Thursday, August 6, 2026
Thursday, August 6, 2026
Home Blog Page 95

ಮೇ 19. ಶಿವಮೊಗ್ಗ ಬೆಕ್ಕಿನ ಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ , ಎಸ್ಪಿಎಂ ರಸ್ತೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ

0

ಶಿವಮೊಗ್ಗ ನಗರ ಎಂ.ಆರ್.ಎಸ್. 110/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಈ ವಿ.ವಿ ಕೇಂದ್ರದ ವ್ಯಾಪ್ತಿಯ ಬೆಕ್ಕಿನ ಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ. ರಸ್ತೆ, ಒ.ಬಿ.ಎಲ್.ರಸ್ತೆ, ಪೆನ್ಷನ್ ಮೊಹಲ್ಲಾ, ಸಿ.ಎಲ್.ರಾಮಣ್ಣ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಎಲಕಪ್ಪನ ಕೇರಿ, ನಾಗಪ್ಪನ ಕೇರಿ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಎಡಭಾಗ, ಅಮಿರ್ ಅಹಮ್ಮದರ್ ವೃತ್ತ, ಶಿವಾಜಿ ರಸ್ತೆ, ತಿರುಪಳಯ್ಯನ ಕೇರಿ. ಬಿ.ಹೆಚ್.ರಸ್ತೆ, ಸಾರ್ವಕರ್ ನಗರ, ಅಶೋಕರಸ್ತೆ, ಕುಚಲಕ್ಕಿ ಕೇರಿ, ಎಂ.ಕೆಕೆ.ರಸ್ತೆ, ಅನವೇರಪ್ಪನ ಕೇರಿ. ಎಲೆ ರೇವಣ್ಣನ ಕೇರಿ. ಗಂಗಾ ಪರಮೇಶ್ವರಿ ದೇವಸ್ಥಾನ ರಸ್ತೆ, ಧರ್ಮರಾಯನ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಜಿಲಟಿನ್ ಕಡ್ಡಿ ಮತ್ತು ಅಮೋನಿಯಂ ನೈಟ್ರೈಟ್ ಅಕ್ರಮ ಸಂಗ್ರಹ ಪತ್ತೆ

0

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಬಸ್ತಿಕೊಪ್ಪದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಕಡ್ಡಿ ಹಾಗೂ ಅಮೋನಿಯಂ ನೈಟ್ರೇಟ್ ಪತ್ತೆಯಾಗಿದೆ .

ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸ್ಪೋಟಕ ಪತ್ತೆಯಾದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿತ್ತು.

ಜಿಲೆಟಿನ್ ಕಡ್ಡಿಗಳನ್ನು ಬಿಡಿಡಿಎಸ್ ತಂಡದವರು ಮೂರು ಹಂತಗಳಲ್ಲಿ ನಿಷ್ಕೀಯಗೊಳಿಸಿದ್ದಾರೆ.

ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಗಾರು ಮಳೆ ಸಂಭ್ರಮ: ಅಡಿಕೆ ಸಸಿ ಸಿದ್ಧಪಡಿಸುವ ಸ್ಫೂರ್ತಿಯಲ್ಲಿ ರೈತ ಸಮುದಾಯ

