ಸಾಗರ ತಾಲೂಕಿನ ಆನಂದಪುರದ ಬಸ್ ನಿಲ್ದಾಣ ಮುಂಭಾಗ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಅಪರಿಚಿತ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದು ಕಾರನ್ನು ನಿಲ್ಲಿಸದೆ ತೆರಳಿರುವ ಘಟನೆ ಬೆಳಿಗ್ಗೆ ನಡೆದಿದೆ.
ಇನ್ನು ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ತಕ್ಷಣ ಆನಂದಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಮಾಡಿ ಕಾರು ನಿಲ್ಲಿಸದೆ ತೆರಳಿದ್ದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಿಳೆಗೆ ಕಾರು ಡಿಕ್ಕಿ – ಸಿಸಿಟಿವಿಯಲ್ಲಿ ಸೆರೆ
Madhu Bangarappa ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದ ಶಾಲೆಗಳಲ್ಲಿ ಹೊಸ ಮಾರ್ಗಸೂಚಿ ಜಾರಿಗೆ- ಮಧು ಬಂಗಾರಪ್ಪ
Madhu Bangarappa ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಮಾರ್ಗದರ್ಶನದಲ್ಲಿ, ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಸೌಹಾರ್ದತೆ ಮೆರೆಯಲು ನಮ್ಮ ಸರ್ಕಾರವು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. 2022ರ ಸಮವಸ್ತ್ರ ನೀತಿಯ ಆದೇಶವನ್ನು ಅಧಿಕೃತವಾಗಿ ಹಿಂಪಡೆಯಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.
ನಮ್ಮ ಸರ್ಕಾರದ ಪ್ರಮುಖ ನಿರ್ಧಾರಗಳು:
ಒಳಗೊಳ್ಳುವಿಕೆಯ ನಿಲುವು: ನಿಗದಿತ ಸಮವಸ್ತ್ರದೊಂದಿಗೆ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳನ್ನು (ಪೇಟ, ಜನಿವಾರ, ರುದ್ರಾಕ್ಷಿ, ಹಿಜಾಬ್ ಮುಂತಾದವು) ಧರಿಸಲು ಈಗ ಅವಕಾಶವಿದೆ.
ತಾರತಮ್ಯಕ್ಕೆ ಮುಕ್ತಿ: ಯಾವುದೇ ಸಾಂಪ್ರದಾಯಿಕ ಸಂಕೇತಗಳ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ತರಗತಿ ಅಥವಾ ಪರೀಕ್ಷಾ ಕೊಠಡಿಯ ಪ್ರವೇಶ ನಿರಾಕರಿಸುವಂತಿಲ್ಲ.
ಸೌಹಾರ್ದತೆಯ ಸಮನ್ವಯ: ಈ ಸಂಕೇತಗಳು ಸಮವಸ್ತ್ರಕ್ಕೆ ಪೂರಕವಾಗಿರಬೇಕೇ ಹೊರತು, ಶಾಲಾ ಶಿಸ್ತು ಅಥವಾ ಭದ್ರತೆಗೆ ಅಡ್ಡಿಯಾಗಬಾರದು.
Madhu Bangarappa ಬಲವಂತಕ್ಕೆ ಅವಕಾಶವಿಲ್ಲ: ಶಿಕ್ಷಣ ಸಂಸ್ಥೆಗಳು ಇವುಗಳನ್ನು ಕಡ್ಡಾಯಗೊಳಿಸುವಂತಿಲ್ಲ ಅಥವಾ ಬಲವಂತವಾಗಿ ತೆಗೆಸುವಂತಿಲ್ಲ.
12ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ “ಇವ ನಮ್ಮವ” ಎಂಬ ತತ್ವದಡಿ, ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ಮತ್ತು ಪ್ರೀತಿಯ ವಾತಾವರಣ ನಿರ್ಮಿಸಲು ನಾವು ಬದ್ಧರಾಗಿದ್ದೇವೆ. ಮಕ್ಕಳು ಯಾವುದೇ ಅಡೆತಡೆಯಿಲ್ಲದೆ ಶಿಕ್ಷಣ ಪಡೆಯುವುದೇ ನಮ್ಮ ಪರಮೋಚ್ಚ ಗುರಿ.
ನಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನಾವೆಲ್ಲರೂ ಒಂದಾಗೋಣ.
Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ
Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು ಪ್ರತಿಯೊಬ್ಬ ಮನುಷ್ಯನ ಜವಾಬ್ದಾರಿ ಹಾಗೂ ಆದ್ಯ ಕರ್ತವ್ಯ ಎಂದು ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಜಿ.ಶಿವಮೂರ್ತಿ ಹೇಳಿದರು.
ಸಿಮೆಂಟ್ ತೊಟ್ಟಿಗಳನ್ನು ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ವತಿಯಿಂದ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಇಂತಹ ಪುಣ್ಯವಾದ ಕೆಲಸವನ್ನು ರೋಟರಿ ರಿವರ್ ಸೈಡ್ ಸದಸ್ಯರು ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದು ತಿಳಿಸಿದರು.
ರೋಟರಿ ಸದಸ್ಯರು ನಿರಂತರವಾಗಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಪ್ರಾಣಿ ಪಕ್ಷಿಗಳಿಗೆ ನೀರನ್ನು ಉಣಿಸುವ ಸಿಮೆಂಟ್ ತೊಟ್ಟಿಗಳನ್ನು ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ವಿತರಿಸುತ್ತಿರುವುದು ತುಂಬಾ ಉತ್ತಮ ಕಾರ್ಯ. ಮುಂದಿನ ದಿನಗಳಲ್ಲಿ ಇಂತಹ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲಿ ಎಂದು ಆಶಿಸಿದರು.
ರೋಟರಿ ರಿವರ್ ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ ಮಾತನಾಡಿ, ಶುಭಂ ಹೋಟೆಲ್ ಮುಂಭಾಗದಲ್ಲಿ ಇರುವ ಆಟೋ ಸ್ಟಾö್ಯಂಡ್ ಬಳಿ ಸಿಮೆಂಟ್ ತೊಟ್ಟಿ ಇಡಲಾಗಿದ್ದು, ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರು ಉಣಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
Rotary Club Shivamogga ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ವತಿಯಿಂದ ಪ್ರಾಣಿ ಪಕ್ಷಿಗಳಿಗೆ ನೀರು ಉಳಿಸುವ ಸಿಮೆಂಟ್ ತೊಟ್ಟಿಗಳ ಉದ್ಘಾಟನೆ ಹಾಗೂ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಕಾರ್ಯದರ್ಶಿ ನಿತಿನ್ ಯಾದವ್, ಪ್ರತಾಪ್.ಎಲ್, ರವಿ.ಎಂ.ಎA., ಋತ್ವಿಕ್, ನವಲೆ ಈಶ್ವರಪ್ಪ, ನಟರಾಜ್, ಸ್ಥಳೀಯ ಆಟೋ ಚಾಲಕರು ಹಾಜರಿದ್ದರು.
Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್
Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು ಎಡದಂಡೆ ಕಾಲುವೆಗಳಲ್ಲಿ ಮೇ.17ರವರೆಗೆ ಹೆಚ್ಚುವರಿಯಾಗಿ ನೀರು ಹರಿಸುತ್ತಿದ್ದು, ಮೇ 17 ರ ಮಧ್ಯರಾತ್ರಿಯಿಂದ ನಿಲ್ಲಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿರುತ್ತಾರೆ.
ಭದ್ರಾ ಜಲಾಶಯದಲ್ಲಿ ಕುಡಿಯುವ ನೀರು ಶೇಖರಣೆ ಮಾತ್ರ ಉಳಿದಿದ್ದು, ಹೆಚ್ಚುವರಿಯಾಗಿ ಬೆಳೆಗಳಿಗೆ ನೀರನ್ನು ಹರಿಸಲು ಜಲಾಶಯದಲ್ಲಿ ನೀರಿನ ಲಭ್ಯತೆ ಇರುವುದಿಲ್ಲ. ಅಚ್ಚುಕಟ್ಟು ಭಾಗದ ಎಲ್ಲಾ ರೈತರುಗಳು ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.
Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್
Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ ವೇದಿಕೆ, ಶಿವಮೊಗ್ಗದ ವತಿಯಿಂದ ತಾಯಂದಿರ ದಿನಾಚರಣೆಯ ಪ್ರಯುಕ್ತ ಶಿವಮೊಗ್ಗ ನಗರದ ರಾಯಲ್ ಡೈಮಂಡ್ ಆಂಗ್ಲ ಮಾಧ್ಯಮ ಸ್ಕೂಲ್, ವಿನೋಬಾ ನಗರದಲ್ಲಿ ಕವಿಗೋಷ್ಠಿ, ಉಪನ್ಯಾಸ ಹಾಗೂ ಗಾನಸುಧೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಕುಮಾರಿ ಚಿನ್ಮಯಿ ಪ್ರಾರ್ಥಿಸಿದರು. ಕಾರ್ಯಕ್ರಮ ಉದ್ಘಾಟನೆಯನ್ನು ಶ್ರೀಮತಿ ವೀಣಾ ನಾಯಕ್, ಸಂಗೀತ ವಿದುಷಿ, ಶಿವಮೊಗ್ಗ.ಇವರು ನೆರವೇರಿಸಿದರು ಮನೆಯೇ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಎಂದು ಹೇಳುತ್ತಾ ತಾಯಿಯ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು. .
ಶ್ರೀ ನಿರಂಜನ್ ಕುಮಾರ್ ಸ್ವಾಗತಿಸಿದರು. ಶ್ರೀಮತಿ ನಂದಾ ಪ್ರೇಮಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಶ್ರೀ ಗಂಗಾಧರ್ ಪಿ ಬನ್ನಿ ಹಟ್ಟಿ ಇವರಿಂದ ಗಾನಸುಧೆ ಸಂಗೀತ ಕಾರ್ಯಕ್ರಮ ಜರುಗಿತು.
ಮುಖ್ಯ ಅತಿಥಿಗಳಾಗಿ ಶ್ರೀಮತಿ ಪೂಜಾ ನಾಗರಾಜ್, ಕಾರ್ಯದರ್ಶಿಗಳು, ರಾಯಲ್ ಡೈಮಂಡ್ ಇಂಗ್ಲಿಷ್ ಸ್ಕೂಲ್ ಇವರು ಆಗಮಿಸಿದ್ದರು.ತಾಯಿಯ ಹಾಗೂ ಶಿಕ್ಷಕರ ಜವಾಬ್ದಾರಿ ತಿಳಿಸಿ ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ರೇಖಾ ಸುರಭಿ ಆಪ್ತ ಸಮಾಲೋಚಕರು ಇವರು ತಾಯಂದಿರ ಇಂದಿನ ಸವಾಲುಗಳು ಮತ್ತು ಸ್ವಾಸ್ಥ್ಯ ಎನ್ನುವ ವಿಷಯದ ಕುರಿತು ಸುಧೀರ್ಘ ಉಪನ್ಯಾಸ ನೀಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಡಾ.ಪರಿಸರ ನಾಗರಾಜ್, ಮುಖ್ಯಸ್ಥರು ಪರಿಸರ ವಿಜ್ಞಾನ ವಿಭಾಗ ಸಹ್ಯಾದ್ರಿ ಕಾಲೇಜ್ ಶಿವಮೊಗ್ಗ ಇವರು ಕವಿಗಳ ಕವನದ ಸಾಹಿತ್ಯ ಹಾಗೂ ವಾಚನವನ್ನು ಮೆಚ್ಚಿಕೊಂಡು, ಇಂತಹ ಇನ್ನಷ್ಟು ಕಾರ್ಯಕ್ರಮಗಳು ನೆರವೇರಲಿ ಎಂದು ಹಾರೈಸಿದರು.
Royal Diamond English Medium School ಕವಿಗೋಷ್ಠಿಯಲ್ಲಿ ಶ್ಯಾಮಲ ರಾಮಕೃಷ್ಣ,ಹಾಲಪ್ಪ ಜೈಲರ್, ನಾಗರತ್ನ ಸುಬ್ರಹ್ಮಣ್ಯ,ಉಮಾ ಗೋಪಾಳ, ಸೌಭಾಗ್ಯ ಜಗನ್ನಾಥ್,ಲಕ್ಷ್ಮಿ ಕುಮಾರ್, ಹು.ಮಾ.ಸತೀಶ್, ಎ.ಎಚ್. ಸುರೇಶ್, ರೇಷ್ಮಾ ಸುರೇಶ್, ಗಂಗಾಧರ್ ಬನ್ನಿಹಟ್ಟಿ, ಚಿನ್ಮಯಿ, ನಳಿನ ಬಾಲಸುಬ್ರಹ್ಮಣ್ಯ,ನಂದಾ ಪ್ರೇಮಕುಮಾರ್ ತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರು.
