Wednesday, November 18, 2026
Wednesday, November 18, 2026
Home Blog Page 983

Annamalai ಶಿವಮೊಗ್ಗಕ್ಕೆ ” ಸಿಗಂ”ಅಣ್ಣಾಮಲೈ ಬಿಜೆಪಿ ಸ್ಟಾರ್ ಪ್ರಚಾರಕರಾಗಿ ಏಪ್ರಿಲ್ 24ರಂದು ಆಗಮನ

0

Annamalai ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಚುನಾವಣಾ ಸ್ಟಾರ್ ಪ್ರಚಾರಕ ಕೆ. ಅಣ್ಣಾಮಲೈ ಎ.‌24ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಆಗಮಿಸಿ, ಪ್ರಚಾರ ಮಾಢುವರು.
ಅದೇ ದಿನ ಭದ್ರಾವತಿ ಮಂಟಪದಲ್ಲಿ ಸಂಜೆ 04.30 ಕ್ಕೆ ಆಯೋಜಿಸಲಾಗಿರುವ “ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ, ಸಂಜೆ 06.30 ಕ್ಕೆ ಶಿವಮೊಗ್ಗ ನಗರದ ಮುಖ್ಯ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ನಡೆಯಲಿರುವ ಬಿಜೆಪಿ ಸಾರ್ವಜನಿಕ
ಸಭೆಯಲ್ಲಿ ಭಾಗವಹಿಸಲಿದ್ದಾರೆ.

K.S.Eshwarappa ಅಪ್ಪ ಮಕ್ಕಳ ಕುತಂತ್ರ, ಷಡ್ಯಂತ್ರದಿಂದ ತಾತ್ಕಾಲಿಕವಾಗಿ ಹೊರಗಿದ್ದೇನೆ. ಚುನಾವಣೆ ಬಳಿಕ ಮತ್ತೆ ಬಿಜೆಪಿಗೆ ಬರುತ್ತೇನೆ- ಈಶ್ವರಪ್ಪ

0

K.S.Eshwarappa ಶಿವಮೊಗ್ಗದಲ್ಲಿ ಕೆ.ಎಸ್.ಈಶ್ವರಪ್ಪನವರು ಮಾದ್ಯಮ ಮಿತ್ರರೊಂದಿಗೆ ಮಾತನಾಡಿ, ವಿಜಯೇಂದ್ರ ಅವರಿಗೆ ಅಭಿನಂದನೆ ಉಚ್ಚಾಟನೆ ಮಾಡಿರುವುದರಿಂದ ಎಲ್ಲರಿಗೂ ಸ್ಪಷ್ಟವಾಗಿದೆ‌.ಇವತ್ತು ಹೊಸನಗರದ ಭಾಗದಿಂದ ಅನೇಕರು ನನ್ನ ಬೆಂಬಲಕ್ಕೆ ಬಂದಿದ್ದಾರೆ ಎಂದರು.

ಆನವಟ್ಟಿಯಲ್ಕಿ ಸುಮಾರು 500ಕ್ಕೂ ಹೆಚ್ಚು ವಿವಿಧ ಪಕ್ಷದ ಕಾರ್ಯಕರ್ತರು ನಮ್ಮೊಂದಿಗೆ ಬರುತ್ತಿದ್ದಾರೆ. ನೀವು ಕಟ್ಟಿದ ಪಕ್ಷದಿಂದ ನಿಮಗೆ ಉಚ್ಚಾಟನೆಯಾಗಿದೆ. ಅನೇಕರು ಈ ಮಾತನ್ನು ಹೇಳುತ್ತಿದ್ದಾರೆ, ಇದು ತುಂಬಾ ತಾತ್ಕಾಲಿಕ. ಕಾಂಗ್ರೆಸ್ ಗೆ ನನ್ನ ಜನ್ಮದಲ್ಲಿ ಸೇರಲ್ಲ. ನನ್ನ ತಾಯಿ ಬಿಜೆಪಿ ನೂರಕ್ಕೂ ನೂರು ಚುನಾವಣೆ ಗೆಲ್ಲುತ್ತೇನೆ ಎಂದು ತಿಳಿಸಿದರು.

