Thursday, August 6, 2026
Thursday, August 6, 2026
Home Blog Page 96

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

0

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ ತುಂಬಿದ್ದ ಬೊಲೆರೋ ವಾಹನದ ಟೈರ್ ಸ್ಫೋಟಗೊಂಡು ಸಂಭವಿಸಿದ ಸರಣಿ ಅಪಘಾತದಲ್ಲಿ ಬುಲೆಟ್ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಳೆದ ಸಂಜೆ ಜಾವಳ್ಳಿ ಬಳಿ ಇಟ್ಟಿಗೆ ಲೋಡ್‌ ತುಂಬಿಕೊಂಡು ಚಲಿಸುತ್ತಿದ್ದ ಬೊಲೆರೋ ವಾಹನದ ಟೈರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನವು ಮೊದಲು ಸಂಪತ್ ಕುಮಾರ್ ಅವರ ಬುಲೆಟ್ ಬೈಕ್‌ಗೆ ಡಿಕ್ಕಿಯಾಗಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ.
Breaking News ಅಪಘಾತದ ತೀವ್ರತೆಗೆ ಸಂಪತ್ ಕುಮಾರ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಬೈಕ್ ಹಾಗೂ ಕಾರಿನಲ್ಲಿದ್ದ ಐದಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Government Employees’ Housing Cooperative Society ಪ್ರತಿಭಾ ಪುರಸ್ಕಾರ ಕ್ಕಾಗಿ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸದಸ್ಯರಿಂದ ಅರ್ಜಿ ಆಹ್ವಾನ.

0

Government Employees’ Housing Cooperative Society ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿ, ಶಿವಮೊಗ್ಗ ಇದರ ವತಿಯಿಂದ ಪ್ರತಿ ವರ್ಷದಂತೆ, ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕರಿಸಲು ಉದ್ದೇಶಿಸಲಾಗಿದೆ. ಅದರಂತೆ, ಅಂತಹ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಸಲುವಾಗಿ ೨೦೨೬ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ ಈ ಕೆಳಕಂಡ ಪ್ರಕಟಣೆಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಲು ಈ ಮೂಲಕ ತಮ್ಮಲ್ಲಿ ಕೋರಿದೆ.
ಪತ್ರಿಕಾ ಪ್ರಕಟಣೆಗಾಗಿ
Government Employees’ Housing Cooperative Societyಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿ, ಶಿವಮೊಗ್ಗ ಇದರ ವತಿಯಿಂದ ನಡೆಸಲಿರುವ ಪ್ರತಿಭಾ ಪುರಸ್ಕಾರಕ್ಕಾಗಿ ಸಂಘದ ಸದಸ್ಯರಿಂದ ಅರ್ಜಿ ಆಹ್ವಾನ
ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿ, ಶಿವಮೊಗ್ಗ ಇದರ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕರಿಸುವ ಸಲುವಾಗಿ ೨೦೨೬ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ, ೧೦ನೇ ತರಗತಿ(ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿ.ಯು.ಸಿ ಹಾಗೂ ೧೨ನೇ ತರಗತಿ(ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ ಶೇಕಡ ೯೦ಕ್ಕೂ ಅಧಿಕ ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪುರಸ್ಕರಿಸಲು ಸಂಘದ ಸದಸ್ಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು, ದಿನಾಂಕ:೧೫-೦೬-೨೦೨೬ರೊಳಗೆ ಈ ಮುಂದಿನ ಲಿಂಕನ್ನು ಬಳಸಿ hಣಣಠಿ://biಣ.ಟಥಿ/govಣemಠಿhousiಟಿg ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಶ್ರೀ ಬಿ.ಹೆಚ್. ನಿರಂಜನ್ ಮೂರ್ತಿ, (ಮೊ.ಸಂ. ೯೪೪೯೦೫೦೯೮೬) ಹಾಗೂ ಶ್ರೀ ಲಿಂಗೇಶ್ ಬಿ., (ಮೊ.ಸಂ. ೯೯೮೬೨೬೮೬೨೮) ಇವರನ್ನು ಸಂಪರ್ಕಿಸಲು ಸಂಘದ ಅಧ್ಯಕ್ಷರಾದ ಶ್ರೀಯುತ ಸಿ.ಎಸ್. ಷಡಾಕ್ಷರಿರವರು ತಿಳಿಸಿದ್ದಾರೆ.