ಕಾರ್ಯಕ್ರಮವನ್ನು ಶ್ರೀಮತಿ ನಳಿನ ಬಾಲಸುಬ್ರಹ್ಮಣ್ಯ ಇವರು ನಿರೂಪಿಸಿದರು.
ಶ್ರೀಮತಿ ಜ್ಯೋತಿ ಉಮೇಶ್ ಅವರ ವಂದನಾರ್ಪಣೆ ಯೊಂದಿಗೆ ಕಾರ್ಯಕ್ರಮ ಸಂಪನ್ನಗೊಳಿಸಲಾಯಿತು.
Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ
Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ 6 ಗ್ರಾಮ ಪಂಚಾಯತಿಗಳು ಪ್ರಶಸ್ತಿ ಪಡೆದಿರುವುದು ರಾಜ್ಯದ ಪಂಚಾಯತ್ ರಾಜ್ ವ್ಯವಸ್ಥೆಯ ಉತ್ಕೃಷ್ಟತೆಯ ದ್ಯೋತಕವಾಗಿದೆ ಎಂದು ರಾಜ್ಯದ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮಂತ್ರಿ ಪ್ರಿಯಾಂಕ ಖರ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.
2025ರ ರಾಷ್ಟ್ರೀಯ ಪಂಚಾಯತ್ ಪುರಸ್ಕಾರದ ದೀನ್ ದಯಾಳ್ ಉಪಾಧ್ಯಾಯ ಸತತ್ ವಿಕಾಸ್ ಪುರಸ್ಕಾರದಲ್ಲಿ ಮುದ್ರಾಡಿ ಗ್ರಾಮ ಪಂಚಾಯತಿ, ವಂಡ್ಸೆ ಗ್ರಾಮ ಪಂಚಾಯತಿ, ಹಾಲನಾಯಕನಹಳ್ಳಿ ಗ್ರಾಮ ಪಂಚಾಯತಿ, ಮಡಾಮಕ್ಕಿ ಗ್ರಾಮ ಪಂಚಾಯತಿ, ಸಾಣೂರು ಗ್ರಾಮ ಪಂಚಾಯತಿ ಮತ್ತು ಹಕ್ಲಾಡಿ ಗ್ರಾಮ ಪಂಚಾಯತಿಗಳು ಪುರಸ್ಕಾರಕ್ಕೆ ಆಯ್ಕೆಯಾಗಿವೆ.
Priyanka Kharge ಆರೋಗ್ಯಕರ ಪಂಚಾಯತ್ ವಿಭಾಗ, ಬಡತನ ಮುಕ್ತ ಮತ್ತು ಸುಧಾರಿತ ಜೀವನೋಪಾಯ ವರ್ದಿತ ಪಂಚಾಯತ್ ವಿಭಾಗ, ಸಾಮಾಜಿಕವಾಗಿ ನ್ಯಾಯಯುತ ಮತ್ತು ಸಾಮಾಜಿಕ ಸುರಕ್ಷಿತ ಪಂಚಾಯತ್ ವಿಭಾಗ ಸೇರಿದಂತೆ ಹಲವು ವಿಭಾಗಗಳಲ್ಲಿ ರಾಜ್ಯದ ಗ್ರಾಮ ಪಂಚಾಯತಿಗಳು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿರುವುದು ರಾಜ್ಯದ ಪಂಚಾಯತ್ ರಾಜ್ ವ್ಯವಸ್ಥೆಯ ಸಶಕ್ತೀಕರಣಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
Kuvempu University ಶಿಕ್ಷಕರಲ್ಲಿ ಬಹುಮುಖಿ ವ್ಯಕ್ತಿತ್ವವಿದ್ದರೆ ವಿದ್ಯಾರ್ಥಿಗಳಿಗೆ ಅದರ ಅಭಿಪ್ರೇರಣೆಯಿಂದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಆಸಕ್ತಿ ಬರುತ್ತದೆ: ಪ್ರೊ.ಶರತ್ ಅನಂತ ಮೂರ್ತಿ
Kuvempu University ಭವಿಷ್ಯದಲ್ಲಿ ಶಿಕ್ಷಕರಾಗುವವರಿಗೆ ಕೌಶಲ್ಯಗಳು ಕರಗತವಾಗಿದ್ದರೆ ಉತ್ತಮ ಬೋಧನೆಗೆ ಹಾಗೂ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಸಂಘಟಿಸಲು ಸಹಕಾರಿಯಾಗುತ್ತದೆ. ಇದರಿಂದ ಮಕ್ಕಳ ಕಲಿಕೆ ಪರಿಣಾಮಕಾರಿಯಾಗಿರುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ತಿಳಿಸಿದರು.