0

ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ
ಚಿತ್ರದುರ್ಗ ಜಿಲ್ಲೆ ಭರಮಸಾಗರ ಹೋಬಳಿ ಭಾಗದಲ್ಲಿ ಮುಂಗಾರು ಮಳೆಯ ನಿರೀಕ್ಷೆಯ ನಡುವೆ ರೈತರು ಹಾಗೂ ಯುವಕರು ಅಡಿಕೆ ಸಸಿ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ದೃಶ್ಯಗಳು ಗಮನ ಸೆಳೆಯುತ್ತಿವೆ. ಮಳೆಯ ಆಗಮನವನ್ನು ಆಶಾಭರವಿನಿಂದ ಎದುರು ನೋಡುತ್ತಿರುವ ರೈತರು ಈಗಾಗಲೇ ಅಡಿಕೆ ತೋಟಗಳ ಅಭಿವೃದ್ಧಿಗೆ ಅಗತ್ಯವಿರುವ ಸಸಿಗಳನ್ನು ಸಿದ್ಧಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಭರಮಸಾಗರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕೃಷಿಯ ಜೊತೆಗೆ ಪೂರಕ ಉದ್ಯೋಗ ಹುಡುಕುತ್ತಿರುವ ಯುವಕರು ಅಡಿಕೆ ಸಸಿ ತಯಾರಿಕೆಯನ್ನು ಜೀವನೋಪಾಯದ ಒಂದು ಪ್ರಮುಖ ಮಾರ್ಗವನ್ನಾಗಿ ಮಾಡಿಕೊಂಡಿದ್ದಾರೆ. ಉತ್ತಮ ಗುಣಮಟ್ಟದ ಮಣ್ಣು, ಸಾವಯವ ಗೊಬ್ಬರ ಹಾಗೂ ಸೂಕ್ತ ನಿರ್ವಹಣೆಯ ಮೂಲಕ ಸಾವಿರಾರು ಅಡಿಕೆ ಸಸಿಗಳನ್ನು ಪ್ಲಾಸ್ಟಿಕ್ ಕವರ್‌ಗಳಲ್ಲಿ ಬೆಳೆಸಲಾಗುತ್ತಿದೆ. ಮಳೆ ಆರಂಭವಾದ ತಕ್ಷಣ ಈ ಸಸಿಗಳಿಗೆ ಹೆಚ್ಚಿನ ಬೇಡಿಕೆ ಉಂಟಾಗುವ ನಿರೀಕ್ಷೆಯಿದೆ.
ಗ್ರಾಮೀಣ ಭಾಗದ ಮಹಿಳೆಯರು ಕೂಡ ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದು, ಕುಟುಂಬದ ಆದಾಯವನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದಾರೆ. ಸಸಿ ತಯಾರಿಕೆ, ಮಣ್ಣು ತುಂಬುವುದು, ನೀರು ಹಾಯಿಸುವುದು ಹಾಗೂ ನಿರ್ವಹಣೆ ಮಾಡುವ ಕೆಲಸಗಳಲ್ಲಿ ಮಹಿಳೆಯರು ತೊಡಗಿಸಿಕೊಂಡಿರುವುದು ಗ್ರಾಮೀಣ ಆರ್ಥಿಕತೆಗೆ ಹೊಸ ಚೈತನ್ಯ ನೀಡುತ್ತಿದೆ.
ಇತ್ತೀಚಿನ ವರ್ಷಗಳಲ್ಲಿ ಅಡಿಕೆ ಬೆಳೆ ಲಾಭದಾಯಕವಾಗುತ್ತಿರುವ ಹಿನ್ನೆಲೆಯಲ್ಲಿ ಅನೇಕ ರೈತರು ಅಡಿಕೆ ತೋಟಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದಾಗಿ ಅಡಿಕೆ ಸಸಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ನಿರ್ಮಾಣವಾಗಿದ್ದು, ಸಸಿ ತಯಾರಿಕೆಯನ್ನು ಸಣ್ಣ ಮಟ್ಟದ ಉದ್ಯಮವನ್ನಾಗಿ ಬೆಳೆಸಿಕೊಳ್ಳುವ ಪ್ರಯತ್ನಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗುತ್ತಿವೆ.
ಸ್ಥಳೀಯ ರೈತರ ಮಾತಿನ ಪ್ರಕಾರ, ಮುಂಗಾರು ಮಳೆ ಉತ್ತಮವಾಗಿ ಬಂದರೆ ಈ ಬಾರಿ ಅಡಿಕೆ ಸಸಿಗಳಿಗೆ ಹೆಚ್ಚಿನ ಬೇಡಿಕೆ ಬರಬಹುದೆಂಬ ನಿರೀಕ್ಷೆಯಿದೆ. ಕೃಷಿಯನ್ನು ನಂಬಿಕೊಂಡಿರುವ ಯುವಕರು ಮತ್ತು ರೈತರು ಮಳೆಯ ಆಶಾಕಿರಣದೊಂದಿಗೆ ತಮ್ಮ ಶ್ರಮವನ್ನು ಹೂಡಿಕೆ ಮಾಡಿಕೊಂಡಿದ್ದು, ಗ್ರಾಮೀಣ ಪ್ರದೇಶದಲ್ಲಿ ಸ್ವಯಂ ಉದ್ಯೋಗಕ್ಕೆ ಇದು ಉತ್ತಮ ಮಾದರಿಯಾಗಿದೆ.
ಮುಂಗಾರು ಆರಂಭಕ್ಕೂ ಮುನ್ನವೇ ಅಡಿಕೆ ಸಸಿ ತಯಾರಿಕೆಯಲ್ಲಿ ಕಂಡುಬರುತ್ತಿರುವ ಚಟುವಟಿಕೆಗಳು ಗ್ರಾಮೀಣ ಜನರ ಕೃಷಿ ಆಸಕ್ತಿ ಮತ್ತು ಆತ್ಮವಿಶ್ವಾಸವನ್ನು ಪ್ರತಿಬಿಂಬಿಸುತ್ತಿದ್ದು, ಭರಮಸಾಗರ ಭಾಗದಲ್ಲಿ ಕೃಷಿ ಆಧಾರಿತ ಸಣ್ಣ ಉದ್ಯಮಗಳು ಮತ್ತಷ್ಟು ಬೆಳೆಯುವ ನಿರೀಕ್ಷೆ ಮೂಡಿಸಿದೆ.

