MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಮೇ 19 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಈ ಕೇಂದ್ರ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂದಿಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ MESCOM ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ
ಡೆಂಗ್ಯು ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಸೊಳ್ಳೆ ನಿಯಂತ್ರಣದ ಬಗ್ಗೆ ತಿಳುವಳಿಕೆ ನೀಡಬೇಕಿದೆ- ಡಾ.ಗುಡದಪ್ಪ ಕಸಬಿ
ಡೆಂಗ್ಯೂ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಸೊಳ್ಳೆಗಳ ನಿಯಂತ್ರಣದ ಬಗ್ಗೆ ತಿಳವಳಿಕೆ ನೀಡುವುದು ಪ್ರಮುಖ ಆಶಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಗುಡದಪ್ಪ ಕಸಬಿ ಹೇಳಿದರು.
ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ವತಿಯಿಂದ ರೋಟರಿ ಶಿವಮೊಗ್ಗ ಪೂರ್ವ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಡೆಂಗ್ಯೂ ಜಾಗೃತಿ ದಿನಾಚರಣೆಯಲ್ಲಿ ಮಾತನಾಡಿ, ಡೆಂಗ್ಯೂ ನಿಯಂತ್ರಣಕ್ಕಾಗಿ ಸಮುದಾಯದ ಸಹಭಾಗಿತ್ವ ಘೋಷವಾಕ್ಯದೊಂದಿಗೆ ಜಾಗೃತಿ ಮೂಡಿಸುತ್ತಿದ್ದು, ಎಲ್ಲರೂ ಅಭಿಯಾನದಲ್ಲಿ ಕೈಜೋಡಿಸಬೇಕು ಎಂದು ತಿಳಿಸಿದರು.
ಶಿವಮೊಗ್ಗ ನಗರ ಸ್ವಚ್ಛಗೊಳಿಸುವ ಕಾರ್ಮಿಕರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ತಾವು ಕೂಡ ಕಾರ್ಯಕ್ರಮಕ್ಕೆ ಕೈಜೋಡಿಸಿದರೆ ಇಂತಹ ಮಾರಕ ರೋಗವನ್ನು ತಡೆಗಟ್ಟಬಹುದು.
ಸಮುದಾಯದಲ್ಲಿ ಎಲ್ಲರೂ ತಮ್ಮ ಮನೆ ಸುತ್ತಮುತ್ತ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಮತ್ತು ಹೊರಭಾಗದಲ್ಲಿ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಗಮನ ಹರಿಸಬೇಕು ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಜಿ.ಬಿ.ಚಂದ್ರಶೇಖರ ಮಾತನಾಡಿ, ಸಮಾಜಮುಖಿ ಸೇವಾ ಸಂಸ್ಥೆಗಳು, ಪಾಲಿಕೆ, ಆರೋಗ್ಯ ಇಲಾಖೆ, ಪೌರಕಾರ್ಮಿಕರು ಸೇರಿ ಎಲ್ಲರೂ ಕೈಜೋಡಿಸಿದಾಗ ಇಂತಹ ರೋಗವನ್ನು ತಡೆಗಟ್ಟಲು ಸಾಧ್ಯವಿದೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ನಿರಂತರವಾಗಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಇಂತಹ ಕಾರ್ಯಕ್ರಗಳಲ್ಲಿ ಸದಾ ಕೈಜೋಡಿಸುತ್ತದೆ. ಡೆಂಗ್ಯೂ ತಡೆಗಟ್ಟುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎನ್.ಧೀರೇಂದ್ರ, ಪ್ರಭಾರ ಆರೋಗ್ಯ ಮೇಲ್ವಿಚಾರಣಾಧಿಕಾರಿ ಬಿ.ಕೆ.ರಾಜು, ಟಿ.ಎಂ.ಶಶಿಕುಮಾರ್, ಪಾಲಿಕೆ ಆರೋಗ್ಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಇಲಾಖೆ ಸಿಬ್ಬಂದಿ ಇತರರು ಇದ್ದರು.