ಅಪ್ಪ ಮಕ್ಕಳ ಕುತಂತ್ರ, ಷಡ್ಯಂತರ ದಿಂದ ನಾನು ತಾತ್ಕಾಲಿಕವಾಗಿ ಹೊರಗಿದ್ದೇನೆ.
ಎಳೆಸು ರಾಜ್ಯಾಧ್ಯಕ್ಷರಿಂದ ಅಪ್ಪ ಮಕ್ಕಳು ಸೇರಿ ನಿಮ್ಮ ಹೊರಹಾಕಿದ್ದಾರೆ ಅನೇಕರು ನೋವಿನಿಂದ ಕರೆ ಮಾಡಿದ್ದಾರೆ ಎಂದು ತಿಳಿಸಿದರು.

ಚುನಾವಣೆ ಬಳಿಕ ನಾನು ಮತ್ತೆ ಬಿಜೆಪಿಗೆ ಬರುತ್ತೇನೆ.‌ರೈತನ ಚಿನ್ಹೆ ಸಿಕ್ಕಿರುವುದು ನನ್ನ ಪುಣ್ಯ. ಎಲ್ಲ ಕಡೆಯಿಂದ ಪ್ರಸಂಸೆ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸ್ಪರ್ಧೆ ಮಾಡೇ ಮಾಡುತ್ತೇನೆ.
ಈಶ್ವರಪ್ಪ 8 ನಂ ನ ರೈತ ಚಿನ್ಹೆ ಇರುವ ಕರ ಪತ್ರವನ್ನು ಇಟ್ಟುಕೊಂಡು ಎಲ್ಲೂರು ಮತ ಕೇಳುತ್ತಾರೆ ಎಂದರು.

K.S.Eshwarappa ಯಾವುದೇ ನೀತಿ ನಿಯಮ ಇಲ್ಲದೇನೆ, ಕಾಂಗ್ರೆಸ್ ನ ಜೊತೆ ಹೊಂದಾಣಿಕೆ ಮಾಡಿಕೊಂಡು ಅಪ್ಪ ಮಕ್ಕಳು 60 ಸಾವಿರದಿಂದ 10 ಕ್ಕೆ ಇಳಿದಿದ್ದಾರೆ.ಅವರ ಅಪ್ಪ ಬಿಜೆಪಿಯಿಂದ ಕೆ ಜೆ ಪಿ ಹೋಗಿದ್ರು.ಆಗ ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ಮುಸಲ್ಮಾನ ಕ್ಯಾಪ್ ಹಾಕಿಕೊಂಡಿದನ್ನು ನಾವು ನೋಡಿದ್ದೇವೆ.ಅವಾಗ ಹೇಳಿದ್ರೂ, ಎಲ್ಲ ಜಾತಿಯವರ ಜೊತೆ ಬೆರೆಯಬೇಕು ಎಂದು.
ಎಲ್ಲರ ಜೊತೆಗೆ ಬೆರೆಯಿರಿ.
ನಾನೂ ವಿಜಯೇಂದ್ರ ಗೂ ಕೇಳುತ್ತೇನೆ,ಗೀತಾ ಶಿವರಾಜ್ ಕುಮಾರ್ ಗೂ ಕೇಳುತ್ತೇನೆ.
ಗೀತಾ ಶಿವರಾಜ್ ಕುಮಾರ್ ಕೂಡ ಹಣೆಯಲ್ಲಿ ಇದ್ದ ಕುಂಕುಮ ಒರಸಿಕೊಂಡಿದ್ದು ವೈರಲ್ ಆಗುತ್ತು.ಅವರೂ ಕೂಡು ಹಿಂದು ಸಮಾಜದ ಕ್ಷಮೆ ಕೇಳಬೇಕು ಎಂದು ಹೇಳಿದರು.

Dingaleshwar Shri ದಿಂಗಾಲೇಶ್ವರ ಶ್ರೀಗಳಿಂದ ನಾಮಪತ್ರ ವಾಪಸ್, ಜೋಶಿ ಸ್ಪರ್ಧೆ ಸುಗಮವಾಯಿತೆ?