MESCOM ಗಮನಿಸಿ! ಮೇ20 ರಂದು ಕೂಡ್ಲಿ,ಚಿಕ್ಕೂಡ್ಲಿ, ಭದ್ರಾಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

0

MESCOM ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಹೊಳೆಹೊನ್ನೂರು ವಿ ವಿ ಕೇಂದ್ರ, ಹೊಳಲೂರು ವಿ ವಿ ಕೇಂದ್ರ ಮತ್ತು ತಾವರೆಚಟ್ನಹಳ್ಳಿ ವಿ ವಿ ಕೇಂದ್ರಗಳಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಗಿನ ಗ್ರಾಮಗಳ ಮೇ 20 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30 ರವರೆಗೆ ಕೆಳಕಂಡ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

MESCOM ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ಕರೆಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೇಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು ಮತ್ತು ಕೃಷಿ ಕಾಲೇಜು ಆವರಣ,
ಗೋಂದಿಚಟ್ನಹಳ್ಳಿ, ಹೊಳೇಹನಸವಾಡಿ, ಕುಂಚೇನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

0

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು, ಹಲವಾರು ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಇಂದು ಬೆಳಿಗ್ಗೆ ಶಾಸಕ ಚನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಸಂಕಷ್ಟಕ್ಕೊಳಗಾಗಿರುವ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದರು.
ಅವಘಡದ ತೀವ್ರತೆಯನ್ನು ಗಮನಿಸಿ, ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸಂತ್ರಸ್ತ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸಿಗಬೇಕಾದ ನಿಯಮಾನುಸಾರ ಗರಿಷ್ಠ ಪರಿಹಾರವನ್ನು ಹಾಗೂ ಅಗತ್ಯ ನೆರವನ್ನು S.N. Channabasappa ವಿಳಂಬವಿಲ್ಲದೆ ತಕ್ಷಣವೇ ತಲುಪಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಮಾಜಿ ಕಾರ್ಪೊರೇಟರ್ ವಿಶ್ವನಾಥ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ ಟಿ ಆರ್, ವಾರ್ಡ್ ಅಧ್ಯಕ್ಷ ರಮೇಶ, ಪ್ರಧಾನ ಕಾರ್ಯದರ್ಶಿ, ಶಿವಾಜಿ ಶಕ್ತಿಕೇಂದ್ರ ಪ್ರಮುಖ್ ಸೇಲ್ವ, ಷಣ್ಮುಗಂ ಬೂತ್ ಅಧ್ಯಕ್ಷ ಪ್ರಸನ್ನ, ಸ್ಥಳೀಯ ಪ್ರಮುಖರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.

ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಸುತ್ತಲ ಪ್ರದೇಶದ ಹೂವಿನ ಮಾರುಕಟ್ಟೆ ತೆರವು ,ಕ್ಷಿಪ್ರ ಕಾರ್ಯಾಚರಣೆ