Social Welfare Department ಶಿಕಾರಿಪುರ ತಾಲ್ಲೂಕಿನ ಮೆಟ್ರಿಕ್ ಪೂರ್ವ& ಮೆಟ್ರಿಕ್ ನಂತರದ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಪ.ಜಾ/ ಪ.ಪಂಗಡಗಳ ವಿದ್ಯಾರ್ಥಿಗಳಿಂದ ಅರ್ಜಿಗೆ ಕರೆ
Social Welfare Department ಶಿಕಾರಿಪುರ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಸರ್ಕಾರಿ ವಿದ್ಯಾರ್ಥಿನಿಲಯಗಳಿಗೆ 2026-27ನೇ ಶೈಕ್ಷಣಿಕ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಡ್ಡಾಯವಾಗಿ ಕರ್ನಾಟಕದ ನಿವಾಸಿಯಾಗಿರಬೇಕು ಹಾಗೂ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ರೂ. 2.50 ಲಕ್ಷ ಮೀರಿರಬಾರದು. ನಿಯಮಾನುಸಾರ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸೀಟುಗಳನ್ನು ಕಾಯ್ದಿರಿಸಲಾಗುತ್ತದೆ. ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಐಡಿ (SSP Student ID ಅಥವಾ SATS ID), ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಂಖ್ಯೆ (ಹೆಸರು ಆಧಾರ್‌ನಲ್ಲಿರುವಂತೆ ಇರಬೇಕು), 15 ಅಂಕಿಗಳ ಆರ್ ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಪ್ರಸ್ತುತ ವರ್ಷದ ಕಾಲೇಜು ಪ್ರವೇಶ ದಾಖಲಾತಿ ಸಂಖ್ಯೆ ಅಥವಾ ವಿಶ್ವವಿದ್ಯಾಲಯದ ನೋಂದಣಿ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿ ಹಾಗೂ ಒಟಿಪಿ ಪರಿಶೀಲನೆಗಾಗಿ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಅಗತ್ಯವಾಗಿರುತ್ತದೆ.
Social Welfare Department ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ https://swd.karnataka.gov.in/ ಅಥವಾ https://swdhmis.karnataka.gov.in/ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಯಾವುದೇ ಭೌತಿಕ (ಆಫ್‌ಲೈನ್) ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಜುಲೈ 31 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿ ಅಥವಾ ತಾಂತ್ರಿಕ ತೊಂದರೆಗಳಿದ್ದಲ್ಲಿ ಸಮಾಜ ಕಲ್ಯಾಣ ಇಲಾಖೆಯ 24×7 ಸಹಾಯವಾಣಿ ಸಂಖ್ಯೆ: 9482300400 (ಕಲ್ಯಾಣ ಮಿತ್ರ) ಅಥವಾ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶಿಕಾರಿಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ತಿಳಿಸಿದ್ದಾರೆ.
MESCOM ಮೇ19. ಹೊಳೆಬೆನವಳ್ಳಿ,ದೊಡ್ಡತಾಂಡ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ
MESCOM ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-3 ರ ವ್ಯಾಪ್ತಿಯ 110/11 ಕೆವಿ ವಿವಿ ಕಾಂಪ್ಲೆಕ್ಸ್ ವಿದ್ಯುತ್ ವಿತರಣಾ ಕೇಂದ್ರದ ಎಫ್-7 ಪಿಳ್ಳಂಗಿರಿ ಎನ್ ಜೆ ವೈ ಮತ್ತು ಎಫ್-8 ಜಾವಳ್ಳಿ ಐಪಿ ಮಾರ್ಗಗಳಲ್ಲಿ 1ನೇ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 19 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
MESCOM ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಮೆಸ್ಕಾಂ ನೊಂದಿಗೆ ಸಹಕರಿಸಲು ಮೆಸ್ಕಾಂ ಕೋರಿದೆ.
University of Agriculture ಕೆಳದಿ ಶಿವಪ್ಪನಾಯಕ ಕೃಷಿ ವಿವಿಯ ಬ್ರಹ್ಮಾವರದಲ್ಲಿ ಕೃಷಿಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
University of Agriculture ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಕನ್ನಡ ಮಾಧ್ಯಮದಲ್ಲಿ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಕ್ಕೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಕೃಷಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ. 45 ಅಂಕಗಳೊಂದಿಗೆ ಹಾಗೂ ಪ.ಜಾ./ಪ.ಪಂ./ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ದಿನಾಂಕ: 12-06-2026 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.