0

Dingaleshwar Shri ಹಿರಿಯ ಶ್ರೀಗಳ ಆದೇಶದಂತೆ ನಾಮಪತ್ರ ಹಿಂದಕ್ಕೆ ಪಡೆದಿದ್ದೇನೆ ಎಂದು ದಿಂಗಾಲೇಶ್ವರ ಶ್ರೀಗಳು ಸ್ಪಷ್ಟನೆಯನ್ನು ನೀಡಿದ್ದಾರೆ. ಆದರೆ, ಪ್ರಲ್ಹಾದ್ ಜೋಶಿ ಜೊತೆಗಿನ ಹೋರಾಟ ಮುಂದುವರಿಯಲಿದೆ ಎಂದು ಶ್ರೀಗಳು ಹೇಳಿದ್ದಾರೆ.

India Meteorological Department ಏಪ್ರಿಲ್ ನಿಂದ ಮೇ‌ ವರೆಗೆ ತಾಪಮಾನ ಹೆಚ್ಚಳ!. ಸಾರ್ವಜನಿಕರಿಗೆ ಸರ್ಕಾರದಿಂದ ಕೆಲವು ಸಲಹೆ,ಸೂಚನೆಗಳ ಮಾಹಿತಿ

0

India Meteorological Department ಭಾರತ ಹವಾಮಾನ ಇಲಾಖೆ (IMD) ಯು ಈ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ (Heat Wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸುತ್ತದೆ. ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಭಾರತೀಯ ಹವಾಮಾನ ಇಲಾಖೆಯು ಏಪ್ರಿಲ್ 2024ರ ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ ಮಾಹೆಯಿಂದ ಮೇ- 2024 ರ ಅವಧಿಯಲ್ಲಿ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿರುತ್ತದೆ. ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿರುವುದರಿಂದ, ಅತೀ ಹೆಚ್ಚು ತಾಪಮಾನ ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಈ ಕೆಳಕಂಡ ಸಲಹೆ /ಸೂಚನೆಗಳನ್ನು ನೀಡಿದೆ.
ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು:
ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12.00 ರಿಂದ 3.00 ರವರೆಗೆ). ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸುವುದು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು). ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿಮಾಡುವುದು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಓಆರ್‍ಎಸ್ ಅನ್ನು ಬಳಸುವುದು. ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು. ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‍ ಗಳು ಅಥವಾ ಸನ್‍ಶೇಡ್‍ಗಳನ್ನು ಬಳಸುವುದು. ಹಾಗೂ ಆಗ್ಗಿಂದಾಗೆ ತಣ್ಣೀರು ಸ್ನಾನ ಮಾಡುವುದು. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್ / ಹೆಡ್‍ಕವರ್, ಹ್ಯಾಂಡ್‍ಟವೆಲ್, ಹ್ಯಾಂಡ್ ಪ್ಯಾನ್, ಎಲೆಕ್ಟೋಲೈಟ್ / ಗ್ಲೂೀಕೋಸ್ / ಓಆರ್‍ಎಸ್‍ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್‍ಅನ್ನು ಒಯ್ಯುವುದು.
ಅತೀ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಗುರುತಿಸುವಿಕೆ:
ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಮತ್ತು / ಅಥವಾ ಶಾಖದ ಅಘಾತದಂತಹ ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅವುಗಳ ರೋಗ ಲಕ್ಷಣಗಳು ಈ ಕೆಳಕಂಡಂತಿವೆ:
ಶಾಖ ಸೆಳೆತಗಳು (Heat cramps) : ಎಡೆರ್ನಾ (ಊತ) ಮತ್ತು ಮೂರ್ಛೆ ಸಾಮಾನ್ಯವಾಗಿ 39 ಡಿ.ಸೆ. ಅಂದರೆ 102 °F ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ.
India Meteorological Department ಶಾಖದ ಬಳಲಿಕೆ : ಆಯಾಸ, ದೌರ್ಭಲ್ಯ, ತಲೆ ತಿರುಗುವಿಕೆ, ತಲೆ ನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು.
ಶಾಖಾಘಾತ (Sun Stroke) : ದೇಹದ ಉಷ್ಣತೆಯು 40 ಡಿ.ಸೆ. ಅಂದರೆ 104 °F ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.
ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ:
ಅತೀ ಹೆಚ್ಚು ತಾಪಮಾನದಿಂದ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ, ಸ್ಥಳಾಂತರಿಸುವುದು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸುವುದು / ತಂಪಾದ ಒದ್ದೆ ಬಟ್ಟೆಯನ್ನು ಹಾಕುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು. ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್‍ಎಸ್. ನಿಂಬೆ ಪಾನಕ ನೀಡುವುದು (ವ್ಯಕ್ತಿ ಇನ್ನೂ ಪ್ರಜ್ಞೆ ಹೊಂದಿದ್ದರೆ). ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು. ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಕೂಡಲೇ ಸಂಪರ್ಕಿಸುವುದು. ಮದ್ಯ ಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.ಅತೀ ಹೆಚ್ಚು ತಾಪಮಾನದ ಈ ಸಂದರ್ಭದಲ್ಲಿ ಸಾರ್ವಜನಿಕರು ಅತಿ ಎಚ್ಚರದಿಂದಿರುವಂತೆ ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಸ್.ಆರ್. ಶಿವಶಂಕರ್‍ ರವರು ಸೂಚಿಸಿದ್ದಾರೆ.