ಮುರುಳೀಧರ್ ನಾಡಿಗೇರ್

ಕೆಳದಿ ಶಿವಪ್ಪನಾಯಕ ಕೃಷಿ ವಿವಿ ಆಶ್ರಯದಲ್ಲಿ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನ

0

ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗದ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಮೇ 25 ರಿಂದ ಜೂನ್ 23 ರ ವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್‌ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಪ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದ್ದು, ಆಸಕ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಮೇ.23 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವುದು. ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ ಎಂದು ಕಾಲೇಜಿನ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. ಮೊ.ಸಂ. 9449187763 ಮತ್ತು ಜಯಶಂಕರ 9686555897 ಇವರುಗಳನ್ನು ಸಂಪರ್ಕಿಸುವುದು.

ಬೃಹತ್ ರಂಗ ಸಂಪುಟಕ್ಕಾಗಿ ಅರ್ಹ ರಂಗಕರ್ಮಿಗಳಿಂದ ಮಾಹಿತಿಗಾಗಿ ಅರ್ಜಿ ಆಹ್ವಾನ

0

ಕನ್ನಡ ರಂಗಭೂಮಿಗೆ ಅಪಾರ ಕೊಡುಗೆ ನೀಡಿದ ಕಲಾವಿದರ ವಿವರಗಳನ್ನು ಒಳಗೊಂಡ ‘ಬೃಹತ್ ರಂಗ ಸಂಪುಟ’ವನ್ನು ಹೊರತರಲು ಕರ್ನಾಟಕ ನಾಟಕ ಅಕಾಡೆಮಿ ನಿರ್ಧರಿಸಿದ್ದು, ಅರ್ಹ ರಂಗಕರ್ಮಿಗಳಿಂದ ಮಾಹಿತಿ ಮತ್ತು ಅರ್ಜಿಗಳನ್ನು ಆಹ್ವಾನಿಸಿದೆ.

ಕಳೆದ 50 ವರ್ಷಗಳಲ್ಲಿ ಅಕಾಡೆಮಿಯು ಈಗಾಗಲೇ 3 ಸಂಪುಟಗಳಲ್ಲಿ 800ಕ್ಕೂ ಹೆಚ್ಚು ಕಲಾವಿದರ ಮಾಹಿತಿಯನ್ನು ದಾಖಲಿಸಿದೆ. ಆದರೆ, ಇನ್ನೂ ಅನೇಕ ಹಿರಿಯ ಹಾಗೂ ಅರ್ಹ ಕಲಾವಿದರ ಸಾಧನೆಗಳು ಬೆಳಕಿಗೆ ಬರಬೇಕಿದೆ. ಈ ನಿಟ್ಟಿನಲ್ಲಿ ರಂಗಭೂಮಿಯಲ್ಲಿ ಸಕ್ರಿಯವಾಗಿರುವ ನಟರು, ನಿರ್ದೇಶಕರು, ನಾಟಕಕಾರರು, ಸಂಗೀತ ತಜ್ಞರು, ರಂಗ ಕುಶಲಕರ್ಮಿಗಳು ಹಾಗೂ ವೇಷಭೂಷಣ ಸೇರಿದಂತೆ ನೇಪಥ್ಯದಲ್ಲಿ ಕೆಲಸ ಮಾಡುವ ಎಲ್ಲಾ ಕಲಾವಿದರ ವಿವರಗಳನ್ನು ಸಂಗ್ರಹಿಸಲು ಅಕಾಡೆಮಿ ಮುಂದಾಗಿದೆ.