0

ಶಿವಮೊಗ್ಗ ನಗರದಲ್ಲಿ ಫುಟ್‌ಪಾತ್‌ ಮತ್ತು ರಸ್ತೆಗಳ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಶಿವಪ್ಪನಾಯಕ ಪ್ರತಿಮೆ ಬಳಿ ಇದ್ದ ಹೂವಿನ ಮಾರುಕಟ್ಟೆಯನ್ನು ಇಂದು ಬೆಳಗ್ಗೆ ತೆರವುಗೊಳಿಸಲಾಗಿದೆ.
ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಂಚಾರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಮಳಿಗೆಗಳ ತೆರವುಗೊಳಿಸಲಾಯಿತು. ಶಿವಪ್ಪನಾಯಕ ಪ್ರತಿಮೆ ಎದುರಿನ ರಸ್ತೆಯಲ್ಲಿ ಎನ್‌ಡಿವಿ ಹಾಸ್ಟೆಲ್‌ವರೆಗೆ ಇದ್ದ ಮಳಿಗೆಗಳನ್ನು ತೆರವು ಮಾಡಲಾಯಿತು.
ಹೂವು, ಹಣ್ಣು, ತರಕಾರಿ ಮಾರಾಟಕ್ಕೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡಲಾಗುತ್ತಿತ್ತು. ಇದರಿಂದಾಗಿ ಈ ಭಾಗದ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟವಾಗಿತ್ತು ಮತ್ತು ಸಾರ್ವಜನಿಕರ ಓಡಾಟಕ್ಕೂ ತೊಂದರೆಯಾಗಿತ್ತು. ಹಾಗಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ಅನಧಿಕೃತ ಮಳಿಗೆಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.
ಇನ್ನು, ಈ ಹಿಂದೆ ಸಂಚಾರ ಠಾಣೆ ಪೊಲೀಸರು ಈ ಮಳಿಗೆಗಳು ರಸ್ತೆಯ ಹೊರಗೆ ಇರಬೇಕೆಂದು ಸೂಚಿಸಿದ್ದರು. ರಸ್ತೆಯ ಎರಡು ಬದಿಗಿದ್ದ ಬಿಳಿ ಪಟ್ಟಿಯ ಹೊರಗೆ ಮಳಿಗೆಗಳನ್ನು ಇರಿಸುವಂತೆ ಗಡುವು ನೀಡಿದ್ದರು. ಆದರೆ ದಿನ ಕಳೆದಂತೆ ಪುನಃ ಮಳಿಗೆಗಳು ರಸ್ತೆಯನ್ನೇ ಆಕ್ರಮಿಸಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮತ್ತು ಸಂಚಾರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಳಿಗೆಗಳನ್ನು ತೆರವುಗೊಳಿಸಿದ್ದಾರೆ. ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ದೇವರಾಜ್ ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆಯಿತು.

ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಮೇ 19 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಈ ಕೇಂದ್ರ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂದಿಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

0

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ ಹೆಚ್ಚಾಗುತ್ತಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ತ್ಯಾಜ್ಯ ವಿಲೇವಾರಿಯಾಗದಿರುವುದು ತ್ಯಾಜ್ಯದ ಸಂಗ್ರಹಣೆ, ಸಂಸ್ಕರಣೆ ಮತ್ತು ವಿಲೇವಾರಿ ಒಂದು ಸವಾಲಾಗಿ ಪರಿಣಮಿಸಲಿದೆ.

ತ್ಯಾಜ್ಯ ಉತ್ಪಾದನೆಯನ್ನು ನಿಯಂತ್ರಿಸಿ, ಸಕಾಲದಲ್ಲಿ ಅದರ ವ್ಯವಸ್ಥಿತ ವಿಲೇವಾರಿಗೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ವಿಶೇಷ ಗಮನಹರಿಸಬೇಕಲ್ಲದೇ ಸಾರ್ವಜನಿಕರೂ ಕೂಡ ತ್ಯಾಜ್ಯದ ನಿಯಂತ್ರಣ ಮತ್ತು ವಿಲೇವಾರಿಗೆ ತಕ್ಷಣದ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ತಿಳಿಸಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಗರ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಘನತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮಗಳು-2026ನ್ನು ಅನುಷ್ಠಾನಗೊಳಿಸುವ ಸಂಬಂಧ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬಹುತೇಕ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಈ ಹಿಂದೆ ಮೂರು ಹಂತದಲ್ಲಿ ಕಸ ವಿಂಗಡಣೆಗೆ ಕ್ರಮ ವಹಿಸಲಾಗುತ್ತಿತ್ತು. ಒಣಕಸ, ಹಸಿಕಸ, ನೈರ್ಮಲ್ಯ ತ್ಯಾಜ್ಯದೊಂದಿಗೆ ಪ್ರಸಕ್ತ ಸಾಲಿನ ಹೊಸ ಮಾರ್ಗಸೂಚಿಯಲ್ಲಿ ಬ್ಯಾಟರಿಗಳು, ಬಲ್ಬ್‌ಗಳು, ಔಷಧಿಗಳು, ಕೀಟನಾಶಕಗಳಂತಹ ಅಪಾಯಕಾರಿ ತ್ಯಾಜ್ಯಗಳು, ಭಾರ ಲೋಹಗಳು, ಶುಚಿಗೊಳಿಸುವ ದ್ರಾವಕಗಳು, ವಿಕಿರಣಶೀಲ ವಸ್ತುಗಳು, ಇ-ತ್ಯಾಜ್ಯ ಇತ್ಯಾದಿ ವಿಶೇಷ ಕಾಳಜಿ ವಹಿಸುವ ತ್ಯಾಜ್ಯವನ್ನು ಸಂಗ್ರಹಿಸಿ ವಿಂಗಡಿಸಿ ವಿಲೇ ಮಾಡುವಂತೆ ಸರ್ಕಾರವು ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂದರು.