ತಾಳಗುಂದದ ಶ್ರೀ ವೀರಭದ್ರೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಅಣು ಬೋಧನಾ ಕಾರ್ಯಗಾರ ಮತ್ತು ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರ ಬಹುಮುಖಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಆಗ ವಿದ್ಯಾರ್ಥಿಗಳು ಅಭಿಪ್ರೇರಣೆಯಿಂದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾರೆ. ಕೌಶಲ್ಯಗಳ ಕಲಿಕೆಯ ಬರದಲ್ಲಿ ಪ್ರಶಿಕ್ಷಣಾರ್ಥಿಗಳು ಯಾಂತ್ರಿಕವಾಗಿ ಅನ್ವಯಿಸಿಕೊಳ್ಳದೆ ನೈತಿಕ, ಮಾನವೀಯ ಮೌಲ್ಯಗಳನ್ನು ಸಹ ಅಳವಡಿಸಿಕೊಳ್ಳಬೇಕೆಂದರು.
ಸಮಕಾಲಿನ ಸಮಸ್ಯೆಗಳಿಗೆ ಸ್ಪಂದಿಸುತ್ತ ಹೆಚ್ಚು ಚರ್ಚೆ ಮಾಡುವ ಮೂಲಕ ಸಮಾಜದಲ್ಲಿ ತೆರೆದುಕೊಳ್ಳುವಂತೆ ಮಾಡಬೇಕು. ಮಾತೃಭಾಷೆಗೆ ಮೊದಲ ಆದ್ಯತೆ ನೀಡಿ. ಆದರೆ ಇಂದಿನ ಔದ್ಯೋಗಿಕ ಪ್ರಪಂಚದಲ್ಲಿ ಇಂಗ್ಲಿಷ್ ಭಾಷೆ ಕಲಿಕೆಯೂ ಅತ್ಯಗತ್ಯ ಎಂದರು.
ಮಾಡುತ್ತಾ ಕಲಿ ಎಂಬ ತತ್ವದ ಘಟಕಾಂಶಗಳಿಗೆ ಪೂರಕವಾಗಿ ಬೋಧನಾ ಮತ್ತು ಕಲಿಕಾ ಪ್ರಕ್ರಿಯೆಗಳು ಸಾಗಬೇಕು. ಶಿಕ್ಷಕರಾಗಬೇಕೆನ್ನುವವರಿಗೆ ಅಣು ಬೋಧನ ಕಾರ್ಯಗಾರವು ತಾಯಿ ಬೇರಿದ್ದಂತೆ. ಒಂದು ಗಿಡದ ವಿವಿಧ ಭಾಗಗಳಿಗೆ ಪೋಷಕಾಂಶಗಳನ್ನು ಸಾಗಿಸುವ ತಾಯಿ ಬೇರು ಎಷ್ಟು ಮುಖ್ಯವೋ ಅಷ್ಟೇ ಅಣು ಬೋಧನ ಕೌಶಲಗಳು ಪ್ರಶಿಕ್ಷಣಾರ್ಥಿಗಳಿಗೆ ಮುಖ್ಯವಾಗಿವೆ ಎಂದು ಪ್ರತಿಪಾದಿಸಿದರು.