ಮೊದಲ ಹಂತದಲ್ಕಿ ರಂಗಭೂಮಿ ಕ್ಷೇತ್ರದಲ್ಲಿ ಕನಿಷ್ಠ 30 ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿರಬೇಕು.
40 ವರ್ಷಕ್ಕೂ ಮೇಲ್ಪಟ್ಟ ರಂಗಭೂಮಿ ಕಲಾವಿದರ ವಿವರಗಳನ್ನು ಮಾತ್ರ ಸಂಗ್ರಹಿಸಲಾಗುತ್ತಿದೆ.

ಕಲಾವಿದರು ತಮ್ಮ ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಭಾವಚಿತ್ರ,ನಾಟಕದಲ್ಲಿ ಅಭಿನಯಿಸುತ್ತಿರುವ/ಕೆಲಸ ಮಾಡುತ್ತಿರುವ ಶೈಲಿಯ ಛಾಯಾಚಿತ್ರ.
ಗರಿಷ್ಠ 300 ಪದಗಳಿಗೆ ಮೀರದಂತೆ (2 ಪುಟಗಳು) ತಮ್ಮ ಸ್ವ-ವಿವರ ಮಾಹಿತಿಯನ್ನು ಸಲ್ಲಿಸಲು ಜೂನ್ 10 ಕೊನೆಯ ದಿನವಾಗಿದೆ.

ಆಸಕ್ತರು ತಮ್ಮ ಸಂಪೂರ್ಣ ವಿವರಗಳನ್ನು ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಭವನ, ನೆಲ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು – 560 002.
ದೂರವಾಣಿ ಸಂಖ್ಯೆ: 080 – 22244176 ಈ ವಿಳಾಸಕ್ಕೆ ಅಥವಾ ಇಮೇಲ್ academy.nataka@gmail.com
ಮೂಲಕ ಕಳುಹಿಸಬಹುದಾಗಿದೆ ಎಂದು‌ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ತಿಳಿಸಿದ್ದಾರೆ.

Department of Kannada and Culture ಕೇಂದ್ರ ಸರ್ಕಾರದ” ಪದ್ಮ” ಪ್ರಶಸ್ತಿಗಳಿಗಾಗಿ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

0

Department of Kannada and Culture ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2026 ನೇ ಸಾಲಿನ ಕೇಂದ್ರ ಸರ್ಕಾರದ ಪ್ರತಿಷ್ಠಿತ “ಪದ್ಮ ವಿಭೂಷಣ”, “ಪದ್ಮ ಭೂಷಣ” ಮತ್ತು “ಪದ್ಮಶ್ರೀ” ಪ್ರಶಸ್ತಿಗಳ ನಾಮನಿರ್ದೇಶನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಲೆ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ನಾಗರಿಕ ಸೇವೆ, ಕ್ರೀಡೆ, ವನ್ಯಜೀವಿ ಸಂರಕ್ಷಣೆ, ಅಥ್ಲೆಟಿಕ್, ಸಾಹಸ ಕ್ರೀಡೆ, ಪರಿಸರ ಸಂರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಅಸಾಧಾರಣ ಮತ್ತು ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರು ಅರ್ಜಿ ಸಲ್ಲಿಸಬಹುದಾಗಿದೆ.