ಘನತ್ಯಾಜ್ಯ ನಿರ್ವಹಣೆ ಎಂಬುದು ಸ್ಥಳೀಯ ನಗರ, ಪಟ್ಟಣ ಮತ್ತು ಹಳ್ಳಿಗಳನ್ನು ಸ್ವಚ್ಛವಾಗಿಡುವ ಒಂದು ಆಂತರಿಕ ಅಂಶವಾಗಿದೆ. ಆದಾಗ್ಯೂ ತ್ಯಾಜ್ಯದ ವ್ಯವಸ್ಥಿತ ನಿರ್ವಹಣೆ ಕುರಿತು ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಸಿದ್ಧಗೊಳ್ಳುವುದು, ಘನ ತ್ಯಾಜ್ಯದ ಮರುಬಳಕೆ, ಮರುಬಳಕೆ ಮತ್ತು ಅಪ್‌ಸೈಕ್ಲಿಂಗ್ ಮಾಡುವ ಮೂಲಕ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಬೇಕಾದ ತುರ್ತು ಅಗತ್ಯವಿದೆ ಎಂದ ಅವರು, ಎಲ್ಲಾ ಘನತ್ಯಾಜ್ಯ ನಿರ್ವಹಣಾ ತಂತ್ರಗಳು ಭವಿಷ್ಯದ ದಿನಗಳಲ್ಲಿ ತ್ಯಾಜ್ಯ ಉತ್ಪಾದನೆ ಇನ್ನೂ ಹೆಚ್ಚಾಗುವ ಸಾಧ್ಯತೆಯನ್ನು ನಿಭಾಯಿಸಲು ಸಮರ್ಥವಾಗುವ ರೀತಿಯಲ್ಲಿ ಸನ್ನದ್ಧಗೊಳ್ಳಬೇಕೆಂದವರು ನುಡಿದರು.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಕಸ ಉತ್ಪಾದಿಸುವ ಅಪಾರ್ಟ್‌ಮೆಂಟ್‌ಗಳು, ಹೋಟೆಲ್‌ಗಳು ಮತ್ತು ವಾಣಿಜ್ಯ ಸಂಕೀರ್ಣಗಳು ತಮ್ಮ ಆವರಣದಲ್ಲೇ ಹಸಿ ಕಸವನ್ನು ಸಂಸ್ಕರಿಸುವ ವ್ಯವಸ್ಥೆ ಹೊಂದುವುದು ಕಡ್ಡಾಯವಾಗಿದೆ. ಇಂತಹ ಸಂಸ್ಥೆಗಳ ಮುಖ್ಯಸ್ಥರು ನಗರಾಭಿವೃದ್ಧಿ ಸಂಸ್ಥೆಯ ಅಧಿಕೃತ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ತಾವು ಉತ್ಪಾದಿತ ತ್ಯಾಜ್ಯವನ್ನು ವಿಂಗಡಿಸಿಕೊಂಡು ಸ್ವಯಂ ನಿರ್ವಹಣೆಗೆ ಮುಂದಾಗಬೇಕು. ತಪ್ಪಿದಲ್ಲಿ ಮಹಾನಗರಪಾಲಿಕೆಯವರಿಗೆ ಕಸ ವಿಂಗಡಿಸಿ, ನೀಡಿ, ಕಸ ವಿಲೇವಾರಿಯ ವೆಚ್ಚವನ್ನು ಭರಿಸಬೇಕಾಗುವುದು ಎಂದವರು ನುಡಿದರು.