Power Outage ಏಪ್ರಿಲ್ 24 ರಂದು ಗಾಂಧಿಬಜಾರ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

Power Outage ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ. 24 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ನಗರದ ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂಕೆಕೆ ರಸ್ತೆ, ನಾಗಪ್ಪಕೇರಿ ಹಾಗೂ Power Outage ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Lok Sabha Election ನಾಮಪತ್ರ ವಾಪಸ್ ಪಡೆಯದೆ ಪಟ್ಟು ಹಿಡಿದು ಸ್ವ ಪಕ್ಷಕ್ಕೇ ಬಂಡಾಯದ ಬಿಸಿ ಮುಟ್ಟಿಸಿದ ಈಶ್ವರಪ್ಪ

0

Lok Sabha Election ಲೋಕಸಭಾ ಕ್ಷೇತ್ರ‌ ಕಣದಲ್ಲಿ ಅಂತಿಮವಾಗಿ 23 ಅಭ್ಯರ್ಥಿ ಗಳು ಉಳಿದಿದ್ದಾರೆ.
ಹಾಲಿ ಸಂಸದ ಬಿಜೆಪಿಯ ಬಿ ವೈ ರಾಘವೇಂದ್ರ , ಕಾಂಗ್ರೆಸ್ ನ ಗೀತಾ ಶಿವರಾಜಕುಮಾರ್ ಸೇರಿದಂತೆ ಒಟ್ಟು 23 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್ ಈಶ್ವರಪ್ಪ ಅವರು ತಮ್ಮ ನಾಮಪತ್ರ ಹಿಂಪಡೆಯದೆ ಇದ್ದು ಅವರೂ ಕೂಡ ಕಣದಲ್ಲುಳಿಯುವ ಮೂಲಕ ಬಿಜೆಪಿಗೆ ಬಂಡಾಯದ ಬಿಸಿ ಹೆಚ್ಚಿಸಿದ್ದಾರೆ.

Lok Sabha Election ಕೆ.ಎಸ್ ಈಶ್ವರಪ್ಪ ಅವರು ಕಬ್ಬಿನ‌ಜಲ್ಲೆ ಯ ಜೊತೆ ರೈತನನ್ನು ಚಿಹ್ನೆಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

Kimmane Ratnakar ಮೋದಿ ಅವರು ತಮ್ಮ ಹೇಳಿಕೆ ನೀಡುವಾಗ ಚುನಾವಣಾ ನೀತಿ ಸಂಹಿತೆ ಪಾಲಿಸಿಲ್ಲ ಎಂದು ಕಿಮ್ಮನೆ ರತ್ನಾಕರ್ ದೂರು