ಸಾಧಕರು ತಮ್ಮ ಸ್ವ-ವಿವರಗಳೊಂದಿಗೆ ಸಾಧನೆಯ ದಾಖಲೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಿದ್ದಪಡಿಸಿ ಅರ್ಜಿಗಳನ್ನು kanbhavblr@gmail.com ಮತ್ತು dkc.shivamogga@gmail.com ಇಮೇಲ್ ವಿಳಾಸಗಳಿಗೆ ಕಳುಹಿಸಿಕೊಡಬೇಕಾಗಿ ವಿನಂತಿಸಲಾಗಿದೆ.

Department of Kannada and Culture ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 10.06.2026 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 08182-223354 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ತಿಳಿಸಿದ್ದಾರೆ.

ಮೇ18 ರಿಂದ 23 ವರೆಗೆ ಭದ್ರಾ ಜಲಾಶಯದಿಂದ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಗೆ ನೀರು ಬಿಡುಗಡೆ. ಜೀವ ಆಸ್ತಿ ರಕ್ಷಣೆಗೆ ಇಲಾಖೆ ಪ್ರಕಟಣೆ

0

ಹಾವೇರಿ, ರಾಣೇಬೆನ್ನೂರ, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗಾಗಿ ತುಂಗಭದ್ರಾ ನದಿಯ ನೀರನ್ನು ಅವಲಂಭಿಸಿರುವ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ನೀರನ್ನು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ.18 ರಿಂದ 23 ರವರೆಗೆ ಪ್ರತಿದಿನ 2000 ಕ್ಯೂಸೆಕ್ಸ್ ನಂತೆ ನೀರನ್ನು ಹರಿಸಲಾಗುವುದು.

ಆದುದರಿಂದ ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದು ಇತ್ಯಾದಿ ಮಾಡಬಾರದೆಂದು ಎಚ್ಚರಿಕೆ ನೀಡಲಾಗಿದೆ. ಮೇಲೆ ತಿಳಿಸಿದ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್‌ಸೆಟ್‌ಗಳಿAದ ನೀರೆತ್ತುವುದನ್ನೂ ಸಹ ನಿಷೇಧಿಸಲಾಗಿದೆ ಎಂದು ಬಿ.ಆರ್. ಪ್ರಾಜೆಕ್ಟ್, ಭದ್ರಾ ಜಲಾಶಯ ಯೋಜನೆ ಕುಡಿಯುವ ನೀರಿನ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಕೊಪ್ಪಳದಲ್ಲಿನ ” ಮಾವು ಮೆಳ- 2026″ ಕ್ಕೆ ಅದ್ಧೂರಿ ಚಾಲನೆ: ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ

0

ಕೊಪ್ಪಳ ನಗರದ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ 10ನೇ ವರ್ಷದ “ಮಾವು ಮೇಳ–2026” ಅದ್ಧೂರಿಯಾಗಿ ನಡೆಯುತ್ತಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಮೇ 12ರಂದು ಆರಂಭವಾದ ಈ ಮೇಳವು ಮೇ 22ರವರೆಗೆ ನಡೆಯಲಿದ್ದು, ರೈತರಿಂದ ನೇರವಾಗಿ ಉತ್ತಮ ಗುಣಮಟ್ಟದ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.

ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ತರಲಾಗಿರುವ 200ಕ್ಕೂ ಅಧಿಕ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ. ಕೇಸರ್, ದಶೇರಿ, ಬಾದಾಮಿ, ಮಲ್ಲಿಕಾ ಸೇರಿದಂತೆ ಹಲವು ಸ್ಥಳೀಯ ಹಾಗೂ ವಿದೇಶಿ ತಳಿಗಳು ಗ್ರಾಹಕರ ಗಮನ ಸೆಳೆಯುತ್ತಿವೆ.

ಮೇಳದ ಪ್ರಮುಖ ಆಕರ್ಷಣೆಯಾಗಿ ಜಪಾನ್ ಮೂಲದ ವಿಶ್ವದ ಅತ್ಯಂತ ದುಬಾರಿ “ಮಿಯಾಜಾಕಿ” ಮಾವು ಪ್ರದರ್ಶನಕ್ಕಿಡಲಾಗಿದ್ದು, ಪ್ರತಿ ಕೆ.ಜಿಗೆ ಸುಮಾರು ₹3,000 ದರ ನಿಗದಿಪಡಿಸಲಾಗಿದೆ.