ಜಿಲ್ಲೆಯ ಪ್ರವಾಸಿ ತಾಣಗಳು, ಜನನಿಬಿಡ ಪ್ರದೇಶಗಳು ಬೆಟ್ಟ-ಗುಡ್ಡ ಮತ್ತಿತರ ತಪ್ಪಲು ಪ್ರದೇಶಗಳಲ್ಲಿ ಚಾರಣಕ್ಕೆ ತೆರಳುವ ಪ್ರವಾಸಿಗಳು ಕುಡಿಯುವ ನೀರಿನ ಬಾಟಲ್‌ಗಳನ್ನು ತೆಗೆದುಕೊಂಡು ಹೋಗಿ ಅವುಗಳ ಬಳಕೆಯ ನಂತರ ಎಲ್ಲೆಂದರಲ್ಲಿ ಬಿಸಾಡಿ, ಪರಿಸರ ಮಾಲಿನ್ಯ ಉಂಟು ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅವುಗಳ ಸಮರ್ಪಕ ವಿಲೇವಾರಿಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಗಮನಹರಿಸಬೇಕು.

ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್‌ಬಾಟಲ್‌ತೆಗೆದುಕೊಂಡು ಹೋಗುವುದನ್ನು ನಿಷೇಧಿಸುವಂತೆ ಸೂಚಿಸಿದ ಅವರು, ಪ್ರವಾಸಿಗರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗೂ ಗಮನಹರಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರೂ ಕೂಡ ಪರಿಸರ ಸ್ವಚ್ಚತೆಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ನಿಗಧಿತಪಡಿಸಿದ ಮೈಕ್ರಾನ್‌ಗಿಂತ ಕಡಿಮೆ ಸಾಂದ್ರತೆಯ ಪ್ಲಾಸ್ಟಿಕ್‌ಚೀಲಗಳ ಬಳಕೆಯಿಂದಾಗಿ ಪರಿಸರದ ಮೇಲೆ ಮಾನವನ ದಾಳಿ ಅವ್ಯಾಹತವಾಗಿ ನಡೆದಿದೆ. ಇದರ ತೀವ್ರತೆ ಅದರ ಗಂಭೀರತೆಯ ಸ್ವರೂಪವನ್ನು ಅರಿತು ಬಳಕೆಯನ್ನು ನಿರ್ಬಂಧಿಸಲು ಸಾರ್ವಜನಿಕರು ಮುಂದಾಗಬೇಕು.

ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಇಂತಹ ಪ್ಲಾಸ್ಟಿಕ್‌ಚೀಲಗಳು ಮಾರುಕಟ್ಟೆಗೆ ಬರದಂತೆ ನಿರಂತರ ದಾಳಿ ನಡೆಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ದಂಡನಾ ಕ್ರಮ ಅನುಸರಿಸುವಂತೆ ಅವರು ಸೂಚಿಸಿದರು. ಪರಿಷ್ಕೃತ ಘನತ್ಯಾಜ್ಯ ನಿರ್ವಹಣಾ ನಿಯಮಗಳು-2026 ಜಾರಿಗೆ ಬಂದಿದ್ದು, ಪ್ರತಿಯೊಬ್ಬರೂ ಕಸವನ್ನು 4 ಹಂತಗಳಲ್ಲಿ ಬೇರ್ಪಡಿಸುವುದು ಕಡ್ಡಾಯವಾಗಿದೆ. ಪರಿಸರವನ್ನು ಸ್ವಚ್ಛವಾಗಿಡಲು ಮತ್ತು ಮರುಬಳಕೆ ಹೆಚ್ಚಿಸಲು ಶಿವಮೊಗ್ಗ ಸೇರಿ ಜಿಲ್ಲೆಯಾದ್ಯಂತ ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಪ್ರತಿ ವಾರ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಹಾಗೂ ನೋಡಲ್‌ಅಧಿಕಾರಿಗಳ ಸಭೆ ಕರೆದು ಪ್ರಗತಿ ಪರಿಶೀಲನೆ ನಡೆಸುವಂತೆ ಸೂಚಿಸಿದರು.