0

Kimmane Ratnakar ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.
ತಮ್ಮ ಲೆಟರ್ ಹೆಡ್‌ನಲ್ಲಿ ಅವರು ದೂರು ನೀಡಿದ್ದು, ಪತ್ರಿಕೆಯಲ್ಲಿ ಪ್ರಸಾರವಾದ ಲೇಖನವೊಂದನ್ನು ಉಲ್ಲೇಖಿಸಿ ದೂರು ನೀಡಿದ್ದಾರೆ.
ದೂರಿನಲ್ಲಿ ಏನಿದೆ?:
ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಹೇಳಿಕೆ ಸಮುದಾಯಗಳ ಮಧ್ಯೆ ದ್ವೇಷ, ಕೋಮುಭಾವನೆ ಕೆರಳಿಸುವ ಹೇಳಿಕೆಯಾಗಿದ್ದು, ರಾಜ್ಯ ದೇಶದ ಶಾಂತಿ ಸುವ್ಯವಸ್ಥೆ ಮೇಲೆ ನೇರವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇಂತಹ ಪ್ರಚೋದನಕಾರಿ ಹೇಳಿಕೆಯು ಪ್ರಧಾನಿ ಮೋದಿಯವರ ಹತಾಶೆ ಹಾಗೂ ಸೋಲಿನ ಭಯದಿಂದ ಕೂಡಿದ ಪ್ರತಿಕ್ರಿಯೆ ಆದರೂ ಸಹ ಇದು ಹಿಂದೂ ಮಹಿಳೆಯರ ಭಾವನಾತ್ಮಕ ವಿಚಾರಗಳನ್ನು ಕೆರಳಿಸುವ ಆ ಮೂಲಕ ಧರ್ಮ ಧರ್ಮಗಳ ಮಧ್ಯೆ ದ್ವೇಷ ಹರಡುವ ಹೇಳಿಕೆ ಆಗಿದ್ದು, ಆ ಮೂಲಕ ಮತ ಗಳಿಸುವ ವ್ಯವಸ್ಥಿತ ಒಳಸಂಚಾಗಿದೆ ಎಂದಿದ್ದಾರೆ.
Kimmane Ratnakar ಹೀಗಾಗಿ ಪತ್ರಿಕೆ ಸಂಪಾದಕ ಹಾಗೂ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಹಾಗೂ ದ್ವೇಷ ಹರಡುವ ಪಿತೂರಿ ಕುರಿತಂತೆ ತಕ್ಷಣ ಕ್ರಮ ಜರುಗಿಸಬೇಕೆಂದಿರುವ ಅವರು, ದೂರಿನ ಜೊತೆ ಹೇಳಿಕೆ ಪ್ರಕಟವಾಗಿರುವ ಪತ್ರಿಕೆಯ ಸಂಚಿಕೆಯನ್ನು ಲಗತ್ತಿಸಿದ್ದಾರೆ.
ಈ ಹೇಳಿಕೆಯು ಸಂವಿಧಾನ ವಿರೋಧಿ ಹೇಳಿಕೆಯಾಗಿದ್ದು, ಪ್ರಧಾನಿಯವರ ಗೌಪ್ಯ ಪ್ರಮಾಣವಚನ ಮತ್ತು ಸಂಸತ್ ಸದಸ್ಯರ ಪ್ರಮಾಣವಚನಕ್ಕೆ ವಿರೋಧವಾಗಿದೆ. ಭಾರತೀಯ ದಂಡ ಸಂಹಿತೆಯ ಅನ್ವಯ ಈ ಹೇಳಿಕೆ ಅಪರಾಧವಾಗಿರುವುದರಿಂದ ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಿಗೂ ಅವರು ನೀಡಿದ್ದಾರೆ.