ಕೆಂಪು ಬಣ್ಣದ ಈ ವಿಶೇಷ ತಳಿಯ ಮಾವು ನೋಡುಗರ ಕುತೂಹಲ ಹೆಚ್ಚಿಸಿದೆ.
ಇದೇ ವೇಳೆ ಮಾವಿನ ಉಪ್ಪಿನಕಾಯಿ, ಸೀಕರಣೆ ಹಾಗೂ ಇತರೆ ಮೌಲ್ಯವರ್ಧಿತ ಉತ್ಪನ್ನಗಳ ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ. ಹಣ್ಣುಗಳನ್ನು ಎಥಿಲೀನ್ ಬಳಸಿ ವೈಜ್ಞಾನಿಕವಾಗಿ ಮಾಗಿಸುವ ವಿಧಾನಗಳನ್ನೂ ಇಲಾಖೆಯವರು ಪ್ರದರ್ಶಿಸುತ್ತಿದ್ದಾರೆ.

ಸುಮಾರು ಮೂರು ವರ್ಷಗಳ ಹಿಂದೆ ರಾಜ್ಯ ತೋಟಗಾರಿಕೆ ಇಲಾಖೆ ರೈತರಿಗೆ ಮಿಯಾಜಾಕಿ ಮಾವು ಬೆಳೆಸಲು ಉತ್ತೇಜನ ನೀಡಿತ್ತು. ಆರಂಭದಲ್ಲಿ ಲಕ್ಷಾಂತರ ರೂಪಾಯಿ ಬೆಲೆ ನಿರೀಕ್ಷಿಸಲಾಗಿದ್ದರೂ ಮಾರುಕಟ್ಟೆ ಪರಿಸ್ಥಿತಿಯನ್ನು ಗಮನಿಸಿ ಈಗ ವಾಸ್ತವಿಕ ದರ ನಿಗದಿಪಡಿಸಲಾಗಿದೆ.

ಮುಂದಿನ ವರ್ಷಗಳಲ್ಲಿ ಈ ವಿಶೇಷ ತಳಿಗೆ ಹೆಚ್ಚಿನ ಮಾರುಕಟ್ಟೆ ದೊರೆಯುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಮೇಳಕ್ಕೆ ಕುಟುಂಬ ಸಮೇತರಾಗಿ ಆಗಮಿಸುತ್ತಿರುವ ಸಾರ್ವಜನಿಕರು ವಿವಿಧ ತಳಿಯ ಮಾವಿನ ರುಚಿ ಸವಿದು ಖರೀದಿಯಲ್ಲಿ ತೊಡಗಿರುವುದು ಕಂಡುಬಂದಿತು.

ವರದಿ
ಮುರುಳೀಧರ್ ನಾಡಿಗೇರ್

Kuvempu University ಎಐ ಮತ್ತು ಯಂತ್ರಕಲಿಕೆಯಂತಹ ತಂತ್ರಜ್ಞಾನಗಳ ಕಲಿಕೆಯೊಟ್ಟಿಗೇ ಸಮಾಜ ವಿಜ್ಞಾನ ,ಮಾನವಿಕ ಶಾಸ್ತ್ರಗಳ ಕ್ಷೇತ್ರದಲ್ಲೂ ಏಐ ಬಳಕೆಯಾಗಬೇಕು- ಪ್ರೊ.ಶರತ್ ಅನಂತ‌ಮೂರ್ತಿ

0

Kuvempu University “ಕೃತಕ ಬುದ್ಧಿಮತ್ತೆ (ಎಐ) ಮತ್ತು ಯಂತ್ರ ಕಲಿಕೆಯಂತಹ ಅತ್ಯಾಧುನಿಕ ತಂತ್ರಜ್ಞಾನಗಳು ಕೇವಲ ತಾಂತ್ರಿಕ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಬಾರದು. ಸಮಾಜ ವಿಜ್ಞಾನ ಹಾಗೂ ಮಾನವಿಕ ವಿಷಯಗಳ ಸಂಶೋಧನೆಯಲ್ಲೂ ಅವುಗಳನ್ನು ಸಕಾರಾತ್ಮಕವಾಗಿ ಬಳಸಬೇಕು” ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಶರತ್ ಅನಂತಮೂರ್ತಿ ಹೇಳಿದರು.