Kuvempu University ಪ್ರಾಂಶುಪಾಲ ಡಾ. ಪರಮೇಶ್ ಹೆಚ್. ಮಸಲವಾಡ ಅಧ್ಯಕ್ಷತೆ ವಹಿಸಿದ್ದರು. ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ವೈ. ದೇವರಾಜ್, ಶ್ರೀ ವೀರಭದ್ರೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜೆ.ಪಿ. ಸುನೀಲ್ ಕುಮಾರ್, ಬೋಧನಾ ವರ್ತುಲ ತಂಡದ ಮಾರ್ಗದರ್ಶಕರಾದ ಗದ್ದಿಗೆಶ್ ಬಿ.ಎಸ್. ಉಪಸ್ಥಿತರಿದ್ದರು.
MESCOM ಶಿರಾಳಕೊಪ್ಪ;ಮೆಸ್ಕಾಂ ಜನ ಸಂಪರ್ಕ ಸಭೆ
MESCOM ಶಿರಾಳಕೊಪ್ಪ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ.15 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬAಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ.;.9448998776 ನ್ನು ಸಂಪರ್ಕಿಸುವುದು.
ಭದ್ರಾವತಿ:ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸದಸ್ಯರ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ
ಭದ್ರಾವತಿ ತಾಲೂಕು ಕೇಂದ್ರದಲ್ಲಿರುವ ಡಾ|| ಬಿ.ಆರ. ಅಂಬೇಡ್ಕರ್ ಸಮುದಾಯ ಭವನದ ನಿರ್ವಹಣೆ ಮಾಡಲು 2 ವರ್ಷಗಳ ಅವಧಿಗೆ ನಿರ್ವಹಣಾ ಸಮಿತಿಯನ್ನು ರಚಿಸಬೇಕಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದ 3 ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಭದ್ರಾವತಿ ತಾಲೂಕಿನಲ್ಲಿ ವಾಸಿಸುತ್ತಿರುವ ಹಾಗೂ ಬೇರೆ ಯಾವುದೇ ಸಮಿತಿಗಳಲ್ಲಿ ನೇಮಕಗೊಳ್ಳದಿರುವ ಪರಿಶಿಷ್ಟ ಜಾತಿಯ ಆಸಕ್ತರು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ ಹಿಂಭಾಗ, ಭದ್ರಾವತಿ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸ್ವಯಂ ದೃಢೀಕರಣ, ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ನ್ನು ಲಗತ್ತಿಸಿ ಮೇ 21 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08282-263761 ನ್ನು ಸಂಪರ್ಕಿಸುವುದು.
Kuvempu University ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ
Kuvempu University ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ವತಿಯಿಂದ ‘ಮಾನವ–ವನ್ಯಜೀವಿ ಸಂಘರ್ಷ, ಸಹಬಾಳ್ವೆ ಮತ್ತು ಜೀವವೈವಿಧ್ಯ ಸಂರಕ್ಷಣೆ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಮೇ 14 ಮತ್ತು 15ರಂದು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಅರಣ್ಯ ಇಲಾಖೆ, ಚಿಕ್ಕಮಗಳೂರು ವೃತ್ತ ಹಾಗೂ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಹಯೋಗದಲ್ಲಿ ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ಈ ಸಮ್ಮೇಳನ ನಡೆಯಲಿದೆ.
ಮೇ 14ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಮುಖ್ಯ ವನ್ಯಜೀವಿ ಪಾಲಕ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಅವರು ಉದ್ಘಾಟಿಸಲಿದ್ದಾರೆ. ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಕಾನ್ (SACON) ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಎಚ್.ಎನ್. ಕುಮಾರ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ.