Siddharamaih ಮೋದಿಯವರು ಇಷ್ಟು ಕೆಳಮಟ್ಟದಲ್ಲಿ ಮಾತಾಡಬಾರದಿತ್ತು- ಸಿದ್ಧರಾಮಯ್ಯ

0

Siddharamaih ಪ್ರಧಾನಿಯಾಗಿ ನರೇಂದ್ರ ಮೋದಿಯವರು ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು. ಹಿಂದೂಗಳ ಮಾಂಗಲ್ಯವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವಂಥ ಮಾತುಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತರಿಕೆರೆಗೆ ಚುನಾವಣಾ ಪ್ರಚಾರ ಸಭೆಗೆ ತೆರಳುವ ಮುನ್ನ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂಥ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.
ದೇಶದ ಪ್ರಧಾನಮಂತ್ರಿ ಇಂದಿನವರೆಗೆ ಹೇಳಿರುವುದನ್ನು ಅನುಷ್ಠಾನಕ್ಕೆ ತಂದಿಲ್ಲ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ, ೧೫ ಮೇ ಹಣಕಾಸು ಆಯೋಗದ ಶಿಫಾರಸ್ಸು, ಬರಗಾಲಕ್ಕೆ ಪರಿಹಾರ ಕೊಟ್ಟಿಲ್ಲ, ೧೫ ಲಕ್ಷ ಎಲ್ಲರ ಖಾತೆಗೆ ಬಂತೇ? ವರ್ಷಕ್ಕೆ ೨ ಕೋಟಿ ಉದ್ಯೋಗ ಸೃಷ್ಟಿಯಾಗಿದೆಯೇ? ರೈತರ ಆದಾಯ ದುಪ್ಪಟ್ಟು ಆಗಿದೆಯೇ? ಅಚ್ಚೇ ದಿನ್ ಬಂದಿದೆಯೇ? ಎಂದು ಪ್ರಶ್ನಿಸಿದರು.
Siddharamaih ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಅಸಮಾನತೆ ಹೋಗಬೇಕಾದರೆ ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಇರಬಾರದು, ಹಂಚಿಕೆಯಾಗಬೇಕೆAದು ಹೇಳಿದ್ದಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಮಗೆ ನಂಬಿಕೆ ಇದೆ ಎಂದರು.
ನೇಹಾ ಹಿರೇಮಠ ಕೊಲೆ ಪ್ರಕರಣ ಸಿಒಡಿ ತನಿಖೆಗೆ ನೀಡಲಾಗಿದೆ. ಪ್ರಕರಣದ ತ್ವರಿತ ವಿಚಾರಣೆಯನ್ನು ವಿಶೇಷ ನ್ಯಾಯಾಲಯದ ಮೂಲಕ ನಡೆಸಿ ಕಾಲಮಿತಿಯಲ್ಲಿ ವಿಚಾರಣೆ ಪೂರ್ಣಗೊಳಿಸಲಾಗುವುದು. ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ನೇಹಾ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಧಾರವಾಡದಲ್ಲಿ ಕಣಕ್ಕಿಳಿದಿರುವ ದಿಂಗಾಲೇಶ್ವರ ಸ್ವಾಮಿಜಿಗಳು ತಮ್ಮ ಉಮೇದುವಾರಿಕೆ ಹಿಂಪಡೆದು ಕಾಂಗ್ರೆಸ್ ಬೆಂಬಲಿಸಲು ಮನವಿ ಮಾಡಲಾಗುವುದು. ಅವರ ಮಠ ಜಾತ್ಯಾತೀತವಾಗಿದ್ದು ಅವರ ಬೆಂಬಲ ಅಗತ್ಯವಿದೆ. ಹೀಗಾಗಿ ತಮ್ಮ ಸ್ಪರ್ಧೆಯನ್ನು ಹಿಂಪಡೆದು ಅವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವAತೆ ಮನವಿ ಮಾಡುತ್ತೇವೆ ಎಂದು ಪ್ರಶ್ನೆಯೊದಂಕ್ಕೆ ಅವರು ಉತ್ತರಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪಾರಾಧ ಹೆಚ್ಚಾಗುತ್ತಿದೆ ಎಂದು ಬಿಜೆಪಿ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಮಾಡಿದ ಅರೋಪ ಸರಿಯಾದುದಲ್ಲ. ೨೦೨೨ ರಲ್ಲಿ ಹೋಲಿಸಿದರೆ ಕಾಂಗ್ರೆಸ್ ಸರ್ಕಾರವಿದ್ದಾಗಲೇ ಅಪರಾಧಗಳು ಕಡಿಮೆಯಾಗಿದೆ. ೨೦೨೩ ರಲ್ಲಿ ೧೨೯೫ ಅಪರಾಧ ಪ್ರಕರಣಗಳು ನಡೆದಿದ್ದರೆ, ಅವರ ಕಾಲದಲ್ಲಿ ೨೦೨೨ ರಲ್ಲಿ ೧೩೭೦ ಪ್ರಕರಣಗಳು ನಡೆದಿದೆ ಎಂದgಲ್ಲದೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಯಡಿಯೂರಪ್ಪ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಪಕ್ಷ ೧೩೬ ಸ್ಥಾನಗಳನ್ನು ಗೆದ್ದಿತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಶಿವಮೊಗ್ಗವನ್ನೂ ಸೇರಿದಂತೆ ೨೦ ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಪಕ್ಷ ನಕಾರಾತ್ಮಕ ವಿಷಯಗಳನ್ನು ಅವಲಂಬಿಸದೇ, ಸದಾ ತನ್ನ ಶಕ್ತಿಯನ್ನು ಅವಲಂಬಿಸಿಯೇ ಚುನಾವಣೆಯನ್ನು ಗೆಲ್ಲುತ್ತೇವೆ ಎಂದರು.