University of Agriculture ಆಸಕ್ತರು ವೆಬ್‌ಸೈಟ್ www.uahs.edu.in ನಲ್ಲಿ ಡೌನ್ ಲೋಡ್ ಮಾಡಿಕೊಂಡು, ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕ ಸಾಮಾನ್ಯ ವರ್ಗದವರಿಗೆ ರೂ. 500/-, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250/- ಗಳ ರಾಷ್ಟ್ರೀಕೃತ ಬ್ಯಾಂಕ್‌ಗಳ ಡಿ.ಡಿ. ಯನ್ನು Comptroller, KSNUAHS, Shivamogga – 577412 ಇವರ ಹೆಸರಿನಲ್ಲಿ ಪಡೆದು, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ- 577 412 ಇಲ್ಲಿಗೆ ಜೂ. 12 ರೊಳಗಾಗಿ ಖುದ್ದಾಗಿ ಸಲ್ಲಿಸುವುದು ಅಥವಾ ಅಂಚೆ ಮೂಲಕ ಕಳುಹಿಸುವುದು.
ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ದತಿಯನ್ನು ಅಳವಡಿಸಿ ಪ್ರವೇಶ ಮತ್ತು ಆಯ್ಕೆ ಮಾಡಲಾಗುವುದು. ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್‌ಸೈಟ್ ಮುಖಾಂತರ ತಿಳಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿ, ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವೆಬ್‌ಸೈಟ್ www.uahs.edu.in ನ್ನು ಅಥವಾ ವಿಶ್ವವಿದ್ಯಾಲಯದ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.
ಅರಬಿಳಚಿಯಲ್ಲಿ ಪರಿಶಿಷ್ಟ ಜಾತಿಯವರ ಬೀದಿಗೆ ರಸ್ತೆ ಬಂದ್ : 103 ದಿನಗಳಿಂದ ಪ್ರತಿಭಟನೆ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಆದಿ ಕರ್ನಾಟಕ ಜನಾಂಗದ ಬೀದಿಗೆ ರಸ್ತೆ ಬಂದ್ ಮಾಡಿರುವ ವಿಚಾರವಾಗಿ ಪ್ರತಿಭಟನೆ ಇಂದಿಗೆ 103 ದಿನಗಳಿಗೆ ತಲುಪಿದೆ,. ಅರಬಿಳುಚಿ ಗ್ರಾಮದಲ್ಲಿ 60ಕ್ಕೂ ಹೆಚ್ಚು ಪರಿಶಿಷ್ಟ ಜನಾಂಗದವರಿಗೆ ಸೇರಿದ ಮನೆಗಳಿದ್ದು ಆ ಮನೆಗಳಿಗಿದ್ದು, ರಸ್ತೆ ಸಂಪರ್ಕವನ್ನು ಈ ಹಿಂದೆ ಕಡಿತ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆಗೆ ಹೇಳಿದ ನಿವಾಸಿಗಳು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನ ಆಗಿರಲಿಲ್ಲ. ಹಾಗಾಗಿ ಕೋರ್ಟ್ ಮೆಟ್ಟಿಲೇರಿ ನ್ಯಾಯ ಕೇಳಲಾಗಿತ್ತು, ಅದನ್ನು ಕೂಡ ಗಾಳಿಗೆ ತೂರಿದ ಅಧಿಕಾರಿಗಳ ವಿರುದ್ಧ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಹಾಗೂ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಹಾಗೂ ಆ 60 ಮನೆಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