ಎರಡು ದಿನಗಳ ಈ ಸಮ್ಮೇಳನದಲ್ಲಿ ವನ್ಯಜೀವಿ ತಜ್ಞರಿಂದ ಹನ್ನೆರಡು ವಿಶೇಷ ಉಪನ್ಯಾಸಗಳು ನಡೆಯಲಿವೆ. ಮೊದಲ ದಿನ ಮೇ 15ರ ಗುರುವಾರದಂದು ಪಶ್ಚಿಮ ಘಟ್ಟಗಳಲ್ಲಿನ ಜೀವವೈವಿಧ್ಯದ ಬಿಕ್ಕಟ್ಟಿನ ಬಗ್ಗೆ ಪ್ರೊ. ಟಿ.ಎನ್. ಪ್ರಕಾಶ್ ಕಮ್ಮರ್ಡಿ, ಕರ್ನಾಟಕದ ವನ್ಯಜೀವಿ ಸಂಘರ್ಷದ ಬಗ್ಗೆ ಡಾ. ಹೊನ್ನವಳ್ಳಿ.ಎನ್. ಕುಮಾರ್, ಚಿರತೆಗಳೊಂದಿಗಿನ ಸಹಬಾಳ್ವೆ ಕುರಿತು ಡಾ. ಸಂಜಯ್ ಗುಬ್ಬಿ, ಹುಲಿ-ಮಾನವ ಸಂಘರ್ಷದ ಬಗ್ಗೆ ಐಜಿಪಿ ಡಾ. ಪಿ.ಎಸ್. ಹರ್ಷ ಮತ್ತು ಆನೆಗಳ ಸಂಘರ್ಷದ ಕುರಿತು ಡಾ. ತಮ್ಮಯ್ಯ ಸಿ.ಕೆ. ಮತ್ತು ಮಾನವ ಹಸ್ತಕ್ಷೇಪವು ವನ್ಯಜೀವಿಗಳ ನಿರ್ಧಾರಗಳ ಮೇಲೆ ಪ್ರಭಾವದ ಬಗ್ಗೆ ಡಾ. ಹರೀಶ್ ಪ್ರಕಾಶ್ ಹಾಗೂ ಅವರು ವಿಷಯ ಮಂಡಿಸಲಿದ್ದಾರೆ.
Kuvempu University ಎರಡನೇ ದಿನವಾದ ಮೇ 15ರ ಶುಕ್ರವಾರದಂದು ವನ್ಯಜೀವಿ ಸಂರಕ್ಷಣೆಯಲ್ಲಿ ಸೋಲಿಗರ ಸಾಂಪ್ರದಾಯಿಕ ಜ್ಞಾನದ ಬಗ್ಗೆ ಡಾ. ಸಿ. ಮಾದೇಗೌಡ, ತಾಂತ್ರಿಕ ಬಳಕೆ ಕುರಿತು ಪ್ರೊ. ನಾಗರಾಜ್ ಬಿ.ಸಿ. ಮತ್ತು ಪ್ರೊ. ಗುರುರಾಜ ಕೆ.ವಿ. ಹಾಗೂ ಲಂಗೂರ್‌ಗಳ ಸಾಮಾಜಿಕ ವ್ಯವಸ್ಥೆ ಬಗ್ಗೆ ಡಾ. ಚೇತನ್ ನಾಗ್ ಕೆ.ಎಸ್ ,ಆನೆಯ ಗಸ್ತಿನ ಬಗ್ಗೆ ಸಿದ್ಧಾರ್ಥ್ ಶೆಟ್ಟಿ ಹಾಗೂ ವನ್ಯಜೀವಿಗಳ ಮೇಲೆ ನಿಗಾ ಇಡಲು ಕೃತಕ ಬುದ್ಧಿಮತ್ತೆ (AI) ಬಳಕೆ ಕುರಿತು ಪ್ರೊ. ವಸಂತ ಕುಮಾರ್ ಅವರು ಮಾತನಾಡಲಿದ್ದಾರೆ.
ಅದೇ ದಿನ ಸಂಜೆ 4:30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಅಧ್ಯಕ್ಷತೆ ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಹಿರಿಯ ಪ್ರಾಧ್ಯಾಪಕ ಪ್ರೊ. ಡೇವಿಡ್ ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕುವೆಂಪು ವಿವಿ ವಿಜ್ಞಾನ ನಿಕಾಯದ ಡೀನ್ ಪ್ರೊ. ರಾಜಾ ನಾಯ್ಕ್, ಕುಲಸಚಿವ ಹೇಮಂತ್ ಎನ್., ಭದ್ರಾ ಹುಲಿ ಯೋಜನೆಯ ಕ್ಷೇತ್ರ ನಿರ್ದೇಶಕ ಪುಲ್ಕಿತ್ ಮೀನಾ ಹಾಗೂ ಸಂಘಟನಾ ಕಾರ್ಯದರ್ಶಿ ಪ್ರೊ. ವಿಜಯ ಕುಮಾರ ಉಪಸ್ಥಿತರಿರುವರು.