Radio Shivamogga ರೇಡಿಯೊ ಶಿವಮೊಗ್ಗ ವತಿಯಿಂದ ವಿಶ್ವ ಭೂಮಿ ದಿನಾಚರಣೆ

0

Radio Shivamogga ಶಿವಮೊಗ್ಗ ನಗರದ ಮಥುರಾ ಪ್ಯಾರಡೈಸ್ ನಲ್ಲಿ ಕೊಡಚಾದ್ರಿ ಇಂಟಿಗ್ರೇಟೆಡ್. ಡೆವಲಪ್ಮೆಂಟ್ ಸೊಸೈಟಿ. ಪರಿಸರ ಅಧ್ಯಯನ ಕೇಂದ್ರ. ಹಾಗೂ ಜ್ಞಾನಸಾಗರ ನಾವೇ ಟ್ರಸ್ಟ್. (ರಿ) ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ರೇಡಿಯೋ ಹಬ್ಬ ಎಫ್ ಎಂ ರೇಡಿಯೋದ ವಾರ್ಷಿಕೋತ್ಸವ ಹಾಗೂ ವಿಶ್ವ ಭೂ ದಿನದ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ನ್ಯಾಮತಿಯ ಕೇಳುಗರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕದ ವತಿಯಿಂದ ನಿಕಟ ಪೂರ್ವ ಅಧ್ಯಕ್ಷ ನಿಜಲಿಂಗಪ್ಪ. ಷಡಕ್ಷರಿ. ಜಿ ವಿಜಯಕುಮಾರ್. ದತ್ತಾತ್ರಿ ರುದ್ರಪ್ಪ ಚೀಲೂರ್. ಶಿವಮೊಗ್ಗ ಎಫ್ಎಂ ರೇಡಿಯೋ ಎಲ್ಲಾ ಅರ್ಜೆಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ವಿಶೇಷ ನೆನಪಿನ ಕಾಣಿಕೆ ನೀಡಿ ಗೌರವಿ ಸಲಾಯಿತು.