DC Shivamogga ಸ್ವಚ್ಚ ಶಿವಮೊಗ್ಗ, ಸುಂದರ ಪರಿಸರ ನಮ್ಮೆಲ್ಲರ ಗುರಿಯಾಗಬೇಕು. ತ್ಯಾಜ್ಯದ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಹೋಟೆಲ್‌ಮಾಲೀಕರು, ಕಲ್ಯಾಣ ಮಂಟಪಗಳ ನಿರ್ವಾಹಕರು, ಅಪಾರ್ಟ್‌ಮೆಂಟ್‌ಗಳ ಮುಖ್ಯಸ್ಥರ ತುರ್ತು ಸಭೆ ಕರೆದು ಸೂಚನೆ ನೀಡುವ ಅಗತ್ಯವಿದೆ ಎಂದು ಪರಿಸರ ಹೋರಾಟಗಾರರಾದ ಟಿ.ಎಸ್.ಮಹದೇವಸ್ವಾಮಿ, ಅವರು ತಿಳಿಸಿದರು.

ಶಿವಮೊಗ್ಗ ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಂಗಸ್ವಾಮಿ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಶ್ರೀಮತಿ ಶಿಲ್ಪಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಮೇ 19 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಈ ಕೇಂದ್ರ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂದಿಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ MESCOM ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಡೆಂಗ್ಯು ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಸೊಳ್ಳೆ ನಿಯಂತ್ರಣದ ಬಗ್ಗೆ ತಿಳುವಳಿಕೆ ನೀಡಬೇಕಿದೆ- ಡಾ.ಗುಡದಪ್ಪ ಕಸಬಿ

0

ಡೆಂಗ್ಯೂ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಸೊಳ್ಳೆಗಳ ನಿಯಂತ್ರಣದ ಬಗ್ಗೆ ತಿಳವಳಿಕೆ ನೀಡುವುದು ಪ್ರಮುಖ ಆಶಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಗುಡದಪ್ಪ ಕಸಬಿ ಹೇಳಿದರು.

ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ವತಿಯಿಂದ ರೋಟರಿ ಶಿವಮೊಗ್ಗ ಪೂರ್ವ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಡೆಂಗ್ಯೂ ಜಾಗೃತಿ ದಿನಾಚರಣೆಯಲ್ಲಿ ಮಾತನಾಡಿ, ಡೆಂಗ್ಯೂ ನಿಯಂತ್ರಣಕ್ಕಾಗಿ ಸಮುದಾಯದ ಸಹಭಾಗಿತ್ವ ಘೋಷವಾಕ್ಯದೊಂದಿಗೆ ಜಾಗೃತಿ ಮೂಡಿಸುತ್ತಿದ್ದು, ಎಲ್ಲರೂ ಅಭಿಯಾನದಲ್ಲಿ ಕೈಜೋಡಿಸಬೇಕು ಎಂದು ತಿಳಿಸಿದರು.

ಶಿವಮೊಗ್ಗ ನಗರ ಸ್ವಚ್ಛಗೊಳಿಸುವ ಕಾರ್ಮಿಕರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ತಾವು ಕೂಡ ಕಾರ್ಯಕ್ರಮಕ್ಕೆ ಕೈಜೋಡಿಸಿದರೆ ಇಂತಹ ಮಾರಕ ರೋಗವನ್ನು ತಡೆಗಟ್ಟಬಹುದು.