ಅವರು ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಆಯೋಜಿಸಿದ್ದ ‘ಸಮಾಜ ವಿಜ್ಞಾನ ಮತ್ತು ಮಾನವಿಕ ವಿಷಯಗಳ ಸಂಶೋಧನೆಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆಯ ಬಳಕೆ’ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ತಂತ್ರಜ್ಞಾನ ನೀಡುವ ಉತ್ತರಗಳು ಯಾವುದೇ ಪೂರ್ವಾಗ್ರಹಗಳಿಂದ ಮುಕ್ತವಾಗಿರಬೇಕು. ಸಮಾಜ ವಿಜ್ಞಾನ ಅಧ್ಯಯನದಲ್ಲಿ ವೈಚಾರಿಕ ನೆಲೆ ಮತ್ತು ವಿಮರ್ಶಾತ್ಮಕ ದೃಷ್ಟಿಕೋನ ಅಗತ್ಯ ಎಂದರು.

ನವ ಉದಾರೀಕರಣದ ಪ್ರಭಾವದಿಂದ ವಿಶ್ವವಿದ್ಯಾಲಯಗಳ ಆದ್ಯತೆಗಳು ಬದಲಾಗುತ್ತಿವೆ. ಇಂಟರ್ನೆಟ್ ಯುಗದಲ್ಲಿ ತಂತ್ರಜ್ಞಾನವು ಕೆಲವೊಂದು ವರ್ಗಗಳ ಜ್ಞಾನಕ್ಕೆ ಮಾತ್ರ ಸೀಮಿತವಾಗುತ್ತಿರುವ ಅನುಮಾನ ಮೂಡುತ್ತಿದೆ. ತಂತ್ರಜ್ಞಾನದಲ್ಲಿರುವ ಪೂರ್ವಾಗ್ರಹಗಳನ್ನು ವಿಮರ್ಶಾತ್ಮಕವಾಗಿ ಪ್ರಶ್ನಿಸುವ ಅಗತ್ಯವಿದೆ ಎಂದರು.

ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಿದ ಸ್ಕೋಪ್ಲೇಕ್ ಟೆಕ್ನಾಲಜೀಸ್‌ನ ಸೀನಿಯರ್ ಇಂಜಿನಿಯರ್, ಡೇಟಾಬೇಸ್ ಮತ್ತು ಎಐ ವಿಭಾಗದ ವಿನಾಯಕ ಹಂಪಿಹೊಳಿ, “ಕೃತಕ ಬುದ್ಧಿಮತ್ತೆ ಕೇವಲ ಒಂದು ಸಾಫ್ಟ್‌ವೇರ್ ಅಲ್ಲ; ಅದು ಡೇಟಾ, ಗಣಿತ ಮತ್ತು ಸಂಕೀರ್ಣ ಮಾದರಿಗಳ ಮೇಲೆ ನಿರ್ಮಿತವಾಗಿರುವ ಬೃಹತ್ ತಾಂತ್ರಿಕ ವ್ಯವಸ್ಥೆ” ಎಂದು ಹೇಳಿದರು.

ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನ್ ಜಲಾಂತರ್ಗಾಮಿ ನೌಕೆಗಳನ್ನು ಪತ್ತೆಹಚ್ಚುವುದು ಮತ್ತು ರಹಸ್ಯ ಸಂದೇಶಗಳನ್ನು ಡಿಕೋಡ್ ಮಾಡುವ ಅಗತ್ಯದಿಂದ ಮಷಿನ್ ಲರ್ನಿಂಗ್ ಪರಿಕಲ್ಪನೆಗೆ ಅಡಿಪಾಯ ಬಿದ್ದಿತು. 1950ರಲ್ಲಿ ವಿಜ್ಞಾನಿ ಅಲನ್ ಟ್ಯೂರಿಂಗ್ ಪರಿಚಯಿಸಿದ ‘ಟ್ಯೂರಿಂಗ್ ಟೆಸ್ಟ್’ ಯಂತ್ರಬುದ್ಧಿಮತ್ತೆ ಕುರಿತು ಹೊಸ ಚರ್ಚೆಗೆ ಕಾರಣವಾಯಿತು ಎಂದು ವಿವರಿಸಿದರು.