CM Siddharamaiah ಪೆಟ್ರೋಲ್ ,ಡಿಸೆಲ್ ಬೆಲೆ ಲೀಟರ್ ಗೆ ತಲಾ ₹3 ಹೆಚ್ಚಳ, ಜನಸಾಮಾನ್ಯರ ಮೇಲೆ ಬರೆ- ಸೀಎಂ ಸಿದ್ಧರಾಮಯ್ಯ
CM Siddharamaiah ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತನ್ನ ಆಡಳಿತ ವೈಫಲ್ಯಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ತಲಾ 3 ರೂ. ಏರಿಕೆ ಮಾಡುವ ಮೂಲಕ ದೇಶದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ. ಇದು ಬೆಲೆ ಏರಿಕೆಯಲ್ಲ, ಭಾರತದ ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೆ ನಡೆಸಿದ ನೇರ ದಾಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
ನಾವು ಅಂದುಕೊಂಡಂತೆ ಕೇಂದ್ರ ಸರ್ಕಾರವು ತನ್ನ ವಿದೇಶಾಂಗ ನೀತಿಯ ವೈಫಲ್ಯ, ಕಳಪೆ ಆರ್ಥಿಕ ನಿರ್ವಹಣೆ ಮತ್ತು ಅಜಾಗರೂಕ ಹಣದುಬ್ಬರದ ನಿರ್ವಹಣೆಯ ಪರಿಣಾಮಗಳನ್ನು ಬಲವಂತವಾಗಿ ದೇಶದ ಜನತೆಯ ತಲೆಯ ಮೇಲೆ ಹೇರುತ್ತಿದೆ. ದೇಶದ ಜನತೆಯ ಹಿತಾಸಕ್ತಿಗಳನ್ನು ಕಾಪಾಡುವ ಬದಲು ಅವರಿಂದಲೇ ಹಣ ಕಿತ್ತುಕೊಂಡು ತನ್ನ ವೈಫಲ್ಯದ ನಷ್ಟ ಭರಿಸುತ್ತಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀ. ಒಂದಕ್ಕೆ 106 ರೂ. ದಾಟಿದೆ. ಡೀಸೆಲ್ ದರವು 94 ರೂ. ಆಗಿದೆ. ಈ ಏರಿಕೆಯು ಕೇವಲ ಬಂಕ್‌ಗಳಿಗೆ ಸೀಮಿತಗೊಳ್ಳುವುದಿಲ್ಲ. ಇದರೊಂದಿಗೆ ಸಾರಿಗೆ ವೆಚ್ಚ, ತರಕಾರಿ, ಹಣ್ಣು, ಹಾಲು, ಸೇರಿದಂತೆ ಪ್ರತಿಯೊಂದು ದಿನಬಳಕೆ ವಸ್ತುಗಳ ದರ ಏರಿಕೆಯಾಗುತ್ತದೆ. ಇದರಿಂದ ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಿಗಳು, ಮನೆಯ ಜವಾಬ್ದಾರಿ ಹೊತ್ತ ಮಹಿಳೆಯರು ಹಾಗೂ ಮಧ್ಯಮ ವರ್ಗದವರು ದೈನಂದಿನ ಬದುಕು ನಡೆಸುವುದು ಮತ್ತಷ್ಟು ದುಸ್ತರವಾಗಲಿದೆ ಎಂದು ಪೆಟ್ರೋಲ್ ಬೆಲೆ ಹೆಚ್ಚಳದ ಪರಿಣಾಮದ ಬಗ್ಗೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಕಡಿಮೆಯಿದ್ದಾಗ ಅದರ ಲಾಭವನ್ನು ಮೋದಿ ಸರ್ಕಾರ ಎಂದಿಗೂ ಜನತೆಗೆ ಬಿಟ್ಟುಕೊಡಲೇ ಇಲ್ಲ. ಆಗಲೂ ಜನತೆಯಿಂದ ದೊಡ್ಡ ಮೊತ್ತದ ತೆರಿಗೆಯನ್ನು ಸಂಗ್ರಹಿಸಿ ತನ್ನ ಬೊಕ್ಕಸವನ್ನು ತುಂಬಿಕೊಂಡಿತ್ತು. ಇನ್ನು ದರ ಏರಿಕೆಯಾದಾಗ ಅದರ ಸಂಪೂರ್ಣ ಭಾರವನ್ನು ಜನಸಾಮಾನ್ಯರ ಮೇಲೆ ಹೊರಿಸಿ ಕೈತೊಳೆದುಕೊಳ್ಳುತ್ತಿದೆ. ಇದು ಆಡಳಿತ ನಡೆಸುವ ಕ್ರಮವಲ್ಲ, ಇದು ದೇಶದ ಜನತೆಯ ಮೇಲಿನ ಘೋರ ಶೋಷಣೆಯಾಗಿದೆ.