ಸಮುದಾಯದಲ್ಲಿ ಎಲ್ಲರೂ ತಮ್ಮ ಮನೆ ಸುತ್ತಮುತ್ತ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಮತ್ತು ಹೊರಭಾಗದಲ್ಲಿ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಗಮನ ಹರಿಸಬೇಕು ಎಂದು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಜಿ.ಬಿ.ಚಂದ್ರಶೇಖರ ಮಾತನಾಡಿ, ಸಮಾಜಮುಖಿ ಸೇವಾ ಸಂಸ್ಥೆಗಳು, ಪಾಲಿಕೆ, ಆರೋಗ್ಯ ಇಲಾಖೆ, ಪೌರಕಾರ್ಮಿಕರು ಸೇರಿ ಎಲ್ಲರೂ ಕೈಜೋಡಿಸಿದಾಗ ಇಂತಹ ರೋಗವನ್ನು ತಡೆಗಟ್ಟಲು ಸಾಧ್ಯವಿದೆ ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ನಿರಂತರವಾಗಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಇಂತಹ ಕಾರ್ಯಕ್ರಗಳಲ್ಲಿ ಸದಾ ಕೈಜೋಡಿಸುತ್ತದೆ. ಡೆಂಗ್ಯೂ ತಡೆಗಟ್ಟುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎನ್.ಧೀರೇಂದ್ರ, ಪ್ರಭಾರ ಆರೋಗ್ಯ ಮೇಲ್ವಿಚಾರಣಾಧಿಕಾರಿ ಬಿ.ಕೆ.ರಾಜು, ಟಿ.ಎಂ.ಶಶಿಕುಮಾರ್, ಪಾಲಿಕೆ ಆರೋಗ್ಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಇಲಾಖೆ ಸಿಬ್ಬಂದಿ ಇತರರು ಇದ್ದರು.

Social Welfare Department ಶಿಕಾರಿಪುರ ತಾಲ್ಲೂಕಿನ ಮೆಟ್ರಿಕ್ ಪೂರ್ವ& ಮೆಟ್ರಿಕ್ ನಂತರದ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಪ.ಜಾ/ ಪ.ಪಂಗಡಗಳ ವಿದ್ಯಾರ್ಥಿಗಳಿಂದ ಅರ್ಜಿಗೆ ಕರೆ

0

Social Welfare Department ಶಿಕಾರಿಪುರ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಸರ್ಕಾರಿ ವಿದ್ಯಾರ್ಥಿನಿಲಯಗಳಿಗೆ 2026-27ನೇ ಶೈಕ್ಷಣಿಕ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಡ್ಡಾಯವಾಗಿ ಕರ್ನಾಟಕದ ನಿವಾಸಿಯಾಗಿರಬೇಕು ಹಾಗೂ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ರೂ. 2.50 ಲಕ್ಷ ಮೀರಿರಬಾರದು. ನಿಯಮಾನುಸಾರ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸೀಟುಗಳನ್ನು ಕಾಯ್ದಿರಿಸಲಾಗುತ್ತದೆ. ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಐಡಿ (SSP Student ID ಅಥವಾ SATS ID), ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಂಖ್ಯೆ (ಹೆಸರು ಆಧಾರ್‌ನಲ್ಲಿರುವಂತೆ ಇರಬೇಕು), 15 ಅಂಕಿಗಳ ಆರ್ ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಪ್ರಸ್ತುತ ವರ್ಷದ ಕಾಲೇಜು ಪ್ರವೇಶ ದಾಖಲಾತಿ ಸಂಖ್ಯೆ ಅಥವಾ ವಿಶ್ವವಿದ್ಯಾಲಯದ ನೋಂದಣಿ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿ ಹಾಗೂ ಒಟಿಪಿ ಪರಿಶೀಲನೆಗಾಗಿ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಅಗತ್ಯವಾಗಿರುತ್ತದೆ.
Social Welfare Department ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ https://swd.karnataka.gov.in/ ಅಥವಾ https://swdhmis.karnataka.gov.in/ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಯಾವುದೇ ಭೌತಿಕ (ಆಫ್‌ಲೈನ್) ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಜುಲೈ 31 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿ ಅಥವಾ ತಾಂತ್ರಿಕ ತೊಂದರೆಗಳಿದ್ದಲ್ಲಿ ಸಮಾಜ ಕಲ್ಯಾಣ ಇಲಾಖೆಯ 24×7 ಸಹಾಯವಾಣಿ ಸಂಖ್ಯೆ: 9482300400 (ಕಲ್ಯಾಣ ಮಿತ್ರ) ಅಥವಾ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶಿಕಾರಿಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ತಿಳಿಸಿದ್ದಾರೆ.