“ಸಾಮಾನ್ಯ ಕಂಪ್ಯೂಟರ್ ಪ್ರೋಗ್ರಾಂಗಳಲ್ಲಿ ಡೇಟಾ ಮತ್ತು ನಿಯಮಗಳನ್ನು ನೀಡಿದರೆ ಫಲಿತಾಂಶ ಸಿಗುತ್ತದೆ. ಆದರೆ ಮಷಿನ್ ಲರ್ನಿಂಗ್‌ನಲ್ಲಿ ಡೇಟಾ ಮತ್ತು ಫಲಿತಾಂಶಗಳನ್ನು ನೀಡಿದಾಗ ಕಂಪ್ಯೂಟರ್ ತಾನೇ ನಿಯಮಗಳನ್ನು ರೂಪಿಸಿಕೊಳ್ಳುತ್ತದೆ” ಎಂದರು.

ಯಾವುದೇ ಎಐ ಮಾದರಿ ಶೇ 100ರಷ್ಟು ನಿಖರವಾಗುವುದಿಲ್ಲ. ಹೀಗಾಗಿ ನಿಖರತೆಯ ಪ್ರಮಾಣಕ್ಕಿಂತ ಯಾವ ರೀತಿಯ ತಪ್ಪುಗಳು ಆಗುತ್ತಿವೆ ಎಂಬುದನ್ನು ಗಮನಿಸುವುದು ಮುಖ್ಯ ಎಂದು ಹೇಳಿದರು.

Kuvempu University ಚಾಟ್ ಜಿಪಿಟಿ ಹಾಗೂ ಕ್ಲಾಡ್‌ನಂತಹ ಲಾರ್ಜ್ ಲ್ಯಾಂಗ್ವೇಜ್ ಮಾಡೆಲ್‌ಗಳಲ್ಲಿ ‘ಹ್ಯಾಲುಸಿನೇಷನ್’ ಸಮಸ್ಯೆ ಕಂಡುಬರುತ್ತದೆ. ಇಲ್ಲದ ಮಾಹಿತಿಯನ್ನೂ ನಿಜವೆಂದು ತೋರಿಸುವ ಸಾಧ್ಯತೆ ಇರುವುದರಿಂದ ಸರಿಯಾದ ಡೇಟಾ ಮತ್ತು ನಿರಂತರ ಪರಿಶೀಲನೆ ಅಗತ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪರೀಕ್ಷಾಂದ ವಿಭಾಗದ ಕುಲ ಸಚಿವ ಪ್ರೊ. ಆರ್. ತಿಮ್ಮರಾಯಪ್ಪ ಉಪಸ್ಥಿತರಿದ್ದರು ಹಾಗೂ ಕಾರ್ಯಗಾರ ಸಂಯೋಜಕರಾದ ಸ್ನೇಹ ಎಮ್ ಎ ಸ್ವಾಗತಿಸಿದರು, ಡಾ.ಯೋಗರಾಜ್ ವಿ ಎ ವಂದಿಸಿದರು.

ನಿರುದ್ಯೋಗಿ ವಿದ್ಯಾವಂತರೆ! ಮೇ 21, ಶಿವಮೊಗ್ಗದಲ್ಲಿ ಉದ್ಯೋಗ ಭರ್ತಿಗಾಗಿ ನೇರ ಸಂದರ್ಶನ

0

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 21 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ‘ಇಸುಝ ಮೋಟರ‍್ಸ್ ಇಂಡಿಯಾ ಲಿ.,’ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ಪಿಯುಸಿ, ಕಾಮರ್ಸ್/ ಬಿಕಾಂ, ಐಟಿಐ-ಡಿಸೆಲ್ ಫಿಟ್ಟರ್ಸ್, ಡಿಪ್ಲೊಮಾ ಇನ್ ಮೆಕಾನಿಕಲ್ ಇಂಜಿನಿಯರಿಂಗ್ ಪೂರೈಸಿದ, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.