ಮೋದಿ ಸರ್ಕಾರವು ಹಣದುಬ್ಬರ ನಿಯಂತ್ರಣ ಮಾಡುವಲ್ಲಿ, ಡಾಲರ್ ಎದುರು ರೂಪಾಯಿ ಮೌಲ್ಯದ ಕುಸಿತವನ್ನು ತಡೆಯುವಲ್ಲಿ, ದೇಶದ ಆರ್ಥಿಕ ನಿರ್ವಹಣೆಯಲ್ಲಿ ಹಾಗೂ ಒಟ್ಟಾರೆ ಸಾಮಾನ್ಯ ಜನರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ.
CM Siddharamaiah ನರೇಂದ್ರ ಮೋದಿ ತನ್ನ ಉದ್ಯಮಿ ಮಿತ್ರರ ರಕ್ಷಣೆಗೆ ತೋರುವ ಆತುರ, ಕಾಳಜಿ ಹಾಗೂ ಬದ್ಧತೆಯಲ್ಲಿ ಸ್ವಲ್ಪವಾದರೂ ದೇಶದ ಜನತೆಯ ಮೇಲೆ ತೋರಿಸಲಿ ಎಂಬುದು ನಮ್ಮ ಮನವಿ.
ಪೆಟ್ರೋಲ್, ಡೀಸೆಲ್ ದರ ತಲಾ 3 ರೂ. ಏರಿಕೆಯ ಜನವಿರೋಧಿ ನಡೆಯನ್ನು ನಾನು ಕಠಿಣವಾಗಿ ವಿರೋಧಿಸುತ್ತಿದ್ದೇನೆ. ತಕ್ಷಣವೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತಿದ್ದೇನೆ. ನಿರಂತರವಾಗಿ ಬೀಳುತ್ತಿರುವ ರೂಪಾಯಿ ಮೌಲ್ಯ, ಆರ್ಥಿಕ ನಿರ್ವಹಣೆಯ ವೈಫಲ್ಯ ಮತ್ತು ಸಾಮಾನ್ಯ ನಾಗರಿಕರ ಕುಟುಂಬಗಳನ್ನು ಸಂಕಷ್ಟಕ್ಕೆ ತಳ್ಳುತ್ತಿರುವುದರ ಹೊಣೆಯನ್ನು ಹೊತ್ತು ನರೇಂದ್ರ ಮೋದಿಯವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ
Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಮಾಡಿಸಲು ಏಜೆಂಟ್‌ರುಗಳನ್ನು ನಿಯುಕ್ತಿ ಮಾಡಿಕೊಳ್ಳಲಾಗುತ್ತಿದ್ದು, 18 ವರ್ಷ ಮೇಲ್ಪಟ್ಟ ವಯೋಮಿತಿಯ 10ನೇ ತರಗತಿ ಪಾಸಾಗಿರುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ನುರಿತ ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ರೂ. 5000/-ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇರಿಸಬೇಕಾಗುವುದು.
Shimoga Postal Department ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಮೇ 22 ಮತ್ತು 25 ರಂದು ಬೆಳಗ್ಗೆ 11.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿಗಳು ದೂ.ಸಂ.: 9620455929 ಇವರನ್ನು ಸಂಪರ್ಕಿಸುವುದು.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 2026-27ನೇ ಸಾಲಿಗೆ ಶಿವಮೊಗ್ಗ ನಗರದಲ್ಲಿ ಹೊಸದಾಗಿ ಅಲ್ಪಸಂಖ್ಯಾತರ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಮಹಿಳಾ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಿದ್ದು, ಈ ಕಾಲೇಜುಗಳಿಗೆ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ತಮ್ಮ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಮೇ 25 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-220206 ನ್ನು ಸಂಪರ್ಕಿಸುವುದು.
