಂತಿ ಕದಡಲು ಯತ್ನಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಏನೇ ಸಮಸ್ಯೆ ಬಂದರು ಮೊದಲು ಪೊಲೀಸರಿಗೆ ವಿಷಯ ತಿಳಿಸಬೇಕು. 112 ಸಂಖ್ಯೆಗೆ ಕರೆ ಮಾಡಿ ತಿಳಿಸಬೇಕು ಎಂದರು.
ವಿವಿಧ ಸಂಘಟನೆಗಳ ಮುಖಂಡರು ಸಲಹೆಗಳನ್ನು ನೀಡಿದ್ದೀರಿ. ಅದರಂತೆ ಎಲ್ಲ ರೀತಿಯ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಸುರಕ್ಷಿತೆಗೆ ಅಗತ್ಯವಾದ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ.
ಚೆಕ್ ಪೋಸ್ಟ್ ನಿಗಾ : ಜಿಲ್ಲೆಯಲ್ಲಿ 30 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದ್ದು, ತೀವ್ರ ನಿಗಾವಣೆ ನಡೆಸಲಾಗುತ್ತಿದ್ದು,ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ ಅವರು ಬಕ್ರೀದ್ ಹಬ್ಬವನ್ನು ಸೌಹಾರ್ದತೆ ಹಾಗೂ ವಿಜೃಂಭಣೆಯಿಂದ ಆಚರಣೆ ಮಾಡೋಣ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಹಿಂದೂ-ಮುಸ್ಲಿಂ ಧರ್ಮಗಳ ಮುಖಂಡರು ಮಾತನಾಡಿ, ಶಿವಮೊಗ್ಗದ ಸೌಹಾರ್ದ ಪರಂಪರೆಯನ್ನು ಎತ್ತಿಹಿಡಿಯಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಎಎಸ್ ಪಿ ಕಾರಿಯಪ್ಪ, ಪಾಲಿಕೆ ಅಧಿಕಾರಿಗಳು, ಜಿಲ್ಲೆಯ ಮುಸ್ಲಿಂ ಮತ್ತು ಹಿಂದೂ ಧರ್ಮದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.