Radio Shivamogga ಕಾರ್ಯಕ್ರಮದಲ್ಲಿ ಮುಖ್ಯಸ್ಥರಾದ ಜೆಲ್ ಜನಾರ್ಧನ್. ಎಫ್ಎಂ ರೇಡಿಯೋ ನಿರೂಪಕರಾದ ಪವಿತ್ರ ದಿನೇಶ್. ರಕ್ಷಿತಾ ಹೊಳ್ಳ. ಮಹಾಲಕ್ಷ್ಮಿ, ಅರ್ಪಿತ. ಅಶ್ವಿನಿ, ಶ್ರೀಧರ್ ,ಶ್ವೇತಾ , ಜೈ ಸಿಂಹ.. ಕೆ ಟಿ ಗಂಗಾಧರ್. ಗುರುಪ್ರಸಾದ್. ಶ್ರೀಕಾಂತ್. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಕುಲಪತಿಗಳಾದ ಜಗದೀಶ್. ಕತ್ತಿಗೆ ಚೆನ್ನಪ್ಪ ಹಾಗೂ ಬಾನುಲಿ ಕೇಳುಗರು. ಉಪಸ್ಥಿತರಿದ್ದರು

K.S.Eshwarappa ನೇಹಾ ಹತ್ಯೆ ಸಿಬಿಐ ಗೆ ವಹಿಸಿ ಈಶ್ವರಪ್ಪ ಆಗ್ರಹ

0

K.S.Eshwarappa ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಲೋಕಸಭಾ ಚುನಾವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.

ನೇಹಾ ಹತ್ಯೆ ಖಂಡಿಸಿ ಮಹಾವೀರ ವೃತ್ತದಲ್ಲಿ ಸೋಮವಾರ ರಾಷ್ಟ್ರಭಕ್ತರ ಬಳಗದಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನೇಹಾ ಹತ್ಯೆ ವೈಯಕ್ತಿಕ ಕಾರಣಕ್ಕೆ ನಡೆದಿದೆಯೋ ಇಲ್ಲ ಲವ್ ಜಿಹಾದೋ ಎಂದು ತೀರ್ಮಾನ ಮಾಡುವುದು ನೀವಲ್ಲ. ಪ್ರಕರಣ ತನಿಖೆ ಸಂಸ್ಥೆಗಳಿಗೆ ವಹಿಸಿ, ಸತ್ಯ ಹೊರ ತೆಗೆಯಬೇಕು ಎಂದು ಆಗ್ರಹಿಸಿದರು.

ಹಿಂದು ಹೆಣ್ಣು ಮಕ್ಕಳನ್ನು ಕಗ್ಗೋಲೆ ಮಾಡುವುದು ರಾಕ್ಷಸ ಕೃತ್ಯ. ಸಮಾಜದ ಕೈಗೆ ಸಿಕ್ಕರೆ ತುಂಡು ತುಂಡಾಗುತ್ತಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೇಳುತ್ತೇನೆ. ಈ ರೀತಿಯ ಘಟನೆ ಮತ್ತೊಮ್ಮೆ ಸಂಭವಿಸದಂತೆ ಕಾಂಗ್ರೆಸ್ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

K.S.Eshwarappa ರಾಷ್ಟ್ರಭಕ್ತ ಬಳಗದಿಂದ ಕೆ.ಎಸ್.ಈಶ್ವರಪ್ಪ. ಪುತ್ರ ಕೆ.ಈ. ಕಾಂತೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ನಗರದ ಜೈಲ್ ವೃತ್ತದಿಂದ ಆರಂಭಗೊಂಡು ದುರ್ಗಿಗುಡಿ ರಸ್ತೆ, ಸೀನಪ್ಪ ಶೆಟ್ಟಿ (ಗೋಪಿವೃತ್ತ) ಗೋಪಿವೃತ್ತ ಮಾರ್ಗವಾಗಿ ಮಹಾವೀರ ವೃತ್ತ ತಲುಪಿತು.

ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆ ಕಾರ್ಯಕರ್ತರು ಭಾಗಿವಹಿಸಿದ್ದರು.

ಪ್ರತಿಭಟನೆಯಲ್ಲಿ ಪಾಲಿಕೆ ಮಾಜಿ ಮೇಯರ್ ಸುವರ್ಣ ಶಂಕರ್, ಸದಸ್ಯರಾದ ವಿಶ್ವಾಸ್, ಶಂಕರ್ ಗನ್ನಿ, ಮಹಾಲಿಂಗ ಶಾಸ್ತ್ರಿ, ದಿಲೀಪ್ ಕುಮಾರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.